ಮಂಗಳೂರು: ಗಲ್ಫ್ ರಾಷ್ಟ್ರಗಳಲ್ಲಿ ಹೋಟೆಲ್ಗಳು ಹಾಗೂ ಆಹಾರ ತಯಾರಿಕಾ ಸಿಬ್ಬಂದಿಯ ಸ್ವಚ್ಛತೆಗೆ ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸಲಾಗುತ್ತದೆ. ಅಡುಗೆ ಮಾಡುವ ಸಿಬ್ಬಂದಿಗೆ ಕಡ್ಡಾಯ ವೈದ್ಯಕೀಯ ಪರೀಕ್ಷೆ, ಸ್ವಚ್ಛ ಉಡುಪು, ತಲೆಗೆ ಹೇರ್ನೆಟ್, ಕೈಗವಸು ಸೇರಿದಂತೆ ಹಲವು ನಿಯಮಗಳನ್ನು ಅನುಸರಿಸಲಾಗುತ್ತದೆ. ಹೋಟೆಲ್ಗಳ ಸ್ವಚ್ಛತೆಗೂ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ.

ಆದರೆ ಕರ್ನಾಟಕದಲ್ಲಿ ಪರಿಸ್ಥಿತಿ ಇದಕ್ಕೆ ತದ್ವಿರುದ್ಧವಾಗಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಕೆಲವು ಹೋಟೆಲ್ಗಳಲ್ಲಿ ಅಡುಗೆ ಸಿಬ್ಬಂದಿ ಉದ್ದನೆಯ ಉಗುರುಗಳನ್ನು ಇಟ್ಟುಕೊಳ್ಳುವುದು, ತಲೆಗೆ ಕ್ಯಾಪ್ ಅಥವಾ ಹೇರ್ನೆಟ್ ಧರಿಸದಿರುವುದು, ಕೈಗವಸು ಬಳಸದಿರುವುದು ಸೇರಿದಂತೆ ಸ್ವಚ್ಛತಾ ನಿಯಮಗಳ ಉಲ್ಲಂಘನೆ ಕಂಡುಬರುತ್ತಿದೆ ಎನ್ನಲಾಗಿದೆ.
ಅಷ್ಟೇ ಅಲ್ಲದೆ, ಆಹಾರವನ್ನು ಪ್ಲೇಟ್ನಲ್ಲಿ ಪೂರೈಸುವ ಬದಲು ಕೈಯಲ್ಲೇ ಹಿಡಿದು ತಂದುಕೊಡುವಂತಹ ಘಟನೆಗಳೂ ನಡೆಯುತ್ತಿವೆ ಎಂಬ ಆರೋಪವಿದೆ. ಇಂತಹ ಕ್ರಮಗಳು ಆಹಾರ ಸುರಕ್ಷತೆ ಹಾಗೂ ಗ್ರಾಹಕರ ಆರೋಗ್ಯದ ದೃಷ್ಟಿಯಿಂದ ಎಷ್ಟು ಸುರಕ್ಷಿತ ಎಂಬ ಪ್ರಶ್ನೆಯೂ ಮೂಡಿದೆ.
ಗಲ್ಫ್ ರಾಷ್ಟ್ರಗಳಲ್ಲಿ ಹೋಟೆಲ್ಗಳ ಸ್ವಚ್ಛತಾ ನಿಯಮ ಉಲ್ಲಂಘನೆಗೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಆದರೆ ಕರ್ನಾಟಕದಲ್ಲಿ ದೊಡ್ಡ ಮಟ್ಟದ ಪ್ರಕರಣಗಳು ಬೆಳಕಿಗೆ ಬಂದರೂ, ಸಂಬಂಧಪಟ್ಟ ಹೋಟೆಲ್ಗಳ ಮೇಲೆ ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗುತ್ತಿಲ್ಲ ಎಂಬ ಅಸಮಾಧಾನವೂ ವ್ಯಕ್ತವಾಗುತ್ತಿದೆ.
ಕರ್ನಾಟಕದಲ್ಲೂ ಗಲ್ಫ್ ರಾಷ್ಟ್ರಗಳ ಮಾದರಿಯಲ್ಲಿ ಕಟ್ಟುನಿಟ್ಟಿನ ಆಹಾರ ಸುರಕ್ಷತಾ ಹಾಗೂ ಸ್ವಚ್ಛತಾ ನಿಯಮಗಳನ್ನು ಜಾರಿಗೊಳಿಸಬೇಕಾದ ಅಗತ್ಯವಿದೆ. ಆರೋಗ್ಯ ಸಚಿವ ಯು.ಟಿ. ಖಾದರ್ ಇಂತಹ ಕಟ್ಟುನಿಟ್ಟಿನ ವ್ಯವಸ್ಥೆ ಜಾರಿಗೆ ಬರಬಹುದೇ ಎಂಬ ಚರ್ಚೆಯೂ ಇದೀಗ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.















