ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ನಗರದಲ್ಲಿ ಮತ್ತೆ ರಕ್ತದ ಓಕುಳಿಯ ಹರಿದಿದ್ದು, ಹಳೇ ದ್ವೇಷದ ಹಿನ್ನೆಲೆಯಲ್ಲಿ ರೌಡಿಶೀಟರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಲಾಗಿದೆ.
ನಗರದ ಹೃದಯಭಾಗವಾದ ಗಾಂಧಿ ಬಜಾರ್ ಬಳಿ ಈ ಘಟನೆ ನಡೆದಿದ್ದು, ಗೋವಿಂದಪುರ ನಿವಾಸಿ, ರೌಡಿಶೀಟರ್ ನರಸಿಂಹ ಕೊಲೆಯಾದ ದುರ್ದೈವಿ. ನರಸಿಂಹ ಒಂಟಿಯಾಗಿ ಸಿಕ್ಕಾಗ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದೆ. ತೀವ್ರ ಕ್ರೌರ್ಯ ಮೆರೆದಿರುವ ಹಂತಕರು, ನರಸಿಂಹನ ಎರಡು ಕೈಗಳನ್ನು ಕತ್ತರಿಸಿ, ರಸ್ತೆಯಲ್ಲೇ ಬರ್ಬರವಾಗಿ ಕೊಚ್ಚಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
ಪ್ರಾಥಮಿಕ ಮಾಹಿತಿ ಪ್ರಕಾರ, ಈ ಕೃತ್ಯ ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ನಡೆದಿದೆ ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಶಿವಮೊಗ್ಗದ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಪರಾರಿಯಾಗಿರುವ ಹಂತಕರ ಪತ್ತೆಗಾಗಿ ಜಾಲ ಬೀಸಿದ್ದು, ತನಿಖೆಯನ್ನು ಚುರುಕುಗೊಳಿಸಿದ್ದಾರೆ.
