, ,

ಪುತ್ತೂರು ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ: ಸುದರ್ಶನ್ ಪೈಗೆ ಜಾಮೀನು, ಅಂಜನಾ ಪೈಗೆ ನಿರೀಕ್ಷಣಾ ಜಾಮೀನು

ಪುತ್ತೂರು : ದರ್ಬೆಯ ಜನಸೇವಾ ಕೇಂದ್ರವೊಂದರಲ್ಲಿ ತಾಂತ್ರಿಕ ದೋಷದಿಂದ ಗ್ರಾಹಕರ ದಾಖಲಾತಿ ಹಾನಿಗೊಂಡ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಹಲ್ಲೆ ಪ್ರಕರಣದಲ್ಲಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸುದರ್ಶನ್ ಪೈಗೆ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದೇ ಪ್ರಕರಣದ ಇನ್ನೋರ್ವ ಆರೋಪಿಯಾಗಿರುವ ಜನಸೇವಾ ಕೇಂದ್ರದ ಮಾಲಕಿ ಅಂಜನಾ ಎಸ್. ಪೈ ಅವರಿಗೆ ನಿರೀಕ್ಷಣಾ ಜಾಮೀನು ಲಭಿಸಿದೆ. ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಉಭಯ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಸುಳ್ಯ ತಾಲೂಕಿನ ಜಾಲ್ಲೂರು…

ಪುತ್ತೂರು : ದರ್ಬೆಯ ಜನಸೇವಾ ಕೇಂದ್ರವೊಂದರಲ್ಲಿ ತಾಂತ್ರಿಕ ದೋಷದಿಂದ ಗ್ರಾಹಕರ ದಾಖಲಾತಿ ಹಾನಿಗೊಂಡ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಹಲ್ಲೆ ಪ್ರಕರಣದಲ್ಲಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸುದರ್ಶನ್ ಪೈಗೆ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದೇ ಪ್ರಕರಣದ ಇನ್ನೋರ್ವ ಆರೋಪಿಯಾಗಿರುವ ಜನಸೇವಾ ಕೇಂದ್ರದ ಮಾಲಕಿ ಅಂಜನಾ ಎಸ್. ಪೈ ಅವರಿಗೆ ನಿರೀಕ್ಷಣಾ ಜಾಮೀನು ಲಭಿಸಿದೆ.

ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಉಭಯ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಸುಳ್ಯ ತಾಲೂಕಿನ ಜಾಲ್ಲೂರು ನಿವಾಸಿ ಫಾತಿಮತ್ ಮಿಸ್ವಾನ್ ಎಂಬವರು ನೀಡಿರುವ ದೂರಿನ ಆಧಾರದಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿತ್ತು.

ಆಗಸ್ಟ್ 21ರಂದು ಫಾತಿಮತ್ ಮಿಸ್ವಾನ್ ಅವರು ತಮ್ಮ ಸಹೋದರ ಹಾಗೂ ತಂಗಿಯೊಂದಿಗೆ ಪುತ್ತೂರಿಗೆ ಆಗಮಿಸಿ, ಕೆಲವು ಮುಖ್ಯ ದಾಖಲಾತಿಗಳ ಪ್ರಿಂಟ್ ಹಾಗೂ ಲ್ಯಾಮಿನೇಷನ್‌ಗಾಗಿ ದರ್ಬೆಯ ಡಿಜಿಟಲ್ ಜನಸೇವಾ ಕೇಂದ್ರಕ್ಕೆ ನೀಡಿದ್ದರು. ಬಳಿಕ ದಾಖಲಾತಿಗಳನ್ನು ಪಡೆಯಲು ಹೋದಾಗ ಒಂದು ದಾಖಲೆ ಹಾನಿಗೊಳಗಾಗಿರುವುದು ಕಂಡುಬಂದಿತ್ತು.

ಅದನ್ನು ಸರಿಪಡಿಸಿಕೊಡುವಂತೆ ಅಥವಾ ಹೊಸ ದಾಖಲೆ ಪಡೆಯಲು ತಗಲುವ ಹಣವನ್ನು ನೀಡುವಂತೆ ಕೇಳಿದಾಗ, ಅಂಗಡಿಯಲ್ಲಿದ್ದ ಅಂಜನಾ ಪೈ ಹಾಗೂ ಸುದರ್ಶನ್ ಪೈ ಅವರು ಅವಾಚ್ಯ ಶಬ್ದಗಳಿಂದ ನಿಂದಿಸಿ, ತಮ್ಮಿಬ್ಬರ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಫಾತಿಮತ್ ದೂರಿನಲ್ಲಿ ಆರೋಪಿಸಿದ್ದರು. ಸಂತ್ರಸ್ತೆ ನೀಡಿದ ದೂರಿನನ್ವಯ ಪುತ್ತೂರು ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಬಳಿಕ ಪೊಲೀಸರು ಸುದರ್ಶನ್ ಪೈ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಳಪಡಿಸಿದ್ದರು. ಇದೀಗ ನ್ಯಾಯಾಂಗ ಬಂಧನದಲ್ಲಿದ್ದ ಸುದರ್ಶನ್ ಪೈ ಅವರಿಗೆ ಜಾಮೀನು ಹಾಗೂ ಅಂಜನಾ ಪೈ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed