,

ಕೋಕಾ ಕಾಯ್ದೆ ಪ್ರಕರಣದ ಪ್ರಮುಖ ಇಬ್ಬರು ಆರೋಪಿಗಳ ಪತ್ತೆಗೆ ಐವತ್ತು ಸಾವಿರ ನಗದು ಬಹುಮಾನ ಘೋಷಣೆ

ಉಡುಪಿ: ಸಾಸ್ತಾನದಲ್ಲಿನ ಕೋಸ್ಟಲ್ ಪ್ಯಾರಡೈಸ್ ಹೊಟೇಲ್ ಎದುರು ನಡೆದ ಯುವಕನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ಕೋಟ ಪೊಲೀಸರು ಮಹತ್ವದ ಕ್ರಮ ಕೈಗೊಂಡಿದ್ದು, ಪ್ರಕರಣವನ್ನು KCOCA ಕಾಯ್ದೆಯಡಿ ದಾಖಲಿಸಿ ಈಗಾಗಲೇ 7 ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನಿಬ್ಬರು ಪ್ರಮುಖ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಪ್ರಕರಣದ ಪ್ರಮುಖ ಆರೋಪಿಗಳಾದ ಮನೋಜ ಕೋಡಿಕೆರೆ (42) ಮತ್ತು ಚೇತನ್ ಪಡೀಲ್ @ ಚೇತನ್ ಕುಲಾಲ್ (38) ಪರಾರಿಯಾಗಿದ್ದಾರೆ. ಮನೋಜ ವಿರುದ್ಧ ಮಂಗಳೂರು ನಗರದಲ್ಲಿ 18 ಮತ್ತು ಉಡುಪಿ ಜಿಲ್ಲೆಯಲ್ಲಿ 2 ಪ್ರಕರಣಗಳು ದಾಖಲಾಗಿದ್ದು, ಚೇತನ್ ವಿರುದ್ಧ…

ಉಡುಪಿ: ಸಾಸ್ತಾನದಲ್ಲಿನ ಕೋಸ್ಟಲ್ ಪ್ಯಾರಡೈಸ್ ಹೊಟೇಲ್ ಎದುರು ನಡೆದ ಯುವಕನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ಕೋಟ ಪೊಲೀಸರು ಮಹತ್ವದ ಕ್ರಮ ಕೈಗೊಂಡಿದ್ದು, ಪ್ರಕರಣವನ್ನು KCOCA ಕಾಯ್ದೆಯಡಿ ದಾಖಲಿಸಿ ಈಗಾಗಲೇ 7 ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನಿಬ್ಬರು ಪ್ರಮುಖ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ

ಪ್ರಕರಣದ ಪ್ರಮುಖ ಆರೋಪಿಗಳಾದ ಮನೋಜ ಕೋಡಿಕೆರೆ (42) ಮತ್ತು ಚೇತನ್ ಪಡೀಲ್ @ ಚೇತನ್ ಕುಲಾಲ್ (38) ಪರಾರಿಯಾಗಿದ್ದಾರೆ. ಮನೋಜ ವಿರುದ್ಧ ಮಂಗಳೂರು ನಗರದಲ್ಲಿ 18 ಮತ್ತು ಉಡುಪಿ ಜಿಲ್ಲೆಯಲ್ಲಿ 2 ಪ್ರಕರಣಗಳು ದಾಖಲಾಗಿದ್ದು, ಚೇತನ್ ವಿರುದ್ಧ ಮಂಗಳೂರು ನಗರದಲ್ಲಿ 11 ಹಾಗೂ ಉಡುಪಿಯಲ್ಲಿ 2 ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಪರಾರಿಯಾಗಿರುವ ಆರೋಪಿಗಳ ಬಗ್ಗೆ ಮಾಹಿತಿ ಇದ್ದಲ್ಲಿ ಕುಂದಾಪುರ ಉಪ ವಿಭಾಗದ ಡಿವೈಎಸ್ಪಿ ಹೆಚ್.ಡಿ. ಕುಲಕರ್ಣಿ (ಮೊಬೈಲ್: 9480805422) ಅವರನ್ನು ಸಂಪರ್ಕಿಸಲು ಪೊಲೀಸರು ಮನವಿ ಮಾಡಿದ್ದಾರೆ. ಮಾಹಿತಿ ನೀಡುವವರಿಗೆ ₹50,000 ನಗದು ಬಹುಮಾನ ಘೋಷಿಸಲಾಗಿದ್ದು, ಮಾಹಿತಿದಾರರ ವಿವರಗಳನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed