,

ಶಿರಾಡಿಘಾಟ್‌ನ 100 ಅಡಿ ಆಳದ ಕಂದಕದಲ್ಲಿ ಎರಡು ಶವ ಪತ್ತೆ- ಏಳು ಕೊಲೆ, ಏಳು ಶವಗಳ ಪತ್ತೆ!

ಬೆಂಗಳೂರು: ಬೆಂಗಳೂರಿನಲ್ಲಿ ಒಂದೇ ಕುಟುಂಬದ ಏಳು ಮಂದಿಯನ್ನು ಬರ್ಬರವಾಗಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಿರಾಡಿಘಾಟ್‌ನ ಮಾರನಹಳ್ಳಿ ಸಮೀಪದ ಸುಮಾರು 100 ಅಡಿ ಆಳದ ಕಂದಕಕ್ಕೆ ಎಸೆಯಲಾಗಿದ್ದ ನಳಿನಿ ಹಾಗೂ ಶಂಕರ್ ಅವರ ಮೃತದೇಹಗಳನ್ನು ಪೊಲೀಸರು ಸೋಮವಾರ ಹೊರತೆಗೆದಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಹತ್ಯೆಗೀಡಾದ ಏಳು ಮಂದಿಯ ಮೃತದೇಹಗಳನ್ನೂ ಪತ್ತೆಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಇಂದುಶೇಖರ್ ನೀಡಿದ ಮಾಹಿತಿ ಆಧರಿಸಿ ಪೊಲೀಸರು ಶಿರಾಡಿಘಾಟ್‌ನಲ್ಲಿ ಶವಗಳ ಪತ್ತೆಗಾಗಿ ಶೋಧ ಕಾರ್ಯಾಚರಣೆ ಕೈಗೊಂಡಿದ್ದರು. ಆದರೆ, ಮೃತದೇಹಗಳನ್ನು ಎಸೆದಿದ್ದ ನಿಖರ…

ಬೆಂಗಳೂರು: ಬೆಂಗಳೂರಿನಲ್ಲಿ ಒಂದೇ ಕುಟುಂಬದ ಏಳು ಮಂದಿಯನ್ನು ಬರ್ಬರವಾಗಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಿರಾಡಿಘಾಟ್‌ನ ಮಾರನಹಳ್ಳಿ ಸಮೀಪದ ಸುಮಾರು 100 ಅಡಿ ಆಳದ ಕಂದಕಕ್ಕೆ ಎಸೆಯಲಾಗಿದ್ದ ನಳಿನಿ ಹಾಗೂ ಶಂಕರ್ ಅವರ ಮೃತದೇಹಗಳನ್ನು ಪೊಲೀಸರು ಸೋಮವಾರ ಹೊರತೆಗೆದಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಹತ್ಯೆಗೀಡಾದ ಏಳು ಮಂದಿಯ ಮೃತದೇಹಗಳನ್ನೂ ಪತ್ತೆಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿ ಇಂದುಶೇಖರ್ ನೀಡಿದ ಮಾಹಿತಿ ಆಧರಿಸಿ ಪೊಲೀಸರು ಶಿರಾಡಿಘಾಟ್‌ನಲ್ಲಿ ಶವಗಳ ಪತ್ತೆಗಾಗಿ ಶೋಧ ಕಾರ್ಯಾಚರಣೆ ಕೈಗೊಂಡಿದ್ದರು. ಆದರೆ, ಮೃತದೇಹಗಳನ್ನು ಎಸೆದಿದ್ದ ನಿಖರ ಸ್ಥಳವನ್ನು ಆರಂಭದಲ್ಲಿ ಗುರುತಿಸದ ಆರೋಪಿ, ಪೊಲೀಸರನ್ನು ವಿವಿಧೆಡೆ ಕರೆದೊಯ್ದು ಸುಮಾರು ಐದಾರು ಸ್ಥಳಗಳನ್ನು ತೋರಿಸಿದ್ದಾನೆ ಎನ್ನಲಾಗಿದೆ. ಈ ಮೂಲಕ ತನಿಖಾಧಿಕಾರಿಗಳನ್ನು ದಾರಿ ತಪ್ಪಿಸಲು ಪ್ರಯತ್ನಿಸಿದ್ದಾನೆ ಎಂಬ ಶಂಕೆಯೂ ವ್ಯಕ್ತವಾಗಿದೆ. ಕೊನೆಗೆ ಮೃತದೇಹಗಳನ್ನು ಎಸೆದಿದ್ದ ಸ್ಥಳವನ್ನು ಗುರುತಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.

ಮಲ್ಲೇಶ್ವರಂ ಎಎಸ್ಪಿ ಪ್ರಭಾವತಿ ಅವರ ನೇತೃತ್ವದಲ್ಲಿ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಾರನಹಳ್ಳಿ ಸಮೀಪ ಕಾರ್ಯಾಚರಣೆ ನಡೆಸಲಾಯಿತು. ಸುಮಾರು 100 ಅಡಿ ಆಳದ ಕಂದಕಕ್ಕೆ ಹಗ್ಗದ ನೆರವಿನಿಂದ ಇಳಿದ ಪೊಲೀಸರು, ನಳಿನಿ ಮತ್ತು ಶಂಕರ್ ಅವರ ಮೃತದೇಹಗಳನ್ನು ಹೊರತೆಗೆದರು. ಬಳಿಕ ಎರಡೂ ಮೃತದೇಹಗಳನ್ನು ಆಂಬ್ಯುಲೆನ್ಸ್ ಮೂಲಕ ಹಾಸನದ ಹಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿ ಮರಣೋತ್ತರ ಪರೀಕ್ಷೆಗೆ ವ್ಯವಸ್ಥೆ ಮಾಡಲಾಯಿತು.
ಮೃತದೇಹಗಳನ್ನು ಹೊರತೆಗೆಯುವ ಕಾರ್ಯಾಚರಣೆ ಆರಂಭವಾಗುವುದಕ್ಕೂ ಸುಮಾರು ಒಂದು ಗಂಟೆ ಮುಂಚಿತವಾಗಿ ಆರೋಪಿ ಇಂದುಶೇಖರ್‌ನನ್ನು ಪೊಲೀಸರು ಸ್ಥಳದಿಂದ ಕರೆದೊಯ್ದಿದ್ದರು. ಕಾರ್ಯಾಚರಣೆಯ ವೇಳೆ ನಳಿನಿ ಅವರ ಕುಟುಂಬಸ್ಥರು ಸ್ಥಳದಲ್ಲಿದ್ದು, ಪೊಲೀಸರು ಅಗತ್ಯ ಕಾನೂನು ಪ್ರಕ್ರಿಯೆಗಳನ್ನು ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed