Author: News Editor
-

ಆರೋಗ್ಯ ಸಚಿವ ಯು ಟಿ ಖಾದರನಿಂದ ಗಲ್ಫ್ ಮಾದರಿಯಲ್ಲಿ ಆಗಲಿದೆಯಾ ಕರ್ನಾಟಕ ಆಹಾರ ಸುರಕ್ಷತಾ ನಿಯಮ
ಮಂಗಳೂರು: ಗಲ್ಫ್ ರಾಷ್ಟ್ರಗಳಲ್ಲಿ ಹೋಟೆಲ್‌ಗಳು ಹಾಗೂ ಆಹಾರ ತಯಾರಿಕಾ ಸಿಬ್ಬಂದಿಯ ಸ್ವಚ್ಛತೆಗೆ ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸಲಾಗುತ್ತದೆ. ಅಡುಗೆ ಮಾಡುವ ಸಿಬ್ಬಂದಿಗೆ ಕಡ್ಡಾಯ ವೈದ್ಯಕೀಯ ಪರೀಕ್ಷೆ, ಸ್ವಚ್ಛ ಉಡುಪು, ತಲೆಗೆ ಹೇರ್‌ನೆಟ್, ಕೈಗವಸು ಸೇರಿದಂತೆ ಹಲವು ನಿಯಮಗಳನ್ನು ಅನುಸರಿಸಲಾಗುತ್ತದೆ. ಹೋಟೆಲ್‌ಗಳ ಸ್ವಚ್ಛತೆಗೂ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಆದರೆ ಕರ್ನಾಟಕದಲ್ಲಿ ಪರಿಸ್ಥಿತಿ ಇದಕ್ಕೆ ತದ್ವಿರುದ್ಧವಾಗಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಕೆಲವು ಹೋಟೆಲ್‌ಗಳಲ್ಲಿ ಅಡುಗೆ ಸಿಬ್ಬಂದಿ ಉದ್ದನೆಯ ಉಗುರುಗಳನ್ನು ಇಟ್ಟುಕೊಳ್ಳುವುದು, ತಲೆಗೆ ಕ್ಯಾಪ್ ಅಥವಾ ಹೇರ್‌ನೆಟ್ ಧರಿಸದಿರುವುದು, ಕೈಗವಸು ಬಳಸದಿರುವುದು ಸೇರಿದಂತೆ…
-

ಬಸ್ ನಿಲ್ದಾಣ, ಪಿಜಿ, ರೈಲ್ವೆ ಕ್ಯಾಂಟೀನ್, ಫ್ಲೈಟ್ ಗಳಲ್ಲಿ ಕೊಡೊ ಆಹಾರ ಸಹ ಪರಿಶೀಲನೆ ಮಾಡ್ತೇವೆ – ಯುಟಿ ಖಾದರ್
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇತ್ತೀಚೆಗೆ ಪ್ರಸಿದ್ಧ ಹೋಟೆಲ್‌ಗಳು ಹಾಗೂ ರೆಸ್ಟೋರೆಂಟ್‌ಗಳ ಮೇಲೆ ಸತತ ದಾಳಿ ನಡೆಸಿ ಶಾಕ್ ನೀಡಿದ್ದ ಆರೋಗ್ಯ ಇಲಾಖೆ ಅಧಿಕಾರಿಗಳು, ಇದೀಗ ತಮ್ಮ ತನಿಖಾ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಲು ಮುಂದಾಗಿದ್ದಾರೆ. ಇನ್ಮುಂದೆ ಕೇವಲ ಹೋಟೆಲ್‌ಗಳಿಗೆ ಮಾತ್ರ ಸೀಮಿತವಾಗದೆ, ಖಾಸಗಿ ಪಿಜಿಗಳು (PG), ಹಾಸ್ಟೆಲ್‌ಗಳು, ಬಸ್ ನಿಲ್ದಾಣಗಳು ಹಾಗೂ ಮದುವೆ ಮಂಟಪಗಳ ಮೇಲೆಯೂ ಕಣ್ಣಿಡಲು ಆರೋಗ್ಯ ಇಲಾಖೆ ನಿರ್ಧರಿಸಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…
-

ಮಸಾಲೆಗಳಲ್ಲಿ ಕ್ಯಾನ್ಸರ್‌ಕಾರಕ ಇಟಿಒ ಬಳಕೆ ನಿಷೇಧಕ್ಕೆ ರಾಜ್ಯದ ಆಗ್ರಹ; ಕೇಂದ್ರದಿಂದ ತಜ್ಞರ ಸಮಿತಿ ರಚನೆ
ನವದೆಹಲಿ: ರಾಜ್ಯಾದ್ಯಂತ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಮಾರುಕಟ್ಟೆಗಳ ಮೇಲೆ ಕರ್ನಾಟಕದ ಆರೋಗ್ಯ ಇಲಾಖೆ ಆಹಾರ ಸುರಕ್ಷತಾ ತಪಾಸಣೆ ನಡೆಸುತ್ತಿದೆ. ಈ ವೇಳೆ ಪ್ಯಾಕ್ ಮಾಡಲಾದ ಹಲವು ಮಸಾಲೆ ಪದಾರ್ಥಗಳಲ್ಲಿ ಇಟಿಒ ಪತ್ತೆಯಾಗಿದೆ. ಹೀಗಾಗಿ ದೇಶಿ ಮಾರುಕಟ್ಟೆಯಲ್ಲಿ ಇಟಿಒ ಬಳಕೆಗೆ ಸಂಪೂರ್ಣ ನಿಷೇಧ ಅಥವಾ ಕಠಿಣ ನಿಯಮಾವಳಿ ರೂಪಿಸುವಂತೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿತ್ತು. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಉನ್ನತ ಮಟ್ಟದ ತಜ್ಞರ ಸಮಿತಿಯನ್ನು ರಚಿಸಿದೆ. ರಾಜ್ಯಾದ್ಯಂತ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಹಾಗೂ ಮಾರುಕಟ್ಟೆಗಳಲ್ಲಿ ರಾಜ್ಯ ಆರೋಗ್ಯ ಇಲಾಖೆಯು ಆಹಾರ…
-

ಮಂಗಳೂರು ಖಜಾನೆ ಕಚೇರಿ ಎಫ್‌ಡಿಎ ನಾಪತ್ತೆಯಾದ ರೋಹನ್
ಮಂಗಳೂರು: ನಗರದ ಜಿಲ್ಲಾ ಖಜಾನೆ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ (ಎಫ್‌ಡಿಎ) ಕಾರ್ಯನಿರ್ವಹಿಸುತ್ತಿದ್ದ ಬೆಂಗಳೂರಿನ ನಿವಾಸಿ ರೋಹನ್ ಎಂ. (33) ಎಂಬುವವರು ಆಗಸ್ಟ್ ೧ರಿಂದ ನಾಪತ್ತೆಯಾಗಿದ್ದು, ಈ ಕುರಿತು ಪೊಲೀಸರಿಗೆ ದೂರು ನೀಡಲಾಗಿದೆ. ಬೆಂಗಳೂರಿನ ನಂಜಮ್ಮ ಲೇಔಟ್ ನಿವಾಸಿ ಮುನಿರಾಜ್ ರೆಡ್ಡಿ ಅವರ ಪುತ್ರ ರೋಹನ್, ಕಳೆದ ಎರಡು ವರ್ಷಗಳಿಂದ ಮಂಗಳೂರಿನ ಜಿಲ್ಲಾ ಖಜಾನೆ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಹುಣ್ಣಿಮೆಯ ಹಿನ್ನೆಲೆ ಗುಜರಾತ್‌ಗೆ ತೆರಳುವುದಾಗಿ ತಿಳಿಸಿ ರೋಹನ್ ಮನೆಯಿಂದ ಹೊರಟಿದ್ದರು. ಆದರೆ, ಬಳಿಕ ಅವರು ವಾಪಸ್ ಆಗಿಲ್ಲ. ನಾಪತ್ತೆಯಾದ…
-

ದೊಡ್ಡ ಸಂಸ್ಥೆಗಳಿಗೂ ವಿನಾಯಿತಿ ಇಲ್ಲ: ಆಹಾರ ತಪಾಸಣೆ ತೀವ್ರಗೊಳಿಸಿದ ಸರ್ಕಾರ
ಮಂಗಳೂರು: ಆಹಾರ ತಯಾರಿಕೆ ಮತ್ತು ಮಾರಾಟ ಮಾಡುವ ಸಂಸ್ಥೆಗಳು ಸ್ವಚ್ಛತೆ ಹಾಗೂ ಆಹಾರದ ಗುಣಮಟ್ಟದ ವಿಚಾರದಲ್ಲಿ ಯಾವುದೇ ನಿರ್ಲಕ್ಷ್ಯ ತೋರಬಾರದು. ಮಂಗಳೂರಿನಲ್ಲಿ ಆಹಾರ ಸಂಸ್ಥೆಗಳ ಮೇಲೆ ನಡೆಯುತ್ತಿರುವ ದಿಢೀರ್ ತಪಾಸಣೆ ಹಾಗೂ ದಾಳಿಗಳು ಮುಂದುವರಿಯಲಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.ಭಾನುವಾರ ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬೆಂಗಳೂರಿನಲ್ಲಿ ಆಹಾರ ತಯಾರಿಕಾ ಸಂಸ್ಥೆಗಳ ವಿರುದ್ಧ ಈಗಾಗಲೇ ದಾಳಿ ಮತ್ತು ತಪಾಸಣೆ ನಡೆಸಲಾಗುತ್ತಿದ್ದರೂ, ಮಂಗಳೂರಿನಲ್ಲಿ ಇದೇ ರೀತಿಯ ಅಸ್ವಚ್ಛ ಪರಿಸ್ಥಿತಿಗಳು ಕಂಡುಬರುತ್ತಿರುವುದು…
-

ಮಂಗಳೂರಿನಲ್ಲಿ ಮುಂದುವರಿದ ಆಹಾರ ಮಳಿಗೆಗಳ ತಪಾಸಣೆ: ಮೆಕ್‌ಡೊನಾಲ್ಡ್ಸ್ ಪರಿಶೀಲನೆ
ಮಂಗಳೂರು: ನಗರದಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳು ಕೈಗೊಂಡಿರುವ ಆಹಾರ ಮಳಿಗೆಗಳ ತಪಾಸಣಾ ಕಾರ್ಯಾಚರಣೆ ಮುಂದುವರಿದಿದ್ದು, ರವಿವಾರ ನಗರದ ಕೆ.ಎಸ್.ರಾವ್ ರಸ್ತೆಯ ಮಾಲ್‌ನಲ್ಲಿರುವ ಬಹುರಾಷ್ಟ್ರೀಯ ಸಂಸ್ಥೆ ‘ಮೆಕ್‌ಡೊನಾಲ್ಡ್ಸ್’ (McDonald’s) ಔಟ್‌ಲೆಟ್ ಮೇಲೆ ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ. ಶನಿವಾರದಂದು ಅದೇ ಮಾಲ್‌ನಲ್ಲಿರುವ ಕೆಎಫ್‌ಸಿ (KFC) ಮಳಿಗೆಯ ಮೇಲೆ ದಾಳಿ ನಡೆಸಿ ಕಲುಷಿತ ಆಹಾರ ಪೂರೈಕೆಯನ್ನು ಪತ್ತೆ ಹಚ್ಚಿದ್ದ ಅಧಿಕಾರಿಗಳ ತಂಡ, ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ನಿರ್ದೇಶನದಂತೆ ಎರಡನೇ ದಿನವೂ ತಮ್ಮ ಜಾಗೃತಿ ಕಾರ್ಯಾಚರಣೆಯನ್ನು ಮುಂದುವರಿಸಿದೆ. ಜಿಲ್ಲಾ…
-

ಕಡಬ: ಕುಟುಂಬದ ಮೇಲೆ ಅನೈತಿಕ ಪೊಲೀಸ್‌ಗಿರಿ ಆರೋಪ- 9 ಮಂದಿ ವಿರುದ್ಧ ಎಫ್‌ಐಆರ್ ದಾಖಲು
ಕಡಬ ತಾಲೂಕಿನ ಕೋಲ್ಪೆಯಲ್ಲಿ ಯುವತಿ ಹಾಗೂ ಆಕೆಯ ಕುಟುಂಬದ ಸದಸ್ಯರ ಮೇಲೆ ಗುಂಪೊಂದು ನೈತಿಕ ಪೊಲೀಸ್‌ಗಿರಿ ನಡೆಸಿ, ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆಗಸ್ಟ್ 12ರ ರಾತ್ರಿ ಈ ಕೃತ್ಯ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತೆ ನೀಡಿದ ದೂರಿನನ್ವಯ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಒಟ್ಟು 9 ಜನರ ವಿರುದ್ಧ ಎಫ್‌ಐಆರ್ (FIR) ದಾಖಲಾಗಿದೆ. ಮೆಲ್ಕಾರ್‌ನಲ್ಲಿ ಕೆಲಸ ಮಾಡುತ್ತಿದ್ದ ಕೋಲ್ಪೆಯ 18 ವರ್ಷದ ಯುವತಿ, ಆಗಸ್ಟ್ 12ರಂದು ಕೆಲಸ ಮುಗಿದ ಬಳಿಕ ತಮ್ಮ ಅಂಗಡಿ…
-

ಮಂಗಳೂರು KFC ವಿರುದ್ಧ ಗಂಭೀರ ಆರೋಪ: ಹಳೆಯ ಚಿಕನ್ ಬಳಕೆ ಶಂಕೆ, FSSAI ನವೀಕರಣಕ್ಕೆ ವಿರೋಧ
ಮಂಗಳೂರು: ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ್ದ ಚಿಕನ್‌ನಿಂದ ದುರ್ವಾಸನೆ ಬರುತ್ತಿದೆ ಎಂಬ ಗ್ರಾಹಕರ ದೂರಿನ ಬೆನ್ನಲ್ಲೇ, ನಗರದ ಕೆ.ಎಸ್. ರಾವ್ ರಸ್ತೆಯಲ್ಲಿರುವ KFC ಮಳಿಗೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಶನಿವಾರ ದಿಢೀರ್ ಪರಿಶೀಲನೆ ನಡೆಸಿದರು. ತಪಾಸಣೆ ವೇಳೆ ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ಪ್ಯಾಕ್ ಮಾಡಲಾಗಿದ್ದ ಚಿಕನ್ ಉತ್ಪನ್ನಗಳ ದಾಸ್ತಾನು ಕೂಡ ಅಧಿಕಾರಿಗಳ ಗಮನಕ್ಕೆ ಬಂದಿದೆ. ಈ ಉತ್ಪನ್ನಗಳಿಗೆ ಆರು ತಿಂಗಳಿಗಿಂತ ಹೆಚ್ಚಿನ ಶೆಲ್ಫ್ ಲೈಫ್ ಇದೆ ಎಂದು ಮಳಿಗೆ ಸಿಬ್ಬಂದಿ ಅಧಿಕಾರಿಗಳಿಗೆ…
-

ಹನೂರು ಶೂಟೌಟ್ ಪ್ರಕರಣ: ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ..!!
ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ ನೀಡಲಾಗಿದ್ದು, ತನಿಖೆ ಬಳಿಕ ಸಂಪೂರ್ಣ ಮಾಹಿತಿ ನೀಡಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಮಾಹಿತಿ ನೀಡಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಬೆಳಗ್ಗೆ 5 ಗಂಟೆಗೆ ಮಾಹಿತಿ ಬಂದಿದೆ. ತನಿಖೆ ಬಳಿಕ ವಾಸ್ತವಾಂಶ ತಿಳಿಯುತ್ತದೆ. ಅರಣ್ಯ ಪ್ರದೇಶದಲ್ಲಿ ಶೂಟೌಟ್ ನಡೆದಿದ್ದು, ಅನೇಕ ಸಾಕ್ಷಿಗಳು ವಸ್ತುಗಳು, ಬಂದೂಕು ವಶಪಡಿಸಿಕೊಳ್ಳಲಾಗಿದೆ. ಮಾಧ್ಯಮಗಳು ಕೆಲವು ವಿಚಾರ ಪ್ರಸಾರ ಮಾಡುತ್ತಿವೆ. ಕೆಲವರನ್ನು ಬಂಧಿಸಲಾಗಿದ್ದು, ಶವ ಪರೀಕ್ಷೆಗೆ…
-

ಬ್ಯಾಂಕ್ ಖಾತೆ ಫ್ರೀಜ್ ಮಾಡಲು ಪೊಲೀಸರು ಕೋರ್ಟ್ ಅನುಮತಿ ಪಡೆಯುವುದು ಕಡ್ಡಾಯವಲ್ಲ: ಹೈಕೋರ್ಟ್ ಮಹತ್ವದ ಆದೇಶ
ಅಪರಾಧ ಪ್ರಕ್ರಿಯಾ ಸಂಹಿತೆಯ (CrPC) ಸೆಕ್ಷನ್ 102ರ ಅಡಿಯಲ್ಲಿ (ಹಾಗೂ ನೂತನ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ – BNSS ಅಡಿಯಲ್ಲಿ) ತನಿಖಾಧಿಕಾರಿಗಳಿಗೆ ನೀಡಲಾಗಿರುವ ಅಧಿಕಾರಗಳ ಕುರಿತಾದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಈ ಮಹತ್ವದ ಆದೇಶ ಹೊರಡಿಸಿದೆ. ತನಿಖಾ ಹಂತದಲ್ಲಿ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಅಥವಾ ಅನುಮಾನಾಸ್ಪದ ಹಣಕಾಸು ವಹಿವಾಟು ನಡೆದಿರುವ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸುವ ಅಧಿಕಾರ ತನಿಖಾಧಿಕಾರಿಗೆ ಇದೆ. ಈ ಪ್ರಕ್ರಿಯೆ ನಡೆಸಲು ಪ್ರತಿ ಬಾರಿಯೂ ಮ್ಯಾಜಿಸ್ಟ್ರೇಟ್ ಅಥವಾ ನ್ಯಾಯಾಲಯದ ಪೂರ್ವಾನುಮತಿಯ ಅಗತ್ಯವಿರುವುದಿಲ್ಲ ಎಂದು…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











