ಮಂಗಳೂರು: ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಎಂಡಿಎಂಎ (MDMA) ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಬಂಧಿಸಿದ್ದಾರೆ.ಆರೋಪಿಗಳಿಂದ ಒಟ್ಟು 164 ಗ್ರಾಂ ಎಂಡಿಎಂಎ ಮಾದಕವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಮಾದಕವಸ್ತುವಿನ ಒಟ್ಟು ಮೌಲ್ಯ ಸುಮಾರು 16,40,000 ಎಂದು ಅಂದಾಜಿಸಲಾಗಿದೆ.ಪ್ರಕರಣ -1ಬೆಂಗಳೂರು ನಗರದಿಂದ ಎಂಡಿಎಂಎ ಮಾದಕವಸ್ತುವನ್ನು ಖರೀದಿಸಿ ಮಂಗಳೂರು ನಗರಕ್ಕೆ ತಂದು ಹೊಯಿಗೆ ಬಜಾರ್ ಪರಿಸರದಲ್ಲಿರುವ ಮನೆಯಿಂದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಜೂನ್ 05 ೨೦೨೬ ರಂದು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿಯಿಂದ ಸುಮಾರು 10,40,000 ರೂ. ಮೌಲ್ಯದ 104 ಗ್ರಾಂ ಎಂಡಿಎಂಎ ಹಾಗೂ ಮೊಬೈಲ್ ಫೋನ್, ಜಿಪ್ ಲಾಕ್ ಕವರ್, ಡಿಜಿಟಲ್ ತೂಕಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆರೋಪಿ ಮಂಗಳೂರು ನಗರದ ಹೊಯ್ಗೆ ಬಜಾರ್ ನಿವಾಸಿ ಪ್ರಣಾಮ್ ಕೋಟ್ಯಾನ್(30) ಎಂದು ಗುರುತಿಸಲಾಗಿದೆ. ಆರೋಪಿ ಪ್ರಣಾಮ್ ಕೋಟ್ಯಾನ್ ಎಂಬಾತನ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ 2016ರಲ್ಲಿ ಹಲ್ಲೆ ಹಾಗೂ ಬೆದರಿಕೆ ಪ್ರಕರಣ, 2026ರಲ್ಲಿ ಮಾದಕವಸ್ತು ಸೇವನೆ ಪ್ರಕರಣ, 2022ರಲ್ಲಿ ಅಬಕಾರಿ ಇಲಾಖೆಯಲ್ಲಿ ಗಾಂಜಾ ಸಂಬಂಧಿತ ಪ್ರಕರಣ ಹಾಗೂ 2022ರಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟ ಪ್ರಕರಣ ದಾಖಲಾಗಿವೆ.ಪ್ರಕರಣ- 2ಪದವಿನಂಗಡಿ ಪರಿಸರದಲ್ಲಿರುವ ಮನೆಯಿಂದ ಎಂಡಿಎಂಎ ಮಾದಕವಸ್ತುವನ್ನು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಜೂನ್ 05 2026ರಂದು ಕಾರ್ಯಾಚರಣೆ ನಡೆಸಿ ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯಿಂದ ಸುಮಾರು 6,00,000 ರೂ. ಮೌಲ್ಯದ 60 ಗ್ರಾಂ ಎಂಡಿಎಂಎ ಹಾಗೂ ಜಿಪ್-ಲಾಕ್ ಕವರ್ಗಳು, ಒಂದು ಮೊಬೈಲ್ ಫೋನ್ ಹಾಗೂ ಡಿಜಿಟಲ್ ತೂಕಮಾಪನ ಯಂತ್ರವನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆರೋಪಿತನ ಮಂಗಳೂರು ನಗರದ ಪದವಿನಂಗಡಿಯ ಮುಗರೋಡಿ, ಗುರುನಗರದ ಧನರಾಜ್ ಪೂಜಾರಿ @ ಧನು ವಳಚಿಲ್ (33 ವರ್ಷ) ಎಂದು ಗುರುತಿಸಲಾಗಿದೆ. ಆರೋಪಿ ಧನರಾಜ್ ಪೂಜಾರಿ ಎಂಬಾತನ ಮೇಲೆ ಮಂಗಳೂರು ದಕ್ಷಿಣ, ಉತ್ತರ, ಸುರತ್ಕಲ್, ಬರ್ಕೆ, ಕಾವೂರು, ಕಂಕನಾಡಿ ನಗರ ಹಾಗೂ ಬಂಟ್ವಾಳ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆಯತ್ನ, ಹಲ್ಲೆ, ಬೆದರಿಕೆ ಸೇರಿದಂತೆ ಸುಮಾರು 12 ಪ್ರಕರಣಗಳು ದಾಖಲಾಗಿವೆ. 2016ರಲ್ಲಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಗಂಭೀರ ಹಲ್ಲೆ ಪ್ರಕರಣದಲ್ಲಿ ಆರೋಪಿಗೆ 3 ವರ್ಷಗಳ ಶಿಕ್ಷೆಯೂ ವಿಧಿಸಲಾಗಿತ್ತು.ಈ ಮಾದಕವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ. ಈ ಕಾರ್ಯಾಚರಣೆಯನ್ನು ಮಂಗಳೂರು ನಗರ ಸಿಸಿಬಿ ಘಟಕದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ನಡೆಸಿದ್ದಾರೆ.
ಮಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಸಿಸಿಬಿ ಮಿಂಚಿನ ದಾಳಿ: ಇಬ್ಬರು ಅರೆಸ್ಟ್
ಮಂಗಳೂರು: ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಎಂಡಿಎಂಎ (MDMA) ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಬಂಧಿಸಿದ್ದಾರೆ.ಆರೋಪಿಗಳಿಂದ ಒಟ್ಟು 164 ಗ್ರಾಂ ಎಂಡಿಎಂಎ ಮಾದಕವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಮಾದಕವಸ್ತುವಿನ ಒಟ್ಟು ಮೌಲ್ಯ ಸುಮಾರು 16,40,000 ಎಂದು ಅಂದಾಜಿಸಲಾಗಿದೆ.ಪ್ರಕರಣ -1ಬೆಂಗಳೂರು ನಗರದಿಂದ ಎಂಡಿಎಂಎ ಮಾದಕವಸ್ತುವನ್ನು ಖರೀದಿಸಿ ಮಂಗಳೂರು ನಗರಕ್ಕೆ ತಂದು ಹೊಯಿಗೆ ಬಜಾರ್ ಪರಿಸರದಲ್ಲಿರುವ ಮನೆಯಿಂದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ…
Previous Post
Next Post
Leave a Reply
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed












