Author: News Editor
-

ಆಂಬುಲೆನ್ಸ್ ನಲ್ಲಿ 5.5 ಕೋಟಿ ಡ್ರಗ್ಸ್ ಸಾಗಾಟ ಪ್ರಕರಣ : ಬೆಳ್ತಂಗಡಿ ಆಂಬುಲೆನ್ಸ್ ಚಾಲಕ ಪರಾರಿ
ಬೆಳ್ತಂಗಡಿ : ಬಾಗಲಕೋಟೆಯಲ್ಲಿ ಇತ್ತೀಚೆಗೆ ಪತ್ತೆಯಾದ ಐದೂವರೆ ಕೋಟಿ ರೂಪಾಯಿ ಮೌಲ್ಯದ ಮಾದಕ ಎಂಡಿಎಂಎ ವಶಪಡಿಸಿಕೊಂಡ ಪ್ರಕರಣದಲ್ಲಿ ಈಗಾಗಲೇ ಮೂವರನ್ನು ಬಂಧಿಸಿ ಒಟ್ಟು ನಾಲ್ಕು ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮತ್ತೋರ್ವ ಬೆಳ್ತಂಗಡಿಯ ಸಮಾಜಸೇವಕನ ಹೆಸರಲ್ಲಿ ಡ್ರಗ್ಸ್ ಪೆಡ್ಡಿಂಗ್ ದಂಧೆ ನಡೆಸುತ್ತಿದ್ದ ಆಂಬ್ಯುಲೆನ್ಸ್ ಚಾಲಕ ಜಲೀಲ್ @ ಬಾಬಾ(42) ಎಂಬಾತ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಪರಾರಿಯಾಗಿದ್ದು ಬಂಧನಕ್ಕಾಗಿ ಸಿಸಿಬಿ ಪೊಲೀಸರು ಬಲೆ ಬೀಸಿದ್ದಾರೆ. ಪ್ರಕರಣದ ವಿವರ :ಮಂಗಳೂರು ನಗರ ಸಿಸಿಬಿ ಪೊಲೀಸರು ಕುಳಾಯಿಗುಡ್ಡೆ ವಾಟರ್ ಟ್ಯಾಂಕ್…
-

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು
ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಎರಡನೇ ಆರೋಪಿ ಮನೀಶ್ ಗೆ ಹೈ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ ಎಂದು ತಿಳಿದು ಬಂದಿದೆ. ಹೈಕೋರ್ಟ್ ನ್ಯಾಯದೀಶರಾದ ಜಸ್ಟೀಸ್ ವಿಶ್ವಜಿತ್ ಶೆಟ್ಟಿ ಜಾಮೀನು ಮಂಜೂರು ಮಾಡಿದರು. ನ್ಯಾಯಾಲಯವು ತನಿಖೆಗೆ ಸಹಕರಿಸುವುದು, ಸಾಕ್ಷಿಗಳ ಮೇಲೆ ಯಾವುದೇ ಪ್ರಭಾವ ಬೀರುವಂತಿಲ್ಲ, ನ್ಯಾಯಾಲಯದ ಅನುಮತಿ ಇಲ್ಲದೆ ವ್ಯಾಪ್ತಿಯನ್ನು ತೊರೆಯಬಾರದು ಸೇರಿದಂತೆ ಹಲವು ಷರತ್ತುಗಳನ್ನು ವಿಧಿಸಿ ಜಾಮೀನು ನೀಡಿದೆ. ಪ್ರಕರಣದ ವಿಚಾರಣೆ ಮುಂದುವರಿದಿದ್ದು, ಉಳಿದ ಆರೋಪಿಗಳ ವಿರುದ್ಧದ ಕಾನೂನು ಪ್ರಕ್ರಿಯೆಯೂ ಮುಂದುವರಿಯಲಿದೆ
-

ಬರಿಮಾರ್ ದುರಂತಕ್ಕೆ ಮಹತ್ವದ ತಿರುವು; ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ ಪ್ರಕರಣ ದಾಖಲು
ಬಂಟ್ವಾಳ : ಬರಿಮಾರ್ ಎಂಬಲ್ಲಿ ಶಾಲಾ ವಾಹನದ ಮೇಲೆ ಮರ ಬಿದ್ದು ವಿದ್ಯಾರ್ಥಿ ಮೃತಪಟ್ಟು, ಹಲವು ಮಕ್ಕಳು ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಕಲ್ಲಡ್ಕದ ‘ಶ್ರೀರಾಮ ವಿದ್ಯಾಕೇಂದ್ರ’ದ ಆಡಳಿತ ಮಂಡಳಿ ಮುಖ್ಯಸ್ಥರು ಹಾಗೂ ಇತರರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಿನಾಂಕ 22 ಜುಲೈ 2026 ರಂದು ಸಂಭವಿಸಿದ ಈ ಭೀಕರ ದುರಂತಕ್ಕೆ ಸಂಬಂಧಿಸಿದಂತೆ ಆರಂಭದಲ್ಲಿ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಯು.ಡಿ.ಆರ್ (UDR) ಸಂಖ್ಯೆ 35/2026 ಕಲಂ 194 ಬಿಎನ್ಎಸ್ (BNS) ಪ್ರಕಾರ ಪ್ರಕರಣ…
-

ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಲಂಚಕ್ಕೆ ಬೇಡಿಕೆ : ಲೋಕಾಯುಕ್ತ ಬಲೆಗೆ ಬಿದ್ದ ಮಕ್ಕಳ ರಕ್ಷಣಾಧಿಕಾರಿ
ಹೊರಗುತ್ತಿಗೆ ಆಧಾರದ ಮೇಲೆ ಕಂಪ್ಯೂಟರ್ ಆಪರೇಟರ್ ಹುದ್ದೆಗೆ ನೇಮಕಾತಿ ಮಾಡಿಕೊಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಗದಗದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ (DCPC) ರಫಿಕಾ ಹಳ್ಳೂರು ಹಾಗೂ ಅವರ ಚಾಲಕ ಮೌಲಾನಾ ಎಂಬುವವರು ಶುಕ್ರವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಹುದ್ದೆ ಕೊಡಿಸಲು ಲಂಚ ಪಡೆಯುತ್ತಿದ್ದಾಗ ದಾಳಿ ನಡೆಸಿದ ಅಧಿಕಾರಿಗಳು ಇಬ್ಬರನ್ನೂ ರೆಡ್ಹ್ಯಾಂಡ್ ಆಗಿ ವಶಕ್ಕೆ ಪಡೆದಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವ್ಯಾಪ್ತಿಯಲ್ಲಿರುವ ಬಾಲಮಂದಿರಕ್ಕೆ ಕಂಪ್ಯೂಟರ್ ಆಪರೇಟರ್ ನೇಮಕ ಮಾಡಿಕೊಳ್ಳಲು ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಯೊಬ್ಬರಿಂದ ರಫಿಕಾ ಹಳ್ಳೂರು…
-

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ನವದೆಹಲಿ: ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಬೃಹತ್ ಪ್ರತಿಭಟನೆಗೆ ಕೊನೆಗೂ ಮಣಿದಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಶನಿವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ತಮ್ಮ ಪತ್ರದಲ್ಲಿ ಯುವ ಸಾಥಿಗಳನ್ನು ಉದ್ದೇಶಿಸಿ ಬರೆದಿರುವ ಅವರು, ಕಳೆದ 4 ದಶಕಗಳಿಂದಲೂ (40 ವರ್ಷಗಳು) ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆ ತರಲು ತಮ್ಮನ್ನು ತಾವು ಸಮರ್ಪಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಬಲವಾದ,…
-

ಮಂಗಳೂರು: ದ್ವಿಚಕ್ರ ವಾಹನದಲ್ಲಿ ಬಂದು ಏಕಾಏಕಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ!!
ಮಂಗಳೂರು: ದ್ವಿಚಕ್ರ ವಾಹನದಲ್ಲಿ ಬಂದು ಏಕಾಏಕಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ಘಟನೆ ಮಂಗಳೂರು ನಗರದ ಲಾಲ್ ಭಾಗ್ ಬಳಿ ನಡೆದಿದೆ. ವಿಖ್ಯಾತ್ ಯಾನೆ ವಿಕ್ಕಿ ಬಪ್ಪಲ್ ಕೊಲೆ ಯತ್ನಕ್ಕೆ ಒಳಗಾದ ಯವಕ. ಬೆನ್ನಿನ ಹಿಂಭಾಗಕ್ಕೆ ದಾಳಿ ನಡೆಸಿ ಬೈಕ್ ನಲ್ಲಿ ಬಂದಿದ್ದ ಯುವಕ ಪರಾರಿಯಾಗಿದ್ದಾನೆ. ಸದ್ಯ ಗಾಯಾಳುವಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜನನಿಬಿಡ ಜಾಗದಲ್ಲೇ ಒಬ್ಬಂಟಿಯಾಗಿ ಬಂದು ಅಪರಿಚಿತ ದಾಳಿ ನಡೆಸಿದ್ದಾನೆ. ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ
-

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ: ಎನ್ಟಿಎಯಿಂದ 47 ಅಧಿಕಾರಿಗಳ ವಜಾ, ಇನ್ನಷ್ಟು ತಲೆದಂಡ ಸಾಧ್ಯತೆ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ನಡೆಯುತ್ತಿರುವ ಪ್ರತಿಭಟನೆಗಳ ನಡುವೆಯೇ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ)ಯೊಳಗೆ ಪ್ರಮುಖ ಬದಲಾವಣೆಗಳಿಗೆ ಸಿದ್ಧತೆಗಳು ನಡೆಯುತ್ತಿವೆ. ಎನ್ಟಿಎ 47 ತನ್ನ ಅಧಿಕಾರಿಗಳನ್ನು ವಜಾಗೊಳಿಸಿದೆ. ಈ ಅಧಿಕಾರಿಗಳಲ್ಲಿ ಕೆಲವರ ವಿರುದ್ಧ ಕಾನೂನು ಮತ್ತು ಕ್ರಿಮಿನಲ್ ಕ್ರಮ ಕೈಗೊಳ್ಳಲಾಗುವುದು. ಮುಂದಿನ ಸುಧಾರಣಾ ಕ್ರಮಗಳನ್ನು ಅನುಸರಿಸಲಾಗುವುದು. ಮುಂದಿನ ತಿಂಗಳೊಳಗೆ NTA ಪುನರ್ ರಚನೆಗೆ ಒಳಗಾಗುವ ನಿರೀಕ್ಷೆಯಿದೆ.
-

ಕರ್ನಾಟಕದಲ್ಲಿ ಬೃಹತ್ ನಕಲಿ ಪಿಎಚ್ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರು ಸೇವೆಯಿಂದ ವಜಾ
ಕರ್ನಾಟಕದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ನಕಲಿ ಹಾಗೂ ಅಮಾನ್ಯ ಪಿಎಚ್ಡಿ (PhD) ಪ್ರಮಾಣಪತ್ರಗಳನ್ನು ನೀಡಿ ಉದ್ಯೋಗ ಗಿಟ್ಟಿಸಿಕೊಂಡಿದ್ದ ಬೃಹತ್ ನೇಮಕಾತಿ ಅಕ್ರಮವನ್ನು ಕಾಲೇಜು ಶಿಕ್ಷಣ ಇಲಾಖೆ ಬಯಲಿಗೆಳೆದಿದೆ. ವಿಶ್ವವಿದ್ಯಾಲಯಗಳ ತನಿಖೆಯಿಂದ ಈ ಅಕ್ರಮ ದೃಢಪಟ್ಟಿದ್ದು, ಅಕ್ರಮ ಎಸಗಿದ ಒಟ್ಟು 249 ಅತಿಥಿ ಉಪನ್ಯಾಸಕರನ್ನು ತಕ್ಷಣವೇ ಸೇವೆಯಿಂದ ವಜಾಗೊಳಿಸಲು, ಭವಿಷ್ಯದ ನೇಮಕಾತಿಗಳಿಂದ ಖಾಯಂ ಆಗಿ ಬ್ಲ್ಯಾಕ್ಲಿಸ್ಟ್ (ಕಪ್ಪುಪಟ್ಟಿ) ಮಾಡಲು ಹಾಗೂ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಸರ್ಕಾರ ಆದೇಶಿಸಿದೆ. ವಿಶ್ವವಿದ್ಯಾಲಯಗಳ ಪರಿಶೀಲನೆಯಲ್ಲಿ ಅಕ್ರಮ ಬಯಲು: 2025-26ನೇ…
-

ಮಂಗಳೂರು ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ರಾಹುಲ್ ರತ್ನಂ ಪಾಂಡೆ- ಪಾರದರ್ಶಕ ಮತ್ತು ಭ್ರಷ್ಟಾಚಾರ ಮುಕ್ತ ಆಡಳಿತ ನೀಡಲಿ ಎಂದು ಸಾರ್ವಜನಿಕರ ಆಶಯ
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಗೆ ನೂತನ ಆಯುಕ್ತರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಅದರಂತೆ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದ (KSMSCL) ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ರಾಹುಲ್ ರತ್ನಂ ಪಾಂಡೆ (ಐಎಎಸ್-2018) ಅವರನ್ನು ಮಂಗಳೂರು ಮಹಾನಗರ ಪಾಲಿಕೆಯ (MCC) ನೂತನ ಆಯುಕ್ತರನ್ನಾಗಿ ರಾಜ್ಯ ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಿದೆ. ಮಂಗಳೂರು ಪಾಲಿಕೆಯ ಆಯುಕ್ತರಾಗಿದ್ದ ರವಿಚಂದ್ರ ನಾಯಕ್ ಅವರ ಸ್ಥಾನಕ್ಕೆ ರಾಹುಲ್ ರತ್ನಂ ಪಾಂಡೆ ಅವರನ್ನು ನೇಮಕ ಮಾಡಲಾಗಿದ್ದು, ಸರ್ಕಾರ ಈ ಸಂಬಂಧ…
-

ಯು.ಟಿ. ಖಾದರ್ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್ಶಿಪ್ ಅವಾರ್ಡ್–2026’ ಗೌರವ; ಮೊದಲ ಭಾರತೀಯ ಎಂಬ ಹೆಗ್ಗಳಿಕೆ
ಮಂಗಳೂರು: ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರಿಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್ಶಿಪ್ ಅವಾರ್ಡ್–2026’ ಗೌರವ ಲಭಿಸಿದೆ. ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿನ ಸೇವೆ, ಜನಪರ ಆಡಳಿತ ಹಾಗೂ ಸಮುದಾಯ ಆಧಾರಿತ ಅಭಿವೃದ್ಧಿ ಕಾರ್ಯಗಳನ್ನು ಪರಿಗಣಿಸಿ ಅಮೆರಿಕದ American Multi Ethnic Commission ಈ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಯು.ಟಿ. ಖಾದರ್ ಅವರನ್ನು ಆಯ್ಕೆ ಮಾಡಿದೆ. ಪ್ರಶಸ್ತಿ ಸ್ವೀಕರಿಸಲು ಯು.ಟಿ. ಖಾದರ್ ಅವರು ಮಂಗಳೂರಿನಿಂದ ಅಮೆರಿಕಕ್ಕೆ ತೆರಳಿದ್ದು, ಜುಲೈ 25ರಂದು ಇಲಿನಾಯ್ಸ್ ರಾಜ್ಯದ ನೇಪರ್ವಿಲ್ನ ಯೆಲ್ಲೋ ಬಾಕ್ಸ್ ಆಡಿಟೋರಿಯಂನಲ್ಲಿ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











