Author: News Editor
-

ಶಾಲಾ ಬಸ್‌ನಲ್ಲಿ ಮಕ್ಕಳು ಮನೆ ತಲುಪುವವರೆಗೂ ಶಾಲೆಯದ್ದೇ ಜವಾಬ್ದಾರಿ : ಹೈಕೋರ್ಟ್ ಮಹತ್ವದ ಆದೇಶ
ಬೆಂಗಳೂರು: ಶಾಲಾ ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಅತ್ಯಂತ ಮಹತ್ವದ ತೀರ್ಪೊಂದನ್ನು ನೀಡಿದೆ. ಶಾಲಾ ಬಸ್ ಕೇವಲ ಶಾಲಾ ಆವರಣದಲ್ಲಿದ್ದಾಗ ಮಾತ್ರವಲ್ಲ, ಮಗು ಬಸ್ ಹತ್ತಿದಾಗಿನಿಂದ ಹಿಡಿದು ಸಂಜೆ ಸುರಕ್ಷಿತವಾಗಿ ಪೋಷಕರ ಕೈ ಸೇರುವವರೆಗೂ ಮಗುವಿನ ಸಂಪೂರ್ಣ ರಕ್ಷಣೆಯ ಜವಾಬ್ದಾರಿ ಶಾಲಾ ಆಡಳಿತ ಮಂಡಳಿಯದ್ದೇ ಆಗಿರುತ್ತದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಶಾಲಾ ಬಸ್‌ನಲ್ಲಿ ನಡೆದ ಅಪಘಾತವೊಂದರಲ್ಲಿ ನಾಲ್ಕನೇ ತರಗತಿಯ ವಿದ್ಯಾರ್ಥಿ ಕಣ್ಣು ಕಳೆದುಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಖಾಸಗಿ ಶಾಲೆಯೊಂದರ ಆಡಳಿತ ಮಂಡಳಿ ತನ್ನ ವಿರುದ್ಧದ ಕ್ರಿಮಿನಲ್…
-

ದ.ಕ ಜಿಲ್ಲೆಯಲ್ಲಿ ಭೂಕುಸಿತದ ಅಪಾಯ ಮತ್ತಷ್ಟು ತೀವ್ರ: 88 ಪ್ರದೇಶಗಳು ಡೇಂಜರ್ ಝೋನ್,
ಮಂಗಳೂರು: ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆಯ ನಡುವೆಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೂಕುಸಿತದ ಅಪಾಯ ಮತ್ತಷ್ಟು ತೀವ್ರಗೊಂಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಜಿಲ್ಲಾಡಳಿತವು ಜಿಲ್ಲೆಯ 88 ಪ್ರದೇಶಗಳನ್ನು ಭೂಕುಸಿತ ಸಂಭವಿಸುವ ಅತಿ ಹೆಚ್ಚು ಅಪಾಯದ ವಲಯಗಳಾಗಿ (Danger Zone) ಗುರುತಿಸಿದ್ದು, ಸಾರ್ವಜನಿಕರು ಮಳೆಗಾಲದಲ್ಲಿ ಅತ್ಯಂತ ಎಚ್ಚರಿಕೆಯಿಂದ ಇರಬೇಕೆಂದು ಸೂಚಿಸಿದೆ. ಅಧಿಕೃತ ಮಾಹಿತಿಯಂತೆ, ಕಳೆದ ಐದು ವರ್ಷಗಳಲ್ಲಿ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತ ಪ್ರಕರಣಗಳಲ್ಲಿ 17 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಪ್ರಸಕ್ತ ವರ್ಷದಲ್ಲಿಯೂ ಈಗಾಗಲೇ ಮೂರು ಮಂದಿ ಮೃತಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ. ಅಪಾಯದ…
-

ಬೆಳ್ತಂಗಡಿ: 27 ವರ್ಷದ ಯುವಕನ ಮೃತದೇಹ ಪತ್ತೆ..!! ಕೊಲೆ ಶಂಕೆ
ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಸಮೀಪ ಅನುಮಾನಾಸ್ಪದ ರೀತಿಯಲ್ಲಿ 27 ವರ್ಷದ ಯುವಕನ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ತಾಲೂಕಿನ ಕುವೆಟ್ಟು ಗ್ರಾಮದ ಶಕ್ತಿನಗರ ಸಮೀಪ ಇರುವ ಯನೋಪೊಯೋ ಖಾಸಗಿ ವಿದ್ಯುತ್ ಸಬ್‌ಸ್ಟೇಷನ್ ಜಾಗದಲ್ಲಿ ಮೃತದೇಹ ಪತ್ತೆಯಾಗಿದೆ. ಮೃತನನ್ನು ತಣ್ಣೀರುಪಂತ ಗ್ರಾಮದ ಕಲ್ಲೇರಿ ಜನತಾ ಕಾಲೋನಿ ನಿವಾಸಿ ಶರೀಫ್ ಕೆ. ಅವರ ಪುತ್ರ ಮುಸ್ತಾಕ್ (27) ಎಂದು ಗುರುತಿಸಲಾಗಿದೆ. ಮುಸ್ತಾಕ್ ಲಾರಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಮಗನನ್ನು ಕೊಲೆ ಮಾಡಲಾಗಿದೆ ಎಂದು ಮೃತನ ತಂದೆ ಶರೀಫ್ ಶಂಕೆ…
-

ಉಡುಪಿ: ಖಾಸಗಿ ಬಸ್‌ನಲ್ಲಿ ನೇತಾಡಿಕೊಂಡು ಪ್ರಯಾಣಿಸುತ್ತಿರುವ ವಿದ್ಯಾರ್ಥಿಗಳು..!! ವಿಡಿಯೋ ವೈರಲ್
ಉಡುಪಿ: ಖಾಸಗಿ ಬಸ್ಸೊಂದರ ಹಿಂಬದಿಯ ಏಣಿಗೆ ನೇತಾಡಿಕೊಂಡು ವಿದ್ಯಾರ್ಥಿಗಳು ಅಪಾಯಕಾರಿ ಪ್ರಯಾಣ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪ್ರಯಾಣಿಕರ ಸುರಕ್ಷತೆಯ ಬಗ್ಗೆ ತೀವ್ರ ಆತಂಕ ವ್ಯಕ್ತವಾಗಿದೆ. ಉಡುಪಿ ಜಿಲ್ಲೆಯ ಹರಿಕಂಡಿಗೆ-ಪೆರ್ಡೂರು ಮಾರ್ಗದಲ್ಲಿ ಸಂಚರಿಸುವ ಖಾಸಗಿ ಬಸ್ಸೊಂದರ ಏಣಿಯಲ್ಲಿ ವಿದ್ಯಾರ್ಥಿಗಳು ಅಪಾಯಕಾರಿಯಾಗಿ ನೇತಾಡಿಕೊಂಡು ಪ್ರಯಾಣಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಸ್ಸಿನಲ್ಲಿ ವಿಪರೀತ ಜನಸಂದಣಿ ಇದ್ದ ಹಿನ್ನಲೆಯಲ್ಲಿ ಅನಿವಾರ್ಯವಾಗಿ ವಿದ್ಯಾರ್ಥಿಗಳು ಪ್ರಾಣದ ಹಂಗು ತೊರೆದು ಬಸ್ಸಿನ ಹಿಂಬದಿಯ ಏಣಿಯನ್ನು ಹಿಡಿದು ನೇತಾಡುತ್ತಾ ಪ್ರಯಾಣಿಸುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ.ಈ…
-

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ..!!
ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಮಠ ಸಮೀಪದ ಕುಂಭರೋಡಿ ನಿವಾಸಿ ಕಾಲೇಜು ವಿದ್ಯಾರ್ಥಿನಿ ನಿಖಿತಾ (19ವ) ಎಂಬಾಕೆ ಜು.1 ರಂದು ಸಂಜೆ 3 ಗಂಟೆಗೆ ಮನೆಯ ಪಕ್ಕದಲ್ಲಿ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಳ್ತಂಗಡಿಯ ಸರಕಾರಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ತರಗತಿ ಓದುತ್ತಿದ್ದಳು. ಆತ್ಮಹತ್ಯೆಯ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-

ತ್ರಿವಳಿ ಕೊಲೆ ಕೇಸ್ ಗೆ ಬಿಗ್ ಟ್ವಿಸ್ಟ್: ಆರೋಪಿಗಳಾದ ಕೆನೆತ್-ಶ್ವೇತಾ ಅಸಲಿಗೆ ಪ್ರೇಮಿಗಳೇ ಅಲ್ಲ!
ಬೆಂಗಳೂರಿನ ಕೆ.ಆರ್. ಪುರಂನಲ್ಲಿ ನಡೆದಿದ್ದ ತ್ರಿವಳಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ವಿಚಾರಣೆಯಲ್ಲಿ ತನಿಖೆಗೆ ಹೊಸ ತಿರುವು ಸಿಕ್ಕಿದ್ದು, ಹಲವು ಶಾಕಿಂಗ್ ವಿಚಾರಗಳು ಬೆಳಕಿಗೆ ಬಂದಿವೆ. ಇದುವರೆಗೆ ಆರೋಪಿಗಳಾದ ಕೆನೆತ್ ಹಾಗೂ ಶ್ವೇತಾ ಪ್ರೇಮಿಗಳು, ಲಿವಿಂಗ್ ಟುಗೆದರ್ನಲ್ಲಿದ್ದರು ಎಂದು ಭಾವಿಸಲಾಗಿತ್ತು. ಆದರೆ ಅಸಲಿಗೆ ಇವರಿಬ್ಬರ ನಡುವೆ ಯಾವುದೇ ಪ್ರೇಮ ಸಂಬಂಧವಾಗಲಿ, ದೈಹಿಕ ಸಂಬಂಧವಾಗಲಿ ಇರಲಿಲ್ಲ. ಇವರಿಬ್ಬರು ಕೇವಲ ಸ್ನೇಹಿತರಾಗಿದ್ದರು ಎಂಬ ಕಟು ಸತ್ಯ ಪೊಲೀಸರ ವಿಚಾರಣೆಯಲ್ಲಿ ಬಹಿರಂಗಗೊಂಡಿದೆ. ಆರೋಪಿ ಕೆನೆತ್ ಯಾವುದೇ ಕೆಲಸವನ್ನು ಮಾಡುತ್ತಿರಲಿಲ್ಲ. ಆದರೆ ಮನೆಯವರಿಗೆ…
-

ಉಡುಪಿ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರ ಮಾಜಿ ಆಪ್ತ ಸಹಾಯಕ ಗೋವಾದಲ್ಲಿ ಶವವಾಗಿ ಪತ್ತೆ!
ಉಡುಪಿ: ಮಾಜಿ ಸಚಿವ ಮತ್ತು ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಅವರ ಮಾಜಿ ಆಪ್ತ ಸಹಾಯಕ ಸಂದೀಪ್ ಸಾಲಿಯನ್ (40) ಮಂಗಳವಾರ ಗೋವಾದ ಕಲ್ಲಂಗೂಟ್ ಬೀಚ್ ಬಳಿಯ ಅತಿಥಿ ಗೃಹದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಸಂದೀಪ್ ಉಡುಪಿ ಜಿಲ್ಲೆಯ ಮಲ್ಪೆ ಮೂಲದವರು. ಸಂದೀಪ್ ಹಲವು ವರ್ಷಗಳ ಹಿಂದೆ ಪ್ರಮೋದ್ ಮಧ್ವರಾಜ್ ಅವರ ಆಪ್ತ ಸಹಾಯಕ ಕೆಲಸವನ್ನು ತೊರೆದಿದ್ದರು. ಪ್ರಸ್ತುತ ಅವರು ಪ್ರವಾಸೋದ್ಯಮ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದರು ಮತ್ತು ಮಲ್ಪೆಯಲ್ಲಿ ಪ್ರವಾಸಿ ದೋಣಿಯನ್ನು ಹೊಂದಿದ್ದರು ಎಂದು ವರದಿಯಾಗಿದೆ. ಅವರು ಮೂರು…
-

ಮಂಗಳೂರಿನಲ್ಲಿ ಮತ್ತೊಂದು ದುರಂತ: ಗೆಸ್ಟ್ ಹೌಸನ ಬೃಹತ್ ಕಾಂಪೌಂಡ್ ಮನೆ ಮೇಲೆ ಕುಸಿತ
ಮಂಗಳೂರು : ಕಳೆದೆರಡು ದಿನಗಳಿಂದ ಕರಾವಳಿಯಾದ್ಯಂತ ಸುರಿಯುತ್ತಿರುವ ಭಾರಿ ಮಳೆಯ ಆರ್ಭಟಕ್ಕೆ ತಾಲೂಕಿನ ಕೆರೆಬೈಲ್ ಗುಡ್ಡೆ ಪ್ರದೇಶದಲ್ಲಿ ಬುಧವಾರ (ಜುಲೈ 01) ಭೀಕರ ಅವಘಡವೊಂದು ಸಂಭವಿಸಿದೆ. ಗುಡ್ಡದ ತುತ್ತ ತುದಿಯಲ್ಲಿದ್ದ ಖಾಸಗಿ ಗೆಸ್ಟ್ ಹೌಸ್‌ನ ಬೃಹತ್ ಆವರಣ ಗೋಡೆ (ಕಾಂಪೌಂಡ್ ವಾಲ್) ತಳಭಾಗದಲ್ಲಿದ್ದ ವಾಸದ ಮನೆಯ ಮೇಲೆ ಕುಸಿದು ಬಿದ್ದ ಪರಿಣಾಮ ಮನೆ ಸಂಪೂರ್ಣವಾಗಿ ಧ್ವಂಸಗೊಂಡಿದೆ. ಆದರೆ, ಮನೆಯಲ್ಲಿದ್ದ ಕುಟುಂಬಸ್ಥರು ವಾರದ ಹಿಂದಷ್ಟೇ ಸುರಕ್ಷಿತ ಸ್ಥಳಕ್ಕೆ ವಲಸೆ ಹೋಗಿದ್ದರಿಂದ ದೊಡ್ಡದೊಂದು ದುರಂತ ತಪ್ಪಿದೆ ಇಲ್ಲಿನ ನಿವಾಸಿ ಕಿಶೋರ್…
-

ಮಂಗಳೂರು: ಚಿನ್ನದ ವ್ಯಾಪಾರಿಯ ದರೋಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಕಾರು ಪತ್ತೆ..!! ತನಿಖೆ ತೀವ್ರ
ಮಂಗಳೂರು: ಬೈಕಂಪಾಡಿ ಬಳಿ ಸೋಮವಾರ ಬೆಳಗಿನ ಜಾವ ನಡೆದ ಆಭರಣ ವ್ಯಾಪಾರಿಯ ದರೋಡೆ ಪ್ರಕರಣದ ತನಿಖೆ ಹೊಸ ತಿರುವು ಪಡೆದುಕೊಂಡಿದ್ದು, ಕದ್ದ ಕಾರನ್ನು ಬಂಟ್ವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಬೆಂಜನಪದವಿನಲ್ಲಿ ಪತ್ತೆಯಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಆರೋಪಿಗಳು ವಾಹನವನ್ನು ಬಿಟ್ಟು ಪರಾರಿಯಾಗಿದ್ದಾರೆ. ದರೋಡೆಕೋರರು ಕಾರಿನ ಸೀಟ್ ಕವರ್‌ಗಳನ್ನು ಹರಿದು ವಾಹನವನ್ನು ಸಂಪೂರ್ಣವಾಗಿ ಪರಿಶೀಲಿಸಿದ್ದಾರೆ ಎಂದು ಪೊಲೀಸರು ಕಂಡುಬಂದಿದೆ. ಸೀಟುಗಳ ಒಳಗೆ ಬೆಲೆಬಾಳುವ ವಸ್ತುಗಳು ಅಥವಾ ಚಿನ್ನವನ್ನು ಬಚ್ಚಿಟ್ಟಿರಬಹುದು ಎಂಬ ಶಂಕೆಯಿಂದ ಸಿಟುಗಲನ್ನು ಹರಿದು ಹಾಕಿದ್ದಾರೆ…
-

ಮಂಗಳೂರು :ಭಾರೀ ಮಳೆಗೆ ತಡೆಗೋಡೆ ಮನೆ ಮೇಲೆ ಕುಸಿದು ತಾಯಿ- ಇಬ್ಬರು ಮಕ್ಕಳು ದಾರುಣ ಸಾವು
ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಭೀಕರ ದುರಂತವೊಂದು ಸಂಭವಿಸಿದ್ದು. ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ನಾಗುರಿ ಬಳಿಯ ಗರೋಡಿಯಲ್ಲಿ ತಡೆಗೋಡೆಯೊಂದು ಮನೆಗಳ ಮೇಲೆ ಕುಸಿದು ಬಿದ್ದಿದೆ. ಈ ಘಟನೆಯಲ್ಲಿ ಹೆಂಚಿನ ಛಾವಣಿಯ ಮನೆಗಳು ಕುಸಿದು ಬಿದ್ದು. ಮಹಿಳೆಯೊಬ್ಬರು ಹಾಗೂ ಇಬ್ಬರು ಬಾಲಕಿಯರು ಮೃತಪಟ್ಟಿದ್ದಾರೆ ಬುಧವಾರ ಮುಂಜಾನೆ ಸುಮಾರು 4:45 ರಿಂದ 5:00 ಗಂಟೆಯ ಅವಧಿಯಲ್ಲಿ ಗರೋಡಿಯ ‘ಮರಿಯಲ್ ಹೌಸ್” ಎಂಬಲ್ಲಿ ಈ ಘಟನೆ ನಡೆದಿದೆ. ಅವಶೇಷಗಳಡಿ ಸಿಲುಕಿದ್ದ ಆರು ಮಂದಿ ದುರಂತ ಸಂಭವಿಸಿದ ಜಾಗದಲ್ಲಿ ತಡೆಗೋಡೆಯ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











