, ,

ಮಲಗಿದ್ದ ಪತ್ನಿಯ ಕತ್ತು ಹಿಸುಕಿ ಕೊಲೆಗೈದು ಹೃದಯಾಘಾತ ಎಂದು ಕಥೆ ಕಟ್ಟಿದ ಗಂಡ ಅರೆಸ್ಟ್

ಹೊನ್ನಾವರ: ಕುಡಿದ ಮತ್ತಿನಲ್ಲಿ ಪತ್ನಿಯನ್ನೇ ಕೊಂದು ಏನೂ ತಿಳಿಯದವನಂತೆ ‘ಹೃದಯಾಘಾತ’ದ ನಾಟಕವಾಡಿದ್ದ ಪತಿಯನ್ನು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪೊಲೀಸರು ಬಂಧಿಸಿದ ಘಟನೆ ಹೊನ್ನಾವರ ತಾಲೂಕಿನ ದೊಡ್ಡಗುಂಡ ಗ್ರಾಮದಲ್ಲಿ ನಡೆದಿದೆ. ದೊಡ್ಡಗುಂಡ ಗ್ರಾಮದ ನಿವಾಸಿ ಗಣಪತಿ ಮಂಜುನಾಥ ನಾಯ್ಕ ಬಂಧಿತ ಆರೋಪಿ. ಮಂಗಲಾ ಗಣಪತಿ ನಾಯ್ಕ (27) ಕೊಲೆಯಾದವರು ಆರೋಪಿ ಗಣಪತಿ ಮದ್ಯ ಸೇವಿಸಿ ಮನೆಗೆ ಬಂದು ರಾತ್ರಿ ಪತ್ನಿ ಮಂಗಲಾ ಮಲಗಿದ್ದಾಗ ಆಕೆಯ ಕುತ್ತಿಗೆ ಹಿಚುಕಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಪತ್ನಿ ಮೃತಪಟ್ಟಿದ್ದನ್ನು ಖಚಿತಪಡಿಸಿಕೊಂಡ ಆರೋಪಿ…

ಹೊನ್ನಾವರ: ಕುಡಿದ ಮತ್ತಿನಲ್ಲಿ ಪತ್ನಿಯನ್ನೇ ಕೊಂದು ಏನೂ ತಿಳಿಯದವನಂತೆ ‘ಹೃದಯಾಘಾತ’ದ ನಾಟಕವಾಡಿದ್ದ ಪತಿಯನ್ನು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪೊಲೀಸರು ಬಂಧಿಸಿದ ಘಟನೆ ಹೊನ್ನಾವರ ತಾಲೂಕಿನ ದೊಡ್ಡಗುಂಡ ಗ್ರಾಮದಲ್ಲಿ ನಡೆದಿದೆ.

ದೊಡ್ಡಗುಂಡ ಗ್ರಾಮದ ನಿವಾಸಿ ಗಣಪತಿ ಮಂಜುನಾಥ ನಾಯ್ಕ ಬಂಧಿತ ಆರೋಪಿ. ಮಂಗಲಾ ಗಣಪತಿ ನಾಯ್ಕ (27) ಕೊಲೆಯಾದವರು

ಆರೋಪಿ ಗಣಪತಿ ಮದ್ಯ ಸೇವಿಸಿ ಮನೆಗೆ ಬಂದು ರಾತ್ರಿ ಪತ್ನಿ ಮಂಗಲಾ ಮಲಗಿದ್ದಾಗ ಆಕೆಯ ಕುತ್ತಿಗೆ ಹಿಚುಕಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.

ಪತ್ನಿ ಮೃತಪಟ್ಟಿದ್ದನ್ನು ಖಚಿತಪಡಿಸಿಕೊಂಡ ಆರೋಪಿ ಯಾರಿಗೂ ಸಂಶಯ ಬಾರದಿರಲಿ ಎಂದು ಹೊಸ ಕಥೆ ಕಟ್ಟಿದ್ದ. ತನ್ನ ಪತ್ನಿ ಮಂಗಲಾಗೆ ಇದ್ದಕ್ಕಿದ್ದಂತೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾಳೆ ಎಂದು ಎಲ್ಲರಿಗೂ ನಂಬಿಸಿದ್ದ. ಆಕೆಯ ಸಾವು ನೈಸರ್ಗಿಕ ಎಂದು ಬಿಂಬಿಸಲು ಆತ ಸಾಕಷ್ಟು ಪ್ರಯತ್ನ ನಡೆಸಿದ್ದ.

ಆದರೆ ಮಂಗಲಾಳ ಸಾವಿನ ಬಗ್ಗೆ ಆಕೆಯ ಸಹೋದರಿಗೆ ಬಲವಾದ ಸಂಶಯ ವ್ಯಕ್ತವಾಗಿತ್ತು. ಆರೋಗ್ಯವಾಗಿದ್ದ ತಂಗಿ ಇದ್ದಕ್ಕಿದ್ದಂತೆ ಹೃದಯಾಘಾತದಿಂದ ಸಾಯಲು ಹೇಗೆ ಸಾಧ್ಯ ಎಂಬ ಪ್ರಶ್ನೆ ಎದ್ದಿತ್ತು.

ತಕ್ಷಣವೇ ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿತ್ತು. ಪ್ರಕರಣವನ್ನು ಕೈಗೆತ್ತಿಕೊಂಡ ಮಂಕಿ ಪೊಲೀಸರು ತನಿಖೆ ಆರಂಭಿಸಿದಾಗ ಅಸಲಿ ಸತ್ಯ ಬಯಲಾಗಿದೆ.

ಪೊಲೀಸರು ಸಂಶಯದ ಮೇಲೆ ಪತಿ ಗಣಪತಿಯನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಿದಾಗ ಆತ ಪತ್ನಿಯನ್ನೇ ಕೊಂದಿರುವುದನ್ನು ಒಪ್ಪಿಕೊಂಡಿದ್ದಾನೆ. ಸದ್ಯ ಮಂಕಿ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed