ಬೆಂಗಳೂರು: ಮಾದಕ ದ್ರವ್ಯ ಜಾಲದ ವಿರುದ್ಧ ಬೆಂಗಳೂರು ಪೊಲೀಸರು ಮತ್ತು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ 5.67 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಹಾಗೂ ಕೊಕೇನ್ ಜಪ್ತಿಯಾಗಿದೆ. ಈ ಸಂಬಂಧ ಉಗಾಂಡಾ ಮೂಲದ ಮಹಿಳಾ ಡ್ರಗ್ ಪೆಡ್ಲರ್ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.ನಗರದ ವಿವಿಧ ಭಾಗಗಳಲ್ಲಿ ನಡೆದ ಮೂರು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಡ್ರಗ್ಸ್ ಸಾಗಾಟ ಮತ್ತು ಮಾರಾಟ ಜಾಲವನ್ನು ಪತ್ತೆಹಚ್ಚಿರುವ ಅಧಿಕಾರಿಗಳು, ಅಂತರರಾಜ್ಯ ಹಾಗೂ ಅಂತರರಾಷ್ಟ್ರೀಯ ಸಂಪರ್ಕಗಳ ಕುರಿತು ತನಿಖೆ ಮುಂದುವರಿಸಿದ್ದಾರೆ.ಹೆಬ್ಬಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಹೈಡ್ರೋ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಮ್ರಾನ್ ಪಾಷಾ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿಯಿಂದ 3 ಕೆಜಿ 180 ಗ್ರಾಂ ತೂಕದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದ್ದು, ಇದರ ಮೌಲ್ಯ ಸುಮಾರು 2.20 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಈ ಮಾದಕ ವಸ್ತುವನ್ನು ಮಹಾರಾಷ್ಟ್ರದ ನಾಸಿಕ್ನಿಂದ ಬೆಂಗಳೂರಿಗೆ ತರಲಾಗುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಇಮ್ರಾನ್ ವಿರುದ್ಧ ಈಗಾಗಲೇ ಹಲವು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ತಪಾಸಣೆಯಲ್ಲಿ ದೊಡ್ಡ ಪ್ರಮಾಣದ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದೆ. ಬ್ಯಾಂಕಾಕ್ನಿಂದ ಬೆಂಗಳೂರಿಗೆ ಆಗಮಿಸಿದ್ದ ಪ್ರಯಾಣಿಕನೊಬ್ಬನ ಲಗೇಜ್ ಪರಿಶೀಲಿಸಿದ ವೇಳೆ 7.92 ಕೆಜಿ ತೂಕದ ಗಾಂಜಾ ಪತ್ತೆಯಾಗಿದ್ದು, ಇದರ ಮೌಲ್ಯ ಸುಮಾರು 2.77 ಕೋಟಿ ರೂಪಾಯಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಡ್ರಗ್ಸ್ ಜಪ್ತಿ ಮಾಡಿರುವ ಅಧಿಕಾರಿಗಳು ಪ್ರಯಾಣಿಕನನ್ನು ವಶಕ್ಕೆ ಪಡೆದು ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.ಇನ್ನೊಂದು ಕಾರ್ಯಾಚರಣೆಯಲ್ಲಿ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಚಿಕ್ಕಬಾಣಾವರ ಪ್ರದೇಶದಲ್ಲಿ ದಾಳಿ ನಡೆಸಿ 70.50 ಲಕ್ಷ ರೂಪಾಯಿ ಮೌಲ್ಯದ 130 ಗ್ರಾಂ ಕೊಕೇನ್ ಜಪ್ತಿ ಮಾಡಿದ್ದಾರೆ. ಈ ವೇಳೆ ಉಗಾಂಡಾ ಮೂಲದ ಮಹಿಳೆ ಜನತ್ ಹಾಗೂ ಡ್ರಗ್ಸ್ ಖರೀದಿದಾರನಾಗಿದ್ದ ವಾಹಬ್ ಎಲ್ವಿಸ್ ಯುನಿಸ್ ಎಂಬಾತನನ್ನು ಬಂಧಿಸಲಾಗಿದೆ. ಆರೋಪಿ ವಾಹಬ್ ಯಶವಂತಪುರ ಹಾಗೂ ಗೊರಗುಂಟೆಪಾಳ್ಯ ಭಾಗಗಳಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.ಬಂಧಿತ ಮಹಿಳೆ ಬಿಸಿನೆಸ್ ವೀಸಾದಡಿ ಭಾರತಕ್ಕೆ ಬಂದು ಮಾದಕ ದ್ರವ್ಯ ಮಾರಾಟ ಜಾಲದಲ್ಲಿ ತೊಡಗಿಕೊಂಡಿದ್ದಳು ಎಂಬುದು ತನಿಖೆಯಿಂದ ತಿಳಿದುಬಂದಿದೆ. ಅಲ್ಲದೆ, ಈಕೆ ಈ ಹಿಂದೆ ದೆಹಲಿಯಲ್ಲಿ ನಡೆದ ಡ್ರಗ್ಸ್ ಪ್ರಕರಣವೊಂದರಲ್ಲಿ ಬಂಧಿತಳಾಗಿ ಐದು ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ವಿಚಾರವೂ ಬೆಳಕಿಗೆ ಬಂದಿದೆ. ಜಪ್ತಿಯಾದ ಮಾದಕ ದ್ರವ್ಯಗಳು ಬೆಂಗಳೂರು ನಗರಕ್ಕೆ ಹೇಗೆ ತಲುಪುತ್ತಿದ್ದವು, ಇದರ ಹಿಂದೆ ಕಾರ್ಯನಿರ್ವಹಿಸುತ್ತಿರುವ ದೊಡ್ಡ ಜಾಲ ಯಾವುದು ಎಂಬ ಕುರಿತು ಪೊಲೀಸರು ಹಾಗೂ ಕಸ್ಟಮ್ಸ್ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.
ಅಂತಾರಾಷ್ಟ್ರೀಯ ಡ್ರಗ್ಸ್ ಜಾಲ ಬಯಲು: ವಿದೇಶಿ ಮಹಿಳೆ ಸೇರಿ ಮೂವರ ಬಂಧನ
ಬೆಂಗಳೂರು: ಮಾದಕ ದ್ರವ್ಯ ಜಾಲದ ವಿರುದ್ಧ ಬೆಂಗಳೂರು ಪೊಲೀಸರು ಮತ್ತು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ 5.67 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಹಾಗೂ ಕೊಕೇನ್ ಜಪ್ತಿಯಾಗಿದೆ. ಈ ಸಂಬಂಧ ಉಗಾಂಡಾ ಮೂಲದ ಮಹಿಳಾ ಡ್ರಗ್ ಪೆಡ್ಲರ್ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.ನಗರದ ವಿವಿಧ ಭಾಗಗಳಲ್ಲಿ ನಡೆದ ಮೂರು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಡ್ರಗ್ಸ್ ಸಾಗಾಟ ಮತ್ತು ಮಾರಾಟ ಜಾಲವನ್ನು ಪತ್ತೆಹಚ್ಚಿರುವ ಅಧಿಕಾರಿಗಳು, ಅಂತರರಾಜ್ಯ ಹಾಗೂ ಅಂತರರಾಷ್ಟ್ರೀಯ ಸಂಪರ್ಕಗಳ ಕುರಿತು ತನಿಖೆ ಮುಂದುವರಿಸಿದ್ದಾರೆ.ಹೆಬ್ಬಾಳ ಪೊಲೀಸ್ ಠಾಣೆ…
Previous Post
Next Post
Leave a Reply
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed












