,

ಮಂಗಳೂರು ಮಹಾನಗರ ಪಾಲಿಕೆಯ ಜನನ-ಮರಣ ವಿಭಾಗದಲ್ಲಿ ಭಾರೀ ಅವ್ಯವಹಾರ ಆರೋಪ!!

ಮಂಗಳೂರು ಮಹಾನಗರ ಪಾಲಿಕೆಯ ಜನನ-ಮರಣ ವಿಭಾಗದಲ್ಲಿ ಅವ್ಯವಹಾರ ನಡೆಯುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಹಣ ನೀಡಿದರೆ ಮೇಲಾಧಿಕಾರಿಗಳಿಗೆ ತಿಳಿಯದಂತೆ ಹೆಸರು ಬದಲಾವಣೆ, ಹುಟ್ಟಿದ ದಿನಾಂಕ ಬದಲಾವಣೆ ಸೇರಿದಂತೆ ಯಾವುದೇ ದಾಖಲೆ ತಿದ್ದುಪಡಿ ಮಾಡಿಕೊಡಲಾಗುತ್ತಿದೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಇನ್ನೂ ಆತಂಕಕಾರಿ ವಿಷಯವೆಂದರೆ, ಮಕ್ಕಳಿಲ್ಲದವರಿಗೆ ಸಹ ಜನನ ಪ್ರಮಾಣ ಪತ್ರ ಸಿಗುವಷ್ಟು ಅವ್ಯವಹಾರ ನಡೆಯುತ್ತಿದೆ ಎನ್ನಲಾಗಿದೆ. ಈ ಎಲ್ಲ ಪ್ರಕ್ರಿಯೆಗಳು ಮೇಲಾಧಿಕಾರಿಗಳಿಗೆ ಯಾವುದೇ ಮಾಹಿತಿ ಹೋಗದಂತೆ ವಿಭಾಗದೊಳಗೆ ನಡೆಯುತ್ತಿದೆ ಎಂಬ ಗಂಭೀರ ಆರೋಪ…

ಮಂಗಳೂರು ಮಹಾನಗರ ಪಾಲಿಕೆಯ ಜನನ-ಮರಣ ವಿಭಾಗದಲ್ಲಿ ಅವ್ಯವಹಾರ ನಡೆಯುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಹಣ ನೀಡಿದರೆ ಮೇಲಾಧಿಕಾರಿಗಳಿಗೆ ತಿಳಿಯದಂತೆ ಹೆಸರು ಬದಲಾವಣೆ, ಹುಟ್ಟಿದ ದಿನಾಂಕ ಬದಲಾವಣೆ ಸೇರಿದಂತೆ ಯಾವುದೇ ದಾಖಲೆ ತಿದ್ದುಪಡಿ ಮಾಡಿಕೊಡಲಾಗುತ್ತಿದೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಇನ್ನೂ ಆತಂಕಕಾರಿ ವಿಷಯವೆಂದರೆ, ಮಕ್ಕಳಿಲ್ಲದವರಿಗೆ ಸಹ ಜನನ ಪ್ರಮಾಣ ಪತ್ರ ಸಿಗುವಷ್ಟು ಅವ್ಯವಹಾರ ನಡೆಯುತ್ತಿದೆ ಎನ್ನಲಾಗಿದೆ. ಈ ಎಲ್ಲ ಪ್ರಕ್ರಿಯೆಗಳು ಮೇಲಾಧಿಕಾರಿಗಳಿಗೆ ಯಾವುದೇ ಮಾಹಿತಿ ಹೋಗದಂತೆ ವಿಭಾಗದೊಳಗೆ ನಡೆಯುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕೆಲವು ತಿಂಗಳ ಹಿಂದೆ ಇದೇ ವಿಭಾಗದಲ್ಲಿ ಕುಚ್ಚು ಕುಚ್ಚು ಹೋತ ಹೇ ನಡೆದಿದೆ.

ಕಳೆದ ವರ್ಷ ಇದೇ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಶಿ ಎಂಬ ವ್ಯಕ್ತಿ ವಿರುದ್ಧ ದೂರು ದಾಖಲಾಗಿದ್ದು, ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರಾವ್ ಅವರಿಂದಲೂ ಪತ್ರ ಬಂದಿತ್ತು. ಪಂಪ್ ಹೌಸ್‌ನಲ್ಲಿ ಪಂಪ್ ಕ್ಲೀನರ್ ಆಗಿ ಕರ್ತವ್ಯ ನಿರ್ವಹಿಸಬೇಕಾದ ವ್ಯಕ್ತಿ ಜನನ-ಮರಣ ವಿಭಾಗದಲ್ಲಿ ಕಾರ್ಯನಿರ್ವಹಿಸಬಾರದು, ಪಂಪ್ ಕ್ಲೀನರ್ ಆಗಿಯೇ ಮಾತ್ರ ಕರ್ತವ್ಯ ನಿರ್ವಹಿಸಬೇಕು ಎಂದು ಅವರಿಂದಲೂ ಪತ್ರ ಬಂದಿತ್ತು ಎನ್ನಲಾಗಿದೆ. ಪಂಪ್ ಹೌಸ್‌ನಲ್ಲಿ ಪಂಪ್ ಕ್ಲೀನರ್ ಆಗಿ ಕರ್ತವ್ಯ ನಿರ್ವಹಿಸಬೇಕಾದ ವ್ಯಕ್ತಿ ಜನನ-ಮರಣ ವಿಭಾಗದಲ್ಲಿ ಕಾರ್ಯನಿರ್ವಹಿಸಬಾರದು,ಪಂಪ್ ಕ್ಲೀನರ್ ಆಗಿಯೇ ಮಾತ್ರ ಕರ್ತವ್ಯ ನಿರ್ವಹಿಸಬೇಕು ಎಂದು ಸೂಚನೆ ನೀಡಲಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ.

ಆದರೆ ಆ ಸೂಚನಾ ಪತ್ರಕ್ಕೂ ಬೆಲೆ ನೀಡದೆ, ಈಗಲೂ ಆ ವ್ಯಕ್ತಿ ಜನನ-ಮರಣ ವಿಭಾಗದಲ್ಲೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ದಾಖಲೆಗಳಂತಹ ಅತಿ ಸೂಕ್ಷ್ಮ ವಿಭಾಗದಲ್ಲಿ ಈ ರೀತಿಯ ಆರೋಪಗಳು ಕೇಳಿಬರುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಹೆಚ್ಚಿಸಿದೆ.

ಜನನ-ಮರಣ ಪ್ರಮಾಣ ಪತ್ರಗಳಂತಹ ಮಹತ್ವದ ದಾಖಲೆಗಳಲ್ಲೇ ಅವ್ಯವಹಾರ ನಡೆದರೆ ಸಾಮಾನ್ಯ ಜನರು ಯಾರನ್ನು ನಂಬಬೇಕು? ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆ ನಡೆಸುವ ಅಗತ್ಯವಿದೆ ಎಂಬ ಒತ್ತಾಯ ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ.
ಇಷ್ಟೆಲ್ಲಾ ಅವ್ಯವಹಾರ ನಡೆದರೂ ಲೋಕಯುಕ್ತ ಅಧಿಕಾರಿಗಳು ಮಾತ್ರ ಕಣ್ಣಿಗೆ ಬಟ್ಟೆ ಕಟ್ಟಿ ಕುಲಿತಿರುವುದು ಕಾನೂನು ವ್ಯವಸ್ಥೆಯನ್ನೆ ಪ್ರಶ್ನಿಸುವಂತಿದೆ.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed