,

ಯೋಗೇಶ್ ಗೌಡ ಹತ್ಯೆ ಪ್ರಕರಣ: ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ

ಬೆಂಗಳೂರು: ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16ಮಂದಿ ಅಪರಾಧಿಗಳಿಗೆ ಜನಪ್ರತಿನಿಧಿಗಳ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ ನ್ಯಾಯಾಲಯದಲ್ಲಿ ನಡೆದಿದ್ದೇನು? ಸುದೀರ್ಘ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು, ಇಂದು ಉಭಯ ಪಕ್ಷಗಳ ಅಂತಿಮ ವಾದ-ಪ್ರತಿವಾದಗಳನ್ನು ಆಲಿಸಿದರು. ತದನಂತರ ಶಿಕ್ಷೆಯ ಪ್ರಮಾಣದ ಆದೇಶವನ್ನು ನಾಳೆಗೆ ಕಾಯ್ದಿರಿಸಿದರು. ಇದೀಗ ಆದೇಶವನ್ನು ಪ್ರಕಟಿಸಿದ್ದಾರೆ. ಸಿಬಿಐ ಪರ ವಾದ: ‘ಕಠಿಣ ಜೀವಾವಧಿ ಶಿಕ್ಷೆ…

ಬೆಂಗಳೂರು: ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16ಮಂದಿ ಅಪರಾಧಿಗಳಿಗೆ ಜನಪ್ರತಿನಿಧಿಗಳ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ

ನ್ಯಾಯಾಲಯದಲ್ಲಿ ನಡೆದಿದ್ದೇನು?

ಸುದೀರ್ಘ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು, ಇಂದು ಉಭಯ ಪಕ್ಷಗಳ ಅಂತಿಮ ವಾದ-ಪ್ರತಿವಾದಗಳನ್ನು ಆಲಿಸಿದರು. ತದನಂತರ ಶಿಕ್ಷೆಯ ಪ್ರಮಾಣದ ಆದೇಶವನ್ನು ನಾಳೆಗೆ ಕಾಯ್ದಿರಿಸಿದರು. ಇದೀಗ ಆದೇಶವನ್ನು ಪ್ರಕಟಿಸಿದ್ದಾರೆ.

ಸಿಬಿಐ ಪರ ವಾದ: ‘ಕಠಿಣ ಜೀವಾವಧಿ ಶಿಕ್ಷೆ ನೀಡಿ’

ಸಿಬಿಐ ಪರವಾಗಿ ವಾದ ಮಂಡಿಸಿದ ಸಹಾಯಕ ಸಾಲಿಸೇಟರ್ ಜನರಲ್ ಎಸ್.ವಿ. ರಾಜು ಅವರು ಆರೋಪಿಗಳ ವಿರುದ್ಧ ಕಠಿಣ ನಿಲುವು ತಳೆದರು.

  • “ಈ ಕೊಲೆ ಕೃತ್ಯವು ಅತ್ಯಂತ ಹೀನಾಯವಾಗಿದ್ದು, ಇದು ನೇರವಾಗಿ ನ್ಯಾಯಾಂಗ ವ್ಯವಸ್ಥೆಗೆ ಧಕ್ಕೆ ತಂದಿದೆ.”
  • “ಆರೋಪಿಗಳು ಪ್ರಭಾವ ಬಳಸಿ ಸಾಕ್ಷಿ ನಾಶಪಡಿಸಲು ಯತ್ನಿಸಿದ್ದಾರೆ ಮತ್ತು ನ್ಯಾಯಾಂಗ ಪ್ರಕ್ರಿಯೆಗೆ ಅಡ್ಡಿಪಡಿಸಿದ್ದಾರೆ.”
  • “ಹೀಗಾಗಿ, ಸಮಾಜಕ್ಕೆ ಮಾದರಿಯಾಗುವಂತೆ ಎಲ್ಲಾ ಆರೋಪಿಗಳಿಗೂ ಕಠಿಣ ಜೀವಾವಧಿ ಶಿಕ್ಷೆ ವಿಧಿಸಬೇಕು” ಎಂದು ಅವರು ನ್ಯಾಯಾಲಯಕ್ಕೆ ಮನವಿ ಮಾಡಿದರು.

ಆರೋಪಿಗಳ ಪರ ಮನವಿ:

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಆರೋಪಿಗಳ ಪರ ವಕೀಲರು, ಶಿಕ್ಷೆಯ ಪ್ರಮಾಣವನ್ನು ಕಡಿಮೆ ಮಾಡುವಂತೆ ಕೋರಿದರು. “ಆರೋಪಿಗಳಿಗೆ ಕುಟುಂಬದ ಜವಾಬ್ದಾರಿಯಿದೆ ಮತ್ತು ಅವರ ಜೀವನದ ದೃಷ್ಟಿಯಿಂದ ಕನಿಷ್ಠ ಶಿಕ್ಷೆ ವಿಧಿಸಬೇಕು” ಎಂದು ವಾದಿಸಿದ್ದರು. ಆದರೇ ಈ ವಾದವನ್ನು ಪುರಸ್ಕರಿಸದೇ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed