,

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರಾಗಿ ಸಂತೋಷ್ ಕುಮಾರ್ ಶೆಟ್ಟಿ ನೇಮಕ

ಮಂಗಳೂರು : ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ಕ್ಕೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಸದಾಶಿವ ಉಲ್ಲಾಳ್ ಅವರ ಬದಲಿಗೆ ಮಂಗಳೂರಿನ ಕೊಟ್ಟಾರ ನಿವಾಸಿ ಸಂತೋಷ್ ಕುಮಾರ್ ಶೆಟ್ಟಿ, ಬಿನ್ ಕೆ. ರಾಘವ ಶೆಟ್ಟಿ ಅವರನ್ನು ಮುಡಾ ಅಧ್ಯಕ್ಷರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ. ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯ್ದೆ, 1987ರ ಕಲಂ 3ರ ಉಪ ಕಲಂ 3(ಎ) ಹಾಗೂ 3(4)ರ ಅಡಿಯಲ್ಲಿ ಸರ್ಕಾರಕ್ಕೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ನೇಮಕ ಮಾಡಲಾಗಿದೆ. ಆಗಸ್ಟ್ 29, 2026ರಿಂದಲೇ…

ಮಂಗಳೂರು : ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ಕ್ಕೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಸದಾಶಿವ ಉಲ್ಲಾಳ್ ಅವರ ಬದಲಿಗೆ ಮಂಗಳೂರಿನ ಕೊಟ್ಟಾರ ನಿವಾಸಿ ಸಂತೋಷ್ ಕುಮಾರ್ ಶೆಟ್ಟಿ, ಬಿನ್ ಕೆ. ರಾಘವ ಶೆಟ್ಟಿ ಅವರನ್ನು ಮುಡಾ ಅಧ್ಯಕ್ಷರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ.

ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯ್ದೆ, 1987ರ ಕಲಂ 3ರ ಉಪ ಕಲಂ 3(ಎ) ಹಾಗೂ 3(4)ರ ಅಡಿಯಲ್ಲಿ ಸರ್ಕಾರಕ್ಕೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ನೇಮಕ ಮಾಡಲಾಗಿದೆ. ಆಗಸ್ಟ್ 29, 2026ರಿಂದಲೇ ನೇಮಕಾತಿ ಜಾರಿಗೆ ಬರಲಿದ್ದು, ಸರ್ಕಾರದ ಮುಂದಿನ ಆದೇಶದವರೆಗೆ ಸಂತೋಷ್ ಕುಮಾರ್ ಶೆಟ್ಟಿ ಅವರು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.
ಈ ಕುರಿತು ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಲತಾ ಕೆ. ಅವರು ಅಧಿಸೂಚನೆ ಹೊರಡಿಸಿದ್ದಾರೆ.

ಸಂತೋಷ್ ಕುಮಾರ್ ಶೆಟ್ಟಿ ಮುಡಾಕ್ಕೆ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವುದು ಸಾರ್ವಜನಿಕರಿಗೆ ಮತ್ತು ಕ್ರೈಂ ವಾರ್ತೆ ಬಳಗಕ್ಕೆ ಸಂತಸ ತಂದಿದೆ. ನೂತನ ಅಧ್ಯಕ್ಷರಿಗೆ ನಮ್ಮ ಕ್ರೈಂ ವಾರ್ತೆ ಸಂಪಾದಕರು ಮತ್ತು ಬಳಗದವರು ಶುಭ ಹಾರೈಸುತ್ತಾರೆ.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed