Author: News Editor
-

1 ಲಕ್ಷ ಹಣದಾಸೆಗೆ ನವಜಾತ ಗಂಡು ಮಗುವನ್ನು ಮಾರಿದ ಪೋಷಕರು – ಆಶಾ ಕಾರ್ಯಕರ್ತೆಯರಿಂದ ಬಯಲಾಯ್ತು ಕೃತ್ಯ
ಹೈದರಾಬಾದ್: ಹಣದ ಆಸೆಗೆ ಹೆತ್ತವರೇ ತಮ್ಮ ನವಜಾತ ಗಂಡು ಮಗುವನ್ನು 1 ಲಕ್ಷ ರೂ.ಗೆ ಮಾರಾಟ ಮಾಡಿದ ಮನಕಲಕುವ ಘಟನೆ ತೆಲಂಗಾಣದ ಮಹಬೂಬ್ನಗರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಮಹಬೂಬ್ನಗರ ಗ್ರಾಮೀಣ ಮಂಡಲದ ತೆಲುಗುಗುಡೆಂ ಗ್ರಾಮದಲ್ಲಿ ಘಟನೆ ನಡೆದಿದೆ. ಕೇಶವುಲು ಮತ್ತು ನೀಲಮ್ಮ ಎಂಬ ದಂಪತಿ ದಿನಗೂಲಿ ಕಾರ್ಮಿಕರಾಗಿದ್ದು, ಅವರಿಗೆ ಈಗಾಗಲೇ ಒಬ್ಬಳು ಮಗಳು ಮತ್ತು ಇಬ್ಬರು ಗಂಡು ಮಕ್ಕಳು ಇದ್ದಾರೆ. ಕಳೆದ ಜೂನ್ 16ರಂದು ಮಹಬೂಬ್ನಗರ ಸರ್ಕಾರಿ ಜನರಲ್ ಆಸ್ಪತ್ರೆಯಲ್ಲಿ ನೀಲಮ್ಮ ಆರೋಗ್ಯವಂತ ಗಂಡು ಮಗುವಿಗೆ ಜನ್ಮ…
-

ಎಂ.ಡಿ.ಎಂ.ಎ, ಹೈಡ್ರೋಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ, ₹3.31 ಲಕ್ಷ ಮೌಲ್ಯದ ಸೊತ್ತು ವಶ
ಉಡುಪಿ: ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತುಗಳಾದ ಎಂಡಿಎಂಎ (MDMA) ಪೌಡರ್, ಹೈಡ್ರೋಗಾಂಜಾ ಹಾಗೂ ಎಂಡಿಎಂಎ ಟ್ಯಾಬ್ಲೆಟ್ಗಳನ್ನು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದು, ₹3,31,500 ಮೌಲ್ಯದ ಮಾದಕ ವಸ್ತುಗಳು, ಕಾರು ಸೇರಿದಂತೆ ವಿವಿಧ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಬೆಳ್ಳಿಯಪ್ಪ ಕೆ.ಯು. ಅವರ ಮಾರ್ಗದರ್ಶನದಲ್ಲಿ, ಮಲ್ಪೆ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ಅವರ ನೇತೃತ್ವದಲ್ಲಿ ಹಾಗೂ ಉಡುಪಿ ಸಂಚಾರ ಠಾಣೆಯ ಪಿಎಸ್ಐ ಮಹೇಶ್ ಟಿ.ಎಂ. ಅವರೊಂದಿಗೆ ಕಾರ್ಯಾಚರಣೆ ನಡೆಸಿದ ವಿಶೇಷ…
-

ಶಾಲೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಜಂಕ್ ಫುಡ್ ನಿಷೇಧ: ಸಚಿವ ಯು.ಟಿ. ಖಾದರ್
ಮಂಗಳೂರು : ಬರ್ಗರ್, ಪಿಝಾ ಸೇರಿದಂತೆ ಜಂಕ್ ಫುಡ್ಗಳಿಂದ ಸಾಕಷ್ಟು ರೋಗಗಳಿಗೆ ಕಾರಣವಾಗುತ್ತಿರುವುದ ರಿಂದ 10ನೆ ತರಗತಿವರೆಗಿನ ಶಾಲೆ ಹಾಗೂ ಸರಕಾರಿ ಆಸ್ಪತ್ರೆಗಳಲ್ಲಿ ಇಂತಹ ಆಹಾರ ಪದಾರ್ಥಗಳನ್ನು ನಿಷೇಧಿ ಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುತ್ತಿದೆ ಎಂದು ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ RAPCC ಯ ಸಭಾಂಗಣದಲ್ಲಿ ಶನಿವಾರ ಆಸ್ಪತ್ರೆಯ ಕುಂದುಕೊರತೆ ಹಾಗೂ ಅಭಿವೃದ್ಧಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಆಹಾರ ಸುರಕ್ಷತೆಯಲ್ಲಿ ಮಹತ್ತರವಾದ ಬದಲಾವಣೆ…
-

ಉದ್ಯಮಿಯಿಂದ 1 ಕೋಟಿ ರೂ. ಲಂಚ ಪಡೆದ ಜಿಎಸ್ಟಿ ಗುಪ್ತಚರ ಅಧಿಕಾರಿ- FIR ದಾಖಲು
ಉದ್ಯಮಿಯೊಬ್ಬರಿಂದ ಬರೋಬ್ಬರಿ 1 ಕೋಟಿ ರೂಪಾಯಿ ಲಂಚ ಪಡೆದಿರುವ ಆರೋಪ ಡೈರೆಕ್ಟರೇಟ್ ಜನರಲ್ ಆಫ್ ಜಿಎಸ್ಟಿ ಇಂಟೆಲಿಜೆನ್ಸ್ (DGGI) ಹಿರಿಯ ಅಧಿಕಾರಿಯೊಬ್ಬರ ವಿರುದ್ಧ ಕೇಳಿಬಂದಿದ್ದು, ಕೇಂದ್ರೀಯ ತನಿಖಾ ದಳ (CBI) ಭ್ರಷ್ಟಾಚಾರದ ಪ್ರಕರಣ ದಾಖಲಿಸಿದೆ. ಜಿಎಸ್ ಟಿ ಅಧಿಕಾರಿ 21 ಕೋಟಿ ರೂಪಾಯಿ ಮೌಲ್ಯದ ಜಿಎಸ್ಟಿ ವಂಚನೆ ಪ್ರಕರಣವನ್ನು ಮುಚ್ಚಿಹಾಕಲು ಮೈಸೂರಿನ ಉದ್ಯಮಿಯೊಬ್ಬರಿಂದ ಬರೋಬ್ಬರಿ 1 ಕೋಟಿ ರೂಪಾಯಿ ಲಂಚ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಬೆಂಗಳೂರಿನ ಕೇಂದ್ರ ಜಿಎಸ್ಟಿ ಘಟಕದ ಸೀನಿಯರ್ ಇಂಟೆಲಿಜೆನ್ಸ್ ಆಫೀಸರ್ ಪ್ರವೀಣ್ ಕುಮಾರ್…
-

ಮೂಡಬಿದಿರೆ: ವಿವಾಹಿತ ಮಹಿಳೆ ನೇಣು ಬಿಗಿದು ಆತ್ಮಹತ್ಯೆ..!!
ಮೂಡಬಿದಿರೆ: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ನಿನ್ನೆ(ಜು.17) ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಅರ್ಚಕ ಗುರು ಭಟ್ ಅವರ ಪತ್ನಿ ಸ್ನೇಹಾ ಎಂದು ಗುರುತಿಸಲಾಗಿದೆ.ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರಿಗೆ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ ಎಂದು ತಿಳಿದುಬಂದಿದೆ.
-

ಉಡುಪಿ: ಸೈಬರ್ ಅಧಿಕಾರಿಗಳ ಸೋಗಿನಲ್ಲಿ ನಿವೃತ್ತ ಬ್ಯಾಂಕ್ ಉದ್ಯೋಗಿಗೆ 22 ಲಕ್ಷ ರೂ. ವಂಚನೆ
ಉಡುಪಿ: ಸೈಬರ್ ಕ್ರೈಮ್, ಜಾರಿ ನಿರ್ದೇಶನಾಲಯ (ಇ.ಡಿ.) ಹಾಗೂ ಸಿಬಿಐ ಅಧಿಕಾರಿಗಳ ಹೆಸರಿನಲ್ಲಿ ಕರೆ ಮಾಡಿ ಬೆದರಿಕೆ ಹಾಕಿದ ವಂಚಕರು, ಉಡುಪಿ ತಾಲೂಕಿನ ನಿವೃತ್ತ ಬ್ಯಾಂಕ್ ಉದ್ಯೋಗಿಯೊಬ್ಬರಿಂದ 22 ಲಕ್ಷ ರೂ. ಹಣ ವರ್ಗಾಯಿಸಿಕೊಂಡು ವಂಚಿಸಿರುವ ಘಟನೆ ನಡೆದಿದೆ. ಉಡುಪಿ ತಾಲೂಕಿನ ನಿವಾಸಿ ಹಾಗೂ ನಿವೃತ್ತ ಬ್ಯಾಂಕ್ ಉದ್ಯೋಗಿ ಜಯಕರ ಕಾಮತ್ ಪಿ. (76) ಅವರು ನೀಡಿದ ದೂರಿನ ಪ್ರಕಾರ, ಜುಲೈ 10ರಂದು ಮಧ್ಯಾಹ್ನ ಸುಮಾರು 3 ಗಂಟೆಗೆ ಅವರ ಮೊಬೈಲ್ಗೆ ಅಪರಿಚಿತ ಸಂಖ್ಯೆಯಿಂದ ವಾಟ್ಸಾಪ್ ವಿಡಿಯೊ…
-

ಮಂಗಳೂರು: ನೇಪಾಳ ಮೂಲದ ಮೂವರು ಕುಖ್ಯಾತ ಕಳ್ಳರ ಬಂಧನ..!! 10 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಆಭರಣ ವಶಕ್ಕೆ
ಮಂಗಳೂರು : ನಗರದ ಮನೆಯೊಂದರಲ್ಲಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ನೇಪಾಳ ಮೂಲದ ಕುಖ್ಯಾತ ಅಂತರ್ ರಾಷ್ಟ್ರ ಮನೆಗಳ್ಳರನ್ನು ಪೊಲೀಸರು ಬಂಧಿಸಿದ್ದು, 10 ಲಕ್ಷ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ನೇಪಾಳದ ಚೈನ್ಪೂರು ಜಿಲ್ಲೆ ನಿವಾಸಿ ತಿಲಕ್ ಕುಮಾರ್ ಖಡ್ಕ ಯಾನೆ ತಿಲಕ್ ಖಡ್ಕ(36), ನೇಪಾಳದ ಬಜಂಗ್ ಜಿಲ್ಲೆ ನಿವಾಸಿ ಅಶೋಕ್ ರಾಜ್ ಯಾನೆ ಅಶೋಕ್ ಸಿಂಗ್ ಯಾನೆ ಅಶೋಕ್ ಸಿಂಗ್ ಠಾಕುರಿ(33), ನೇಪಾಳದ ಕೈಲಾಲಿ ಜಿಲ್ಲೆ ನಿವಾಸಿ ದಿಪೆಂದರ್ ರಸೈಲಿ(25) ಬಂಧಿತ ಆರೋಪಿಗಳು.ಮಂಗಳೂರು ನಗರದ, ಉರ್ವ…
-

ಮಂಗಳೂರು: ರೈಲಿನಲ್ಲಿ ಚಾಕು ತೋರಿಸಿ ಬೆದರಿಸಿ ದರೋಡೆ ಯತ್ನ!! ಓರ್ವ ಆರೋಪಿ ಅರೆಸ್ಟ್
ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ ಮಾಡಲು ಯತ್ನಿಸಿದ ಯುವಕನನ್ನು ಪ್ರಯಾಣಿಕರು ಹಿಡಿದು ಗೋವಾ ಪೊಲೀಸರಿಗೆ ಒಪ್ಪಿಸಿದ ಘಟನೆ ಮುಂಬೈ-ಮಂಗಳೂರು ಎಕ್ಸ್ಪ್ರೆಸ್ನಲ್ಲಿ ನಡೆದಿದೆ. ಮಹಾರಾಷ್ಟ್ರದ ಕರ್ಮಾಲಿ ರೈಲು ನಿಲ್ದಾಣ ಮತ್ತು ಗೋವಾದ ರೈಲು ನಿಲ್ದಾಣದ ನಡುವೆ ಈ ಘಟನೆ ನಡೆದಿದೆ. ಗುರುವಾರ, ಯುವಕ ರೈಲಿನೊಳಗೆ ಅನುಮಾನಾಸ್ಪದವಾಗಿ ಓಡಾಡುತ್ತಿರುವುದು ಕಂಡುಬಂದಿದೆ. ರೈಲ್ವೆ ಟಿಕೆಟ್ ಕಲೆಕ್ಟರ್ ಲಕ್ಷ್ಮಣ್ ಪವಾರ್ ಅವರು ಪ್ರಶ್ನಿಸಲು ಪ್ರಯತ್ನಿಸಿದಾಗ, ಶಂಕಿತ ವ್ಯಕ್ತಿ ಇದ್ದಕ್ಕಿದ್ದಂತೆ ಕೋಚ್ ಮೂಲಕ ಓಡಲು ಪ್ರಾರಂಭಿಸಿದ್ದಾನೆ. ಕುಂದಾಪುರದ ನಾಗರಾಜ್ ಪೂಜಾರಿ ಸೇರಿದಂತೆ ಮಂಗಳೂರಿಗೆ…
-

ಜಿಮ್ ಟ್ರೇನರ್ ಕಿಡ್ನಾಪ್ ಮಾಡಿ, ಹಣಕ್ಕೆ ಬೇಡಿಕೆಯಿಟ್ಟ ಕೇಸ್ : ‘KPCC’ ಪ್ರಧಾನ ಕಾರ್ಯದರ್ಶಿ ಅರೆಸ್ಟ್
ಬೆಂಗಳೂರಿನ ಶಂಕರಪುರದಲ್ಲಿ ಜಿಮ್ ಟ್ರೈನರ್ ಮಿಥುಲ್ ಅಪಹರಣ ಮಾಡಿ 5 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಂತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸಿಸಿಬಿ ಪೊಲೀಸರು ಕಾಂಗ್ರೆಸ್ ಮುಖಂಡ ನಮಿತ್ ಗೌಡ ಅಲಿಯಾಸ್ ಅಭಿಯನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತ ನಮಿತ್ ಗೌಡ ಹೆಬ್ಬಾಳ ಘಟಕದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿದ್ದು ಸಾರಿಗೆ ಸಚಿವ ಭೈರತಿ ಸುರೇಶ್ ಗೆ ಆಪ್ತನಾಗಿದ್ದಾನೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವರ ಜೊತೆಗೆ ಫೋಟೋಗೆ ಪೋಸ್ ಕೊಟ್ಟಿದ್ದಾನೆ. ಸಾಮಾಜಿಕ ಜಾಲತಾಣದಲ್ಲಿ ಫೋಟೋ…
-

ಬಂಟ್ವಾಳ: ಯುವತಿ ಹತ್ಯೆ ಪ್ರಕರಣ- ಆರೋಪಿ ಅರೆಸ್ಟ್..!!
ಬಂಟ್ವಾಳ : ಬಿಸಿರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯ ಅವರನ್ನು ಭೀಕರವಾಗಿ ಹತ್ಯೆಗೈದು ಪರಾರಿಯಾಗಿದ್ದ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ನಿವಾಸಿ ಚೇತನ್ನನ್ನು ಬಂಟ್ವಾಳ ಪೊಲೀಸರು ಬಂಧಿಸಿರುವ ಮಾಹಿತಿ ಲಭ್ಯವಾಗಿದೆ. ಆರೋಪಿಯ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿದ್ದ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ಇಂದು ಬೆಳಗ್ಗೆ ಮಂಗಳೂರಿನ ವಾಮಾಂಜೂರಿನ ಪಚ್ಚನಾಡಿಯಲ್ಲಿ ಆರೋಪಿ ಚೇತನ್ ನನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











