ಮಂಗಳೂರು: ಬೀದಿಬದಿ ವ್ಯಾಪಾರಿಗಳ ವಿರುದ್ಧ ಮನಪಾ ಕಾರ್ಯಾಚರಣೆ, ವ್ಯಾಪಾರಿಗಳ ವಶಕ್ಕೆ ಪಡೆದ ಪೊಲೀಸರು

ಮಂಗಳೂರು: ನಗರದ ಪುರಭವನದ ಸಮೀಪದ ಫುಟ್ ಪಾತ್ ನಲ್ಲಿ ವ್ಯಾಪಾರನಿರತ ಬೀದಿಬದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ರವಿವಾರ ಬೆಳಗ್ಗೆ ಕಾರ್ಯಾಚರಣೆ ನಡೆಸಿ ತೆರವುಗೊಳಿಸಿದರು. ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ರವಿಚಂದ್ರ ನಾಯಕ್ ಸ್ಥಳದಲ್ಲಿ ಉಪಸ್ಥಿತರಿದ್ದು, ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸಲು ಮಾರ್ಗದರ್ಶನ ನೀಡಿದರು.ಈ ವೇಳೆ ಕಾರ್ಯಾಚರಣೆಯನ್ನು ಪ್ರಶ್ನಿಸಿದ ಬೀದಿಬದಿ ವ್ಯಾಪಾರಿಗಳನ್ನು ಪೊಲೀಸರು ವಶಕ್ಕೆ ಪಡೆದು ವಾಹನಗಳಲ್ಲಿ ಕರೆದೊಯ್ದರು. ಕಾರ್ಯಾಚರಣೆಗೆ ಮೊದಲು ಮನಪಾ ಆಯುಕ್ತ ರವಿಚಂದ್ರ ನಾಯಕ್ ಬೀದಿ ವ್ಯಾಪಾರಿಗಳ ಬಳಿ ತೆರಳಿ ಇಲ್ಲಿ ಕಾನೂನು ಪ್ರಕಾರ, ನಿಯಮ…

ಮಂಗಳೂರು: ನಗರದ ಪುರಭವನದ ಸಮೀಪದ ಫುಟ್ ಪಾತ್ ನಲ್ಲಿ ವ್ಯಾಪಾರನಿರತ ಬೀದಿಬದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ರವಿವಾರ ಬೆಳಗ್ಗೆ ಕಾರ್ಯಾಚರಣೆ ನಡೆಸಿ ತೆರವುಗೊಳಿಸಿದರು.


ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ರವಿಚಂದ್ರ ನಾಯಕ್ ಸ್ಥಳದಲ್ಲಿ ಉಪಸ್ಥಿತರಿದ್ದು, ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸಲು ಮಾರ್ಗದರ್ಶನ ನೀಡಿದರು.ಈ ವೇಳೆ ಕಾರ್ಯಾಚರಣೆಯನ್ನು ಪ್ರಶ್ನಿಸಿದ ಬೀದಿಬದಿ ವ್ಯಾಪಾರಿಗಳನ್ನು ಪೊಲೀಸರು ವಶಕ್ಕೆ ಪಡೆದು ವಾಹನಗಳಲ್ಲಿ ಕರೆದೊಯ್ದರು. ಕಾರ್ಯಾಚರಣೆಗೆ ಮೊದಲು ಮನಪಾ ಆಯುಕ್ತ ರವಿಚಂದ್ರ ನಾಯಕ್ ಬೀದಿ ವ್ಯಾಪಾರಿಗಳ ಬಳಿ ತೆರಳಿ ಇಲ್ಲಿ ಕಾನೂನು ಪ್ರಕಾರ, ನಿಯಮ ಪ್ರಕಾರ ವ್ಯಾಪಾರ ಮಾಡುವಂತಿಲ್ಲ ಎಂದು ಎಚ್ಚರಿಕೆ ನೀಡಿದರು.

ಈ ವೇಳೆ ವ್ಯಾಪಾರಿಗಳು ನಾವು ನಲುವತ್ತು ವರ್ಷಗಳಿಂದ ವ್ಯಾಪಾರ ಮಾಡುತ್ತಿದ್ದೇವೆ. ನಿಯತ್ತಿನಿಂದ ದುಡಿಯುತ್ತಿದ್ದೇವೆ, ನಮಗೆ ನೀವು ಬದಲಿ ವ್ಯವ ಸ್ಥೆ ಮಾಡಿಕೊಡಿ ಎಂದು ಮನವಿ ಮಾಡಿದರು. ನಿಮಗೆ ಬದಲಿ ವ್ಯವಸ್ಥೆ ಮಾಡಲು ಸಾಧ್ಯವಿಲ್ಲ ಎಂದು ಆಯುಕ್ತರು ಹೇಳಿದಾಗ, ಹಾಗೆ ಹೇಳಬೇಡಿ ಸಾರ್.. ನಮಗೆ ನ್ಯಾಯ ಕೊಡಿ ಎಂದು ಮನವಿ ಮಾಡಿದಾಗ ಆಗುವುದಿಲ್ಲ ಯಾರಾದರೂ ನಿಯಮ ಉಲ್ಲಂಘಿಸಿ ಮುಂದುವರಿದರೆ ಸೂಕ್ತ ಕಾನೂನಿನ ಕ್ರಮ ಕೈಗೊಳ್ಳಲಾಗುವುದು’’ ಎಂದು ಮನಪಾ ಆಯುಕ್ತ ರವಿಚಂದ್ರ ನಾಯಕ್ ಮುನ್ನಚ್ಚರಿಕೆ ನೀಡಿದರು.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed