Author: News Editor
-

ಹಣಕ್ಕೆ ಬೇಡಿಕೆ ಆರೋಪ: ಕಾರ್ಕಳ ಡಿವೈಎಸ್ಪಿ ಸೇರಿ ಮೂವರು ಪೊಲೀಸರು ಸಸ್ಪೆಂಡ್
ಕಾರ್ಕಳ: ಪೊಲೀಸ್ ಇಲಾಖೆ ಕಚೇರಿಯಲ್ಲಿ ಹಣದ ಬೇಡಿಕೆ ಆರೋಪಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ ಪ್ರಾಥಮಿಕ ತನಿಖೆ ನಡೆಸಿದ ಬಳಿಕ ಕಾರ್ಕಳ ಡಿವೈಎಸ್ಪಿ, ಸರ್ಕಲ್ ಇನ್ಸ್ಪೆಕ್ಟರ್ ಸೇರಿದಂತೆ ಮೂವರನ್ನು ಅಮಾನತುಗೊಳಿಸಲಾಗಿದೆ. ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಪ್ರತಿಕ್ರಿಯಿಸಿ, “ವಿಡಿಯೋಗಳು ಹಾಗೂ ಆರೋಪಗಳ ಆಧಾರದ ಮೇಲೆ ಹೆಚ್ಚುವರಿ ಎಸ್ಪಿ ಅವರಿಂದ ಪ್ರಾಥಮಿಕ ತನಿಖೆ ನಡೆಸಲಾಗಿದೆ. ತನಿಖಾ ವರದಿಯ ಮೇರೆಗೆ ಕಾರ್ಕಳ ಡಿವೈಎಸ್ಪಿ ವಿಜಯ ಪ್ರಸಾದ್, ಸರ್ಕಲ್ ಇನ್ಸ್ಪೆಕ್ಟರ್ ಸಂದೀಪ್ ಹಾಗೂ…
-

ಸಿಎಂ ಡಿಕೆ ಶಿವಕುಮಾರ್ ಪಿಎ ಎಂದು 15 ಲಕ್ಷ ರೂಪಾಯಿ ಪಡೆದು ವಂಚನೆ : ಓರ್ವ ಅರೆಸ್ಟ್
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆಪ್ತ ಕಾರ್ಯದರ್ಶಿ (ಪಿಎ) ಎಂದು ಸುಳ್ಳು ಹೇಳಿ, ರಿಕ್ರಿಯೇಷನ್ ಕ್ಲಬ್ ಲೈಸೆನ್ಸ್ ಕೊಡಿಸುವುದಾಗಿ ನಂಬಿಸಿ 15 ಲಕ್ಷ ರೂಪಾಯಿ ಪಡೆದು ವಂಚಿಸಿದ್ದ ವ್ಯಕ್ತಿಯೊಬ್ಬನನ್ನು ತುಂಗಾನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಹೇಮಂತ್ ಕುಮಾರ್ ಅಲಿಯಾಸ್ ಗಣೇಶ್ (30) ಎಂದು ಗುರುತಿಸಲಾಗಿದೆ. ವಂಚನೆಗೆ ಒಳಗಾದ ಮಂಜುನಾಥ್ ಹಂಜಿ ನೀಡಿದ ದೂರಿನನ್ವಯ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ದೂರುದಾರ ಮಂಜುನಾಥ್ ಹಂಜಿ ಅವರೊಂದಿಗೆ ಆರಂಭದಲ್ಲಿ ಸಲುಗೆ ಬೆಳೆಸಿಕೊಂಡಿದ್ದ ಹೇಮಂತ್ ಕುಮಾರ್,…
-

ಮಂಗಳೂರು: ಫೇಸ್ಬುಕ್ನಲ್ಲಿ ಪರಿಚಯವಾದ ವ್ಯಕ್ತಿ, ಬ್ರಿಟನ್ನಿಂದ ಪಾರ್ಸೆಲ್ ಬಂದಿದೆ ಎಂದು ನಂಬಿಸಿ ಮಹಿಳೆಗೆ ವಂಚನೆ!!
ಮಂಗಳೂರು : ಫೇಸ್ಬುಕ್ನಲ್ಲಿ ಪರಿಚಯವಾದ ಅಪರಿಚಿತ ವ್ಯಕ್ತಿಯೊಬ್ಬ ಬ್ರಿಟನ್ನಿಂದ ಕಳುಹಿಸಿದ್ದಾನೆ ಎನ್ನಲಾದ ‘ಉಡುಗೊರೆ ಪಾರ್ಸೆಲ್’ ಬಿಡುಗಡೆಗೊಳಿಸುವ ನೆಪದಲ್ಲಿ, ಕಸ್ಟಮ್ಸ್ ಅಧಿಕಾರಿಯಂತೆ ನಟಿಸಿ ಗೃಹಣಿಯೊಬ್ಬರಿಂದ ಬರೋಬ್ಬರಿ ₹2,67,000 ಹಣ ಪಡೆದು ವಂಚಿಸಿರುವ ಘಟನೆ ನಡೆದಿದೆ. ಗೃಹಣಿ ಶ್ರೀಮತಿ (46) ಅವರಿಗೆ ಸುಮಾರು ಎರಡು ತಿಂಗಳ ಹಿಂದೆ ಫೇಸ್ಬುಕ್ನಲ್ಲಿ “ಡಾ. ವಿಲಿಯಮ್ಸ್ ಹೆರ್ಬರ್ಟ್” ಎಂಬ ಪ್ರೊಫೈಲ್ನಿಂದ ಪರಿಚಯವಾಗಿತ್ತು. ತಾನು ಯುನೈಟೆಡ್ ಕಿಂಗ್ಡಮ್ (UK) ಮೂಲದವನೆಂದು ಪರಿಚಯಿಸಿಕೊಂಡಿದ್ದ ಈತ, ವಾಟ್ಸಾಪ್ ಹಾಗೂ ಫೇಸ್ಬುಕ್ ಮೆಸೆಂಜರ್ ಮೂಲಕ ನಿರಂತರ ಸಂಪರ್ಕದಲ್ಲಿದ್ದು ದೂರುದಾರರ ವಿಶ್ವಾಸ ಗಳಿಸಿದ್ದ.…
-

ಸರ್ಕಾರಿ ಬಸ್ ಚಾಲಕನ ಮನೆಯಲ್ಲಿ 15 ಕೆಜಿ ಚಿನ್ನ, 20 ಕೋಟಿ ನಗದು- ತನಿಖಾಧಿಕಾರಿಗಳೇ ಶಾಕ್
ಕೇವಲ ಒಬ್ಬ ಸಾಮಾನ್ಯ ಬಸ್ ಚಾಲಕನ ಮನೆಯಲ್ಲಿ ಸಿಕ್ಕ ಸಂಪತ್ತು ಕಂಡು ತನಿಖಾಧಿಕಾರಿಗಳೇ ಶಾಕ್ ಆಗಿದ್ದಾರೆ. ಪೊಲೀಸರು ಈ ಬೃಹತ್ ಪ್ರಮಾಣದ ಕಪ್ಪು ಹಣ ಮತ್ತು ಚಿನ್ನವನ್ನು ವಶಪಡಿಸಿಕೊಳ್ಳಲು 5 ದೊಡ್ಡ ಕಬ್ಬಿಣದ ಪೆಟ್ಟಿಗೆಗಳು, 5 ನೋಟು ಎಣಿಕೆ ಯಂತ್ರಗಳು ಹಾಗೂ ಹಲವು ಗಂಟೆಗಳ ಕಾಲ ಶ್ರಮಿಸಬೇಕಾಯಿತು. 35 ಚೀಲಗಳಲ್ಲಿ ಸಿಕ್ಕಿತು 20 ಕೋಟಿ ಕ್ಯಾಶ್, 15 ಕೆಜಿ ಬಂಗಾರ! ವರದಿಯ ಪ್ರಕಾರ, ಕೋಲ್ಕತ್ತಾ ಕಲ್ಲು ವ್ಯಾಪಾರಿ ಟುಲು ಮಂಡಲ್ ಅವರ ಭಾವ (ಪತ್ನಿಯ ಸಹೋದರ) ಹಾಗೂ…
-

ಕರ್ತವ್ಯದ ಅವಧಿಯಲ್ಲೇ ಗುಂಡು-ತುಂಡು ಪಾರ್ಟಿ: 6 ಮಂದಿ PDO, ಮೂವರು ಸಿಬ್ಬಂದಿ ಅಮಾನತು!!
ಕರ್ತವ್ಯದ ಅವಧಿಯಲ್ಲಿ ಕಚೇರಿಗೆ ಗೈರುಹಾಜರಾಗಿ ಮದ್ಯ ಮತ್ತು ಮಾಂಸದ ಪಾರ್ಟಿ ಮಾಡಿದ ಆರೋಪದ ಮೇಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 6 ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು (PDO) ಹಾಗೂ ಮೂವರು ಸಿಬ್ಬಂದಿಯನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಪ್ರಕರಣದ ಹಿನ್ನೆಲೆ: ಕಳೆದ ಶುಕ್ರವಾರ (ಜುಲೈ 24) ಸಂಜೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಸಿದ್ದರಬೆಟ್ಟದ ತಪ್ಪಲಿನಲ್ಲಿ ಮದ್ಯ ಹಾಗೂ ಮಾಂಸ ಸೇವಿಸಿ ಮೋಜು-ಮಸ್ತಿ ಮಾಡುತ್ತಿದ್ದ ದೃಶ್ಯಗಳು ಮಾಧ್ಯಮಗಳಲ್ಲಿ ವರದಿಯಾಗಿದ್ದವು. ಕೆಲಸದ…
-

20,000 ಲಂಚ ಸ್ವೀಕರಿಸುತ್ತಿದ್ದ ವೇಳೆಯೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ DHO ಕಚೇರಿ ಅಧಿಕಾರಿ
ಅನುದಾನ ಬಿಡುಗಡೆ ಮಾಡಲು ಭ್ರಷ್ಟಾಚಾರದ ದಾರಿ ತುಳಿದಿದ್ದ ಯಾದಗಿರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (DHO) ಕಚೇರಿಯ ಅಧಿಕಾರಿಯೊಬ್ಬರು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಕಚೇರಿಯಲ್ಲೇ ಸಾರ್ವಜನಿಕರಿಂದ 20,000 ರೂಪಾಯಿ ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಈ ಪ್ರಮುಖ ಕಾರ್ಯಾಚರಣೆ ನಡೆದಿದೆ. ಆಡಳಿತ ಮತ್ತು ಕಾರ್ಯಕ್ರಮ ಸಹಾಯಕ ಅಧಿಕಾರಿಯಾಗಿ ಹೊರಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿದ್ದ ಶ್ರೀಕಾಂತ್ ಬಾವಿಮನಿ ಎಂಬವರೇ ಲೋಕಾಯುಕ್ತ ಬಲೆಗೆ ಬಿದ್ದ ಆರೋಪಿಯಾಗಿದ್ದಾರೆ. ಜಿಲ್ಲಾ ಗುಣಮಟ್ಟ ಭರವಸೆ ಘಟಕಕ್ಕೆ ಸಂಬಂಧಿಸಿದಂತೆ ಬಿಡುಗಡೆಯಾಗಬೇಕಿದ್ದ 1.3…
-

ಇಂದಿರಾ ಆವಾಸ್ ಯೋಜನೆಯ ಅನುದಾನ ದುರ್ಬಳಕೆ: ಪಿಡಿಒ, ಅಧ್ಯಕ್ಷ, ಸದಸ್ಯೆಗೆ 3 ವರ್ಷ ಜೈಲು!!
ಹೊಸಪೇಟೆ: ಇಂದಿರಾ ಆವಾಸ್ ಯೋಜನೆಯ ಅನುದಾನ ದುರ್ಬಳಕೆ ಮಾಡಿಕೊಂಡ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಹಗರಿಬೊಮ್ಮನಹಳ್ಳಿ ತಾಲೂಕಿನ ಮರಬ್ಬಿಹಾಳು ಗ್ರಾಪಂ ಪಿಡಿಒ, ಅಧ್ಯಕ್ಷ ಹಾಗೂ ಸದಸ್ಯೆಗೆ ಮೂರು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ತಲಾ 90 ಸಾವಿರ ರೂ. ದಂಡ ವಿಧಿಸಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಪಿಡಿಒ ವಸಂತರಾಜ್, ಅಧ್ಯಕ್ಷ ರಾಮಚಂದ್ರ ನಾಯ್ಕ ಹಾಗೂ ಸದಸ್ಯೆ ಹನುಮವ್ವ ಶಿಕ್ಷೆಗೆ ಒಳಗಾದ ಅಪರಾಧಿಗಳು. 2016ರಲ್ಲಿ ನಡೆದ ಅಕ್ರಮದ ಕುರಿತು ಲೋಕಾಯುಕ್ತ ಡಿವೈಎಸ್ಪಿ ಪಿ.ಎನ್.ಆರ್.ಮಹಾಂತರಡ್ಡಿ…
-

ಸರ್ಕಾರಿ ವಾಹನಗಳ ದುರುಪಯೋಗಕ್ಕೆ ಬ್ರೇಕ್ : ಒಬ್ಬ ಅಧಿಕಾರಿಗೆ ಒಂದೇ ಕಾರು ನಿಯಮ ಜಾರಿ
ಸರ್ಕಾರಿ ವಾಹನಗಳ ದುರುಪಯೋಗ ತಡೆಯಲು ಮತ್ತು ಅನಗತ್ಯ ವೆಚ್ಚಕ್ಕೆ ಕಡಿತಗೊಳಿಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಹಿರಿಯ ಅಧಿಕಾರಿಗಳಿಗೆ ಇನ್ಮುಂದೆ ‘ಒಬ್ಬ ಅಧಿಕಾರಿಗೆ ಒಂದೇ ಸರ್ಕಾರಿ ಕಾರು’ (One Officer, One Official Car) ನೀತಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ. ಹಣಕಾಸು ಸಚಿವಾಲಯದ ವ್ಯಾಪ್ತಿಗೆ ಬರುವ ವೆಚ್ಚ ಇಲಾಖೆ (Department of Expenditure) ಈ ಕುರಿತು ಅಧಿಕೃತ ಜ್ಞಾಪನಾ ಪತ್ರ (Office Memorandum) ಹೊರಡಿಸಿದ್ದು, ಎಲ್ಲಾ ಕೇಂದ್ರ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ನೂತನ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ…
-

ಆರೋಗ್ಯ ಸಚಿವ ಯು.ಟಿ ಖಾದರ್ ರವರ ಮಹತ್ವದ ಯೋಜನೆ ಮತ್ತು ಬದಲಾವಣೆಗೆ ಕರ್ನಾಟಕದ ಜನತೆ ಫಿದಾ..!! ಆದರೆ ಈಗಿರುವ ಪ್ರಶ್ನೆ ಗುಟ್ಕಾ,ಪಾನ್ ಮಸಾಲ ಬ್ಯಾನ್ ಯಾವಾಗ??
ಕರ್ನಾಟಕ ಸರ್ಕಾರ ಜಂಕ್ ಫುಡ್ ಅನ್ನು ಶಾಲೆಗಳ ಸುತ್ತಮುತ್ತ, ಶಾಲಾ ಕ್ಯಾಂಪಸ್ಗಳಲ್ಲಿ ಹಾಗೂ ಆಸ್ಪತ್ರೆಗಳ ಕ್ಯಾಂಟೀನ್ಗಳಲ್ಲಿ ಜಂಕ್ ಫುಡ್ ಮಾರಾಟವನ್ನು ನಿಷೇಧಿಸಲು ಆರೋಗ್ಯ ಸಚಿವ ಯು.ಟಿ. ಖಾದರ್ ನೀಡಿರುವ ಸೊಚನೆ ಮತ್ತು ಕ್ರಮ ಗಮನಾರ್ಹ. ಮಕ್ಕಳಲ್ಲಿ ಆರೋಗ್ಯಕರ ಆಹಾರ ಪದ್ಧತಿಯನ್ನು ಬೆಳೆಸುವುದು ಹಾಗೂ ಜೀವನಶೈಲಿ ಸಂಬಂಧಿತ ಕಾಯಿಲೆಗಳನ್ನು ತಡೆಗಟ್ಟುವುದಾಗಿದೆ. ಆರೋಗ್ಯ ಸಚಿವರಾದ ತಕ್ಷಣವೇ ಯು.ಟಿ ಖಾದರ್ ಹಲವಾರು ಪ್ರಮುಖ ಬದಲಾವಣೆ ತಂದಿರುವುದು ಬಡ ಕುಟುಂಬಗಳಿಗೆ ಬಹಳ ಸಂತಸ ತಂದಿದೆ. ಗುಟ್ಕಾ ಸೇವನೆ ಆರೋಗ್ಯಕ್ಕೆ ಗಂಭೀರ ಹಾನಿಯನ್ನು ಉಂಟುಮಾಡುತ್ತದೆ.…
-

ಮಂಗಳೂರು: ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ ಪರೀಕ್ಷೆ – ವಿದ್ಯಾರ್ಥಿಗೆ ಪಾಸಿಟಿವ್
ಮಂಗಳೂರು: ಯುವಜನರಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಗಟ್ಟುವ ಉದ್ದೇಶದಿಂದ ಮಂಗಳೂರು ನಗರ ಪೊಲೀಸರು ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ದಿಢೀರ್ ಡ್ರಗ್ ಪರೀಕ್ಷೆ ನಡೆಸಿದರು. ನಗರದ ಕೊಟೆಕಾರ್ ಬೀರಿ ಹಾಗೂ ಕೊಣಾಜೆ ಬಂಟ್ಸ್ ಭವನ ಸಮೀಪ ಈ ವಿಶೇಷ ಕಾರ್ಯಾಚರಣೆ ನಡೆಯಿತು. ದಕ್ಷಿಣ ಹಾಗೂ ಕೇಂದ್ರ ಉಪವಿಭಾಗಗಳ ಸಹಾಯಕ ಪೊಲೀಸ್ ಆಯುಕ್ತರ (ACP) ನೇತೃತ್ವದಲ್ಲಿ, ಕಾನೂನು ಮತ್ತು ಸುವ್ಯವಸ್ಥೆಯ ಉಪ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಸಂಜೆ 4.30ರಿಂದ 6.00 ಗಂಟೆಯವರೆಗೆ ನಡೆದ ಕಾರ್ಯಾಚರಣೆಯಲ್ಲಿ ಖಾಸಗಿ ಹಾಗೂ ಕಾಲೇಜು…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











