Author: News Editor
-

ಕ್ರೈಸ್ ಸೂಪರಿಟೆಂಡಿಂಗ್ ಇಂಜಿನಿಯರ್ ಮನೆಯಲ್ಲಿ ಲೋಕಾಯುಕ್ತ ದಾಳಿ ವೇಳೆ ಕೋಟಿ ಕೋಟಿ ನಗದು ಪತ್ತೆ
ಬೆಂಗಳೂರು: ನಗರದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕ್ರೈಸ್) ಸೂಪರಿಟೆಂಡಿಂಗ್ ಎಂಜಿನಿಯರ್ ಹೆಚ್.ಎಂ ಜನಾರ್ಧನ್ ಮನೆಯ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಈ ದಾಳಿಯ ವೇಳೆಯಲ್ಲಿ ಕೋಟಿ ಕೋಟಿ ನಗದು ಪತ್ತೆಯಾಗಿದ್ದು, ಅದನ್ನು ಕಂಡು ಲೋಕಾಯುಕ್ತ ಪೊಲೀಸರೇ ಶಾಕ್ ಆಗಿದ್ದಾರೆ. ಇಂದು ಬೆಳಗ್ಗೆ ಲೋಕಾಯುಕ್ತ ಪೊಲೀಸರು ಕ್ರೈಸ್ ಸೂಪರಿಟೆಂಡಿಂಗ್ ಇಂಜಿನಿಯರ್ ಹೆಚ್.ಎಂ ಜನಾರ್ಧನ್ ಅವರ ಮನೆಯ ಮೇಲೆ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ್ದ ಪ್ರಕರಣದಲ್ಲಿ ದಾಳಿ ನಡೆಸಿದ್ದರು. ಇವರ ಆಪ್ತರ ಮನೆಯ ಮೇಲೂ ದಾಳಿ…
-

ಬೆಳ್ತಂಗಡಿ: ಶಾಲಾ ಮಕ್ಕಳನ್ನು ಪಿಕಪ್, ಟಿಪ್ಪರ್‌ನಲ್ಲಿ ಅಧ್ಯಯನಕ್ಕೆ ಕರೆದೊಯ್ದ ಶಿಕ್ಷಕರು; ಪೋಷಕರ ಆಕ್ರೋಶ
ಬೆಳ್ತಂಗಡಿ: ರಸ್ತೆ ಸುರಕ್ಷತಾ ಕ್ರಮಗಳನ್ನು ಮರೆತು ಕಾನೂನುಬಾಹಿರವಾಗಿ ಸರಕು ಸಾಗಣೆ ವಾಹನಗಳಲ್ಲಿ ಶಾಲಾ ಮಕ್ಕಳನ್ನು ಜೇನು ಕೃಷಿ ಅಧ್ಯಯನಕ್ಕೆ ತೆರೆದ ಪಿಕಪ್ ಮತ್ತು ಟಿಪ್ಪರ್‌ನಲ್ಲಿ ಕರೆದುಕೊಂಡು ಹೋದ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಬಳೆಂಜ ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಇತ್ತೀಚೆಗಷ್ಟೇ ಶತಮಾನೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸಿದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬಳೆಂಜದ ಪ್ರಭಾರ ಮುಖ್ಯೋಪಾಧ್ಯಾಯರ ನೇತೃತ್ವದಲ್ಲಿ ಫೆ.10ರಂದು ಬೆಳಿಗ್ಗೆ ಶಾಲಾ ಮಕ್ಕಳನ್ನು ಪಿಕಪ್ ಹಾಗೂ ಟಿಪ್ಪರ್ ವಾಹನದಲ್ಲಿ ಜೇನು…
-

BREAKING : ನಕಲಿ ದಾಖಲೆ ಪತ್ರ ಸೃಷ್ಟಿಸಿ ಅಕ್ರಮವಾಗಿ ಭೂಮಿ ಮಾರಾಟ : ಸಬ್ ರಿಜಿಸ್ಟರ್ ಸೇರಿ 9 ಜನ ಅರೆಸ್ಟ್!
ಬೆಳಗಾವಿಯಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ರೂಪಾಯಿ ಮೌಲ್ಯದ ಭೂಮಿ ಮಾರಾಟ ಮಾಡಲಾಗಿದ್ದು, ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿ ಅಕ್ರಮವಾಗಿ ಭೂಮಿ ಮಾರಿ ವಂಚನೆ ಎಸಗಲಾಗಿತ್ತು. ಪ್ರಕರಣ ಭೇದಿಸಿದ ಪೊಲೀಸರು ಸಬ್ ರೆಜಿಸ್ಟರ್ ಸೇರಿದಂತೆ ಒಟ್ಟು ಒಂಬತ್ತು ಜನರನ್ನು ಅರೆಸ್ಟ್ ಮಾಡಿದ್ದಾರೆ. ಭೂಗಳ್ಳರ ಜೊತೆಗೆ ಸಬ್ ರಿಜಿಸ್ಟರ್ ಅಧಿಕಾರಿ ಸೇರಿದಂತೆ ಹಲವರು ಶಾಮೀಲು ಆಗಿದ್ದರು. ಬೆಳಗಾವಿ ಜಿಲ್ಲಾ ಪೊಲೀಸರಿಂದ ಸಬ್ ರಿಜಿಸ್ಟರ್ ಸೇರಿದಂತೆ ಮೊದಲು 6 ಜನರನ್ನು ಅರೆಸ್ಟ್ ಮಾಡಲಾಗಿದೆ. ಹುಕ್ಕೇರಿ ಪಟ್ಟಣದ…
-

ಕಾರ್ಕಳ: ಮಟ್ಕಾ ಜುಗಾರಿ ದಂದೆಗೆ ಪೋಲೀಸ್ ದಾಳಿ- ಇಬ್ಬರ ಬಂಧನ
ಕಾರ್ಕಳ: ಬೆಳ್ಮಣ್ ಪೇಟೆಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಆಟ ಆಡುತ್ತಿದ್ದ ಇಬ್ಬರನ್ನು ವಶಪಡಿಸಿಕೊಂಡ ಘಟನೆ ಫೆ. 11ರಂದು ವರದಿಯಾಗಿದೆ. ಉಚ್ಚಿಲ ಮುಳ್ಳಗುಡ್ಡೆಯ ಕೀರ್ತನ್(31) ಹಾಗೂ ನಂದಳಿಕೆಯ ಯೋಗೀಶ(58) ಇವರು ಸಾರ್ವಜನಿಕರಿಂದ ಹಣವನ್ನು ಪಣವಾಗಿಟ್ಟು ಹಣವನ್ನು ಪಡೆದುಕೊಂಡು ಮಟ್ಕಾ ಜುಗಾರಿ ಆಟ ಆಡುತ್ತಿದ್ದ ಮಾಹಿತಿ ಮೇರೆಗೆ ಕಾರ್ಕಳ ಗ್ರಾಮಾಂತರ ಪೋಲೀಸ್ ಠಾಣೆಯ ಪೋಲೀಸ್ ಉಪನಿರೀಕ್ಷಕರಾದ (ತನಿಖೆ) ಸುಂದರ ಇವರು ಸಿಬ್ಬಂದಿಯವರೊಂದಿಗೆ ದಾಳಿ ನಡೆಸಿದ್ದಾರೆ. ಕೀರ್ತನ್ ಹಾಗೂ ಯೋಗೀಶರನ್ನು ವಶಕ್ಕೆ ಪಡೆದು ಮಟ್ಕಾ ಜುಗಾರಿ ಆಟಕ್ಕೆ ಉಪಯೋಗಿಸಿದ…
-

ತಂದೆ-ತಾಯಿಯನ್ನೇ ಕೊಂದ ಸಾಫ್ಟ್‌ವೇರ್ ಇಂಜಿನಿಯರ್!
ಪುತ್ರನೇ ತನ್ನ ಹೆತ್ತ ತಂದೆ ತಾಯಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನವೀನ್ ಚಂದ್ರ ಭಟ್(60), ಡಾ.ಶ್ಯಾಮಲಾ ಭಟ್(55) ಕೊಲೆಯಾದವರು. ಕೊಲೆಯಾದ ನವೀನ್ ಚಂದ್ರ ಭಟ್ ನೌಕಾಪಡೆಯ ನಿವೃತ್ತ ಕ್ಯಾಪ್ಟನ್ ಆಗಿದ್ದರೆ, ಡಾ.ಶ್ಯಾಮಲಾ ಭಟ್ ದಂತ ವೈದ್ಯೆಯಾಗಿದ್ದರು. ರೋಹನ್ ಭಟ್(33) ಕೃತ್ಯ ಎಸಗಿದ ಪಾಪಿ ಮಗ. ರೋಹನ್ ಭಟ್ ಸ್ವಂತ ಸಾಫ್ಟ್‌ವೇರ್ ಕಂಪನಿ ಹೊಂದಿದ್ದ. ಕೌಟುಂಬಿಕ ವಿಚಾರಕ್ಕೆ ಗಲಾಟೆ ನಡೆದಿದೆ ಎನ್ನಲಾಗಿದ್ದು, ಕೋಪದಲ್ಲಿ ತಂದೆ ತಾಯಿಗೆ ಚಾಕುವಿನಿಂದ ಚುಚ್ಚಿದ್ದಾನೆ. ಬಳಿಕ ದಂಪತಿಯನ್ನು…
-

ಮಣಿಪಾಲ : ಮಾದಕ ವಸ್ತು ಮಾರಾಟ – ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್
ಮಣಿಪಾಲ: ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಕೇರಳ ಮೂಲದ ವ್ಯಕ್ತಿಯನ್ನು ಮಣಿಪಾಲ ಪೊಲೀಸರು ಸಿಂಡಿಕೇಟ್ ಸರ್ಕಲ್ ಬಳಿ ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಕೇರಳದ ಮೊಹಮ್ಮದ್ ಅಜ್ಮಲ್ (26) ಎಂದು ಗುರುತಿಸಲಾಗಿದ್ದು, ಈತನಿಂದ 1 ಲಕ್ಷ ಮೌಲ್ಯದ 2084 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಈತ ಗಾಂಜಾ ಸರಬರಾಜು ಮಾಡಿದ 5 ವ್ಯಕ್ತಿಗಳನ್ನು ವಶಕ್ಕೆ ಪಡೆಯಲಾಗಿದೆ. ಅವರು ಗಾಂಜಾ ಸೇವಿಸಿದ ಬಗ್ಗೆ ದೃಢಪಟ್ಟಿದ್ದು, ಐದು ಮಂದಿ ವಿರುದ್ಧವೂ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಣಿಪಾಲ ಪೊಲೀಸರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ…
-

ಆಸ್ತಿ ತೆರಿಗೆ ಶೇ. 3ರಷ್ಟು ಹೆಚ್ಚಿಸಿದ ಮಂಗಳೂರು ಮಹಾನಗರ ಪಾಲಿಕೆ
ಮಂಗಳೂರು ಮಹಾನಗರ ಪಾಲಿಕೆಯು ಆಸ್ತಿ ತೆರಿಗೆಯನ್ನು ಶೇ. 3ರಷ್ಟು ಹೆಚ್ಚಳ ಮಾಡುವುದಾಗಿ ಘೋಷಿಸಿದ್ದು, ಇದು ಮುಂದಿನ ಹಣಕಾಸು ವರ್ಷದಿಂದ ಜಾರಿಗೆ ಬರಲಿದೆ. ಫೆಬ್ರವರಿ 9ರಂದು ನಡೆದ ಪಾಲಿಕೆಯ ಮಾಸಿಕ ಕೌನ್ಸಿಲ್ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಸರ್ಕಾರದ ಮಾರ್ಗಸೂಚಿಗಳ ಅನ್ವಯ, ಆಸ್ತಿಗಳ ಮಾರುಕಟ್ಟೆ ದರದ ಅನ್ವಯ ಕಾಲಕಾಲಕ್ಕೆ ತೆರಿಗೆ ಪರಿಷ್ಕರಣೆ ಮಾಡುವುದು ಕಡ್ಡಾಯವಾಗಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಈ ಪರಿಷ್ಕರಣೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗಿದ್ದು, ನಗರದ ಅಭಿವೃದ್ಧಿ ಯೋಜನೆಗಳಿಗಾಗಿ ಪಾಲಿಕೆಯ ಆದಾಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದು…
-

ಮಂಗಳೂರು : ಮ್ಯಾಟ್ರಿಮೋನಿ ಮೂಲಕ ಹಲವರಿಂದ ಹಣ ಪಡೆದು ವಂಚಿಸುತ್ತಿದ್ದ ಆರೋಪಿ ಅರೆಸ್ಟ್..!!
ಮಂಗಳೂರು : ಮ್ಯಾಟ್ರಿಮೋನಿ ಆನ್‌ಲೈನ್ ಪ್ಲಾಟ್‌ಫಾರಂ ಮೂಲಕ ಯುವತಿಯರನ್ನು ಪರಿಚಯಿಸಿಕೊಂಡು ಬಳಿಕ ಮದುವೆಯಾಗುವುದಾಗಿ ಹೇಳಿ ಅವರಿಂದ ಹಣ ಪಡೆದು ವಂಚಿಸುತ್ತಿದ್ದ ಮತ್ತು ಆತನಿಗೆ ಸಹಕಾರ ನೀಡುತ್ತಿದ್ದ ಆರೋಪದಲ್ಲಿ ಕಾವೂರು ಠಾಣೆಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಸುಶಾಂತ್ ಪೂಜಾರಿ ಯಾನೆ ಸುಶಾಂತ್ ಅಂಕುಶ್ ಪೂಜಾರಿ ಯಾನೆ ಸುಶಾಂತ್ ಜಿ. ಕಕೇರಾ (32) ಮತ್ತು ಭಾಸ್ಕರ ಎಂದು ಗುರುತಿಸಲಾಗಿದೆ. ಈ ಇಬ್ಬರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾ ಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಸುಶಾಂತ್ ಪೂಜಾರಿ ಎಂಬಾತ ಮಹಾರಾಷ್ಟ್ರದ…
-

ದಕ್ಷ ಪೋಲಿಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರಿಂದ ಮಂಗಳೂರು ಮಾದಕ ದ್ರವ್ಯ ಮುಕ್ತ
ಮಂಗಳೂರು: ಯುವಕರ ಭವಿಷ್ಯ ಹಾಳುಮಾಡುವ ಮಾದಕ ದ್ರವ್ಯಗಳ ಜಾಲವನ್ನು ಮಟ್ಟಹಾಕಲು ಮಂಗಳೂರು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಕಠಿಣ ನಿರ್ಧಾರ ಕೈಗೊಂಡಿದ್ದಾರೆ.ನಗರದಲ್ಲಿ ಮಾದಕ ದ್ರವ್ಯಗಳ ಮಾರಾಟ ಮತ್ತು ಸೇವನೆಯನ್ನು ತಡೆಯಲು ವಿಶೇಷ ಕಾರ್ಯಾಚರಣೆಗಳನ್ನು ಹಮ್ಮಿಕೊಂಡಿದ್ದಾರೆ. ಈ ಕಾರ್ಯಾಚರಣೆಗಳ ಭಾಗವಾಗಿ, ಸಾರ್ವಜನಿಕ ಸ್ಥಳಗಳು, ಚಹಾ ಅಂಗಡಿಗಳು ಮತ್ತು ಇತರ ವ್ಯಾಪಾರ ಮಳಿಗೆಗಳಲ್ಲಿ ಅನಿರೀಕ್ಷಿತ ದಾಳಿಗಳನ್ನು ನಡೆಸಲಾಗುತ್ತಿದೆ. ಇಂತಹ ದಾಳಿಗಳಲ್ಲಿ ಮಾದಕ ದ್ರವ್ಯ ಸೇವನೆ ಮತ್ತು ಮಾರಾಟದಲ್ಲಿ ತೊಡಗಿದ್ದವರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ. ಕಳೆದ 6 ತಿಂಗಳುಗಳಿಂದ ಈ ವಿಶೇಷ…
-

ಮಂಗಳೂರು ಮೂಡ, RTO, ಮ.ನ.ಪಾ ಇಲ್ಲಿ ಬ್ರೋಕರ್ ಗಳ ಕಾರುಬಾರಿಗೆ ಕೊನೆ ಎಂದು..??
ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ( ಮೂಡ) ಮತ್ತು ಮಹಾನಗರ ಪಾಲಿಕೆ, RTO ಕಛೇರಿ ಹಾಗೂ ಆಡಳಿತ ಸೌಧ (ಮಿನಿ ವಿಧಾನ ಸೌಧ) ಸಬ್ ರಿಜಿಸ್ಟಾರ್ ಕಚೇರಿ ಸೇರಿದಂತೆ ಇತರೆ ಇಲಾಖೆಯಲ್ಲಿ ಬ್ರೋಕರ್ ಗಳ ಕಾರುಬಾರೆ ಜಾಸ್ತಿ, ದಲ್ಲಾಳಿಗಳು ಇಲ್ಲದೇ ಇಲ್ಲಿ ಯಾವುದೇ ಕೆಲಸ ನಡೆಯೊದಿಲ್ಲ. ಅಧಿಕಾರಿಗಳ ಮತ್ತು ದಲ್ಲಾಲಿಗಳ ನಡುವೆ ಹಣದ ರೂಪದಲ್ಲಿ ಕೆಲಸ ಕಾರ್ಯಗಳು ನಡೆಯುತ್ತಿವೆ. ಈ ದಲ್ಲಾಳಿಗಳ ಹಾವಲಿಯಿಂದ ನಕಲಿ ಸಿಂಗಲ್ ಸೈಟ್, ಮಹಾನಗರ ಪಾಲಿಕೆಯಲ್ಲಿ ನಕಲಿ ಉದ್ಯಮ ಪರವಾನಿಗೆ ಪತ್ರ ಸೇರಿದಂತೆ ಬೇರೆ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











