ಮಂಗಳೂರು; ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗಗಳನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ಸದ್ಯ ಬೆಂಗಳೂರಿನ ಬನಶಂಕರಿಯಲ್ಲಿ ವಾಸವಿರುವ ಮುಖೇಶ್ ದಾಸ್ (45) ಬಂಧಿತ ಆರೋಪಿ.
ಪ್ರಕರಣದ ವಿವರ: ದಿನಾಂಕ: 14/15-02-2026 ರಂದು ರಾತ್ರಿ ಸಮಯದಲ್ಲಿ ಲಾರಿವೊಂದರಲ್ಲಿ ಬಂದ ಚಾಲಕನೊಬ್ಬನು ಹೊಸಬೆಟ್ಟು ರಾಷ್ಟ್ರೀಯ ಹೆದ್ದಾರಿಯ ಬಳಿಯಲ್ಲಿರುವ ಫ್ರೆಂಡ್ಸ್ ಗ್ಯಾರೇಜ್ ನ ಬಳಿ ಲಾರಿಯನ್ನು ಪಾರ್ಕ್ ಮಾಡಿ ಗ್ಯಾರೇಜ್ ನಲ್ಲಿ ದುರಸ್ತಿಗಾಗಿ ನಿಲ್ಲಿಸಿದ್ದ ಎರಡು ಘನ ವಾಹನದ ಬಿಡಿಭಾಗಗಳನ್ನು ಕಳವು ಮಾಡಿಕೊಂಡು ಲಾರಿಯಲ್ಲಿ ಕಳವು ಮಾಡಿದ್ದು ಈ ಬಗ್ಗೆ ಗ್ಯಾರೇಜ್ ಮಾಲೀಕರು ನೀಡಿದ ದೂರಿನಂತೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಕಳವು ಪ್ರಕರಣದಲ್ಲಿ ತನಿಖೆಯನ್ನು ಕೈಗೊಂಡು ಪ್ರಕರಣದಲ್ಲಿ ಭಾಗಿಯಾದ ಲಾರಿ ಚಾಲಕನಾದ ಮುಖೇಶ್ ದಾಸ್ ನನ್ನು ಬಂಧಿಸಿ ಆತನಿಂದ ಕಳವುಗೈದ ರೂ. 96,000/- ಮೌಲ್ಯದ ವಾಹನಗಳ ಬಿಡಿಭಾಗಗಳು ಹಾಗೂ ಕೃತ್ಯಕ್ಕೆ ಉಪಯೋಗಿಸಿದ KA-02-AM-2335 ಈಚರ್ ಲಾರಿ ಸೇರಿದಂತೆ ರೂ.15,96,000/- ಮೌಲ್ಯದ ಸ್ವಾಧೀನಪಡಿಸಿಕೊಂಡು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನದಲ್ಲಿರುತ್ತಾನೆ.
