Author: News Editor
-

ನಾಲ್ವರು IAS ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರದ ಆದೇಶ
ಬೆಂಗಳೂರು: ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು (DP&AR) ಮಂಗಳವಾರ (ಜೂನ್ 30) ಮಹತ್ವದ ಆದೇಶ ಹೊರಡಿಸಿದ್ದು, ಹುದ್ದೆಯ ನಿರೀಕ್ಷೆಯಲ್ಲಿದ್ದ ನಾಲ್ವರು ಹಿರಿಯ ಐಎಎಸ್ (IAS) ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿವಿಧ ಇಲಾಖೆಗಳಿಗೆ ನಿಯೋಜಿಸಿ ಆದೇಶಿಸಿದೆ. ವಿಧಾನಸೌಧದಲ್ಲಿ ಹೊರಡಿಸಲಾದ ಈ ಅಧಿಕೃತ ಅಧಿಸೂಚನೆಯ ಸಂಪೂರ್ಣ ವಿವರಗಳು ಇಲ್ಲಿವೆ: ಅಭಿರಾಮ್ ಜಿ. ಶಂಕರ್ ಬಿಎಂಇಆರ್‌ಸಿ ಎಂಡಿಯಾಗಿ ನೇಮಕ ಹುದ್ದೆಯ ನಿರೀಕ್ಷೆಯಲ್ಲಿದ್ದ 2011ರ ಬ್ಯಾಚ್‌ನ ಐಎಎಸ್ ಅಧಿಕಾರಿ ಅಭಿರಾಮ್ ಜಿ. ಶಂಕರ್ ಅವರನ್ನು ತಕ್ಷಣದಿಂದ ಜಾರಿಗೆ…
-

ಕಾರ್ಕಳ: ಪರವಾನಗಿ ಇಲ್ಲದೆ ಅಕ್ರಮವಾಗಿ ಕೆಂಪು ಕಲ್ಲುಗಳನ್ನು ಸಾಗಾಟ- ಲಾರಿ ವಶಕ್ಕೆ, ಚಾಲಕನ ವಿರುದ್ಧ ಪ್ರಕರಣ
ಕಾರ್ಕಳ: ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಕೆಂಪು ಕಲ್ಲುಗಳನ್ನು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಕಾರ್ಕಳ ನಗರ ಪೊಲೀಸರು ವಶಕ್ಕೆ ಪಡೆದು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಜೂನ್ 29ರಂದು ಬೆಳಿಗ್ಗೆ ಸುಮಾರು 9:30ಕ್ಕೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಬಾರಾಡಿ ಕ್ರಾಸ್ ಬಳಿ ಚೆಕ್‌ಪೋಸ್ಟ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ್ಟೇಬಲ್ ನಾಗರಾಜ ಅವರು ಮೂಡಬಿದ್ರಿ ಕಡೆಯಿಂದ ಕಾರ್ಕಳದತ್ತ ಬರುತ್ತಿದ್ದ KA-19-AD-8314 ಸಂಖ್ಯೆಯ ಲಾರಿಯನ್ನು ತಪಾಸಣೆ ನಡೆಸಿದರು. ಪರಿಶೀಲನೆ ವೇಳೆ ಲಾರಿಯಲ್ಲಿ ಸುಮಾರು 300 ಕೆಂಪು ಕಲ್ಲುಗಳು ತುಂಬಿರುವುದು ಕಂಡುಬಂದಿದೆ.…
-

ಉಡುಪಿ: ಮನೆಯನ್ನು ತನ್ನ ಹೆಸರಿಗೆ ಮಾಡಿಕೊಂಡು ತಂದೆ ತಾಯಿಯನ್ನು ಮನೆಯಿಂದ ಹೊರ ಹಾಕಿದ ಪುತ್ರ..!!
ಉಡುಪಿ: ಒತ್ತಾಯಪೂರ್ವಕವಾಗಿ ಮನೆಯನ್ನು ತನ್ನ ಹೆಸರಿಗೆ ಮಾಡಿಕೊಂಡ ಮಗ, ತಂದೆ-ತಾಯಿಯನ್ನು ಮನೆಯಿಂದ ಹೊರಹಾಕಿರುವ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಡಾನಿಡಿಯೂರು ಗ್ರಾಮದ ಸರಸು ಸುವರ್ಣ(69) ಎಂಬವರು ತನ್ನ ಎರಡನೇ ಮಗ ವಿನೋದ ಸುವರ್ಣ ಜೊತೆ ವಾಸವಾಗಿದ್ದು, ಮನೆ ಸರಸು ಸುವರ್ಣ ಅವರ ಹೆಸರಿನಲ್ಲಿತ್ತು. ಈ ಮನೆಯನ್ನು ವಿನೋದ ಸುವರ್ಣ ತನ್ನ ಹೆಸರಿಗೆ ಮಾಡಿಕೊಡಿ ಎಂದು ಹೇಳಿದಾಗ ಸರಸು ಸುವರ್ಣ ಮಾಡಿಕೊಡುವುದಿಲ್ಲ ಎಂದು ಹೇಳಿದ್ದು, ಅದಕ್ಕೆ ಸರಸು ಸುವರ್ಣ ಮತ್ತು ಅವರ ಗಂಡನಿಗೂ ವಿನೋದ್ ಸುವರ್ಣ…
-

ಲಂಚಕ್ಕೆ ಬೇಡಿಕೆ ಇಟ್ಟಿದ್ದಕ್ಕೆ ಮತ್ತು ಸ್ವೀಕರಿಸುವುದಕ್ಕೆ ಸಾಕ್ಷ್ಯ ಕಡ್ಡಾಯ : ಹೈಕೋರ್ಟ್ ಮಹತ್ವದ ಆದೇಶ
ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಅತ್ಯಂತ ಪ್ರಮುಖ ತೀರ್ಪೊಂದನ್ನು ನೀಡಿದೆ. ಸರ್ಕಾರಿ ಅಧಿಕಾರಿಗಳ ಬಳಿ ಕೇವಲ ಲಂಚದ ಹಣ ಪತ್ತೆಯಾದ ತಕ್ಷಣವೇ ಅವರು ಅಪರಾಧಿ ಎಂದು ಸಾಬೀತಾಗುವುದಿಲ್ಲ. ಆರೋಪಿಯು ಲಂಚಕ್ಕಾಗಿ ನಿರ್ದಿಷ್ಟವಾಗಿ ಬೇಡಿಕೆ ಇಟ್ಟಿದ್ದ ಹಾಗೂ ಅದನ್ನು ಸ್ವೀಕರಿಸಿದ್ದ ಎನ್ನುವುದಕ್ಕೆ ತನಿಖಾ ಸಂಸ್ಥೆಗಳು ಕಡ್ಡಾಯವಾಗಿ ಬಲವಾದ ಸಾಕ್ಷ್ಯಗಳನ್ನು ಒದಗಿಸಬೇಕಾಗುತ್ತದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕು ಕಚೇರಿಯಲ್ಲಿ ಬೆರಳಚ್ಚುಗಾರರಾಗಿ ಕಾರ್ಯನಿರ್ವಹಿಸುತ್ತಿದ್ದ ಜಯಚಂದ್ರ ಎಂಬುವವರ ವಿರುದ್ಧ ದಾಖಲಾಗಿದ್ದ ಭ್ರಷ್ಟಾಚಾರ…
-

9 ಅಬಕಾರಿ ಡಿಸಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!!
ಬೆಂಗಳೂರು: ರಾಜ್ಯ ರಾಜಧಾನಿ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿರುವ ಲೋಕಾಯುಕ್ತ ಪೊಲೀಸರು, ಅಬಕಾರಿ ಇಲಾಖೆಯ ಉಪ ಆಯುಕ್ತರ (DC) ಕಚೇರಿಗಳ ಮೇಲೆ ಬೃಹತ್ ದಾಳಿ ನಡೆಸಿದ್ದಾರೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ವ್ಯಾಪಿಸಿರುವ ಒಟ್ಟು 9 ಅಬಕಾರಿ ಡಿಸಿ ಕಚೇರಿಗಳ ಮೇಲೆ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಏಕಕಾಲಕ್ಕೆ 9 ಕಚೇರಿಗಳ ಮೇಲೆ ದಾಳಿ ಲೋಕಾಯುಕ್ತ ಅಧಿಕಾರಿಗಳ ಪ್ರತ್ಯೇಕ ತಂಡಗಳು ಇಂದು ಬೆಳ್ಳಂಬೆಳಗ್ಗೆ ಈ ಜಂಟಿ ಕಾರ್ಯಾಚರಣೆಯನ್ನು…
-

ಮೂರು ವರ್ಷದ ಮಗುವಿನ ಅತ್ಯಾಚಾರ, ಕೊಲೆ ಪ್ರಕರಣದಲ್ಲಿ 65 ವರ್ಷದ ವೃದ್ಧನಿಗೆ ಮರಣದಂಡನೆ ಶಿಕ್ಷೆ!
ಪುಣೆ: ಮಹಾರಾಷ್ಟ್ರದ ಪುಣೆ ಜಿಲ್ಲೆಯ ಹಳ್ಳಿಯೊಂದರಲ್ಲಿ ಕೇವಲ ಮೂರು ವರ್ಷದ ಹೆಣ್ಣು ಮಗುವಿನ ಮೇಲೆ ನಡೆದಿದ್ದ ಅತ್ಯಂತ ಕ್ರೂರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ವಿಶೇಷ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯವು ಸೋಮವಾರ ಮಹತ್ವದ ತೀರ್ಪು ನೀಡಿದೆ. ಘಟನೆ ನಡೆದ ಕೇವಲ ಎರಡು ತಿಂಗಳ ಒಳಗಾಗಿ ವಿಚಾರಣೆ ಪೂರ್ಣಗೊಳಿಸಿರುವ ನ್ಯಾಯಾಲಯವು, ಈ ಕೃತ್ಯವು “ಅಪರೂಪದಲ್ಲೇ ಅಪರೂಪದ” (Rarest of the rare) ವರ್ಗಕ್ಕೆ ಸೇರುತ್ತದೆ ಎಂದು ಅಭಿಪ್ರಾಯಪಟ್ಟು 65 ವರ್ಷದ ಆರೋಪಿಗೆ ಮರಣದಂಡನೆ ಶಿಕ್ಷೆ ವಿಧಿಸಿದೆ.…
-

ಸಿಸಿಬಿ (CCB) ಪೊಲೀಸರು ಭರ್ಜರಿ ಕಾರ್ಯಾಚರಣೆ: ಬರೋಬ್ಬರಿ 21 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ.!
ಸಿಸಿಬಿ (CCB) ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ 21 ಕೋಟಿ ರೂಪಾಯಿ ಮೌಲ್ಯದ ಭಾರಿ ಪ್ರಮಾಣದ ಡ್ರಗ್ಸ್ ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ ನಗರದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬೈಲಕೊನೆಹಳ್ಳಿಯಲ್ಲಿ ಈ ದಾಳಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರರಾಷ್ಟ್ರೀಯ ಮಟ್ಟದ ಮೂವರು ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್‌ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 21 ಕೋಟಿ ರೂ. ಮೌಲ್ಯದ 10 ಕೆಜಿ 270 ಗ್ರಾಂ ತೂಕದ ಎಂಡಿಎಂಎ (MDMA) ಕ್ರಿಸ್ಟಲ್ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ.…
-

ಮಂಗಳೂರು: ಉದ್ಯಮಿಯ ಕಾರು ಅಡ್ಡಗಡ್ಡಿ, ಕಾರು ಸಹಿತ ಚಿನ್ನಾಭರಣ ದೋಚಿದ ದರೋಡೆಕೋರರು..!!
ಮಂಗಳೂರು: ಮದುವೆಗೆ ಹೋಗಿ ಹಿಂದಿರುಗುತ್ತಿದ್ದ ಕೇರಳ ಮೂಲಕ ಉದ್ಯಮಿಯೊಬ್ಬರ ಕಾರಿಗೆ ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದೋಚಿದ ಘಟನೆ ಬೆಳಗ್ಗಿನ ಜಾವ ಬೈಕಂಪಾಡಿ ದ್ವಾರ ಹೊಟೆಲ್ ಬಳಿ ನಡೆದಿದೆ. ಕೇರಳದ ಪಯ್ಯನ್ನೂರು ನಿವಾಸಿ ವಿಕಾಸ್ ತನ್ನ ಪತ್ನಿ ಮತ್ತು ಮಗನೊಂದಿಗೆ ಮುಂಬೈಯ ತನ್ನ ಸ್ನೇಹಿತರೊಬ್ಬರ ಮದುವೆ ಹೋಗಿ ಹಿಂದಿರುಗುತ್ತಿದ್ದರು. ಬೆಳಗ್ಗಿನ ಜಾವ 2:30 ಸುಮಾರಿಗೆ ಉದ್ಯಮಿಯ ಕಾರು ರಾಷ್ಟ್ರೀಯ ಹೆದ್ದಾರಿ 66ರ ಬೈಕಂಪಾಡಿ ದ್ವಾರ ಹೋಟೆಲ್ ಬಳಿ ತಲುಪುತ್ತಿದ್ದಂತೆ ಎರಡು ಇನ್ನೋವಾ ಮತ್ತು ಒಂದು ಸ್ವಿಫ್ಟ್ ಕಾರಿನಲ್ಲಿ…
-

ಮಂಗಳೂರು: ಬೀದಿಬದಿ ವ್ಯಾಪಾರಿಗಳ ವಿರುದ್ಧ ಮನಪಾ ಕಾರ್ಯಾಚರಣೆ, ವ್ಯಾಪಾರಿಗಳ ವಶಕ್ಕೆ ಪಡೆದ ಪೊಲೀಸರು
ಮಂಗಳೂರು: ನಗರದ ಪುರಭವನದ ಸಮೀಪದ ಫುಟ್ ಪಾತ್ ನಲ್ಲಿ ವ್ಯಾಪಾರನಿರತ ಬೀದಿಬದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ರವಿವಾರ ಬೆಳಗ್ಗೆ ಕಾರ್ಯಾಚರಣೆ ನಡೆಸಿ ತೆರವುಗೊಳಿಸಿದರು. ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ರವಿಚಂದ್ರ ನಾಯಕ್ ಸ್ಥಳದಲ್ಲಿ ಉಪಸ್ಥಿತರಿದ್ದು, ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸಲು ಮಾರ್ಗದರ್ಶನ ನೀಡಿದರು.ಈ ವೇಳೆ ಕಾರ್ಯಾಚರಣೆಯನ್ನು ಪ್ರಶ್ನಿಸಿದ ಬೀದಿಬದಿ ವ್ಯಾಪಾರಿಗಳನ್ನು ಪೊಲೀಸರು ವಶಕ್ಕೆ ಪಡೆದು ವಾಹನಗಳಲ್ಲಿ ಕರೆದೊಯ್ದರು. ಕಾರ್ಯಾಚರಣೆಗೆ ಮೊದಲು ಮನಪಾ ಆಯುಕ್ತ ರವಿಚಂದ್ರ ನಾಯಕ್ ಬೀದಿ ವ್ಯಾಪಾರಿಗಳ ಬಳಿ ತೆರಳಿ ಇಲ್ಲಿ ಕಾನೂನು ಪ್ರಕಾರ, ನಿಯಮ…
-

ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್–ಜೆಡಿಎಸ್ ಕಾರ್ಯಕರ್ತರ ಗಲಾಟೆ; ಚಪ್ಪಲಿ ಎಸೆದ ಪ್ರಕರಣದಲ್ಲಿ ನಾಲ್ವರು ಸೆರೆ
ಚಿಕ್ಕಬಳ್ಳಾಪುರ: ನಗರದಲ್ಲಿ ಶನಿವಾರ (ಜೂ.27) ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಮಹೋತ್ಸವದ ವೇಳೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ನಡೆದ ಗಲಾಟೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇಂದು ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ನಿನ್ನೆ ನಡೆದ ಈ ಆಘಾತಕಾರಿ ಘಟನೆಯನ್ನು ಬೆನ್ನಟ್ಟಿ ಇಡೀ ರಾತ್ರಿ ಕಾರ್ಯಾಚರಣೆ ನಡೆಸಿರುವ ಪೊಲೀಸರು ಸದ್ಯ ನಾಲ್ವರನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ನಗರ ಠಾಣೆಯ ಪಿಎಸ್‌ಐ ಅಮರ್ ಅವರು ಸ್ವಯಂಪ್ರೇರಿತ (Suo Moto) ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಶಾಸಕರ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











