Author: News Editor
-

ಮಂಗಳೂರು ಸಿಟಿ ಸೆಂಟರ್‌ನ KFC ಮೇಲೆ ಆರೋಗ್ಯ ಇಲಾಖೆ ದಾಳಿ- ಕೊಳೆತ ಚಿಕನ್ ಮಾಂಸ ಪತ್ತೆ
ಮಂಗಳೂರಿನ ಸಿಟಿ ಸೆಂಟರ್ ಮಾಲ್‌ನಲ್ಲಿರುವ KFC ಔಟ್‌ಲೆಟ್‌ನಲ್ಲಿ ಕೊಳೆತ ಚಿಕನ್ ನೀಡಲಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪರಿಶೀಲನೆ ವೇಳೆ ಹಲವು ತಿಂಗಳ ಹಿಂದೆ ಪ್ಯಾಕ್ ಮಾಡಲಾಗಿದ್ದ ಚಿಕನ್ ಮಾಂಸ ಪತ್ತೆಯಾಗಿದೆ ಎಂದು ವರದಿ ತಿಳಿಸಿದೆ. ಅಧಿಕಾರಿಗಳು ಮೂರು ಮಾದರಿಯ ಚಿಕನ್ ಹಾಗೂ ಬಳಸಲಾಗುತ್ತಿದ್ದ ಎಣ್ಣೆಯ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಪರಿಶೀಲನೆಯ ಬಳಿಕ KFC ಔಟ್‌ಲೆಟ್‌ನ್ನು ಬಂದ್ ಮಾಡಲಾಗಿದೆ. ಪ್ರಯೋಗಾಲಯದ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು…
-

ಪುತ್ತೂರು: ಅಕ್ರಮ ಮರ ಸಾಗಾಟ- ಲಾರಿ, ಮರದ ದಿಮ್ಮಿಗಳ ಸಹಿತ ಆರೋಪಿ ಬಂಧನ
ಪುತ್ತೂರು: ಅಕ್ರಮವಾಗಿ ಮರ ಕಡಿದು ಲಾರಿಯಲ್ಲಿ ಸಾಗಿಸುತ್ತಿದ್ದ ಪ್ರಕರಣವನ್ನು ಮಂಗಳೂರು ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಪತ್ತೆಹಚ್ಚಿ, ಲಾರಿ ಹಾಗೂ ಮರದ ದಿಮ್ಮಿಗಳ ಸಮೇತ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಮಾಡಾವು ನಿವಾಸಿ ಇಸ್ಮಾಯಿಲ್ ಬಂಧಿತ ಆರೋಪಿ. ಆಗಸ್ಟ್ 14ರಂದು ನೆಟ್ಟಾರು ಎಂಬಲ್ಲಿ ಅಕ್ರಮವಾಗಿ ಕಡಿದ ಕಿರಾಲು ಭೋಗಿ ಜಾತಿಯ ಮರದ ದಿಮ್ಮಿಗಳನ್ನು ಲಾರಿಯಲ್ಲಿ ಸಾಗಿಸಲಾಗುತ್ತಿತ್ತು. ಬೆಳ್ಳಾರೆಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಲಾರಿಯನ್ನು ಕೆಯ್ಯೂರು ಗ್ರಾಮದ ಸಂತೋಷ್ ನಗರದಲ್ಲಿ ಅರಣ್ಯ ಅಧಿಕಾರಿಗಳು ತಡೆದು ತಪಾಸಣೆ ನಡೆಸಿದಾಗ ಅಕ್ರಮ ಮರ…
-

ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮತ್ತಿಬ್ಬರು ಅರೆಸ್ಟ್!!
ಉಡುಪಿ: ಉದ್ಯಮಿ ಡೇವಿಡ್ ಡಿಸೋಜಾ ಅವರ ಗುಂಡಿನ ದಾಳಿ ಮೂಲಕ ನಡೆದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಪೊಲೀಸರು ಮತ್ತಿಬ್ಬರು ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆದು, ಆಗಸ್ಟ್ 14ರಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಎರ್ಮಾಳ್ ಕಿಶೋರ್ ಪೂಜಾರಿ (47) ಅವರನ್ನು ಆಗಸ್ಟ್ 14ರ ಬೆಳಗ್ಗೆ ಪೊಲೀಸರು ವಶಕ್ಕೆ ಪಡೆದರೆ, ಕುತ್ಯಾರು ನಿವಾಸಿ ಸದಾನಂದ ದೇವಾಡಿಗ (45) ಅವರನ್ನು ಆಗಸ್ಟ್ 13ರ ರಾತ್ರಿ ವಶಕ್ಕೆ ಪಡೆಯಲಾಗಿದೆ. ಕಿಶೋರ್ ಅವರು ಸದಾನಂದರಿಗೆ ಹಣ ವರ್ಗಾಯಿಸಿದ್ದರು ಎನ್ನಲಾಗಿದ್ದು, ಸದಾನಂದರು ಆ ಹಣವನ್ನು…
-

ಗ್ರಾಮ ಪಂಚಾಯತ್ ಸಿಬ್ಬಂದಿಯಿಂದ ಮನೆ ತೆರಿಗೆ ಹಣ ದುರುಪಯೋಗ- ಸಿಬ್ಬಂದಿ ವಜಾ, ಪ್ರಕರಣ ದಾಖಲು
ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ ಮನೆ ತೆರಿಗೆ ವಸೂಲಾದ ಹಣವನ್ನು ಪಂಚಾಯಿತಿ ಖಾತೆಗೆ ಜಮಾ ಮಾಡದೆ ಸ್ವಂತಕ್ಕೆ ಬಳಸಿಕೊಂಡ ಆರೋಪದ ಮೇರೆಗೆ ಪಂಚಾಯಿತಿ ಬಿಲ್ ಕಲೆಕ್ಟರ್ ಮಂಜುನಾಥ್ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಉಡುಪಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಅವರು ಬುಧವಾರ ವಜಾ ಆದೇಶ ಹೊರಡಿಸಿದ್ದಾರೆ. ಮಂಜುನಾಥ್ ಅವರು 2023–24ನೇ ಸಾಲಿನಲ್ಲಿ ₹1,18,367 ಹಾಗೂ 2024–25ನೇ ಸಾಲಿನಲ್ಲಿ ₹3,36,021 ಸೇರಿದಂತೆ ಒಟ್ಟು ₹4,54,388 ಮನೆ ತೆರಿಗೆ ಹಣವನ್ನು ಪಂಚಾಯಿತಿ ಬ್ಯಾಂಕ್ ಖಾತೆಗೆ…
-

ಕೋಟಿ ಕೋಟಿ ವಂಚನೆ ಕೇಸ್: ಶಿವಂ ಅಸೋಸಿಯೇಟ್ಸ್ ಮುಖ್ಯಸ್ಥ ಶಿವಾನಂದ ನೀಲಣ್ಣನವರ್ ಅರೆಸ್ಟ್, 12 ದಿನ ED ಕಸ್ಟಡಿಗೆ
ತಿಂಗಳಿಗೆ ಶೇಕಡಾ 3ರಷ್ಟು ಅಧಿಕ ಲಾಭಾಂಶ ನೀಡುವ ಆಮಿಷವೊಡ್ಡಿ ಸಾರ್ವಜನಿಕರಿಗೆ ಬರೋಬ್ಬರಿ ₹2,110 ಕೋಟಿ ವಂಚಿಸಿದ ಆರೋಪದಡಿ ‘ಶಿವಂ ಅಸೋಸಿಯೇಟ್ಸ್’ ಮುಖ್ಯಸ್ಥ ಶಿವಾನಂದ ಸಿದ್ದಪ್ಪ ನೀಲಣ್ಣವರ್‌ನನ್ನು ಜಾರಿ ನಿರ್ದೇಶನಾಲಯ (ED) ಬಂಧಿಸಿದೆ. ಮಂಗಳೂರು ಉಪ ವಲಯ ಕಚೇರಿಯ ಇ.ಡಿ ಅಧಿಕಾರಿಗಳು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಶಿವಾನಂದ್‌ನನ್ನು ಬಂಧಿಸಿದ್ದು, ವಿಚಾರಣೆಗಾಗಿ 12 ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದ್ದಾರೆ. ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಈ ಹಿಂದೆ ದಾಖಲಾಗಿದ್ದ ವಂಚನೆ ಪ್ರಕರಣದ ಎಫ್‌ಐಆರ್ ಆಧಾರದ…
-

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ವಾಪಸ್ ಇಲ್ಲ : ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಜನರ ಆರೋಗ್ಯ ಹಿತದೃಷ್ಟಿಯಿಂದ ಜಾರಿಗೆ ತರಲಾಗಿರುವ ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಗುಟ್ಕಾ ಹಾಗೂ ಪಾನ್ ಮಸಾಲ ನಿಷೇಧ ಆದೇಶವನ್ನು ಸರ್ಕಾರ ಯಾವುದೇ ಕಾರಣಕ್ಕೂ ವಾಪಸ್ ಪಡೆಯುವುದಿಲ್ಲ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸರ್ಕಾರದ ಈ ಕಠಿಣ ನಿರ್ಧಾರದಿಂದ ರಾಜ್ಯದ ಅಡಕೆ ಬೆಳೆಗಾರರಿಗಾಗಲಿ ಅಥವಾ ಅಡಕೆ ಮಾರುಕಟ್ಟೆಗಾಗಲಿ ಯಾವುದೇ ತೊಂದರೆಯಾಗದು ಎಂದು ಭರವಸೆ ನೀಡಿದ್ದಾರೆ. ಗುಟ್ಕಾ ತಯಾರಿಕೆಯಲ್ಲಿ ಸ್ಥಳೀಯ ಅಡಕೆಯ ಬದಲಾಗಿ ನೆಪಾಳ, ಬಾಂಗ್ಲಾದೇಶಗಳಿಂದ ಆಮದು ಮಾಡಿಕೊಂಡ…
-

ಉಡುಪಿ: ಮಾದಕ ದ್ರವ್ಯ ಸಾಗಾಟ, ಮಾರಾಟ ಪ್ರಕರಣ- ಆರೋಪಿ ಬಂಧನ..!!
ಮಾದಕ ದ್ರವ್ಯ ಸಾಗಾಟ ಮತ್ತು ಮಾರಾಟ ಪ್ರಕರಣ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ 76 ಬಡಗಬೆಟ್ಟು ಕೊಳಂಬೆ ಮಿಷನ್ ಕಂಪೌಂಡ್ ನಿವಾಸಿ ಇಕ್ಬಾಲ್ ಅಲಿಯಾಸ್ ಇಕ್ಬಾಲ್ ಶೇಖ್ (34) ಎಂಬಾತನನ್ನು ಪಿಐಟಿ-ಎನ್‌ಡಿಪಿಎಸ್ ಕಾಯ್ದೆಯಡಿ ಪೊಲೀಸರು ಬಂಧಿಸಲಾಗಿದೆ. ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿಯ ಆಧಾರದ ಮೇಲೆ ಪಶ್ಚಿಮ ವಲಯ ಐಜಿಪಿ ಅವರ ಆದೇಶ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ. ಈತನ ವಿರುದ್ಧ ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣಗಳು ಹಾಗೂ…
-

ರಾಜ್ಯದಲ್ಲಿ ಗುಟ್ಕಾ ಮಾರಾಟ ನಿಷೇಧ ಆದೇಶ ಶೀಘ್ರ ವಾಪಸ್ : ಸಿಎಂ ಡಿಕೆ ಶಿವಕುಮಾರ್
ರಾಜ್ಯಾದ್ಯಂತ ನಿಕೋಟಿನ್‌ಯುಕ್ತ ಗುಟ್ಕಾ ಮತ್ತು ಪಾನ್ ಮಸಾಲ ಮಾರಾಟವನ್ನು ಒಂದು ವರ್ಷದ ಅವಧಿಗೆ ನಿಷೇಧಿಸಿ ಹೊರಡಿಸಲಾಗಿದ್ದ ಸರ್ಕಾರದ ಆದೇಶವನ್ನು ತಕ್ಷಣವೇ ಹಿಂಪಡೆಯುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ. ಆರೋಗ್ಯ ಇಲಾಖೆ ಏಕಾಏಕಿ ಕೈಗೊಂಡಿದ್ದ ಈ ನಿರ್ಧಾರಕ್ಕೆ ಆಡಳಿತ ಪಕ್ಷದ ಶಾಸಕರು ಹಾಗೂ ರೈತ ವಲಯದಿಂದ ತೀವ್ರ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ, ಮುಖ್ಯಮಂತ್ರಿಗಳು ಈ ಮಹತ್ವದ ಕ್ರಮಕ್ಕೆ ಮುಂದಾಗಿದ್ದಾರೆ. ರಾಜ್ಯ ಸರ್ಕಾರದ ಈ ನಿಷೇಧದ ತೀರ್ಮಾನಕ್ಕೆ ಸ್ವತಃ ಕಾಂಗ್ರೆಸ್‌ನ ಕೆಲವು ಹಿರಿಯ ಶಾಸಕರೇ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು.…
-

ಗುಟ್ಕಾ ನಿಷೇಧ ಕಾಯ್ದೆ ಹಿಂಪಡೆಯಲು ಮುಖ್ಯಮಂತ್ರಿಗಳಿಗೆ ಅಡಿಕೆ ಬೆಳೆಗಾರರ ಮನವಿ..! ಇದು ಎಷ್ಟು ಸರಿ??
ರಾಜ್ಯ ಸರ್ಕಾರವು ಕರ್ನಾಟಕದಲ್ಲಿ ಅಡಕೆ ಬಳಸಿ ತಯಾರಿಸುವ ಗುಟ್ಕಾ ಹಾಗೂ ಪಾನ್ ಮಸಾಲ ಉತ್ಪನ್ನಗಳ ಮೇಲೆ ನಿಷೇಧ ಹೇರಲು ಮುಂದಾಗಿರುವುದು ರಾಜ್ಯದ ಅಡಕೆ ಬೆಳೆಗಾರರಲ್ಲಿ ತೀವ್ರ ಕಳವಳ ಮೂಡಿಸಿದೆ. ಈ ನಿರ್ಧಾರದಿಂದ ಅಡಕೆ ಮಾರುಕಟ್ಟೆ ಕುಸಿಯುವ ಭೀತಿ ಎದುರಾಗಿದ್ದು, ಅಡಿಕೆ ಬೆಳೆಗಾರರು ಗುಟ್ಕಾ ನಿಷೇಧ ಕಾಯ್ದೆ ಹಿಂಪಡೆಯಲು ಆರಗ ಜ್ಞಾನೇಂದ್ರ ಸಹಿತ ಡಿ.ಜಿ ಶಾಂತನಗೌಡ ನೇತ್ರತ್ವದ ನೀಯೋಗ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರವರಿಗೆ ಮನವಿ ಮಾಡಿದ್ದಾರೆ. ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ಯುವಜನರನ್ನು ರಕ್ಷಿಸುವ ಉದ್ದೇಶದಿಂದ ಕರ್ನಾಟಕ…
-

20 ಸಾವಿರ ಲಂಚ ಸ್ವೀಕರಿಸುವ ವೇಳೆ, ಲೋಕಾಯುಕ್ತ ಬಲೆಗೆ ಬಿದ್ದ ‘PSI’
ಹಾಸನ: ಪ್ರಕರಣವೊಂದರಲ್ಲಿ ನೆರವು ನೀಡಲು ದೂರುದಾರರಿಂದ ₹20 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಹಳೇಬೀಡು ಪೊಲೀಸ್ ಠಾಣೆಯ ಸಬ್‌ಇನ್‌ಸ್ಪೆಕ್ಟರ್ (PSI) ಮಂಜುನಾಥ್ ಅವರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಗುರುವಾರ ನಡೆದಿದೆ. ಘಟ್ಟದಹಳ್ಳಿ ಗ್ರಾಮದ ಸಂತೋಷ್ ಎಂಬುವರು ನೀಡಿದ ದೂರಿನನ್ವಯ ಲೋಕಾಯುಕ್ತ ಅಧಿಕಾರಿಗಳು ಈ ಯಶಸ್ವಿ ದಾಳಿ ನಡೆಸಿದ್ದಾರೆ. ದೂರುದಾರರಾದ ಸಂತೋಷ್ ಅವರ ಬಳಿ ಪಿಎಸ್‌ಐ ಮಂಜುನಾಥ್ ಅವರು ಕೆಲಸ ಮಾಡಿಕೊಡಲು ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದರು. ಇದರಿಂದ ಬೇಸತ್ತ ಸಂತೋಷ್ ಅವರು ತಕ್ಷಣವೇ ಲೋಕಾಯುಕ್ತ ಪೊಲೀಸರನ್ನು…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











