ಬಿಲ್ಲವ ಸಮುದಾಯವನ್ನು ಅವಹೇಳನಕಾರಿಯಾಗಿ ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಗಳನ್ನು ಮಾಡುತ್ತಿರುವ ಅನಿತಾ ಕಾಸರಗೋಡು ಎಂಬ ಮಹಿಳೆಯನ್ನು ಬೆಂಗಳೂರಿನಲ್ಲಿ ಪೋಲಿಸರು ಬಂಧಿಸಿದ್ದಾರೆ.
ಅನಿತಾ ಕಾಸರಗೋಡು ಎಂಬ ಹೆಸರಿನ ಮಹಿಳೆ ಉಡುಪಿ ಮತ್ತು ದ. ಕ. ಜಿಲ್ಲೆಯ ಹಿಂದುಳಿದ ವರ್ಗಕ್ಕೆ ಸೇರಿದ ಬಿಲ್ಲವ ಸಮುದಾಯವನ್ನು ಅವಹೇಳನಕಾರಿಯಾಗಿ ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಡುತ್ತಿದ್ದು, ಇದು ಬ್ರಹ್ಮಶ್ರೀ ನಾರಾಯಣ ಗುರುಗಳ ಸಮಾನತೆಯ ತತ್ವಾದರ್ಶಗಳನ್ನು ಪಾಲಿಸಿಕೊಂಡು ಬರುತ್ತಿರುವ ಬಿಲ್ಲವ ಸಮುದಾಯಕ್ಕೆ ಅತೀವ ನೋವುಂಟು ಮಾಡಿದ್ದು, ಆದರೂ ಇದಕ್ಕೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸ್ವಯಂ ಪ್ರೇರಿತ ಕಾನೂನು ಕ್ರಮ ಕೈಗೊಳ್ಳುವ ಅವಕಾಶವಿದ್ದರೂ ಇಷ್ಟರ ತನಕ ಯಾವುದೇ ಕ್ರಮ ಕೈಗೊಳ್ಳದೆ ಇರುವುದರಿಂದ, ತಾನು ಮೇಲ್ವರ್ಗದ ಮಹಿಳೆ ಎಂದು ಅಹಂನಿಂದ ಹೇಳಿಕೊಂಡು ಅನಿತಾ ಕಾಸರಗೋಡು ಸಮುದಾಯಗಳ ಮಧ್ಯೆ ಮತ್ತು ಧರ್ಮಗಳ ನಡುವೆ ಸಂಘರ್ಷ ತರುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಮಾನಸಿಕ ಅಸವಸ್ಥೆಯಂತೆ, ಸಮಾಜದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅಧಿಕೃತ ವಿವರಗಳ ನಿರೀಕ್ಷೆಯಿದೆ.
