ಮಂಗಳೂರಿನ ಮೈದಾನ ಕ್ರಾಸ್ ರಸ್ತೆ ಹಾಗೂ ಬೀಬಿ ಅಲಾಬಿ ರಸ್ತೆಯಲ್ಲಿ ಅನಧಿಕೃತ ಕಟ್ಟಡ ನಿರ್ಮಾಣ ನಡೆಯುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿಬರುತ್ತಿವೆ. ಆದರೆ ಈ ಬಗ್ಗೆ ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಕಂಡೂ ಕಾಣದಂತೆ ವರ್ತಿಸುತ್ತಿದ್ದಾರೆಯೇ ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ.
ಶ್ರೀಮಂತರಿಗೊಂದು ನ್ಯಾಯ, ಬಡವರಿಗೊಂದು ನ್ಯಾಯವೇ?
ಸಾಮಾನ್ಯ ಬಡವರು ಮನೆ ನಿರ್ಮಿಸುವಾಗ ಕಟ್ಟಡ ಪರವಾನಗಿ ಇಲ್ಲದಿದ್ದರೆ ಅಥವಾ ಮಂಜೂರಾದ ನಕ್ಷೆಗಿಂತ ಹೆಚ್ಚುವರಿಯಾಗಿ ನಿರ್ಮಾಣ ಮಾಡಿದರೆ ತಕ್ಷಣ ಕ್ರಮ ಕೈಗೊಳ್ಳುವ ಅಧಿಕಾರಿಗಳು, ಪ್ರಭಾವಿ ವ್ಯಕ್ತಿಗಳ ಕಟ್ಟಡಗಳ ವಿಚಾರದಲ್ಲಿ ಅದೇ ಕಟ್ಟುನಿಟ್ಟಿನ ಕಾನೂನು ಜಾರಿಗೊಳಿಸದೆ ರಾಜಾರೋಷವಾಗಿ ಕಾಮಗಾರಿ ನಡೆಸಲು ಅನುಮತಿ ನೀಡುತ್ತಾರೆ
ಅನಧಿಕೃತ ಕಟ್ಟಡಗಳಿಗೆ ಡೋರ್ ನಂಬರ್ ನೀಡಲಾಗುತ್ತಿದೆ ಎಂಬ ಆರೋಪಗಳೂ ಕೇಳಿಬರುತ್ತಿವೆ. ಈ ಆರೋಪಗಳ ಬಗ್ಗೆ ಪಾಲಿಕೆ ಸ್ಪಷ್ಟನೆ ನೀಡಬೇಕಾಗಿದೆ.
ಕಟ್ಟಡ ನಿರ್ಮಾಣದಲ್ಲಿ ನಿಯಮಗಳ ಉಲ್ಲಂಘನೆ
▪️ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಇಲ್ಲದ ಕಟ್ಟಡಗಳು.
▪️ ಕಡ್ಡಾಯ ಸೆಟ್ಬ್ಯಾಕ್ ನಿಯಮಗಳ ಉಲ್ಲಂಘನೆಯ ಆರೋಪ.
▪️ ಸಾರ್ವಜನಿಕ ರಸ್ತೆಯನ್ನು ಅತಿಕ್ರಮಿಸಿ ಕಟ್ಟಡ ನಿರ್ಮಾಣ ಮಾಡಿರುವ ಆರೋಪ.
▪️ ಪಾರ್ಕಿಂಗ್ಗೆ ಮೀಸಲಿಟ್ಟ ಜಾಗದಲ್ಲೇ ಅಂಗಡಿಗಳ ನಿರ್ಮಾಣ.
▪️ ಪಾಲಿಕೆ ನೋಟಿಸ್ ನೀಡಿದರೂ ಕಾಮಗಾರಿ ಮುಂದುವರಿಯುತ್ತಿದೆ ಎಂಬ ಆರೋಪ.
▪️ ರಾತ್ರಿ ಹಗಲು ನಿರಂತರವಾಗಿ ನಡೆಯುತ್ತಿರುವ ಕಟ್ಟಡ ಕಾಮಗಾರಿ

ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಸ್ಥಳ ಪರಿಶೀಲನೆ ನಡೆಸಿ, ಕಟ್ಟಡಗಳ ಅನುಮತಿ, ಮಂಜೂರಾದ ನಕ್ಷೆ, ಪಾರ್ಕಿಂಗ್ ವ್ಯವಸ್ಥೆ, ಸೆಟ್ಬ್ಯಾಕ್ ಮತ್ತು ರಸ್ತೆ ಅತಿಕ್ರಮಣದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು.

ನಿಯಮಉಲ್ಲಂಘಿಸಿದ ಕಟ್ಟಡ ಮಾಲಿಕರ ವಿರುದ್ಧ ಕಾನೂನು ಪ್ರಕಾರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಕಾನೂನು ಎಲ್ಲರಿಗೂ ಸಮಾನವಾಗಿರಬೇಕು. ಬಡವರಿಗೊಂದು ಕಾನೂನು, ಶ್ರೀಮಂತರಿಗೊಂದು ಕಾನೂನು ಎಂಬ ಭಾವನೆ ಸಾರ್ವಜನಿಕರಲ್ಲಿ ಮೂಡಬಾರದು.















