, ,

ಬೆಳ್ತಂಗಡಿ: ಅಕ್ರಮವಾಗಿ ಶೇಖರಿಸಿದ 4,175 ಲೀಟರ್ ಡೀಸೆಲ್ ಪತ್ತೆ- ಪ್ರಕರಣ ದಾಖಲು

ಬೆಳ್ತಂಗಡಿ: ಅಕ್ರಮವಾಗಿ ಶೇಖರಿಸಿಟ್ಟಿದ್ದ ಸುಮಾರು 4,175 ಲೀಟರ್ ಡೀಸೆಲ್ ಅನ್ನು ಪೊಲೀಸರು ಪತ್ತೆಹಚ್ಚಿದ ಘಟನೆ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಮುದಲ್ತಿಯಾರ್ ಎಂಬಲ್ಲಿ ನಡೆದಿದೆ. ಮಾರ್ಚ್ 9ರಂದು ರಾತ್ರಿ ಬೆಳ್ತಂಗಡಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ರೋಹಿಣಿ ಸಿ.ಕೆ. ಅವರಿಗೆ ಬಂದ ಮಾಹಿತಿಯ ಮೇರೆಗೆ, ಉಪ್ಪಿನಂಗಡಿ ವೃತ್ತ ನಿರೀಕ್ಷಕರು ಹಾಗೂ ಠಾಣಾಧಿಕಾರಿಗಳ ತಂಡ ಸ್ಥಳಕ್ಕೆ ದಾಳಿ ನಡೆಸಿದರು. ಈ ವೇಳೆ ಜಗದೀಶ್ (35) ಎಂಬಾತನ ಮನೆಯ ಸಮೀಪದ ಶೆಡ್ ಪರಿಶೀಲನೆ ನಡೆಸಿದಾಗ ಸುಮಾರು 200 ಲೀಟರ್ ಸಾಮರ್ಥ್ಯದ 20…

ಬೆಳ್ತಂಗಡಿ: ಅಕ್ರಮವಾಗಿ ಶೇಖರಿಸಿಟ್ಟಿದ್ದ ಸುಮಾರು 4,175 ಲೀಟರ್ ಡೀಸೆಲ್ ಅನ್ನು ಪೊಲೀಸರು ಪತ್ತೆಹಚ್ಚಿದ ಘಟನೆ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಮುದಲ್ತಿಯಾರ್ ಎಂಬಲ್ಲಿ ನಡೆದಿದೆ.

ಮಾರ್ಚ್ 9ರಂದು ರಾತ್ರಿ ಬೆಳ್ತಂಗಡಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ರೋಹಿಣಿ ಸಿ.ಕೆ. ಅವರಿಗೆ ಬಂದ ಮಾಹಿತಿಯ ಮೇರೆಗೆ, ಉಪ್ಪಿನಂಗಡಿ ವೃತ್ತ ನಿರೀಕ್ಷಕರು ಹಾಗೂ ಠಾಣಾಧಿಕಾರಿಗಳ ತಂಡ ಸ್ಥಳಕ್ಕೆ ದಾಳಿ ನಡೆಸಿದರು.

ಈ ವೇಳೆ ಜಗದೀಶ್ (35) ಎಂಬಾತನ ಮನೆಯ ಸಮೀಪದ ಶೆಡ್ ಪರಿಶೀಲನೆ ನಡೆಸಿದಾಗ ಸುಮಾರು 200 ಲೀಟರ್ ಸಾಮರ್ಥ್ಯದ 20 ಬ್ಯಾರೆಲ್‌ಗಳು ಹಾಗೂ ಸುಮಾರು 35 ಲೀಟರ್ ಸಾಮರ್ಥ್ಯದ 5 ಕ್ಯಾನ್‌ಗಳಲ್ಲಿ ಒಟ್ಟು ಸುಮಾರು 4,175 ಲೀಟರ್ ಡೀಸೆಲ್ ಶೇಖರಿಸಿಟ್ಟಿರುವುದು ಪತ್ತೆಯಾಯಿತು. ಸ್ಥಳದಲ್ಲಿ ಹಲವು ಖಾಲಿ ಬ್ಯಾರೆಲ್‌ಗಳು, ಖಾಲಿ ಕ್ಯಾನ್‌ಗಳು ಹಾಗೂ ಇತರೆ ಸಾಮಗ್ರಿಗಳೂ ಪತ್ತೆಯಾಗಿವೆ.

ಪತ್ತೆಯಾದ ಸೊತ್ತುಗಳ ಅಂದಾಜು ಮೌಲ್ಯ ಸುಮಾರು ರೂ.3,50,000 ಆಗಿದೆ. ಆರೋಪಿ ಜಗದೀಶ್ ಬಳಿ ವಿಚಾರಣೆ ನಡೆಸಿದಾಗ ಯಾವುದೇ ಪರವಾನಿಗೆ ಇಲ್ಲದೇ ಹಾಗೂ ಸುರಕ್ಷತಾ ಕ್ರಮಗಳನ್ನು ಪಾಲಿಸದೇ ಅಕ್ರಮವಾಗಿ ಡೀಸೆಲ್ ಶೇಖರಿಸಿಟ್ಟಿರುವುದು ತಿಳಿದುಬಂದಿದೆ.

ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ.35/2026 ಪ್ರಕರಣ ದಾಖಲಾಗಿದ್ದು, ಬಿಎನ್‌ಎಸ್ 2023ರ ಕಲಂ 287, 3(5), ಅಗತ್ಯ ವಸ್ತುಗಳ ಕಾಯ್ದೆ 1955ರ ಕಲಂ 3, 7 ಹಾಗೂ ಪೆಟ್ರೋಲಿಯಂ ಕಾಯ್ದೆ 1934ರ ಕಲಂ 23 ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಪೋಲಿಸರು ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed