Author: News Editor
-

ಬಂಟ್ವಾಳ: ಎಂಡಿಎಂಎ, ಗಾಂಜಾ ಸಹಿತ ₹4.90 ಲಕ್ಷ ಮೌಲ್ಯದ ವಸ್ತುಗಳು ವಶ..!!
ಬಂಟ್ವಾಳ: ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ಮೂವರನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದು, ಡ್ರಗ್ಸ್ ಸಾಗಾಟಕ್ಕೆ ಬಳಸಿದ ಕಾರು, ಮೊಬೈಲ್ಗಳು ಸೇರಿದಂತೆ ಒಟ್ಟು ₹4.90 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆ.12ರಂದು ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಯಶ್ ಕುಮಾರ್ ಶರ್ಮಾ, ಐಪಿಎಸ್ ಅವರ ನೇತೃತ್ವದಲ್ಲಿ ಬಂಟ್ವಾಳ ಕಾವಳಪಡೂರು ಎಂಬಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಈ ವೇಳೆ ಸುಮಾರು ₹2.25 ಲಕ್ಷ ಮೌಲ್ಯದ 22.57 ಗ್ರಾಂ ಎಂಡಿಎಂಎ, 30.34 ಗ್ರಾಂ…
-

ಮಂಗಳೂರು: ಜ್ಯುವೆಲ್ಲರಿ ಉದ್ಯಮಿ ದರೋಡೆ ಪ್ರಕರಣ- ಮತ್ತೆ ನಾಲ್ವರ ಬಂಧನ..!!
ಮಂಗಳೂರು: ಪಣಂಬೂರಿನಲ್ಲಿ ಜೂನ್ 29ರಂದು ನಡೆದ ಜ್ಯುವೆಲ್ಲರಿ ಉದ್ಯಮಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಣಂಬೂರು ಪೊಲೀಸರು ಮತ್ತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಕೇರಳದ ಕಣ್ಣೂರು ಮೂಲದ ಮಿಥುನ್ ಲಾಲ್ ಹಾಗೂ ಶ್ರೀರಾಗ್, ಮಡಿಕೇರಿ ಮೂಲದ ಉಬೇದ್ ಮತ್ತು ಜಿಯಾದ್ ಬಂಧಿತ ಆರೋಪಿಗಳು. ಬಂಧಿತರ ಪೈಕಿ ಶ್ರೀರಾಗ್ ಕಣ್ಣೂರು ಜಿಲ್ಲೆಯಲ್ಲಿ ಸಿಪಿಐ ಪಕ್ಷದ ಸ್ಥಳೀಯ ಮಟ್ಟದ ನಾಯಕನಾಗಿದ್ದು, ದರೋಡೆ ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿರುವುದು ತನಿಖೆಯಲ್ಲಿ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ತನಿಖೆ ಚುರುಕುಗೊಂಡ ಬೆನ್ನಲ್ಲೇ ಶ್ರೀರಾಗ್ ವಕೀಲರ ಮೂಲಕ…
-

ಹೋಟೆಲ್, ಪಬ್ ಆಯ್ತು, ಈಗ ಹಾಸ್ಟೆಲ್, ಪಿಜಿಗಳಲ್ಲಿನ ಆಹಾರ ಪರಿಶೀಲನೆಗೆ ಸಚಿವ ಯುಟಿ ಖಾದರ್ ಸೂಚನೆ
ಹೋಟೆಲ್ಗಳ ಮೇಲೆ ಯಶಸ್ವಿ ದಾಳಿ ನಡೆಸಿ ಆಹಾರದ ಗುಣಮಟ್ಟ ಪರಿಶೀಲಿಸಿದ ಬೆನ್ನಲ್ಲೇ, ಇದೀಗ ರಾಜ್ಯದಾದ್ಯಂತ ಇರುವ ವಿವಿಧ ಹಾಸ್ಟೆಲ್ಗಳು ಹಾಗೂ ಪಿಜಿಗಳ (ಪೇಯಿಂಗ್ ಗೆಸ್ಟ್) ಮೇಲೂ ಆಹಾರ ತಪಾಸಣೆ ನಡೆಸಲು ಆರೋಗ್ಯ ಸಚಿವ ಯು.ಟಿ. ಖಾದರ್ ಸೂಚನೆ ನೀಡಿದ್ದಾರೆ. ಸಾರ್ವಜನಿಕ ಆರೋಗ್ಯ ಮತ್ತು ನೈರ್ಮಲ್ಯಕ್ಕೆ ಮೊದಲ ಆದ್ಯತೆ ನೀಡುವ ನಿಟ್ಟಿನಲ್ಲಿ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ನೂತನ ಕಾರ್ಯಾಚರಣೆಯಡಿಯಲ್ಲಿ ಸರ್ಕಾರಿ ಹಾಸ್ಟೆಲ್ಗಳು, ಖಾಸಗಿ ಹಾಸ್ಟೆಲ್ಗಳು ಹಾಗೂ ಸಹಕಾರಿ ಸಂಸ್ಥೆಗಳ ಅಧೀನದಲ್ಲಿ ನಡೆಯುತ್ತಿರುವ ಹಾಸ್ಟೆಲ್ಗಳಲ್ಲಿ ಆಹಾರ…
-

ಉಡುಪಿ ಜಿಲ್ಲೆಗೆ ಭಜರಂಗದಳ ಮುಖಂಡ ಪುನೀತ್ ಅತ್ತಾವರಗೆ ಪ್ರವೇಶ ನಿರ್ಬಂಧ
ಉಡುಪಿ: ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಭಜರಂಗದಳ ಮುಖಂಡ ಪುನೀತ್ ಅತ್ತಾವರ್ ಅವರಿಗೆ ಮೂರು ತಿಂಗಳ ಕಾಲ ಉಡುಪಿ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಆದೇಶ ಹೊರಡಿಸಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) 2023ರ ಕಲಂ 163ರ ಅಡಿಯಲ್ಲಿ ಈ ನಿರ್ಬಂಧ ಆದೇಶ ಜಾರಿಗೊಳಿಸಲಾಗಿದ್ದು, ಆಗಸ್ಟ್ 14, 2026ರಿಂದ ನವೆಂಬರ್ 13, 2026ರವರೆಗೆ ಮೂರು ತಿಂಗಳ ಕಾಲ ಉಡುಪಿ ಜಿಲ್ಲೆಗೆ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಉಡುಪಿಯಲ್ಲಿ ನಡೆಯಲಿರುವ…
-

ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ವ್ಯಕ್ತಿಗೆ ಹಲ್ಲೆ ಆರೋಪ- 5 ಮಂದಿ ವಶಕ್ಕೆ, ಪ್ರತಿ ದೂರು ದಾಖಲು
ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ವ್ಯಕ್ತಿಯನ್ನು ತಡೆದು ಹಲ್ಲೆ ನಡೆಸಿದ ಆರೋಪದಲ್ಲಿ ಐವರು ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕಾರ್ಕಳ ಈದು ನಿವಾಸಿ ಶೈಕ್ ಮುಕ್ತಾರ್ (50) ಅವರು ಕೆಲಸದ ನಿಮಿತ್ತ ಪರಿಚಯಸ್ಥರೊಬ್ಬರ ಅಪ್ರಾಪ್ತ ವಯಸ್ಸಿನ ಮಗಳನ್ನು ಕಾರಿನಲ್ಲಿ ಕರೆದುಕೊಂಡು ಹಾಸನದತ್ತ ತೆರಳುತ್ತಿದ್ದರು. ಈ ವೇಳೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಕೊಕ್ಕಡ ಕಾಪಿನಬಾಗಿಲು ಬಳಿ ಕೆಲವರು ಕಾರನ್ನು ತಡೆದು, ಬಾಲಕಿಯ ಕುರಿತು ವಿಚಾರಿಸಿ ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ…
-

ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲಾ ಮಾರಾಟ ಸಂಪೂರ್ಣ ಬಂದ್..!!
ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಯುಕ್ತ ಗುಟ್ಕಾ ಹಾಗೂ ಪಾನ್ ಮಸಾಲಾ ಮಾರಾಟದ ಮೇಲೆ ರಾಜ್ಯ ಸರ್ಕಾರವು ಕಠಿಣ ಕ್ರಮ ಕೈಗೊಂಡಿದ್ದು, ಇವುಗಳ ಉತ್ಪಾದನೆ, ಶೇಖರಣೆ, ವಿತರಣೆ, ಸಾಗಣೆ ಮತ್ತು ಮಾರಾಟವನ್ನು ರಾಜ್ಯಾದ್ಯಂತ ಒಂದು ವರ್ಷದ ಅವಧಿಗೆ ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಿದೆ. ಸಾರ್ವಜನಿಕರ ಆರೋಗ್ಯ ರಕ್ಷಣೆಯ ಹಿತದೃಷ್ಟಿಯಿಂದ ಆಹಾರ ಭದ್ರತೆ ಮತ್ತು ಗುಣಮಟ್ಟ ಕಾಯ್ದೆ-2006 ರ ಸೆಕ್ಷನ್ 30(2)(a) ಹಾಗೂ ಆಹಾರ ಭದ್ರತೆ ಮತ್ತು ಗುಣಮಟ್ಟ ನಿಯಮಾವಳಿಗಳು-2011 ರ ನಿಯಮ 2.3.4 ರ ಅಧಿಕಾರ ಬಳಸಿ…
-

ಕಾರ್ಕಳ : ಲಾಭಾಂಶದ ಆಸೆಗೆ ಆನ್ಲೈನ್ನಲ್ಲಿ ಹೂಡಿಕೆ ಮಾಡಿದ ವ್ಯಕ್ತಿಗೆ 32 ಲಕ್ಷ ರೂ. ಪಂಗನಾಮ!!
ಕಾರ್ಕಳ : ಲಾಭಾಂಶದ ಆಸೆಗೆ ಆನ್ಲೈನ್ನಲ್ಲಿ ಹೂಡಿಕೆ ಮಾಡಿ ವ್ಯಕ್ತಿಯೋರ್ವರು 32 ಲಕ್ಷ ರೂ. ಕಳೆದುಕೊಂಡ ಘಟನೆ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜು. 17ರಂದು ಲಕ್ಷ್ಮಣ್ ಎಂಬವರಿಗೆ ಫೇಸ್ ಬುಕ್ನಲ್ಲಿ ಒಂದು ವೀಡಿಯೋ ಬಂದಿದ್ದು ಅದರಲ್ಲಿ JB (Julius Baer VIP Group) ಮತ್ತು 5paisa ಆ್ಯಪ್ನಲ್ಲಿ ಹಣ ಹೂಡಿಕೆ ಮಾಡಿದರೆ ಡಬಲ್ ಲಾಭಾಂಶ ಕೊಡುವುದಾಗಿ ಇತ್ತು. ಅದರಲ್ಲಿದ್ದ ಲಿಂಕನ್ನು ಲಕ್ಷ್ಮಣ್ ಅವರು ಕ್ಲಿಕ್ ಮಾಡಿದಾಗ JB (Julius Baer VIP…
-

ಖಜಾನೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ: 70,000 ಸಂಬಳದ ಅಧಿಕಾರಿಗೆ ತಿಂಗಳಿಗೆ 6 ಲಕ್ಷ ಜಮೆ ಪತ್ತೆ
ಸರ್ಕಾರಿ ಬಿಲ್ಗಳ ವಿಲೇವಾರಿಯಲ್ಲಿ ಅನಗತ್ಯ ವಿಳಂಬ ಮತ್ತು ಮಂಜೂರಾತಿಗಾಗಿ ಕಮಿಷನ್ ಪಡೆಯಲಾಗುತ್ತಿದೆ ಎಂಬ ಸಾರ್ವಜನಿಕರ ದೂರುಗಳ ಬೆನ್ನಲ್ಲೇ, ರಾಜಧಾನಿಯ ವಿವಿಧ ಖಜಾನೆ (ಟ್ರೆಜರಿ) ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ಭಾರಿ ಪ್ರಮಾಣದ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್, ಉಪಲೋಕಾಯುಕ್ತರಾದ ಕೆ.ಎನ್. ಫಣೀಂದ್ರ ಮತ್ತು ಬಿ. ವೀರಪ್ಪ ಹಾಗೂ ಎಡಿಜಿಪಿ ಮನೀಶ್ ಖರ್ಭೀಕರ್ ಅವರ ನೇತೃತ್ವದಲ್ಲಿ ಈ ಮೆಗಾ ಕಾರ್ಯಾಚರಣೆ ನಡೆದಿದೆ. ಒಟ್ಟು 11 ನ್ಯಾಯಾಂಗ ಅಧಿಕಾರಿಗಳು ಮತ್ತು 39…
-

ಮಂಗಳೂರು: ಶೇರ್ ಟ್ರೇಡಿಂಗ್ನಲ್ಲಿ ದುಪ್ಪಟ್ಟು ಲಾಭದ ಆಮಿಷ- ₹12.87 ಲಕ್ಷ ವಂಚನೆ
ಮಂಗಳೂರು: ವಾಟ್ಸ್ಆ್ಯಪ್ ಗ್ರೂಪ್ ಹಾಗೂ ‘JB X One’ ಹೆಸರಿನ ನಕಲಿ ಆ್ಯಪ್ ಮೂಲಕ ಶೇರ್ ಟ್ರೇಡಿಂಗ್ನಲ್ಲಿ ದುಪ್ಪಟ್ಟು ಲಾಭಾಂಶ ನೀಡುವ ಆಮಿಷವೊಡ್ಡಿ ವ್ಯಕ್ತಿಯೊಬ್ಬರಿಂದ ₹12,87,108 ಹಣವನ್ನು ವರ್ಗಾಯಿಸಿಕೊಂಡು ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಸಂತ್ರಸ್ತ 44 ವರ್ಷದ ವ್ಯಕ್ತಿಗೆ ಜೂನ್ 13, 2026 ರಂದು ವಾಟ್ಸ್ಆ್ಯಪ್ನಲ್ಲಿ ‘Julius Baer Group Ltd’ ಕಂಪನಿಯ ಹೆಸರಿನ ‘B1062 Prime Leaders’ ಎಂಬ ಗ್ರೂಪ್ಗೆ ಸೇರಿಸಲಾಗಿತ್ತು. ಅದರಲ್ಲಿ ಅಪರಿಚಿತ ವ್ಯಕ್ತಿಗಳು ಶೇರ್ ಮಾರ್ಕೆಟ್ನಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ…
-

ಮಂಗಳೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಸರಗಳ್ಳನ 45 ದಿನಗಳ ಬಳಿಕ ಬಂಧನ
ಮಂಗಳೂರು: ಮಹಿಳೆಯೊಬ್ಬರಿಂದ ಬಂಗಾರದ ಸರ ಕಸಿದುಕೊಂಡು ಪರಾರಿಯಾಗಿದ್ದ ಪ್ರಕರಣದಲ್ಲಿ ಪೊಲೀಸರ ವಶದಿಂದ ತಪ್ಪಿಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ವಿಶೇಷ ಪೊಲೀಸ್ ತಂಡ ವಿಜಯಪುರದಲ್ಲಿ ಬಂಧಿಸಿದೆ.ಜೂನ್ 14ರಂದು ಸೂಟರ್ಪೇಟೆ ಗ್ರಾಮ ಲೆಕ್ಕಾಧಿಕಾರಿ ಕಚೇರಿ ಸಮೀಪ ಮಹಿಳೆಯೊಬ್ಬರ ಬಂಗಾರದ ಸರವನ್ನು ಕಸಿದುಕೊಂಡು ಮೋಟಾರ್ಸೈಕಲ್ನಲ್ಲಿ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಜೂನ್ 26ರಂದು ಪಾಂಡೇಶ್ವರದ ರೋಸಾರಿಯೋ ಶಾಲೆ ಸಮೀಪ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ಠಾಣೆಗೆ ಕರೆದುಕೊಂಡು ಬರುತ್ತಿದ್ದ ಸಂದರ್ಭದಲ್ಲಿ ಪ್ರಮುಖ ಆರೋಪಿ ಬಾಗಲಕೋಟೆ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











