ಮಣಿಪಾಲ: ಪೆರಂಪಳ್ಳಿ ಬ್ರಿಡ್ಜ್ ಬಳಿ ಕಾರಿನಲ್ಲಿ MDMA ಮಾದಕ ವಸ್ತು ಸಾಗಾಟ ಹಾಗೂ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.
ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಪೆರಂಪಳ್ಳಿ ರೈಲ್ವೇ ಬ್ರಿಡ್ಜ್ ಬಳಿ ಸೆಪ್ಟೆಂಬರ್ 17ರಂದು ಮಧ್ಯರಾತ್ರಿ 12.10ರ ಸುಮಾರಿಗೆ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ, ಅಂಬಾಗಿಲು ಕಡೆಯಿಂದ ಬಂದ KA19-MK-2021 ನೋಂದಣಿ ಸಂಖ್ಯೆಯ ಬಿಳಿ ಬಣ್ಣದ ಮಾರುತಿ ಸ್ವಿಫ್ಟ್ ಕಾರನ್ನು ಪೊಲೀಸರು ತಡೆದು ಪರಿಶೀಲಿಸಿದ್ದಾರೆ.
ಈ ವೇಳೆ ಕಾರಿನಲ್ಲಿದ್ದ ಉದ್ಯಾವರದ ಅಕ್ಬರ್ ಮಹಮ್ಮದ್ ಬ್ಯಾರಿ (44) ಹಾಗೂ ಬೆಂಗಳೂರಿನ ಸೈಯದ್ ಸುಹೇಲ್ (26) ಅವರನ್ನು ಬಂಧಿಸಲಾಗಿದೆ.
ಆರೋಪಿಗಳಿಂದ ಸುಮಾರು 10 ಲಕ್ಷ ರೂ. ಮೌಲ್ಯದ 30 ಗ್ರಾಂ MDMA, 4 ಮೊಬೈಲ್ ಫೋನ್‌ಗಳು, 1 ಡಾಂಗಲ್, 9,500 ರೂ. ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.















