,

ಇನ್ಮುಂದೆ ಕರ್ನಾಟಕದ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಧರಿಸುವುದು ಕಡ್ಡಾಯ!?

ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ನೌಕರರಿಗೂ ಡ್ರೆಸ್ ಕೋಡ್ ತರೋದಕ್ಕೆ ಸರ್ಕಾರ ಮುಂದಾಗಿದೆ. ಇನ್ಮುಂದೆ ಕರ್ನಾಟಕದ ಸರ್ಕಾರಿ ನೌಕರರು ಖಾದಿ ಬಟ್ಟೆ ಧರಿಸುವುದು ಕಡ್ಡಾಯಗೊಳಿಸಲಾಗುತ್ತಿದೆ ಎಂಬುದಾಗಿ ಹೇಳಲಾಗುತ್ತಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಹಿರಿಯ ಆಪ್ತ ಕಾರ್ಯದರ್ಶಿ ಸರ್ಕಾರಿ ನೌಕರರ ಸಂಘಟನೆಯೊಂದಿಗೆ ಇಂದು ಮಹತ್ವದ ಸಭೆಯನ್ನು ನಡೆಸಲಿದ್ದಾರೆ. ಅವರು ಪತ್ರ ಬರೆದಿದ್ದು, ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿ/ನೌಕರರು ಪ್ರತಿ ತಿಂಗಳ ಮೊದಲ ಶುಕ್ರವಾರದಂದು ಖಾದಿ ಉಡುಪನ್ನು ಧರಿಸುವುದು ಮತ್ತು ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣರಾಜ್ಯೋತ್ಸವ ಸೇರಿದಂತೆ…

ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ನೌಕರರಿಗೂ ಡ್ರೆಸ್ ಕೋಡ್ ತರೋದಕ್ಕೆ ಸರ್ಕಾರ ಮುಂದಾಗಿದೆ. ಇನ್ಮುಂದೆ ಕರ್ನಾಟಕದ ಸರ್ಕಾರಿ ನೌಕರರು ಖಾದಿ ಬಟ್ಟೆ ಧರಿಸುವುದು ಕಡ್ಡಾಯಗೊಳಿಸಲಾಗುತ್ತಿದೆ ಎಂಬುದಾಗಿ ಹೇಳಲಾಗುತ್ತಿದೆ.

ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಹಿರಿಯ ಆಪ್ತ ಕಾರ್ಯದರ್ಶಿ ಸರ್ಕಾರಿ ನೌಕರರ ಸಂಘಟನೆಯೊಂದಿಗೆ ಇಂದು ಮಹತ್ವದ ಸಭೆಯನ್ನು ನಡೆಸಲಿದ್ದಾರೆ.

ಅವರು ಪತ್ರ ಬರೆದಿದ್ದು, ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿ/ನೌಕರರು ಪ್ರತಿ ತಿಂಗಳ ಮೊದಲ ಶುಕ್ರವಾರದಂದು ಖಾದಿ ಉಡುಪನ್ನು ಧರಿಸುವುದು ಮತ್ತು ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣರಾಜ್ಯೋತ್ಸವ ಸೇರಿದಂತೆ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಅಧಿಕಾರಿಗಳು/ಸಿಬ್ಬಂದಿಗಳೆಲ್ಲರೂ ಖಾದಿ ಉಡುಪನ್ನು ಧರಿಸುವ ಕುರಿತಂತೆ ಚರ್ಚಿಸಲು ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ದಿನಾಂಕ: 29.01.2026 ರ ಇಂದು ಮಧ್ಯಾಹ್ನ 12.00 ಘಂಟೆಗೆ ಕೊಠಡಿ ಸಂಖ್ಯೆ:320 ವಿಧಾನಸೌಧ ಇಲ್ಲಿ ಸಭೆಯನ್ನು ನಿಗಧಿಪಡಿಸಲಾಗಿದೆ. ಈ ಸಭೆಗೆ ತಾವು ಹಾಜರಾಗಬೇಕೆಂದು ತಮಗೆ ತಿಳಿಸಲು ನಿರ್ದೇಶಿಸಲ್ಪಟ್ಟಿದ್ದೇನೆ ಎಂದಿದ್ದಾರೆ.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed