ಪಂಚ ರಾಜ್ಯಗಳ ಚುನಾವಣೆಗೆ ಡೇಟ್‌ ಫಿಕ್ಸ್‌: ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ

ನವದೆಹಲಿ: ಭಾರತದ ರಾಜಕೀಯ ರಣರಂಗದಲ್ಲಿ ಮತ್ತೆ ಚುನಾವಣಾ ಸದ್ದು ಮೊಳಗುತ್ತಿದೆ. ತಮಿಳುನಾಡು, ಕೇರಳ, ಅಸ್ಸಾಂ, ಪಶ್ಚಿಮ ಬಂಗಾಳ ಹಾಗೂ ಕೇಂದ್ರಾಡಳಿತ ಪ್ರದೇಶ ಪುದುಚೇರಿ ವಿಧಾನಸಭೆ ಚುನಾವಣೆ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಈ ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. 2026 ರ ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಮತದಾನ ಪ್ರಕ್ರಿಯೆಯ ಪಾರದರ್ಶಕತೆ ಮತ್ತು ಮೇಲ್ವಿಚಾರಣೆಯನ್ನು ಬಲಪಡಿಸಲು ಎಲ್ಲಾ ಮತಗಟ್ಟೆಗಳಲ್ಲಿ 100 ಪ್ರತಿಶತ…

ನವದೆಹಲಿ: ಭಾರತದ ರಾಜಕೀಯ ರಣರಂಗದಲ್ಲಿ ಮತ್ತೆ ಚುನಾವಣಾ ಸದ್ದು ಮೊಳಗುತ್ತಿದೆ. ತಮಿಳುನಾಡು, ಕೇರಳ, ಅಸ್ಸಾಂ, ಪಶ್ಚಿಮ ಬಂಗಾಳ ಹಾಗೂ ಕೇಂದ್ರಾಡಳಿತ ಪ್ರದೇಶ ಪುದುಚೇರಿ ವಿಧಾನಸಭೆ ಚುನಾವಣೆ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಈ ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

2026 ರ ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಮತದಾನ ಪ್ರಕ್ರಿಯೆಯ ಪಾರದರ್ಶಕತೆ ಮತ್ತು ಮೇಲ್ವಿಚಾರಣೆಯನ್ನು ಬಲಪಡಿಸಲು ಎಲ್ಲಾ ಮತಗಟ್ಟೆಗಳಲ್ಲಿ 100 ಪ್ರತಿಶತ ವೆಬ್‌ಕಾಸ್ಟಿಂಗ್ ಅನ್ನು ಭಾರತೀಯ ಚುನಾವಣಾ ಆಯೋಗ ಸಕ್ರಿಯಗೊಳಿಸುತ್ತದೆ ಎಂದು ಜ್ಞಾನೇಶ್ ಕುಮಾರ್ ಹೇಳಿದ್ದಾರೆ. ಐದು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಒಟ್ಟು 824 ಕ್ಷೇತ್ರಗಳಲ್ಲಿ 17.4 ಕೋಟಿ ಮತದಾರರಿದ್ದಾರೆ. 2.19 ಲಕ್ಷ ಪೋಲಿಂಗ್ ಸ್ಟೇಷನ್​ಗಳಿವೆ. 25 ಲಕ್ಷ ಮತದಾನ ಅಧಿಕಾರಿಗಳನ್ನು ನಿಯೋಜಿಸಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತರು ಮಾಹಿತಿ ನೀಡಿದ್ದಾರೆ. 1. ಅಸ್ಸಾಂ: ಮತದಾನ ದಿನಾಂಕ – ಏಪ್ರಿಲ್ 9, ಎಣಿಕೆ ದಿನಾಂಕ – ಮೇ 4 2. ತಮಿಳುನಾಡು: ಮತದಾನ ದಿನಾಂಕ – ಏಪ್ರಿಲ್ 23, ಎಣಿಕೆ ದಿನಾಂಕ – ಮೇ 4 3. ಪಶ್ಚಿಮ ಬಂಗಾಳ: ಮತದಾನ ದಿನಾಂಕ- ಏಪ್ರಿಲ್ 23 (1 ನೇ ಹಂತ), ಏಪ್ರಿಲ್ 29 (2 ನೇ ಹಂತ), ಎಣಿಕೆ ದಿನಾಂಕ – ಮೇ 4 4. ಕೇರಳ: ಮತದಾನ ದಿನಾಂಕ – ಏಪ್ರಿಲ್ 9, ಎಣಿಕೆ ದಿನಾಂಕ – ಮೇ 4 5. ಪುದುಚೇರಿ: ಮತದಾನ ದಿನಾಂಕ – ಏಪ್ರಿಲ್ 9, ಎಣಿಕೆ ದಿನಾಂಕ – ಮೇ 4 ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಕರ್ನಾಟಕ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಎಪ್ರಿಲ್‌ 9ರಂದು ಉಪ ಚುನಾವಣೆ ನಡೆಸಲಾಗುವುದು. ಮೇ 4 ರಂದು ಚುನಾವಣಾ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಘೋಷಿಸಿದರು. ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಮತ್ತು ಎಚ್‌.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed