,

10,000 ರೂಪಾಯಿ ಲಂಚಕ್ಕೆ ಬೇಡಿಕೆ: ಪುರಸಭೆ ಮುಖ್ಯಾಧಿಕಾರಿ ಸೇರಿದಂತೆ ಮೂವರು ಲೋಕಾಯುಕ್ತ ದಾಳಿ

ಬಾಗಲಕೋಟೆ : ಜಿಲ್ಲೆಯ ತೇರದಾಳ ಪುರಸಭೆ ವ್ಯಾಪ್ತಿಯಲ್ಲಿ ಮನೆಯ ಇ-ಆಸ್ತಿ ಉತಾರ ಮಾಡಿಕೊಡಲು 10,000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟು, ಹಣ ಸ್ವೀಕರಿಸುತ್ತಿದ್ದ ವೇಳೆ ಪುರಸಭೆ ಮುಖ್ಯಾಧಿಕಾರಿ ಸೇರಿದಂತೆ ಮೂವರನ್ನು ಕರ್ನಾಟಕ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ತೇರದಾಳದ ನಿವಾಸಿ ರಾಜೇಸಾಬ ಮಹಮ್ಮದಹುಸೇನ್ ನಾಗರ್ಜಿ ಅವರು ತಮ್ಮ ಸಂಬಂಧಿ ಹಸೀನಾ ಅಬ್ದುಲ್ ಕೊರಬು ಅವರ ಹೆಸರಿನಲ್ಲಿರುವ ಆಸ್ತಿ ನಂ. 574/25ರ ಇ-ಆಸ್ತಿ ಉತಾರಕ್ಕಾಗಿ ಅರ್ಜಿ ಸಲ್ಲಿಸಿದ್ದು, ಈ ವೇಳೆ ಆರೋಪಿಗಳು ಲಂಚದ ಹಣಕ್ಕೆ ಒತ್ತಾಯಿಸಿದ್ದರು.…

ಬಾಗಲಕೋಟೆ : ಜಿಲ್ಲೆಯ ತೇರದಾಳ ಪುರಸಭೆ ವ್ಯಾಪ್ತಿಯಲ್ಲಿ ಮನೆಯ ಇ-ಆಸ್ತಿ ಉತಾರ ಮಾಡಿಕೊಡಲು 10,000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟು, ಹಣ ಸ್ವೀಕರಿಸುತ್ತಿದ್ದ ವೇಳೆ ಪುರಸಭೆ ಮುಖ್ಯಾಧಿಕಾರಿ ಸೇರಿದಂತೆ ಮೂವರನ್ನು ಕರ್ನಾಟಕ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ತೇರದಾಳದ ನಿವಾಸಿ ರಾಜೇಸಾಬ ಮಹಮ್ಮದಹುಸೇನ್ ನಾಗರ್ಜಿ ಅವರು ತಮ್ಮ ಸಂಬಂಧಿ ಹಸೀನಾ ಅಬ್ದುಲ್ ಕೊರಬು ಅವರ ಹೆಸರಿನಲ್ಲಿರುವ ಆಸ್ತಿ ನಂ. 574/25ರ ಇ-ಆಸ್ತಿ ಉತಾರಕ್ಕಾಗಿ ಅರ್ಜಿ ಸಲ್ಲಿಸಿದ್ದು, ಈ ವೇಳೆ ಆರೋಪಿಗಳು ಲಂಚದ ಹಣಕ್ಕೆ ಒತ್ತಾಯಿಸಿದ್ದರು. ಈ ಕುರಿತು ನವೆಂಬರ್ 3ರಂದು ಬಾಗಲಕೋಟೆ ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು.

ದೂರಿನ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ಸಂಘಟಿತ ಕಾರ್ಯಾಚರಣೆ ನಡೆಸಿ, ನವೆಂಬರ್ 4ರಂದು ಲಂಚದ ಹಣ ಸ್ವೀಕರಿಸುತ್ತಿದ್ದ ತೇರದಾಳ ಪುರಸಭೆಯ ಮುಖ್ಯಾಧಿಕಾರಿ ಇರ್ಫಾನ್ ಬಾಬುಸಾಬ ಝಾರೆ ಹಾಗೂ ಹೊರಗುತ್ತಿಗೆ ನೌಕರರಾದ ಇಬ್ರಾಹಿಂ ಮಹಾಲಿಂಗಪೂರ ಮತ್ತು ಶಿವಾನಂದ ಕಾಂಬಳೆ ಅವರನ್ನು ರೆಡ್‌ ಹ್ಯಾಂಡ್‌ ಆಗಿ ಬಂಧಿಸಿದ್ದಾರೆ.

ಕರ್ನಾಟಕ ಲೋಕಾಯುಕ್ತ ಬಾಗಲಕೋಟೆಯ ಡಿಎಸ್‌ಪಿ ಸುರೇಶರೆಡ್ಡಿ ಎಂ.ಎಸ್. ಅವರ ಮಾರ್ಗದರ್ಶನದಲ್ಲಿ, ಪೊಲೀಸ್ ಇನ್‌ಸ್ಪೆಕ್ಟರ್‌ಗಳಾದ ಮಲ್ಲಿಕಾರ್ಜುನ ಬಿ. ಬಿರಾದಾರ ಹಾಗೂ ಎನ್.ಆರ್. ಖಿಲಾರೆ ನೇತೃತ್ವದ ಸಿಬ್ಬಂದಿ ಈ ದಾಳಿಯಲ್ಲಿ ಪಾಲ್ಗೊಂಡಿದ್ದರು. ಬಂಧಿತ ಆರೋಪಿಗಳ ವಿರುದ್ಧ ಮುಂದಿನ ಕಾನೂನು ಕ್ರಮ ಜರುಗಿಸಲಾಗುತ್ತಿದ್ದು, ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತರ ಈ ಕಾರ್ಯಾಚರಣೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed