,

ಮಂಗಳೂರು ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ರಾಹುಲ್ ರತ್ನಂ ಪಾಂಡೆ- ಪಾರದರ್ಶಕ ಮತ್ತು ಭ್ರಷ್ಟಾಚಾರ ಮುಕ್ತ ಆಡಳಿತ ನೀಡಲಿ ಎಂದು ಸಾರ್ವಜನಿಕರ ಆಶಯ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಗೆ ನೂತನ ಆಯುಕ್ತರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಅದರಂತೆ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದ (KSMSCL) ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ರಾಹುಲ್ ರತ್ನಂ ಪಾಂಡೆ (ಐಎಎಸ್-2018) ಅವರನ್ನು ಮಂಗಳೂರು ಮಹಾನಗರ ಪಾಲಿಕೆಯ (MCC) ನೂತನ ಆಯುಕ್ತರನ್ನಾಗಿ ರಾಜ್ಯ ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಿದೆ. ಮಂಗಳೂರು ಪಾಲಿಕೆಯ ಆಯುಕ್ತರಾಗಿದ್ದ ರವಿಚಂದ್ರ ನಾಯಕ್ ಅವರ ಸ್ಥಾನಕ್ಕೆ ರಾಹುಲ್ ರತ್ನಂ ಪಾಂಡೆ ಅವರನ್ನು ನೇಮಕ ಮಾಡಲಾಗಿದ್ದು, ಸರ್ಕಾರ ಈ ಸಂಬಂಧ…

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಗೆ ನೂತನ ಆಯುಕ್ತರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಅದರಂತೆ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದ (KSMSCL) ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ರಾಹುಲ್ ರತ್ನಂ ಪಾಂಡೆ (ಐಎಎಸ್-2018) ಅವರನ್ನು ಮಂಗಳೂರು ಮಹಾನಗರ ಪಾಲಿಕೆಯ (MCC) ನೂತನ ಆಯುಕ್ತರನ್ನಾಗಿ ರಾಜ್ಯ ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಿದೆ.

ಮಂಗಳೂರು ಪಾಲಿಕೆಯ ಆಯುಕ್ತರಾಗಿದ್ದ ರವಿಚಂದ್ರ ನಾಯಕ್ ಅವರ ಸ್ಥಾನಕ್ಕೆ ರಾಹುಲ್ ರತ್ನಂ ಪಾಂಡೆ ಅವರನ್ನು ನೇಮಕ ಮಾಡಲಾಗಿದ್ದು, ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿದೆ.

ಇನ್ನಾದರು ಸರಿ ಹೋಗಬಹುದೇ ಮ.ನ.ಪ ವ್ಯವಸ್ಥೆ..!!

ಸಾರ್ವಜನಿಕವಾಗಿ ಹೆಚ್ಚಾಗಿ ಚರ್ಚೆಯಾಗಿರುವ ಪ್ರಮುಖ ವಿಷಯಗಳು ಕುಡಿಯುವ ನೀರಿನ ಸಮಸ್ಯೆ, ರಸ್ತೆ ಮತ್ತು ಸ್ಮಾರ್ಟ್ ಸಿಟಿ ಕಾಮಗಾರಿಗಳು, ರಸ್ತೆ ಅಗೆದು ದೀರ್ಘಕಾಲ ಕಾಮಗಾರಿ ಪೂರ್ಣಗೊಳಿಸದಿರುವುದು, ಸಂಚಾರ ತೊಂದರೆಯಿಂದ ಪ್ರಯಣಿಕರು ಬೆಸತ್ತಿದ್ದಾರೆ,
ತೆರಿಗೆ ಹೆಚ್ಚಳ, ನೀರಿನ ಬಿಲ್ ವ್ಯತ್ಯಾಸಗಳು ಮತ್ತು ನಾಗರಿಕರ ದೂರುಗಳನ್ನು ಸಮರ್ಪಕವಾಗಿ ಪರಿಹರಿಸಲಾಗಿಲ್ಲ ಎಂಬ ಆರೋಪಗಳನ್ನು ವಿರೋಧ ಪಕ್ಷಗಳು ಮಾಡಿವೆ.
ಪಾಲಿಕೆಯ ಆಡಳಿತದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಇದರ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಂಡು ದಲ್ಲಾಳಿಗಳ ಹಾವಳಿಯನ್ನು ತಪ್ಪಿಸಿ ಸಾರ್ವಜನಿಕರಿಗೆ ಪಾರದರ್ಶಕದ ಆಡಳಿತಗಾಗಿ ಜನರ ಆಶಯ.
ಇನ್ನೂ ಲೋಕಾಯುಕ್ತ ಅಧಿಕಾರಿಗಳು ವಿವಿಧ ವಿಭಾಗಗಳಲ್ಲಿ ದಿಢೀರ್ ಪರಿಶೀಲನೆ ನಡೆಸಿ ಆಡಳಿತಾತ್ಮಕ ಲೋಪಗಳು ಮತ್ತು ಅನಿಯಮಿತತೆಗಳನ್ನು ಗಮನಿಸಿದರೆ ವಿವಿಧ ಅಕ್ರಮಗಳಿಗೆ ಕಡಿವಾಣ ಬಿದ್ದಂಗೆ ಆಗುತ್ತದೆ.

ಒಟ್ಟಾರೆ, ಮಂಗಳೂರು ಮಹಾನಗರ ಪಾಲಿಕೆಯು ಕುಡಿಯುವ ನೀರು, ರಸ್ತೆ, ತೆರಿಗೆ, ಕಾಮಗಾರಿಗಳ ವಿಳಂಬ, ಆಡಳಿತದ ಪಾರದರ್ಶಕತೆ ಮತ್ತು ಭ್ರಷ್ಟ ಅಧಿಕಾರಿಯ ವಿರುದ್ಧ ಸೂಕ್ತ ಕಠಿಣ ಕ್ರಮಗಳೊಂದಿಗೆ ನೂತನ ಆಯುಕ್ತರು ಉತ್ತಮ ಸೇವೆ ನೀಡಲಿ ಎಂಬುದೇ ಸಾರ್ವಜನಿಕರ ಆಶಯ.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed