,

ಅಪ್ರಾಪ್ತ ಬಾಲಕಿಯರ ನಾಪತ್ತೆ ಪ್ರಕರಣಗಳು ಹೆಚ್ಚಳ: 19 ಕೇಸ್ ದಾಖಲು

ರಾಯಚೂರು: ಹದಿಹರೆಯದ ಮಕ್ಕಳಿದ್ದಾಗ ಪೋಷಕರು ಎಷ್ಟು ಎಚ್ಚರಿಕೆ ವಹಿಸಿದರೂ ಸಾಲದು. ಸರಿ ತಪ್ಪುಗಳ ಅರಿವಿಲ್ಲದ ಬಾಲಕ-ಬಾಲಕಿಯರು ದುಡುಕು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ಅದೇ ರೀತಿ ಇತ್ತೀಚಿನ ದಿನಗಳಲ್ಲಿ ಅಪ್ರಾಪ್ತ ಬಾಲಕಿಯರು ಪ್ರೀತಿ-ಪ್ರೇಮದ ಬಲೆಯಲ್ಲಿ ಸಿಲುಕಿ ನಾಪತ್ತೆಯಾಗುತ್ತಿರುವ ಪ್ರಕರಣಗಳು ಜಿಲ್ಲೆಯಲ್ಲಿ ಹೆಚ್ಚಾಗುತ್ತಿವೆ. ಈಗಾಗಲೇ 19 ಕೇಸ್​ಗಳು ದಾಖಲಾಗಿದ್ದು, ಪಾಲಕರು ಕಂಗಾಲಾಗಿದ್ದಾರೆ. ಈ ಬಗ್ಗೆ ಅರಿವು ಮೂಡಿಸಲು ಪೊಲೀಸ್ ಇಲಾಖೆ ಹಲವು ಪ್ರಯತ್ನಗಳನ್ನು ಕೈಗೊಂಡಿದ್ದು, ಪೋಷಕರು ಹೆಚ್ಚಿನ ಕಾಳಜಿ ವಹಿಸುವಂತೆ ತಿಳಿಸಿದ್ದಾರೆ. ಪರೀಕ್ಷೆ ಮುಗಿದ ಬೆನ್ನಲ್ಲೇ ಎಸ್ಕೇಪ್! ಜಿಲ್ಲೆಯಲ್ಲಿ ಪ್ರತಿ ವರ್ಷ ಎಸ್ಎಸ್ಎಲ್…

ರಾಯಚೂರು: ಹದಿಹರೆಯದ ಮಕ್ಕಳಿದ್ದಾಗ ಪೋಷಕರು ಎಷ್ಟು ಎಚ್ಚರಿಕೆ ವಹಿಸಿದರೂ ಸಾಲದು. ಸರಿ ತಪ್ಪುಗಳ ಅರಿವಿಲ್ಲದ ಬಾಲಕ-ಬಾಲಕಿಯರು ದುಡುಕು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ಅದೇ ರೀತಿ ಇತ್ತೀಚಿನ ದಿನಗಳಲ್ಲಿ ಅಪ್ರಾಪ್ತ ಬಾಲಕಿಯರು ಪ್ರೀತಿ-ಪ್ರೇಮದ ಬಲೆಯಲ್ಲಿ ಸಿಲುಕಿ ನಾಪತ್ತೆಯಾಗುತ್ತಿರುವ ಪ್ರಕರಣಗಳು ಜಿಲ್ಲೆಯಲ್ಲಿ ಹೆಚ್ಚಾಗುತ್ತಿವೆ. ಈಗಾಗಲೇ 19 ಕೇಸ್​ಗಳು ದಾಖಲಾಗಿದ್ದು, ಪಾಲಕರು ಕಂಗಾಲಾಗಿದ್ದಾರೆ. ಈ ಬಗ್ಗೆ ಅರಿವು ಮೂಡಿಸಲು ಪೊಲೀಸ್ ಇಲಾಖೆ ಹಲವು ಪ್ರಯತ್ನಗಳನ್ನು ಕೈಗೊಂಡಿದ್ದು, ಪೋಷಕರು ಹೆಚ್ಚಿನ ಕಾಳಜಿ ವಹಿಸುವಂತೆ ತಿಳಿಸಿದ್ದಾರೆ.

ಪರೀಕ್ಷೆ ಮುಗಿದ ಬೆನ್ನಲ್ಲೇ ಎಸ್ಕೇಪ್!

ಜಿಲ್ಲೆಯಲ್ಲಿ ಪ್ರತಿ ವರ್ಷ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳು ಮುಗಿದು ಬೇಸಿಗೆ ರಜೆ ಆರಂಭವಾಗುತ್ತಿದ್ದಂತೆ ಇಂತಹ ಪ್ರಕರಣಗಳು ಹೆಚ್ಚಾಗಿ ದಾಖಲಾಗುತ್ತಿವೆ. ಮನೆಯಿಂದ ಫ್ರೆಂಡ್ಸ್ ಮನೆಗೆ ಹೋಗಿ ಬರುತ್ತೇನೆ, ನೋಟ್ಸ್ ತರುತ್ತೇನೆ ಎಂದು ಪೋಷಕರಿಗೆ ಸುಳ್ಳು ಹೇಳಿ ಹೊರಡುವ ಬಾಲಕಿಯರು ವಯಸ್ಕ ಯುವಕರ ಜೊತೆ ನಾಪತ್ತೆಯಾಗುತ್ತಿದ್ದಾರೆ. ಪೋಷಕರು ಹಗಲಿರುಳು ಹುಡುಕಾಟ ನಡೆಸಿ, ಮಕ್ಕಳ ಸುಳಿವು ಸಿಗದೇ ಇದ್ದಾಗ ಕೊನೆಗೆ ಪೊಲೀಸ್ ಠಾಣೆ ಮೆಟ್ಟಿಲೇರುತ್ತಿದ್ದಾರೆ. ಸದ್ಯ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಇಂತಹ ಒಟ್ಟು 19 ಪ್ರಕರಣಗಳು ದಾಖಲಾಗಿವೆ.

ಪೋಷಕರಿಗೆ ರಾಯಚೂರು ಎಸ್ ಪಿ ಕಟ್ಟುನಿಟ್ಟಿನ ಮನವಿ

ಈ ಗಂಭೀರ ವಿಷಯದ ಕುರಿತು ಮಾತನಾಡಿದ ರಾಯಚೂರು ಎಸ್ ಪಿ ಅರುಣಾಂಗ್ಷು ಗಿರಿ , ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯರ ನಾಪತ್ತೆ ಪ್ರಕರಣಗಳು ಹೆಚ್ಚಾಗಿವೆ. ಈಗಾಗಲೇ 19 ಕೇಸ್​ಗಲು ದಾಖಲಾಗಿದ್ದು, 6 ಬಾಲಕಿಯರ ಸುಳಿವು ಸಿಕ್ಕಿದೆ. ಉಳಿದ 13 ಪ್ರಕರಣಗಳ ತನಿಖೆ ಮುಂದುವರೆದಿದೆ. ಶಾಲಾ-ಕಾಲೇಜು ಪರೀಕ್ಷೆ ಮುಗಿದ ಬಳಿಕ ಇಂತಹ ಘಟನೆಗಳು ಮರುಕಳಿಸುತ್ತಿವೆ. 18 ವರ್ಷದ ಒಳಗಿನ ಬಾಲಕಿಯರು ವಯಸ್ಕ ಯುವಕರ ಜೊತೆ ಹೋದರೆ ಅದನ್ನು ಅಪಹರಣವೆಂದೇ ಪರಿಗಣಿಸಲಾಗುತ್ತದೆ. ಆದ್ದರಿಂದ ಪೋಷಕರು ಹಾಗೂ ಕುಟುಂಬಸ್ಥರು ಮಕ್ಕಳ ಮನಸ್ಥಿತಿಯನ್ನು ಅರಿತು ಅವರಿಗೆ ಸೂಕ್ತ ಕೌನ್ಸೆಲಿಂಗ್ ಮಾಡಬೇಕು ಎಂದು ಕರೆ ನೀಡಿದ್ದಾರೆ.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed