, ,

ಮಂಗಳೂರು: ಕಾಲೇಜಿನ ಕ್ಯಾಂಪಸ್‌ನಲ್ಲಿ ಗಾಂಜಾ ಪತ್ತೆ..!! ಮೂವರು ವಿದ್ಯಾರ್ಥಿಗಳು ಪೊಲೀಸರ ವಶಕ್ಕೆ

ಮಂಗಳೂರು: ಖಾಸಗಿ ಕಾಲೇಜಿನ ಕ್ಯಾಂಪಸ್‌ಗೆ ಗಾಂಜಾ ತಂದಿದ್ದ ಮೂವರು ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿಯು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಮಂಗಳವಾರ ನಡೆದಿದೆ. ಕ್ಯಾಂಪಸ್‌ನಲ್ಲಿ ಮೂವರು ವಿದ್ಯಾರ್ಥಿಗಳ ಬಳಿ ಸಣ್ಣ ಸಣ್ಣ ಪೊಟ್ಟಣಗಳಲ್ಲಿ ಪ್ಯಾಕ್ ಮಾಡಲಾಗಿದ್ದ ಸುಮಾರು 290 ಗ್ರಾಂ ಗಾಂಜಾ ಪತ್ತೆಯಾಗಿದೆ . ತಕ್ಷಣವೇ ಎಚ್ಚೆತ್ತ ಕಾಲೇಜು ಆಡಳಿತ ಮಂಡಳಿಯು ಪೊಲೀಸ್‌ ರಾಣೆಗೆ ಮಾಹಿತಿ ನೀಡಿ ವಿದ್ಯಾರ್ಥಿಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಕಾಲೇಜು ಆಡಳಿತ ಮಂಡಳಿ ತಪಾಸಣೆ ನಡೆಸುತ್ತಿದ್ದಾಗ ಈ ಮೂವರು ವಿದ್ಯಾರ್ಥಿಗಳ ಬಳಿ ಮಾದಕ ದ್ರವ್ಯವಿರುವುದು ಕಂಡುಬಂದಿತು. ಈ…

ಮಂಗಳೂರು: ಖಾಸಗಿ ಕಾಲೇಜಿನ ಕ್ಯಾಂಪಸ್‌ಗೆ ಗಾಂಜಾ ತಂದಿದ್ದ ಮೂವರು ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿಯು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಮಂಗಳವಾರ ನಡೆದಿದೆ.

ಕ್ಯಾಂಪಸ್‌ನಲ್ಲಿ ಮೂವರು ವಿದ್ಯಾರ್ಥಿಗಳ ಬಳಿ ಸಣ್ಣ ಸಣ್ಣ ಪೊಟ್ಟಣಗಳಲ್ಲಿ ಪ್ಯಾಕ್ ಮಾಡಲಾಗಿದ್ದ ಸುಮಾರು 290 ಗ್ರಾಂ ಗಾಂಜಾ ಪತ್ತೆಯಾಗಿದೆ . ತಕ್ಷಣವೇ ಎಚ್ಚೆತ್ತ ಕಾಲೇಜು ಆಡಳಿತ ಮಂಡಳಿಯು ಪೊಲೀಸ್‌ ರಾಣೆಗೆ ಮಾಹಿತಿ ನೀಡಿ ವಿದ್ಯಾರ್ಥಿಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಕಾಲೇಜು ಆಡಳಿತ ಮಂಡಳಿ ತಪಾಸಣೆ ನಡೆಸುತ್ತಿದ್ದಾಗ ಈ ಮೂವರು ವಿದ್ಯಾರ್ಥಿಗಳ ಬಳಿ ಮಾದಕ ದ್ರವ್ಯವಿರುವುದು ಕಂಡುಬಂದಿತು. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಬಂಧಿತ ವಿದ್ಯಾರ್ಥಿಗಳನ್ನು ವೈದ್ಯಕೀಯ ಪರೀಕ್ಷೆ ಒಳಪಡಿಸಿದಾಗ ಮೂವರೂ ಮಾದಕ ದ್ರವ್ಯವನ್ನು ಸೇವಿಸಿರುವುದು ದೃಢಪಟ್ಟಿದೆ.

ಎನ್‌ಡಿಪಿಎಸ್ (NDPS) ಕಾಯ್ದೆಯ ಸೆಕ್ಷನ್ 27(ಬಿ) (ಸೇವನೆ) ಮತ್ತು 8(ಸಿ) ಅಡಿಯಲ್ಲಿ ಎಫ್‌ಐಆರ್ (FIR) ದಾಖಲಿಸಲಾಗಿದೆ. ಕಾಲೇಜಿಗೆ ಗಾಂಜಾ ತಂದಿದ್ದಾರೆ ಎನ್ನಲಾದ ವಿದ್ಯಾರ್ಥಿಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು. ಆತನ ಶೈಕ್ಷಣಿಕ ಹಿನ್ನೆಲೆ ಮತ್ತು ವಶಪಡಿಸಿಕೊಳ್ಳಲಾದ ಗಾಂಜಾದ ಪ್ರಮಾಣವನ್ನು ಪರಿಗಣಿಸಿ, ನ್ಯಾಯಾಲಯವು ಜಾಮೀನು ನೀಡಿದೆ. ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಸಿದ ವ್ಯಕ್ತಿಯ ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed