, ,

ಮಂಗಳೂರು : ತಡರಾತ್ರಿ ಜೈಲಿಗೆ ಪೊಲೀಸ್ ದಾಳಿ- ಕೈದಿಗಳ ಬಳಿಯಿದ್ದ ಮೊಬೈಲ್‌ಗಳು ಜಪ್ತಿ

ಮಂಗಳೂರು ನಗರದ ಕೊಡಿಯಾಲ್ ಬೈಲಿನ ಉಪ ಕಾರಾಗೃಹಕ್ಕೆ ತಡರಾತ್ರಿ ಪೊಲೀಸರು ದಿಢೀರ್ ದಾಳಿ ನಡೆಸಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಜೈಲಿನ ಎ ಮತ್ತು ಬಿ ಬ್ಯಾರಕ್‌ಗಳಲ್ಲಿ ಪೊಲೀಸರು ತಪಾಸಣೆ ನಡೆಸಿದ್ದು, ಅಡಗಿಸಿಟ್ಟಿದ್ದ ಎಂಟಕ್ಕೂ ಹೆಚ್ಚು ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳೇ ಖುದ್ದಾಗಿ ದಾಳಿ ನಡೆಸಿರುವ ಹಿನ್ನೆಲೆಯಲ್ಲಿ, ಪೊಲೀಸರಿಗೆ ಲಭ್ಯವಾದ ಖಚಿತ ಮಾಹಿತಿಯ ಆಧಾರದ ಮೇಲೆ ಈ ಕಾರ್ಯಾಚರಣೆ ನಡೆದಿದೆ ಎನ್ನಲಾಗುತ್ತಿದೆ. ಇತ್ತೀಚೆಗೆ ಬೆಂಗಳೂರಿನ ಜೈಲಿನಲ್ಲಿ…

ಮಂಗಳೂರು ನಗರದ ಕೊಡಿಯಾಲ್ ಬೈಲಿನ ಉಪ ಕಾರಾಗೃಹಕ್ಕೆ ತಡರಾತ್ರಿ ಪೊಲೀಸರು ದಿಢೀರ್ ದಾಳಿ ನಡೆಸಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ನೇತೃತ್ವದಲ್ಲಿ ಈ ದಾಳಿ ನಡೆದಿದೆ.

ಜೈಲಿನ ಎ ಮತ್ತು ಬಿ ಬ್ಯಾರಕ್‌ಗಳಲ್ಲಿ ಪೊಲೀಸರು ತಪಾಸಣೆ ನಡೆಸಿದ್ದು, ಅಡಗಿಸಿಟ್ಟಿದ್ದ ಎಂಟಕ್ಕೂ ಹೆಚ್ಚು ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳೇ ಖುದ್ದಾಗಿ ದಾಳಿ ನಡೆಸಿರುವ ಹಿನ್ನೆಲೆಯಲ್ಲಿ, ಪೊಲೀಸರಿಗೆ ಲಭ್ಯವಾದ ಖಚಿತ ಮಾಹಿತಿಯ ಆಧಾರದ ಮೇಲೆ ಈ ಕಾರ್ಯಾಚರಣೆ ನಡೆದಿದೆ ಎನ್ನಲಾಗುತ್ತಿದೆ.

ಇತ್ತೀಚೆಗೆ ಬೆಂಗಳೂರಿನ ಜೈಲಿನಲ್ಲಿ ಕೈದಿಗಳು ರಾಜಾರೋಷವಾಗಿ ಮೊಬೈಲ್ ಬಳಸುತ್ತಿರುವುದು ಹಾಗೂ ಬೇಕಾಬಿಟ್ಟಿಯಾಗಿ ವರ್ತಿಸುತ್ತಿರುವ ಘಟನೆಗಳು ಬೆಳಕಿಗೆ ಬಂದಿದ್ದವು. ಈ ಹಿನ್ನೆಲೆಯಲ್ಲಿ ಜೈಲುಗಳಲ್ಲಿ ಆಗಾಗ್ಗೆ ಪರಿಶೀಲನೆ ನಡೆಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿತ್ತು. ಕೈದಿ ಪ್ರಜ್ವಲ್ ರೇವಣ್ಣ ಮೊಬೈಲ್ ಮೂಲಕ ವಾಟ್ಸಪ್ ಕರೆ ಮಾಡುತ್ತಿದ್ದ ಪ್ರಕರಣವೂ ಪೊಲೀಸ್ ಇಲಾಖೆಗೆ ಮುಜುಗರ ಉಂಟುಮಾಡಿತ್ತು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed