Author: News Editor
-

ಉಡುಪಿ: ಯುಪಿಸಿಎಲ್ ಗುತ್ತಿಗೆ ಕಾಮಗಾರಿ ವಿಚಾರಕ್ಕೆ ಡೇವಿಡ್ ಡಿಸೋಜ ಹತ್ಯೆ-ಶೂಟರ್ ಸೇರಿ ಮೂವರು ಆರೋಪಿಗಳ ಬಂಧನ, 9 ಎಂಎಂ ಪಿಸ್ತೂಲ್ ವಶ
ಉಡುಪಿ: ಕಾಂಗ್ರೆಸ್ ಮುಖಂಡ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಅವರ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಯುಪಿಸಿಎಲ್ ಗುತ್ತಿಗೆ ವಿಚಾರಕ್ಕೆ ಸಂಬಂಧಿಸಿದ ಆರ್ಥಿಕ ವ್ಯವಹಾರವೇ ಕೊಲೆಗೆ ಪ್ರಮುಖ ಕಾರಣ ಎನ್ನುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ. ಆರೋಪಿಗಳ ಬಂಧನದ ಬಳಿಕ ಶನಿವಾರ ಸುದ್ದಿಗೋಷ್ಠಿ ನಡೆಸಿದ ಅವರು, ಪ್ರಕರಣದ ಎ1 ಆರೋಪಿ ಶೂಟರ್ ರಾಜು ಎಂಬಾತನ ಬ್ಯಾಂಕ್ ಖಾತೆಗೆ ₹2 ಲಕ್ಷಕ್ಕೂ ಅಧಿಕ ಹಣ ಪಾವತಿಯಾಗಿರುವುದು…
-

ಸಂಜೀವಿನಿ ಒಕ್ಕೂಟದ ಮತ್ತೊಂದು ಆಕ್ರಮ: ನಕಲಿ ದಾಖಲೆ ಸೃಷ್ಟಿಸಿ ಸುಮಾರು ₹28.19 ಲಕ್ಷ ದುರುಪಯೋಗ
ಹೆಬ್ರಿ: ಧನಲಕ್ಷ್ಮೀ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಸದಸ್ಯರಿಂದ ಮರುಪಾವತಿಯಾದ ಸಾಲದ ಹಣವನ್ನು ಒಕ್ಕೂಟದ ಖಾತೆಗೆ ಜಮಾ ಮಾಡದೆ, ನಕಲಿ ದಾಖಲೆ ಸೃಷ್ಟಿಸಿ ಸುಮಾರು ₹28.19 ಲಕ್ಷ ದುರುಪಯೋಗಪಡಿಸಿಕೊಂಡ ಆರೋಪ ಕೇಳಿಬಂದಿದೆ. ಒಕ್ಕೂಟದಲ್ಲಿ ಮುಖ್ಯ ಪುಸ್ತಕ ಬರಹಗಾರರಾಗಿ ಸುಮಾರು 8 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ನಂದಿನಿ ಎಂಬವರ ವಿರುದ್ಧ ಈ ಆರೋಪ ಮಾಡಲಾಗಿದೆ. 2020ರಿಂದ 2026ರವರೆಗೆ ವಿವಿಧ ಸ್ವಸಹಾಯ ಸಂಘಗಳ ಸದಸ್ಯರು ಸಾಲದ ಹಣವನ್ನು ಒಕ್ಕೂಟಕ್ಕೆ ಮರುಪಾವತಿಸಿದ್ದರೂ, ಆ ಮೊತ್ತವನ್ನು ಖಾತೆಗೆ ಜಮಾ ಮಾಡದೆ ಎರಡು ಖಾತೆ…
-

ಮಂಗಳೂರು: ರಾಜಕಾಲುವೆ ಒತ್ತುವರಿ ಮಾಡಿ ಬೃಹತ್ ಕಟ್ಟಡಗಳನ್ನು ನಿರ್ಮಿಸಿರುವವರ ವಿರುದ್ಧ ಕ್ರಮ ಯಾವಾಗ?
ಮಂಗಳೂರಿನಲ್ಲಿ ಬೀದಿ ಬದಿ ವ್ಯಾಪಾರಿಗಳ ವಿರುದ್ಧ ತೆರವು ಕಾರ್ಯಾಚರಣೆ ರಭಸವಾಗಿ ನಡೆಯುತ್ತಿದೆ. ರಸ್ತೆ ಬದಿ ವ್ಯಾಪಾರದಿಂದ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂಬ ಕಾರಣಕ್ಕೆ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿದ್ದಾರೆ. ಆದರೆ ಇದೇ ವೇಳೆ ಸಾರ್ವಜನಿಕರಲ್ಲಿ ಒಂದು ಪ್ರಶ್ನೆ ಮೂಡಿದೆ. ರಾಜಕಾಲುವೆ ಒತ್ತುವರಿ ಮಾಡಿ ಬೃಹತ್ ಕಟ್ಟಡಗಳನ್ನು ನಿರ್ಮಿಸಿರುವವರ ವಿರುದ್ಧ ಕ್ರಮ ಯಾವಾಗ? ಬೀದಿ ಬದಿ ವ್ಯಾಪಾರಿಗಳಿಗೆ ಮಾತ್ರ ಕಾನೂನು ಅನ್ವಯವಾಗುತ್ತದೆಯೇ? ರಾಜಕಾಲುವೆ ಒತ್ತುವರಿ ಮಾಡಿ ಬೃಹತ್ ಕಟ್ಟಡ ನಿರ್ಮಾಣ ಮಾಡಿರುವವರಿಗೂ ಇದೇ ಕಾನೂನು ಅನ್ವಯವಾಗುವುದಿಲ್ಲವೇ? ನಗರದ…
-

ಮಂಗಳೂರು: ವೃದ್ಧೆಯೊಬ್ಬರ ಮೇಲೆ ಹಲ್ಲೆ ನಡೆಸಿ ಚಿನ್ನಾಭರಣ ದೋಚಿದ ಪ್ರಕರಣ- ಇಬ್ಬರು ಆರೋಪಿಗಳ ಬಂಧನ
ಮಂಗಳೂರು: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 76 ವರ್ಷದ ವೃದ್ಧೆಯೊಬ್ಬರ ಮೇಲೆ ಹಲ್ಲೆ ನಡೆಸಿ ಚಿನ್ನಾಭರಣ ದೋಚಿದ ಪ್ರಕರಣವನ್ನು ಮಂಗಳೂರು ನಗರ ಪೊಲೀಸರು ಕೇವಲ ಮೂರು ದಿನಗಳಲ್ಲೇ ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ದೋಚಲಾಗಿದ್ದ ಸಂಪೂರ್ಣ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳನ್ನು ಬಾಲ ಸುಬ್ರಮಣ್ಯ (49), ಉರ್ವ ಮಟದಕಣಿ ನಿವಾಸಿ ಹಾಗೂ ಶ್ಯಾಮ್ ಕುಮಾರ್ (33), ತೊಕ್ಕೊಟ್ಟು ಮೂಲದ, ಪ್ರಸ್ತುತ ಮಣ್ಣಗುಡ್ಡ ನಿವಾಸಿ ಹಾಗೂ ಆಟೋರಿಕ್ಷಾ ಮಾಲೀಕ ಎಂದು…
-

ಉಡುಪಿ: ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ ಕೊಲೆ ಪ್ರಕರಣ- ಆರೋಪಿಗೆ ಪೊಲೀಸರಿಂದ ಗುಂಡೇಟು!
ಉಡುಪಿ: ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಗೂ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ, ರಾಜು ಎಂಬಾತನಿಗೆ ಪೊಲೀಸರು ಗುಂಡೇಟು ಹಾರಿಸಿರುವ ಘಟನೆ ಉಡುಪಿ ಜಿಲ್ಲೆಯ ಗಡಿಭಾಗದ ಬೈಂದೂರು ಒತ್ತಿನಣೆ ಪ್ರದೇಶದಲ್ಲಿ ನಡೆದಿದೆ. ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳು ಬೈಂದೂರು ಒತ್ತಿನಣೆ ಪ್ರದೇಶದಲ್ಲಿ ಇರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದರು. ಆರೋಪಿಯನ್ನು ಕಾಪು ಪಿಎಸ್ಐ ತೇಜಸ್ವಿ, ಕಾರ್ಕಳ ಗ್ರಾಮಾಂತರ ಪಿಎಸ್ಐ ಪ್ರಸನ್ನ ತಂಡವು…
-

ಮಂಗಳೂರಿನಲ್ಲಿ ಆಗಸ್ಟ್ 9 ರಂದು “ಕುಂದಾಪ್ರ ಕನ್ನಡ ಹಬ್ಬ 2026”
ಮನುಷ್ಯ ಭಾವನಾತ್ಮಕ ಜೀವಿ. ಪ್ರತಿಯೊಂದು ಪ್ರದೇಶಕ್ಕೂ ತನ್ನದೇ ಆದ ಭಾಷೆ, ಆಚಾರ-ವಿಚಾರ, ರೂಢಿ ಸಂಪ್ರದಾಯ ಉಡುಗೆ ತೊಡುಗೆ, ಸಂಸ್ಕಾರ-ಸಂಸ್ಕೃತಿಗಳು ವಿಭಿನ್ನವಾಗಿರುತ್ತದೆ. ವಿವಿಧತೆಯಲ್ಲಿ ಏಕತೆಯನ್ನು ಕಾಣುವಂತಹ ವೈಶಿಷ್ಟ್ಯ ನಮ್ಮದು. ಇವೆಲ್ಲವನ್ನೂ ಒಗ್ಗೂಡಿಸಿ, ಜನರ ನಡುವಿನ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವ ಶಕ್ತಿ ಭಾಷೆಗೆ ಇದೆ. ಭಾಷೆಯೇ ನಮ್ಮ ಅಸ್ಥಿತೆ, ನಮ್ಮ ಸಂಸ್ಕೃತಿಯ ಜೀವಾಳ. ಈ ಹಿನ್ನಲೆಯಲ್ಲಿ, ನಡೆಯಲಿರುವ ಕುಂದಾಪುರ ಕನ್ನಡ ಹಬ್ಬ ನಮ್ಮ ಭಾಷೆ ನಮ್ಮ ಹೆಮ್ಮೆ, ನಮ್ಮ ಸಂಸ್ಕೃತಿ ನಮ್ಮ ಗುರುತು. ಯಾವುದೇ ಭಾಷೆಯನ್ನು ಉಳಿಸಬೇಕಾದರೆ ಆ ಭಾಷೆಯನ್ನ…
-

ಉಡುಪಿ: ಕಾಂಗ್ರೆಸ್ ಮುಖಂಡ ಡೇವಿಡ್ ಡಿ’ಸೋಜಾ ಮೇಲೆ ಗುಂಡಿನ ದಾಳಿ..!! ಗಂಭೀರ ಗಾಯಗೊಂಡ ಡೇವಿಡ್ ದಾರಿಮಧ್ಯೆ ಸಾವು
ಪಡುಬಿದ್ರಿ: ಮುದರಂಗಡಿ ಗ್ರಾಮ ಪಂಚಾಯತ್ನ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಗೂ ಗುತ್ತಿಗೆದಾರರಾದ ಡೇವಿಡ್ ಡಿಸೋಜ ಅವರು ದುಷ್ಕರ್ಮಿಗಳ ಗುಂಡಿನ ದಾಳಿಯಲ್ಲಿ ಮೃತಪಟ್ಟಿರುವ ಘಟನೆ ಶುಕ್ರವಾರ ಮಧ್ಯಾಹ್ನ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಾಹಿತಿಯ ಪ್ರಕಾರ, ವಾಹನದಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಡೇವಿಡ್ ಡಿಸೋಜ ಅವರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಡೇವಿಡ್ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ, ಮಾರ್ಗಮಧ್ಯೆಯೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ಮಾಹಿತಿ…
-

ಉಡುಪಿ: ಅಕ್ರಮ ಮಟ್ಕಾ ಜುಗಾರಿ ವಿರುದ್ಧ ಪೊಲೀಸರ ಕಾರ್ಯಾಚರಣೆ- 3 ಪ್ರಕರಣ, ಬುಕ್ಕಿ ಸೇರಿ 5 ಮಂದಿ ಬಂಧನ
ಉಡುಪಿ ಜಿಲ್ಲೆಯಲ್ಲಿ ಅಕ್ರಮ ಮಟ್ಕಾ ಜುಗಾರಿ ವಿರುದ್ಧ ಪೊಲೀಸರು ಕಟ್ಟುನಿಟ್ಟಿನ ಕಾರ್ಯಾಚರಣೆ ನಡೆಸಿದ್ದು, ಕಳೆದ ಒಂದು ವಾರದಲ್ಲಿ ಮೂರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿ, ಮಟ್ಕಾ ಬುಕ್ಕಿ ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಕಾರ್ಕಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಕಾರ್ಕಳ ಬಸ್ ನಿಲ್ದಾಣದ ಬಳಿ ಮಟ್ಕಾ ನಡೆಸುತ್ತಿದ್ದ ವೀರೇಂದ್ರ ಶೆಟ್ಟಿಯನ್ನು ಬಂಧಿಸಿ, ನಗದು, ಮಟ್ಕಾ ಚೀಟಿ, ಮೊಬೈಲ್ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.ಇದೇ ರೀತಿ ಬ್ರಹ್ಮಾವರ ಠಾಣೆ ವ್ಯಾಪ್ತಿಯ ಹಂದಾಡಿ ಮತ್ತು ಚಾಂತಾರು ಪ್ರದೇಶಗಳಲ್ಲಿ ನಡೆಸಿದ ಎರಡು…
-

ವರ್ಕ್ ಫ್ರಮ್ ಹೋಂ ಹೆಸರಿನಲ್ಲಿ ಕೋಟಿ ಕೋಟಿ ವಂಚನೆ : ದಂಪತಿ ಅರೆಸ್ಟ್
ವರ್ಕ್ ಫ್ರಮ್ ಹೋಂ ಹೆಸರಿನಲ್ಲಿ ಕೋಟಿ ಕೋಟಿ ವಂಚನೆ ನಡೆದಿದೆ. ಎರಡು ಲಕ್ಷದಿಂದ 20 ಲಕ್ಷದವರೆಗೆ ಹಣ ಪಡೆದು ದಂಪತಿಗಳು ವಂಚನೆ ಎಸಗಿದ್ದಾರೆ. ಖತರ್ನಾಕ್ ದಂಪತಿಗಳಾದ ಕಿರಣ್ ಮತ್ತು ಆರತಿಯನ್ನು ಇದೀಗ ಪೊಲೀಸ್ರು ಅರೆಸ್ಟ್ ಮಾಡಿದ್ದಾರೆ. ಇನ್ಸ್ಟಾಗ್ರಾಮ್ ರಿಲ್ಸ್ ಮೂಲಕ ಜನರನ್ನು ನಂಬಿಸಿದ್ದಾರೆ. ಮೇಣದಬತ್ತಿ, ಅಗರ ಬತ್ತಿ, ಡ್ರೈ ಫ್ರೂಟ್ಸ್ ಪ್ಯಾಕಿಂಗ್ ಕೆಲಸದ ಆಮಿಷ ಒಡ್ದುತ್ತಿದ್ದರು. 1 ಲಕ್ಷ ಡೆಪಾಸಿಟ್ ಮಾಡಿದರೆ, 23,000 ವರೆಗೆ ಆದಾಯ ಕೊಡುತ್ತೇವೆ ಸಾವಿರಾರು ಜನರಿಗೆ ಕೆಲಸವೂ ಇಲ್ಲ ಇದೀಗ ಹಣವು ಇಲ್ಲದೆ…
-

ಮಂಗಳೂರು: ಬಾರ್ಗಳ ಮೇಲೆ ಅಬಕಾರಿ ದಿಢೀರ್ ದಾಳಿ..!! ಗ್ರಾಹಕರ ಐಡಿ ಕಾರ್ಡ್ ಪರಿಶೀಲನೆ
ಮಂಗಳೂರು : ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಮದ್ಯದೊಂದಿಗೆ ಆಹಾರ ಪೂರೈಸುವ ಪ್ರಮುಖ ಬಾರ್ ಹಾಗೂ ರೆಸ್ಟೋರೆಂಟ್ಗಳ ಮೇಲೆ ಅಬಕಾರಿ ಇಲಾಖೆಯ ಅಧಿಕಾರಿಗಳ ತಂಡ ಬುಧವಾರ ರಾತ್ರಿ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. ಐಡಿ ಕಾರ್ಡ್ ಪರಿಶೀಲನೆ – ಕಟ್ಟುನಿಟ್ಟಿನ ಸೂಚನೆ: ದಾಳಿಯ ವೇಳೆ ಬಾರ್ಗಳಿಗೆ ಆಗಮಿಸಿದ್ದ ಗ್ರಾಹಕರ ಗುರುತಿನ ಚೀಟಿಗಳನ್ನು ಅಧಿಕಾರಿಗಳು ತಪಾಸಣೆಗೊಳಪಡಿಸಿದರು. ಯಾವುದೇ ಕಾರಣಕ್ಕೂ ಅಪ್ರಾಪ್ತ ವಯಸ್ಕರಿಗೆ ಮದ್ಯ ಪೂರೈಸಬಾರದು ಎಂದು ಸನ್ನದುದಾರರಿಗೆ (Bar Licensees) ಸ್ಪಷ್ಟ ನಿರ್ದೇಶನ ನೀಡಲಾಯಿತು. ನಿಯಮ ಉಲ್ಲಂಘಿಸಿ ಅಪ್ರಾಪ್ತರಿಗೆ ಮದ್ಯ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











