ಬೆಂಗಳೂರಿನಲ್ಲಿ ಸ್ಟಾರ್ ಹೋಟೆಲ್ ಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ತಪಾಸಣೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಗ್ಯ ಸಚಿವ ಯು ಟಿ ಖಾದರ್ ಮಾತನಾಡಿ, ತಪಾಸಣೆ ನಮ್ಮ ಜವಾಬ್ದಾರಿ ಅದು ಮುಂದುವರಿಯುತ್ತದೆ. ತಪ್ಪಿತಸ್ಥರ ವಿರುದ್ಧ ಕಠಿಣವಾದ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಆರೋಗ್ಯ ಸಚಿವ ಯುಟಿ ಖಾದರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಹಳಷ್ಟು ಕಡೆ ದಾಳಿ ಮಾಡಿ ಸ್ಯಾಂಪಲ್ಸ್ ಗಳನ್ನು ಪಡೆಯಲಾಗಿದೆ. ಯಾವುದೇ ಪ್ರದೇಶಕ್ಕೆ ಈ ದಾಳಿಯನ್ನು ಸೀಮಿತ ಮಾಡಲ್ಲ. ಕಿಡ್ನಿ ಸಮಸ್ಯೆ ಮತ್ತು ಕ್ಯಾನ್ಸರ್ ನಂತಹ ಪ್ರಕರಣಗಳೆಲ್ಲವೂ ಬರುತ್ತಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆಯುವುದು ಕೊಳ್ಳುವುದಷ್ಟೇ ಉದ್ದೇಶವಲ್ಲ. ಪಂಚತಾರಾ ಹೋಟೆಲ್ ಗಳು ತಪ್ಪನ್ನು ಸರಿಪಡಿಸಿಕೊಂಡು ಹೋಗಬೇಕು ತಪ್ಪು ಮಾಡಿದರೆ ಕ್ಷಮಿಸುವುದಿಲ್ಲ ಎಂದು ಆರೋಗ್ಯ ಸಚಿವ ಖಾದರ್ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.















