, ,

ಬಂಟ್ವಾಳ: ಬೈಕ್ ಅಡ್ಡಗಟ್ಟಿ ತಲವಾರು ತೋರಿಸಿ ₹8 ಲಕ್ಷ ದರೋಡೆ: ನಾಲ್ವರು ದುಷ್ಕರ್ಮಿಗಳಿಗಾಗಿ ಶೋಧ

ಬಂಟ್ವಾಳ : ಮಣಿಹಳ್ಳ-ಕಕ್ಯಪದವು ರಸ್ತೆಯ ಮಣಿನಾಲ್ಕೂರು ಗ್ರಾಮದ ಮುಲ್ಕಾಜೆಮಾಡ ಎಂಬ ನಿರ್ಜನ ಪ್ರದೇಶದಲ್ಲಿ ಗುರುವಾರ (ಆಗಸ್ಟ್ 20) ಹಾಡಹಗಲೇ ಬೈಕ್ ಸವಾರನನ್ನು ಅಡ್ಡಗಟ್ಟಿದ ನಾಲ್ವರು ದುಷ್ಕರ್ಮಿಗಳು ತಲವಾರು ತೋರಿಸಿ ಬೆದರಿಸಿ ಲಕ್ಷಾಂತರ ರೂಪಾಯಿ ದರೋಡೆ ನಡೆಸಿ ಪರಾರಿಯಾಗಿದ್ದಾರೆ. ಸುರತ್ಕಲ್ ನಿವಾಸಿ ಮಯ್ಯದಿ ಎಂಬವರೇ ದರೋಡೆಗೊಳಗಾದ ಬೈಕ್ ಸವಾರ. ವಿವಿಧ ಅಂಗಡಿಗಳಿಗೆ ಹೋಲ್‌ಸೇಲ್ ಆಧಾರದಲ್ಲಿ ಪೂರೈಸಿದ್ದ ಸಿಮೆಂಟ್ ವ್ಯಾಪಾರದ ನಗದು ಹಣವನ್ನು ವಸೂಲಿ ಮಾಡಿಕೊಂಡು ಮಯ್ಯದಿ ಅವರು ಬೈಕ್‌ನಲ್ಲಿ ಹಿಂದಿರುಗುತ್ತಿದ್ದರು. ಮುಲ್ಕಾಜೆಮಾಡದ ನಿರ್ಜನ ರಸ್ತೆಯಲ್ಲಿ ಬರುತ್ತಿದ್ದಂತೆ, ಎರಡು ಬೈಕ್‌ಗಳಲ್ಲಿ…

ಬಂಟ್ವಾಳ : ಮಣಿಹಳ್ಳ-ಕಕ್ಯಪದವು ರಸ್ತೆಯ ಮಣಿನಾಲ್ಕೂರು ಗ್ರಾಮದ ಮುಲ್ಕಾಜೆಮಾಡ ಎಂಬ ನಿರ್ಜನ ಪ್ರದೇಶದಲ್ಲಿ ಗುರುವಾರ (ಆಗಸ್ಟ್ 20) ಹಾಡಹಗಲೇ ಬೈಕ್ ಸವಾರನನ್ನು ಅಡ್ಡಗಟ್ಟಿದ ನಾಲ್ವರು ದುಷ್ಕರ್ಮಿಗಳು ತಲವಾರು ತೋರಿಸಿ ಬೆದರಿಸಿ ಲಕ್ಷಾಂತರ ರೂಪಾಯಿ ದರೋಡೆ ನಡೆಸಿ ಪರಾರಿಯಾಗಿದ್ದಾರೆ. ಸುರತ್ಕಲ್ ನಿವಾಸಿ ಮಯ್ಯದಿ ಎಂಬವರೇ ದರೋಡೆಗೊಳಗಾದ ಬೈಕ್ ಸವಾರ.

ವಿವಿಧ ಅಂಗಡಿಗಳಿಗೆ ಹೋಲ್‌ಸೇಲ್ ಆಧಾರದಲ್ಲಿ ಪೂರೈಸಿದ್ದ ಸಿಮೆಂಟ್ ವ್ಯಾಪಾರದ ನಗದು ಹಣವನ್ನು ವಸೂಲಿ ಮಾಡಿಕೊಂಡು ಮಯ್ಯದಿ ಅವರು ಬೈಕ್‌ನಲ್ಲಿ ಹಿಂದಿರುಗುತ್ತಿದ್ದರು. ಮುಲ್ಕಾಜೆಮಾಡದ ನಿರ್ಜನ ರಸ್ತೆಯಲ್ಲಿ ಬರುತ್ತಿದ್ದಂತೆ, ಎರಡು ಬೈಕ್‌ಗಳಲ್ಲಿ ಬೆನ್ನಟ್ಟಿ ಬಂದ ನಾಲ್ವರು ಅಪರಿಚಿತ ಖದೀಮರು ಬೈಕ್ ಅಡ್ಡಗಟ್ಟಿದ್ದಾರೆ. ಬಳಿಕ ತಲವಾರು ಬೀಸಿ ಪ್ರಾಣ ಬೆದರಿಕೆಯೊಡ್ಡಿ, ಅವರ ಬ್ಯಾಗ್‌ನಲ್ಲಿದ್ದ ಸುಮಾರು ₹8 ಲಕ್ಷಕ್ಕೂ ಅಧಿಕ ನಗದನ್ನು ಕಸಿದುಕೊಂಡು ಸ್ಥಳದಿಂದ ಕಾಲ್ಕಿತ್ತಿದ್ದಾರೆ.

ಘಟನೆ ನಡೆದ ವಿಷಯ ತಿಳಿಯುತ್ತಿದ್ದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಅನಂತ ಪದ್ಮನಾಭ ಹಾಗೂ ಎಸ್‌ಐ ಮಂಜುನಾಥ್ ನೇತೃತ್ವದ ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಬಂಧನಕ್ಕಾಗಿ ಜಾಲ ಬೀಸಿದ್ದು, ದೋಚಲಾದ ನಿಖರ ಮೊತ್ತ ಹಾಗೂ ಕೃತ್ಯದ ಹಿನ್ನೆಲೆಯ ಬಗ್ಗೆ ತೀವ್ರ ತನಿಖೆ ಕೈಗೊಂಡಿದ್ದಾರೆ.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed