ಬೆಳಗಾವಿ: ಸಾವಿರಾರು ಕೋಟಿ ಒಡೆಯ ಅಂತೆಲ್ಲಾ ಬಿಲ್ಡಪ್ ಕೊಡುತ್ತಿದ್ದ ಶಿವಾನಂದ ನೀಲಣ್ಣ ಅರೆಸ್ಟ್ ಆಗಿದ್ದಾನೆ. 4,500 ಕೋಟಿ ರೂ ವಂಚನೆ ಆರೋಪದಡಿ ಬೆಳಗಾವಿ ಪೊಲೀಸರು ಶಿವಾನಂದನನ್ನ ಲಾಕ್ ಮಾಡಿದ್ದಾರೆ. ಸದ್ಯ ಪೊಲೀಸರು 5 ದಿನ ಕಸ್ಟಡಿಗೆ ಪಡೆದು ತನಿಖೆ ನಡೆಸಿದ್ದಾರೆ. ಇನ್ನು ಶಿವಾನಂದ ನೀಲಣ್ಣವರ್ ಬಳಸುತ್ತಿದ್ದ ನಾಲ್ಕು ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡಲಾಗಿದೆ. ಒಂದೊಂದು ಅಕೌಂಟ್ನಲ್ಲಿ ನೂರಾರು ಕೋಟಿ ರೂ ಪತ್ತೆಯಾಗಿದೆ. ನೂರಾರು ಕೋಟಿ ರೂ ಅಕೌಂಟ್ನಲ್ಲಿ ಇದ್ದರೂ ಇ.ಡಿ ಮತ್ತು ಐಟಿ ಗಮನಕ್ಕೆ ತರಬೇಕಿದ್ದ ಬ್ಯಾಂಕ್ ಅಧಿಕಾರಿಗಳು ಮಾತ್ರ ಸೈಲೆಂಟ್ ಆಗಿದ್ದು, ಇದೀಗ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.
ಬ್ಯಾಂಕ್‌ಗಳ ಅಧಿಕಾರಿಗಳು ಶಾಮೀಲು?
ಈ ಖಾತೆಗಳಿಗೆ ನಿತ್ಯ ಲಕ್ಷಾಂತರ ರೂಪಾಯಿ ಜಮೆಯಾಗುತ್ತಿದ್ದು, ಇದೇ ಖಾತೆಗಳಿಂದ ತಿಂಗಳಿಗೆ 75 ಕೋಟಿಗೂ ಅಧಿಕ ಹಣವನ್ನು 35 ಸಾವಿರ ಜನರಿಗೆ ಬಡ್ಡಿ ರೂಪದಲ್ಲಿ ಜಮಾ ಮಾಡಲಾಗುತ್ತಿತ್ತು. ಇಷ್ಟು ದೊಡ್ಡ ಪ್ರಮಾಣದಲ್ಲಿ ಹಣ ವರ್ಗಾವಣೆಯಾಗುತ್ತಿದ್ದರೂ ಬ್ಯಾಂಕ್ ಅಧಿಕಾರಿಗಳು ಇಡಿ ಮತ್ತು ಐಟಿ ಇಲಾಖೆ ಗಮನಕ್ಕೆ ತರದೆ ಸೈಲೆಂಟ್ ಆಗಿದ್ದರು. ಹೀಗಾಗಿ ನೀಲಣ್ಣವರ್ ಜೊತೆಗೆ ಬ್ಯಾಂಕ್‌ಗಳ ಅಧಿಕಾರಿಗಳು ಶಾಮೀಲಾಗಿದ್ದಾರಾ ಎಂಬ ಅನುಮಾನ ಮೂಡಿದೆ. ಸಿಐಡಿ ತನಿಖೆಯಲ್ಲಿ ಬ್ಯಾಂಕ್ ಅಧಿಕಾರಿಗಳ ಕಳ್ಳಾಟ ಬಯಲಾಗಲಿದೆಯೇ ಕಾದು ನೋಡಬೇಕಿದೆ.
