Author: News Editor
-

ಶೌಚಾಲಯ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆಗೆ ಕಿರುಕುಳ ನೀಡಿದ ಡೆಲಿವರಿ ಬಾಯ್
ಮಹಿಳೆಯರ ಸುರಕ್ಷತೆಯನ್ನು ಮತ್ತೊಮ್ಮೆ ಪ್ರಶ್ನಿಸುವಂತಹ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಪಾರ್ಸೆಲ್ ನೀಡಲು ಬಂದ ಇ-ಕಾಮರ್ಸ್ ಸಂಸ್ಥೆಯೊಂದರ ಡೆಲಿವರಿ ಏಜೆಂಟ್, ಶೌಚಾಲಯ ಬಳಸುವ ನೆಪದಲ್ಲಿ ಮಹಿಳೆಯೊಬ್ಬರ ಮನೆಗೆ ಬಲವಂತವಾಗಿ ನುಗ್ಗಿ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಂತ್ರಸ್ತ ಮಹಿಳೆ ಸಾಮಾಜಿಕ ಜಾಲತಾಣದ ಮೂಲಕ ತಮಗಾದ ಭೀಕರ ಅನುಭವವನ್ನು ಹಂಚಿಕೊಂಡಿದ್ದಾರೆ. ಈ ಹಿನ್ನೆಲೆ ಫ್ಲಿಪ್ಕಾರ್ಟ್ ಡೆಲಿವರಿ ಬಾಯ್ ವಿಜಯ್ ಮಲ್ಲಿಕಾರ್ಜುನ್ ಕಾಮತ್ನನ್ನು ಮಾರತಹಳ್ಳಿ ಪೊಲೀಸರು ತಕ್ಷಣವೇ ಬಂಧಿಸಿದ್ದಾರೆ. ಸಂತ್ರಸ್ತ ಮಹಿಳೆಯ ಹೇಳುವಂತೆ ಪಾರ್ಸೆಲ್ ತಲುಪಿಸಲು…
-

ದ.ಕ.ಜಿಲ್ಲಾ ನೂತನ ಖಾಝಿಯಾಗಿ ಪಾಣಕ್ಕಾಡ್ ಸೈಯ್ಯದ್ ನಾಸರ್ ಅಬ್ದುಲ್ ಹಯ್ಯ ಶಿಹಾಬುದ್ದೀನ್ ತಂಙಳ್
ಮಂಗಳೂರು: ಅಲ್ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ರ ನಿಧನದಿಂದಾಗಿ ತೆರವಾದ ದ.ಕ.ಜಿಲ್ಲಾ ಖಾಝಿ ಸ್ಥಾನಕ್ಕೆ ಪಾಣಕ್ಕಾಡ್ ಸೈಯ್ಯದ್ ನಾಸರ್ ಅಬ್ದುಲ್ ಹಯ್ಯ ಶಿಹಾಬುದ್ದೀನ್ ತಂಙಳ್ ಬಾ-ಅಲವಿ ಅವರನ್ನು ಆಯ್ಕೆ ಮಾಡಿರುವುದಾಗಿ ಮಂಗಳೂರಿನ ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಮತ್ತು ಈದ್ಗಾ ಮಸೀದಿಯ ಆಡಳಿತ ಸಮಿತಿಯ ಅಧ್ಯಕ್ಷ ಯೆನೆಪೋಯ ಅಬ್ದುಲ್ಲಾ ಕುಂಞಿ ಶನಿವಾರ ಅಧಿಕೃತವಾಗಿ ಘೋಷಿಸಿದರು. ಕೇರಳದ ಹಿರಿಯ ಧಾರ್ಮಿಕ ವಿದ್ವಾಂಸರಾಗಿರುವ ಪಾಣಕ್ಕಾಡ್ ಸೈಯ್ಯದ್ ನಾಸರ್ ಅಬ್ದುಲ್ ಹಯ್ಯ ಶಿಹಾಬುದ್ದೀನ್ ತಂ ಙಳ್ ಕೆಲವು ದಿನಗಳ ಹಿಂದೆಯೇ ದ.ಕ.ಜಿಲ್ಲಾ…
-

ಯುವತಿಯನ್ನು ಪ್ರೀತಿಸುವ ವಿಚಾರಕ್ಕೆ ಗಲಾಟೆ : ಸ್ನೇಹಿತನಿಗೆ ಚಾಕು ಇರಿದು ಹಲ್ಲೆ, ಯುವಕ ಅರೆಸ್ಟ್!
ಯುವತಿ ವಿಚಾರಕ್ಕೆ ವಾಗುವ ಹಾಗೆ ಯುವಕನಿಗೆ ಚಾಕು ಇರಿದಿರುವ ಘಟನೆ ವರದಿಯಾಗಿದೆ. ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ಈ ಒಂದು ಘಟನೆ ನಡೆದಿದೆ. ಚಾಕುವಿನಿಂದ ಇರಿದು ಶರತ್ (21) ಮೇಲೆ ಪ್ರಜ್ವಲ್ ಎಂಬ ಯುವಕ ಭೀಕರವಾಗಿ ಹಲ್ಲೆ ಮಾಡಿದ್ದಾನೆ. ಶರತ್ ಹಾಗೂ ಪ್ರಜ್ವಲ್ ಇಬ್ಬರು ಒಂದೇ ಯುವತಿಯನ್ನು ಪ್ರೀತಿಸುತ್ತಿದ್ದರು ಇದೇ ವಿಚಾರಕ್ಕೆ ಕಳೆದ ಎರಡು ದಿನಗಳಿಂದ ಇಬ್ಬರ ನಡುವೆ ಗಲಾಟೆ ಆಗಿದೆ ಇಂದು ಬೆಳಿಗ್ಗೆ ಪ್ರಜ್ವಲ್ ಅನ್ನು ಶರತ್ ಮಾತನಾಡಿಸಲು ಬಂದಿದ್ದ ಈ ವೇಳೆ ಇಬ್ಬರ ನಡುವೆ…
-

ಸ್ಟಾಕ್ ಮಾರ್ಕೆಟ್ ನಲ್ಲಿ ಲಾಸ್ : ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆಗೆ ಶರಣು!
ಷೇರು ಮಾರುಕಟ್ಟೆಯಲ್ಲಿ (ಸ್ಟಾಕ್ ಮಾರ್ಕೆಟ್) ಭಾರಿ ಪ್ರಮಾಣದ ಹಣ ಕಳೆದುಕೊಂಡಿದ್ದಕ್ಕೆ ಮನನೊಂದ ಯುವಕನೊಬ್ಬ ತನಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಧೃತಿಗೆಡಿಸುವ ಘಟನೆ ಕೊಡಗು ಜಿಲ್ಲೆಯ ನಾಪೋಕ್ಲು ಸಮೀಪದ ಕುಂಬಳದಾಳು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಯುವಕನನ್ನು ಕವನ್ (24) ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಗಳ ಪ್ರಕಾರ, ಕವನ್ ಇತ್ತೀಚಿನ ದಿನಗಳಲ್ಲಿ ಸ್ಟಾಕ್ ಮಾರ್ಕೆಟ್ನಲ್ಲಿ ಹಣ ಹೂಡಿಕೆ ಮಾಡಿದ್ದರು ಎನ್ನಲಾಗಿದೆ. ಆದರೆ ಅದರಲ್ಲಿ ನಿರೀಕ್ಷಿತ ಮಟ್ಟದ ಲಾಭ ಸಿಗದೆ ಭಾರಿ ನಷ್ಟ ಅನುಭವಿಸಿದ್ದರು. ಇದರಿಂದಾಗಿ…
-

ಷೇರು ಮಾರುಕಟ್ಟೆಯಲ್ಲಿ ಲಾಭದ ಆಮಿಷ ಒಡ್ಡಿ ವಂಚನೆ: ಮುಂಬೈಯಲ್ಲಿ ಉಡುಪಿ ಮೂಲದ ಮಹಿಳೆ ಅರೆಸ್ಟ್
ಷೇರು ಮಾರುಕಟ್ಟೆ ಹೂಡಿಕೆಯಿಂದ ಭಾರೀ ಲಾಭದ ಭರವಸೆ ನೀಡಿ ಜನರಿಗೆ ವಂಚಿಸಿದ ಆರೋಪದ ಮೇಲೆ ಉಡುಪಿ ಕೊಳಲಗಿರಿಯ ಕುಕ್ಕಿಕಟ್ಟೆಯ ದೀಪಿಕಾ ಮನೋಜ್ ಶೆಟ್ಟಿ ಎಂಬ ಮಹಿಳೆಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿರುದ್ಧ ಚೆಕ್ ಬೌನ್ಸ್ ಮತ್ತು ಆರ್ಥಿಕ ವಂಚನೆಗೆ ಸಂಬಂಧಿಸಿದ ಆರೋಪಗಳೂ ಇವೆ. ಸದ್ಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ದೂರಿನ ಪ್ರಕಾರ, ಆರೋಪಿಯು ಹೂಡಿಕೆಯ ಮೇಲೆ 10% ರಿಟರ್ನ್ ನೀಡುವುದಾಗಿ ಭರವಸೆ ನೀಡಿ ಒಬ್ಬ ಮಹಿಳೆ ಮತ್ತು ಆಕೆಯ ಸಹೋದರನನ್ನು ಷೇರು ಮಾರುಕಟ್ಟೆಯಲ್ಲಿ ಹಣ…
-

1 ಲಕ್ಷ ರೂ. ಲಂಚ ಸ್ವೀಕರಿಸಿದ್ದ ಭ್ರಷ್ಟ ತಹಶೀಲ್ದಾರ್ ಗೆ 4 ವರ್ಷ ಜೈಲು ಶಿಕ್ಷೆ, 20 ಸಾವಿರ ರೂ. ದಂಡ.!
ಲಂಚದ ಹಣದೊಂದಿಗೆ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದ ಕಲಬುರಗಿ ಅಫಜಲಪುರದ ಮಾಜಿ ತಹಶೀಲ್ದಾರ್ ಶಶಿಕಲಾ ಪಾದಗಟ್ಟಿ ಹಾಗೂ ಅವರಿಗೆ ಸಹಕರಿಸಿದ್ದ ಶಿವಾನಂದ ಜಮಖಂಡಿ ಎಂಬುವವರಿಗೆ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ವಿಶೇಷ ನ್ಯಾಯಾಲಯವು 4 ವರ್ಷಗಳ ಜೈಲು ಶಿಕ್ಷೆ ಹಾಗೂ ತಲಾ 20 ಸಾವಿರ ರೂಪಾಯಿ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಏನಿದು ಪ್ರಕರಣ?ಕಳೆದ 2017ರಲ್ಲಿ ಅಫಜಲಪುರ ತಾಲ್ಲೂಕಿನ ಕರಜಗಿ ನಾಡ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಡೇಟಾ ಎಂಟ್ರಿ ಆಪರೇಟರ್ ಆಗಿದ್ದ ಶಿವಲಿಂಗಯ್ಯ ಎಂಬುವವರ…
-

ಮಂಗಳೂರು:- ಬಸ್ನಲ್ಲಿ ಯುವತಿಯರಿಗೆ ಗುಪ್ತಾಂಗ ತೋರಿಸಿ ವಿಕೃತಿ- ಕಂಡಕ್ಟರ್ ಅರೆಸ್ಟ್
ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರಿಗೆ ಬಸ್ನಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಖಾಸಗಿ ಬಸ್ನ ಕಂಡಕ್ಟರ್ನನ್ನು ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿಯನ್ನು ಇರ್ಫಾನ್ (32), ತಂದೆ ಅಬುಸಾಲಿ, ಮೂಲ ನಿವಾಸಿ ಕಲ್ಲೇರಿ ಮನೆ, ಉಪ್ಪಿನಂಗಡಿ, ಪ್ರಸ್ತುತ ಅಬುಬಕರ್ ಅವರ ಬಾಡಿಗೆ ಮನೆಯ ನಿವಾಸಿ, ಕರ್ವೇಲು, ಉಪ್ಪಿನಂಗಡಿ, ಎಂದು ಗುರುತಿಸಲಾಗಿದೆ. ಆರೋಪಿ ಮಂಗಳೂರು–ವಿಟ್ಲ ಮಾರ್ಗದ ಖಾಸಗಿ ಬಸ್ನಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದಾನೆ. ಪೊಲೀಸರ ಮಾಹಿತಿ ಪ್ರಕಾರ, ಜುಲೈ 9,…
-

ಮಂಗಳೂರು: ಅಕ್ರಮವಾಗಿ ನೆಲೆಸಿದ್ದ 8 ಬಾಂಗ್ಲಾದೇಶಿ ಪ್ರಜೆಗಳು ಪತ್ತೆ..!!ಗಡೀಪಾರಿಗೆ ಪ್ರಕ್ರಿಯೆ
ಮಂಗಳೂರು: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಬಾಂಗ್ಲಾದೇಶದ ಪ್ರಜೆಗಳು ಅಕ್ರಮವಾಗಿ ವಾಸ್ತವ್ಯವಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಮಂಗಳೂರು ನಗರ ಪೊಲೀಸರು ಜುಲೈ 9, 2026ರಂದು ದಾಳಿ ನಡೆಸಿದರು. ದಾಳಿಯ ವೇಳೆ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ ಒಟ್ಟು 54 ಕಾರ್ಮಿಕರ ಗುರುತಿನ ದಾಖಲೆಗಳನ್ನು ಪರಿಶೀಲಿಸಲಾಯಿತು. ಸುದೀರ್ಘ ಪರಿಶೀಲನೆಯ ಬಳಿಕ ಅವರಲ್ಲಿ ಎಂಟು ಮಂದಿ ಬಾಂಗ್ಲಾದೇಶದ ಪ್ರಜೆಗಳು ಅಕ್ರಮವಾಗಿ ಭಾರತವನ್ನು ಪ್ರವೇಶಿಸಿ ವಾಸ್ತವ್ಯ ಹೂಡಿರುವುದು ದೃಢಪಟ್ಟಿತು. ಬಂಧಿತರನ್ನು ಈ ಕೆಳಕಂಡಂತೆ ಗುರುತಿಸಲಾಗಿದೆ: ಪೊಲೀಸರ…
-

ಪುತ್ತೂರು: ದರೋಡೆ ಪ್ರಕರಣ- 41 ಬಾರಿ ದಸ್ತಗಿರಿ ವಾರೆಂಟ್ ಅದೇಶವಾಗಿದ್ದ ಆರೋಪಿಯ ಬಂಧನ
ಪುತ್ತೂರು: 2017ರಲ್ಲಿ ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 2017ರ ಡಿಸೆಂಬರ್ 22ರಂದು ಮೂವರು ಅಪರಿಚಿತರು ಮನೆಯೊಂದಕ್ಕೆ ನುಗ್ಗಿ ಪಿಸ್ತೂಲ್ ಹಾಗೂ ಚೂರಿ ತೋರಿಸಿ ಮನೆಯವರನ್ನು ಬೆದರಿಸಿ ಸುಮಾರು ₹2,88,000 ಅಂದಾಜು ಮೌಲ್ಯದ ಚಿನ್ನಾಭರಣ ಹಾಗೂ ₹60,0000 ನಗದು ದರೋಡೆ ಮಾಡಿದ್ದರು. ಈ ಸಂಬಂಧ ಪುತ್ತೂರು ನಗರ ಪೊಲೀಸ್…
-

ಮಂಗಳೂರು: ಬಿಜಿ ಟ್ರೇಡಿಂಗ್ ಆ್ಯಪ್ನಲ್ಲಿ ಹಣ ಹೂಡಿಕೆ ಮಾಡಿದರೆ 100 ದಿನದಲ್ಲಿ ಡಬಲ್..!! 6.42 ಲಕ್ಷ ರೂ. ಕಳೆದು ಕೊಂಡ ಯುವತಿ
ಮಂಗಳೂರು: ಟ್ರೇಡಿಂಗ್ ಆ್ಯಪ್ನಲ್ಲಿ ಹಣ ಹೂಡಿಕೆ ಮಾಡಿದ ಯುವತಿಯು ಬಳಿಕ 6.42 ಲಕ್ಷ ರೂ. ಕಳೆದು ಕೊಂಡಿರುವ ಬಗ್ಗೆ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರ ಯುವತಿ:– ತಾನು ಮಂಗಳೂರಿನಲ್ಲಿ ಸಾಫ್ಟ್ವೇರ್ ಕಂಪೆನಿಯಲ್ಲಿ ಡೆವಲಪರ್ ಆಗಿ ಕೆಲಸ ಮಾಡಿಕೊಂಡಿರುವೆ. ಇತ್ತೀಚೆಗೆ ಪರಿಚಯದ ವ್ಯಕ್ತಿಯೊಬ್ಬರು ವಾಟ್ಸ್ಆ್ಯಪ್ ಸಂದೇಶ ಕಳುಹಿಸಿ ಬಿಜಿ ಟ್ರೇಡಿಂಗ್ ಆ್ಯಪ್ನಲ್ಲಿ ಹಣ ಹೂಡಿಕೆ ಮಾಡಿದರೆ 100 ದಿನದಲ್ಲಿ ದುಪ್ಪಟ್ಟು ಆಗುವುದಾಗಿ ತಿಳಿಸಿದ್ದರು. ಅದರಂತೆ ತಾನು ಆ್ಯಪ್ ಡೌನ್ಲೋಡ್ ಮಾಡಿ ಅಕೌಂಟ್ ಕ್ರಿಯೇಟ್ ಮಾಡಿದ್ದೆ. ಹಾಗೇ ಫೆ.28ರಿಂದ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











