Author: News Editor
-

ಸರ್ಕಾರಿ ಅಧಿಕಾರಿಗೆ ವಿವಸ್ತ್ರಗೊಳಿಸಿ ಹಲ್ಲೆ ಮತ್ತು ಬ್ಲಾಕ್‌ಮೇಲ್: ರೌಡಿಶೀಟರ್ ಅರೆಸ್ಟ್
ಸರ್ಕಾರಿ ಅಧಿಕಾರಿಯೊಬ್ಬರ ಮೇಲೆಯೇ ನಡೆದ ಹಲ್ಲೆ ಮತ್ತು ಬ್ಲಾಕ್‌ಮೇಲ್ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಚನ್ನಪಟ್ಟಣದ ತಹಶೀಲ್ದಾರ್ ಬಿ.ಎನ್.ಗಿರೀಶ್ ಅವರನ್ನು ಪ್ರಜ್ಞೆ ತಪ್ಪಿಸಿ, ವಿವಸ್ತ್ರಗೊಳಿಸಿ, ವಿಡಿಯೋ ಚಿತ್ರೀಕರಿಸಿಕೊಂಡು 10 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, “ರಾಜ್ಯದಲ್ಲಿ ಸರ್ಕಾರಿ ಅಧಿಕಾರಿಗಳಿಗೂ ರಕ್ಷಣೆ ಇಲ್ಲವೇ?” ಎಂಬ ಗಂಭೀರ ಪ್ರಶ್ನೆಯನ್ನು ಹುಟ್ಟುಹಾಕಿದೆ. ಜೂನ್ 28ರಂದು ಚನ್ನಪಟ್ಟಣದಲ್ಲಿರುವ ತಹಶೀಲ್ದಾರ್ ಅವರ ಅಧಿಕೃತ ವಸತಿ ಗೃಹಕ್ಕೆ ಕೆಲಸದ ನೆಪದಲ್ಲಿ ಸ್ನೇಹಿತರೊಂದಿಗೆ ಬಂದಿದ್ದ ರೌಡಿಶೀಟರ್ ಹಾಗೂ ಆತನ ಗ್ಯಾಂಗ್…
-

ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ : ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ
ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರು ಭಾರಿ ಶಾಕ್ ನೀಡಿದ್ದಾರೆ. ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರು, ರಾಯಚೂರು, ಶಿವಮೊಗ್ಗ ಹಾಗೂ ಧಾರವಾಡ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಂದು ಮುಂಜಾನೆಯೇ ಏಕಕಾಲಕ್ಕೆ ದಾಳಿ ನಡೆಸಿ, ತೀವ್ರ ಪರಿಶೀಲನೆ ಕೈಗೊಂಡಿದ್ದಾರೆ. ಬೆಂಗಳೂರು ಹಾಗೂ ಬೆಂಗಳೂರು ದಕ್ಷಿಣ ವ್ಯಾಪ್ತಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ. ಕುಂಬಳಗೂಡು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಬಿ.ಕೆ. ತಿಮ್ಮಯ್ಯ ಅವರ ಮನೆ ಮತ್ತು ಕಚೇರಿಗಳ ಮೇಲೆ…
-

ವಯನಾಡಿನಲ್ಲಿ ಭೂಕುಸಿತ: ಇಬ್ಬರು ಕಾರ್ಮಿಕರು ಜೀವಂತ ಸಮಾಧಿ- 30 ಮಂದಿ ನಾಪತ್ತೆ
ಕೇರಳ: 2 ವರ್ಷಗಳ ಹಿಂದೆ ಕೇರಳದ ವಯನಾಡಿನ ಚೂರಲ್ಮಲದಲ್ಲಿ ಸಂಭವಿಸಿದ್ದ ಭೂಕುಸಿತ ನೂರಾರು ಜನರ ಜೀವವನ್ನ ಆಹುತಿ ಪಡೆದುಕೊಂಡಿತ್ತು. ಇದೀಗ ಅಂತಹದ್ದೇ ದುರಂತ ವಯನಾಡಿನಲ್ಲಿ ಮತ್ತೆ ಸಂಭವಿಸಿದ್ದು, ವಯನಾಡಿನ ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ ಸೇತುವೆ ಬಳಿ ಭೂಕುಸಿತ ಸಂಭವಿಸಿದೆ. ಇದರಿಂದ ಇಬ್ಬರು ಕಾರ್ಮಿಕರು ಜೀವಂತ ಸಮಾಧಿಯಾಗಿದ್ದಾರೆ. ಸುಮಾರು 20 ಮಂದಿ ಅವಶೇಷಗಳ ಅಡಿಯಲ್ಲೇ ಸಿಲುಕಿಕೊಂಡಿದ್ದು, 30 ಮಂದಿ ನಾಪತ್ತೆಯಾಗಿದ್ದಾರೆ. ಇದರಿಂದ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ…
-

ಕುಮಾರ ಸ್ವಾಮಿ, ರಾಮ ನಗರ ಮುಸ್ಲಿಮ್ ಎಸ್.ಐ.ಆರ್ ಮಾತಿಗೆ ಮೊದಲು, ಬಾಂಗ್ಲಾ ಮಾ.ಪ್ರ. ಶೇಕ್ ಹಸೀನಾ ಎಲ್ಲಿದ್ದಾರೆ ಎಂದು ಹೇಳಲಿ: ಕೆ.ಅಶ್ರಫ್.
ಮಂಗಳೂರು: ಕೇಂದ್ರ ಸಚಿವ ಎಚ್. ಡಿ. ಕುಮಾರ ಸ್ವಾಮಿ ಇತ್ತೀಚೆಗೆ ರಾಮ ನಗರ ಕ್ಷೇತ್ರದ ಮಸೀದಿಯ ಸಮುದಾಯ ಸಭಾಂಗಣದಲ್ಲಿ ನಡೆದ ಮುಸ್ಲಿಮ್ ಸಮುದಾಯದ ಎಸ್.ಐ.ಆರ್ ಪ್ರಕ್ರಿಯೆಯಲ್ಲಿ ಬಾಂಗ್ಲಾ ದೇಶದ ಪ್ರಜೆಗಳನ್ನು ಮತದಾರದ ಪಟ್ಟಿಯಲ್ಲಿ ಸೇರ್ಪಡಿಸುತ್ತಿದ್ದಾರೆ ಎಂದು ಸುಳ್ಳು ಆರೋಪದ ಹೇಳಿಕೆ ನೀಡಿರುತ್ತಾರೆ. ಕುಮಾರ ಸ್ವಾಮಿಯವರು ರಾಮನಗರ ಕ್ಷೇತ್ರದ ಈ ಹಿಂದಿನ ಅಭ್ಯರ್ಥಿ ಕೂಡ ಹೌದು. ಈ ಕ್ಷೇತ್ರದಲ್ಲಿ ಈ ಹಿಂದೆ ಮುಸ್ಲಿಮ್ ಅಲ್ಪ ಸಂಖ್ಯಾತರ ಮತ ಪಡೆದು ಹಲವು ಬಾರಿ ಶಾಸಕ, ಸಚಿವರಾದ ಕುಮಾರಸ್ವಾಮಿ ಯಾದಿ,ದೇವೇಗೌಡರ ಕುಟುಂಬಕ್ಕೆ…
-

ಬೆಳ್ತಂಗಡಿ: ವಾರಂಟ್ ಬಂಧನ ಪ್ರಕರಣದಲ್ಲಿ ಲೋಪ- ಹೆಡ್ ಕಾನ್‌ಸ್ಟೆಬಲ್ ಅಮಾನತು
ಬೆಳ್ತಂಗಡಿ: ವಾರಂಟ್ ಬಂಧನ ಪ್ರಕರಣದಲ್ಲಿ ಗಂಭೀರ ಕಾರ್ಯವಿಧಾನದ ಲೋಪಗಳ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ನಿಯೋಜಿಸಲಾದ ಹೆಡ್ ಕಾನ್‌ಸ್ಟೆಬಲ್ ಹೆಚ್‌ಸಿ 404 ಮಾಲತೇಶ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಅಧಿಕೃತ ಮೂಲಗಳ ಪ್ರಕಾರ, ಪೊಲೀಸ್ ಸಿಬ್ಬಂದಿ ವಾರಂಟ್ ಆರೋಪಿಯನ್ನು ಬಂಧಿಸಿದ್ದರು ಆದರೆ ಕಾನೂನಿನ ಪ್ರಕಾರ ಮುಂದಿನ ಕಾನೂನು ಕ್ರಮಗಳಿಗಾಗಿ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸದೆ ಆರೋಪಿ ವಿರುದ್ದ ಜಾರಿಯಾಗಿರುವ ವಾರೆಂಟನ್ನು ರಿ-ಕಾಲ್ ಮಾಡಿಸಿಕೊಳ್ಳಲು ಸಹಕರಿಸಿರುವುದು ಕಂಡುಬಂದಿದ್ದು ಪ್ರಕರಣದ ವಿಚಾರಣೆಯ ಸಮಯದಲ್ಲಿ ಆಪಾದಿತ ಅಕ್ರಮಗಳು ಬೆಳಕಿಗೆ ಬಂದಿದ್ದು, ಇಲಾಖಾ ಕ್ರಮ…
-

PDO ಕಿರುಕುಳ ಆರೋಪ : ಡೆತ್ ನೋಟ್ ಬರೆದಿಟ್ಟು ಬಿಲ್ ಕಲೆಕ್ಟರ್ ಆತ್ಮಹತ್ಯೆ
ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯ (PDO) ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಒಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬಿಳಿಚೋಡು ಗ್ರಾಮ ಪಂಚಾಯಿತಿಯ ಬಿಲ್ ಕಲೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಶಿವಪ್ಪ (51) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಬಿಳಿಚೋಡು ಗ್ರಾಮದ ತಮ್ಮ ನಿವಾಸದಲ್ಲಿ ಶಿವಪ್ಪ ಅವರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೂ ಮುನ್ನ ಶಿವಪ್ಪ ಅವರು ಡೆತ್ ನೋಟ್ ಬರೆದಿಟ್ಟಿದ್ದಾರೆ ಎನ್ನಲಾಗಿದ್ದು, ಅದರಲ್ಲಿ…
-

ಉಡುಪಿ: ಸಂಜೀವಿನಿ ಒಕ್ಕೂಟಕ್ಕೆ 23 ಲಕ್ಷ ರೂ. ವಂಚನೆ..!! ದಂಪತಿ ಬಂಧನ
ಉಡುಪಿ: ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಹಣವನ್ನು ದುರ್ಬಳಕೆ ಮಾಡಿಕೊಂಡು ಸುಮಾರು ₹23 ಲಕ್ಷ ವಂಚನೆ ಎಸಗಿದ ಆರೋಪದಡಿ ಮುಖ್ಯ ಪುಸ್ತಕ ಬರಹಗಾರ್ತಿ ಹಾಗೂ ಆಕೆಯ ಪತಿಯನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸುಗಂಧಿ ಹಾಗೂ ಆಕೆಯ ಪತಿ ಸಂತೋಷ್ ಎಂದು ಗುರುತಿಸಲಾಗಿದೆ. ಇವರು ಪೆರ್ಡೂರು ಪದ್ಮ ಕಮಲ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟ (ರಿ.)ದಲ್ಲಿ ನಡೆದಿರುವ ಹಣಕಾಸು ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಸುಗಂಧಿ ಅವರು ಒಕ್ಕೂಟದ ಮುಖ್ಯ…
-

ಬಂಟ್ವಾಳ: ವಿದ್ಯಾರ್ಥಿನಿಯ ಮೇಲೆ ಚೂರಿ ಇರಿತ ಪ್ರಕರಣ- ಆರೋಪಿ ಪೊಲೀಸ್ ಠಾಣೆಗೆ ಶರಣು
ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮೊಂತಿಮಾರು ಬಸ್ ನಿಲ್ದಾಣದ ಬಳಿ ಸೋಮವಾರ ಬೆಳಿಗ್ಗೆ ಸುಮಾರು 8.45 ಗಂಟೆಗೆ 17 ವರ್ಷದ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಕಾಲೇಜಿಗೆ ತೆರಳಲು ಬಸ್‌ಗಾಗಿ ಕಾಯುತ್ತಿದ್ದ ವೇಳೆ ಬಂಟ್ವಾಳದ ಮಂಚಿ ನಿವಾಸಿ ಮೊಹಮ್ಮದ್ ಜವ್ವಾರ್ (28) ಎಂಬಾತ ವಿದ್ಯಾರ್ಥಿನಿಯ ತಲೆ ಹಾಗೂ ಕೈಗೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಬಳಿಕ ಆರೋಪಿ ಸ್ವತಃ ಬಂಟ್ವಾಳ ಗ್ರಾಮಾಂತರ ಪೊಲೀಸ್…
-

ಮಂಗಳೂರು: ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ- 14 ಆರೋಪಿಗಳ ಫೋಟೊ ಬಿಡುಗಡೆ..!! ಮಾಹಿತಿ ನೀಡುವವರಿಗೆ ಬಹುಮಾನ
ಮಂಗಳೂರು: ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ; ಪಾಂಡಿಚೇರಿ ಮೂಲದ ಗಂಗಾಧರನ್ ಮಾಸ್ಟರ್ ಮೈಂಡ್, 14 ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಮಂಗಳೂರು ಪೊಲೀಸರು ಚಿನ್ನದ ವ್ಯಾಪಾರಿಯನ್ನು ದರೋಡೆಗೈದ ಪ್ರಕರಣದಲ್ಲಿ ಮಂಗಳೂರು ಪೊಲೀಸರು ಆರೋಪಿಗಳ ಗುರುತು ಪತ್ತೆಹಚ್ಚಿದ್ದು ಬಂಧನಕ್ಕಾಗಿ ಕೇರಳ ಮತ್ತು ಕೊಡಗಿನಲ್ಲಿ ಬಲೆ ಬೀಸಿದ್ದಾರೆ. ಇದೇ ವೇಳೆ, ಕೃತ್ಯದಲ್ಲಿ ಭಾಗಿಯಾದ ನಟೋರಿಯಸ್ ಆರೋಪಿಗಳ ಫೋಟೋ ಬಿಡುಗಡೆ ಮಾಡಿದ್ದು ಇವರ ಪತ್ತೆಗಾಗಿ ಸಾರ್ವಜನಿಕರ ಸಹಾಯ ಯಾಚಿಸಿದ್ದಾರೆ. ಪಾಂಡಿಚೇರಿ ಮೂಲದ ಶಿಬಿನ್ ಗಂಗಾಧರನ್ ದರೋಡೆ ಪ್ರಕರಣದ ಮಾಸ್ಟರ್…
-

ಬಂಟ್ವಾಳ: ಬಸ್‌ಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಚೂರಿ ಇರಿತ..!!
ಬಂಟ್ವಾಳ: ತಾಲೂಕಿನ ಇರಾ ಗ್ರಾಮದಲ್ಲಿ ಕಾಲೇಜಿಗೆ ತೆರಳಲು ಬಸ್‌ಗಾಗಿ ಕಾಯುತ್ತಿದ್ದ ಪಿಯುಸಿ ವಿದ್ಯಾರ್ಥಿನಿಯ ಮೇಲೆ ಯುವಕನೊಬ್ಬ ಚೂರಿಯಿಂದ ದಾಳಿ ನಡೆಸಿದ ಘಟನೆ ನಡೆದಿದೆ. ಸ್ಥಳೀಯ ವ್ಯಾಪಾರಿ ಜವ್ವರ್ (28) ಎಂಬಾತ ವಿದ್ಯಾರ್ಥಿನಿಯ ಮೇಲೆ ಏಕಾಏಕಿ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಪ್ರೀತಿ ವಿಚಾರವೇ ದಾಳಿಗೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಘಟನೆಯಲ್ಲಿ ವಿದ್ಯಾರ್ಥಿನಿಯ ಕೈಗೆ ಗಾಯವಾಗಿದ್ದು, ತೀವ್ರ ರಕ್ತಸ್ರಾವಗೊಂಡ ಹಿನ್ನೆಲೆಯಲ್ಲಿ ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ದಾಳಿಯ ಬಳಿಕ ಬಸ್ ನಿಲ್ದಾಣದಲ್ಲಿ ರಕ್ತದ ಗುರುತುಗಳು ಕಂಡುಬಂದಿವೆ.…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











