,

ಪ್ರವೀಣ ನೆಟ್ಟಾರು ಕೊಲೆಯ ಪ್ರಮುಖ ಆರೋಪಿ ಕೇರಳದಲ್ಲಿ ಅರೆಸ್ಟ್ !!

ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೀರ್ಘಕಾಲದಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಉಮರ್ ಫಾರೂಕ್‌ನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ಯಶಸ್ವಿಯಾಗಿ ಬಂಧಿಸಿದ್ದಾರೆ. ಕೇರಳದ ಕೊಚ್ಚಿಯಲ್ಲಿ ಎನ್‌ಐಎ ತನಿಖಾ ತಂಡ ಕಾರ್ಯಾಚರಣೆ ನಡೆಸಿ ಈತನನ್ನು ಬಂಧಿಸಿದೆ. ಪ್ರಕರಣ ನಡೆದಾಗಿನಿಂದಲೂ ಎನ್‌ಐಎ ಅಧಿಕಾರಿಗಳು ಆರೋಪಿಯ ಪತ್ತೆಗಾಗಿ ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದರು. ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ರಾಷ್ಟ್ರಮಟ್ಟದಲ್ಲಿ ಭಾರಿ ಸಂಚಲನ ಮೂಡಿಸಿತ್ತು. ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಪತ್ತೆಗೆ…

ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೀರ್ಘಕಾಲದಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಉಮರ್ ಫಾರೂಕ್‌ನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ಯಶಸ್ವಿಯಾಗಿ ಬಂಧಿಸಿದ್ದಾರೆ. ಕೇರಳದ ಕೊಚ್ಚಿಯಲ್ಲಿ ಎನ್‌ಐಎ ತನಿಖಾ ತಂಡ ಕಾರ್ಯಾಚರಣೆ ನಡೆಸಿ ಈತನನ್ನು ಬಂಧಿಸಿದೆ. ಪ್ರಕರಣ ನಡೆದಾಗಿನಿಂದಲೂ ಎನ್‌ಐಎ ಅಧಿಕಾರಿಗಳು ಆರೋಪಿಯ ಪತ್ತೆಗಾಗಿ ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದರು.

ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ರಾಷ್ಟ್ರಮಟ್ಟದಲ್ಲಿ ಭಾರಿ ಸಂಚಲನ ಮೂಡಿಸಿತ್ತು. ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಪತ್ತೆಗೆ ಎನ್‌ಐಎ ರೆಡ್ ಕಾರ್ನರ್ ನೋಟಿಸ್ ಹಾಗೂ ಲುಕೌಟ್ ನೋಟಿಸ್ ಹೊರಡಿಸಿತ್ತು. ಅಲ್ಲದೆ, ಆರೋಪಿ ಉಮರ್ ಫಾರೂಕ್ ಸುಳಿವು ನೀಡಿದವರಿಗೆ ₹4 ಲಕ್ಷ ಇನಾಮು ಘೋಷಿಸಲಾಗಿತ್ತು.

ಇದೀಗ ಉಮರ್ ಫಾರೂಕ್ ಬಂಧನದೊಂದಿಗೆ ಈ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾದ ಒಟ್ಟು ಆರೋಪಿಗಳ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ಕೃತ್ಯ ಎಸಗಿದ ನಂತರ ಹೊರರಾಜ್ಯಗಳಲ್ಲಿ ತಲೆಮರೆಸಿಕೊಂಡು ಓಡಾಡುತ್ತಿದ್ದ ಈತನನ್ನು ಸತತ ಪರಿಶ್ರಮದ ನಂತರ ಎನ್‌ಐಎ ತನಿಖಾಧಿಕಾರಿಗಳು ಕೊಚ್ಚಿಯಲ್ಲಿ ಸೆರೆಹಿಡಿದಿದ್ದು, ಮುಂದಿನ ಕಾನೂನು ಕ್ರಮಗಳಿಗಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

ಕೇರಳದ ಕೊಚ್ಚಿಯಲ್ಲಿ ಉಮರ್ ಫಾರೂಕ್ ಅಡಗಿ ಕುಳಿತಿದ್ದ ಪ್ರವೀಣ ನೆಟ್ಟಾರು ಕೊಲೆಯ ಬಳಿಕ ಪ್ರಮುಖ ಆರೋಪಿಗಳನ್ನು ತಪ್ಪಿಸಿಕೊಳ್ಳಲು ಸಹಾಯ ಮಾಡಿದ. ಕೇರಳದ ಕೊಚ್ಚಿಯಲ್ಲಿ ನಿಷೇಧಿತ ಪಿ ಎಫ್ ಐ ಈತನಿಗೆ ಆಶ್ರಯ ಕೊಟ್ಟಿದೆ. ಸಂಘಟನೆಯ ಪ್ರಮುಖರಿಂದ ಕೊಚ್ಚಿಯಲ್ಲಿ ಆಶ್ರಯ ಪಡೆದಿದ್ದ. ಅಜ್ಞಾತ ಸ್ಥಳದಲ್ಲಿ ಹತ್ತಿ ಆರೋಪಿ ಒಮ್ಮರಿಗೆ ವ್ಯವಸ್ಥೆ ಕಲ್ಪಿಸಲಾಗಿತ್ತು ಕಾಣಿಸಿಕೊಳ್ಳದಂತೆ ನಾಲ್ಕು ವರ್ಷದಿಂದ ರಕ್ಷಣೆ ಮಾಡಿದ್ದರು . ಹತ್ತೆಯ ಬಳಿಕ ಕೊಚ್ಚಿಯಲ್ಲಿ ಉಮರ್ ಫಾರೂಕ್ ವಾಸ್ತವ್ಯ ಹೂಡಿದ್ದ. ಇದೀಗ NIA ಅಧಿಕಾರಿಗಳು ಆತನನ್ನು ಅರೆಸ್ಟ್ ಮಾಡಿದ್ದಾರೆ.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed