ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸಂಪಾಜೆ ಗೂನಡ್ಕ ಪ್ರದೇಶದಲ್ಲಿರುವ ಮಸೀದಿಯ ಆವರಣದಿಂದ ಕಾಣಿಕೆ ಡಬ್ಬಿ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಾರ್ಚ್ 30, 2026ರಂದು ನಡೆದ ಈ ಕಳವು ಪ್ರಕರಣದ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ 45/2026, ಕಲಂ 303(2) BNS-2023 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಮುಂದುವರಿಸಿದ ಪೊಲೀಸರು ಏಪ್ರಿಲ್ 6ರಂದು ಸುಳ್ಯ ಕೆಮ್ರಾಜೆ ಎಲಿಮಲೆ ಪ್ರದೇಶದಲ್ಲಿ ಆರೋಪಿಯನ್ನು ಬಂಧಿಸಿದರು.
ಬಂಧಿತ ಆರೋಪಿಯನ್ನು ಆಂಧ್ರಪ್ರದೇಶದ ಪಶ್ಚಿಮ ಗೊದಾವರಿ ಜಿಲ್ಲೆಯ ನಿವಾಸಿ ಮಹಮ್ಮದ್ ಸಲ್ಮಾನ್ (35) ಎಂದು ಗುರುತಿಸಲಾಗಿದೆ. ಆರೋಪಿಯಿಂದ ಕಳವು ಮಾಡಲಾಗಿದ್ದ ₹2,000 ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಯನ್ನು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
