ಬೆಂಗಳೂರಿನಲ್ಲಿ ನಕಲಿ ನೋಟು ತಯಾರಿಸುತ್ತಿದ್ದ ಇಬ್ಬರು ಖದೀಮರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ, ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕನಮಣಿಕೆಯಲ್ಲಿರುವ ಮನೆಯ ಮೇಲೆ ದಾಳಿ ಮಾಡಿ ಪೊಲೀಸರು ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.
ಮೈಸೂರಿನ ಅರವಿಂದ ಹಾಗೂ ಚೆನ್ನೈ ಮೂಲದ ವೆಂಕಟಸುಬ್ರಮಣಿ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. 1.69 ಲಕ್ಷ ಮೌಲ್ಯದ ನಕಲಿ ನೋಟು ವಶಕ್ಕೆ ಪಡೆದಿದ್ದಾರೆ ಅಲ್ಲದೆ 1.60 ಲಕ್ಷ ಮೌಲ್ಯದ ಒಂದು ಕಾರು ಹಾಗೂ ಲ್ಯಾಪ್ಟಾಪ್ ಕೂಡ ಜಪ್ತಿ ಮಾಡಿಕೊಂಡಿದ್ದಾರೆ. ಇಬ್ಬರನ್ನು ಅರೆಸ್ಟ್ ಮಾಡಿ ಇದೀಗ ಪೊಲೀಸರ ವಿಚಾರಣೆಗೆ ಒಳಪಡಿಸಿದ್ದಾರೆ.
