Author: News Editor
-

ಪದೇ ಪದೇ ಬಾಂಬ್ ಬೆದರಿಕೆಗೆ ಗುರಿಯಾಗುತ್ತಿರುವ ಉಡುಪಿ ನ್ಯಾಯಾಲಯ; ಮತ್ತೆ ಹುಸಿ ಇಮೇಲ್
ಉಡುಪಿ: ಉಡುಪಿ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಮತ್ತೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಇಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಶನಿವಾರ ಬೆಳಿಗ್ಗೆ ಪೊಲೀಸರು ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳದೊಂದಿಗೆ ನ್ಯಾಯಾಲಯದ ಆವರಣದಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆಸಿದರು. ಬಳಿಕ ಇದೊಂದು ಹುಸಿ ಬೆದರಿಕೆ ಎಂಬುದು ದೃಢಪಟ್ಟಿದೆ. ಜೂನ್ 26 ರಂದು ರಾತ್ರಿ 8:53 ಕ್ಕೆ ಜಿಲ್ಲಾ ನ್ಯಾಯಾಲಯದ ಅಧಿಕೃತ ಇಮೇಲ್ ಐಡಿಗೆ ಬೆದರಿಕೆ ಸಂದೇಶ ಕಳುಹಿಸಲಾಗಿದೆ. ಆದರೆ, ನ್ಯಾಯಾಲಯದ ಸಿಬ್ಬಂದಿ ಮರುದಿನ ಬೆಳಿಗ್ಗೆ ಜೂನ್ 27 ರಂದು ಬೆಳಿಗ್ಗೆ…
-

ಮೊಹರಂ ಮೆರವಣಿಗೆಯಲ್ಲಿ ವಿಷದ ಮಾತ್ರೆ ಹಂಚಲು ಯತ್ನಿಸಿದ ಸಂಚು ಭೇದಿಸಿದ ಪೊಲೀಸರು
ಮುಂಬೈ: ಮೊಹರಂ ಮೆರವಣಿಗೆ ಸಂದರ್ಭದಲ್ಲಿ ಜನರಿಗೆ ವಿಷದ ಮಾತ್ರೆಗಳನ್ನು ಹಂಚಿಕೆ ಮಾಡುವ ಮೂಲಕ ಅನಾಹುತ ಸೃಷ್ಟಿಸಲು ಯತ್ನಿಸಿದ ದೊಡ್ಡ ಸಂಚೊಂದನ್ನು ಮುಂಬೈ ಪೊಲೀಸರು ಭೇದಿಸಿದ್ದಾರೆ. ಪೊಲೀಸರ ಗಸ್ತು ವೇಳೆ ಈ ಖತರ್ನಾಕ್ ಸಂಚು ಬಯಲಾಗಿದೆ. ಮುಂಬೈನ ಡೊಂಗ್ರಿ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಪುಣೆಯ ಫಯಾಜ್ ಪ್ರೇಮ್‌ಜಿ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿಯು ನೋವು ನಿವಾರಕ ಮಾತ್ರೆಗಳು ಎಂದು ಹೇಳಿ, ವಾಸ್ತವದಲ್ಲಿ ಇಲಿ ಪಾಷಾಣ ಬೆರೆಸಿದ ಮಾತ್ರೆಗಳನ್ನು ಹಂಚುತ್ತಿದ್ದರು ಎಂದು ತಿಳಿದುಬಂದಿದೆ. ಆತನ ಬಳಿಯಿದ್ದ 14,900 ವಿಷ ಮಾತ್ರೆಗಳನ್ನು ಪೊಲೀಸರು…
-

ವಿಚಾರಣೆಯಿಂದ ತಪ್ಪಿಸಿಕೊಂಡಿದ್ದ ಆರೋಪಿಗೆ ಉಪ್ಪಿನಂಗಡಿ ಪೊಲೀಸರ ಬಲೆ
ಮಂಗಳೂರು: 2005 ರ ಕಳ್ಳತನ ಪ್ರಕರಣದಲ್ಲಿ ಸುಮಾರು 16 ವರ್ಷಗಳಿಂದ ತಲೆಮರೆಸಿಕೊಂಡು ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿದ್ದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಯನ್ನು ತಮಿಳುನಾಡಿನ ತಿರುನಲ್ವೇಲಿ ನಿವಾಸಿ ಮಾದ ಸ್ವಾಮಿ ಎಂದು ಗುರುತಿಸಲಾಗಿದೆ.ಅವರು ಉಪ್ಪಿನಂಗಡಿ ಪೊಲೀಸ್ ಠಾಣೆ ಅಪರಾಧ ಸಂಖ್ಯೆ 09/2005 ರಲ್ಲಿ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 457 ಮತ್ತು 380 ರ ಅಡಿಯಲ್ಲಿ ಸೆಕ್ಷನ್ 34 ರ ಅಡಿಯಲ್ಲಿ ದಾಖಲಾಗಿದ್ದ ಆರೋಪಿಯಾಗಿದ್ದರು.ಪೊಲೀಸರ ಪ್ರಕಾರ, ಆರೋಪಿಯು ಸುಮಾರು 16 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಯಿಂದ ತಪ್ಪಿಸಿಕೊಂಡು…
-

ಆಟವಾಡಲು ಬಂದ ಯುವಕರ ಕಣ್ಣಿಗೆ ಬಿದ್ದ ಗಾಂಜಾ ಗಿಡ; ಅಧಿಕಾರಿಗಳ ಕಾರ್ಯಾಚರಣೆ
ಕಾಸರಗೋಡು: ಕುಂಬಳೆ ಸಮೀಪದ ಬಂಬ್ರಾಣದ ಶಾಲೆಯೊಂದರ ಆವರಣದಲ್ಲಿ ಗಾಂಜಾ ಗಿಡವೊಂದು ಪತ್ತೆಯಾಗಿದೆ. ಮೈದಾನಕ್ಕೆ ಆಟವಾಡಲು ಬಂದಿದ್ದ ಸ್ಥಳೀಯ ಕೆಲ ಯುವಕರು ಗಮನಿಸಿ ಅಬಕಾರಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, 50 ಸೆ. ಮೀಟರ್ ಉದ್ದದ ಗಾಂಜಾ ಗಿಡ ಪತ್ತೆಯಾಗಿದೆ. ಅಬಕಾರಿ ಅಧಿಕಾರಿಗಳು ಗಾಂಜಾ ಗಿಡವನ್ನು ಅಬಕಾರಿ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡು ತನಿಖೆ ನಡೆಸುತ್ತಿದ್ದಾರೆ.
-

ಕರ್ನಾಟಕದ ಮೀನುಗಾರಿಕೆ ವಲಯಕ್ಕೆ ಎಲ್ ನಿನೊ ಶಾಕ್; ಉತ್ಪಾದನೆ ಕುಸಿಯುವ ಭೀತಿ
ಮಂಗಳೂರು: ಎಲ್ ನಿನೊ ಪರಿಣಾಮದಿಂದ ರಾಜ್ಯದಲ್ಲಿ ಈ ಬಾರಿ ಮುಂಗಾರು ದುರ್ಬಲವಾಗುವ ಸಾಧ್ಯತೆ ಇದೆ. ಇದರ ಪರಿಣಾಮ ಕೃಷಿ ಮಾತ್ರವಲ್ಲ, ಕರಾವಳಿಯ ಮೀನುಗಾರಿಕೆ ವಲಯದ ಮೇಲೂ ಗಂಭೀರ ಪರಿಣಾಮ ಬೀರುವ ಆತಂಕ ಎದುರಾಗಿದೆ. ಪ್ರತಿ ವರ್ಷ ಜೂನ್ 1ರಿಂದ ಜುಲೈ 31ರವರೆಗೆ ಮೀನುಗಳ ಸಂತಾನೋತ್ಪತ್ತಿಗಾಗಿ ಮೀನುಗಾರಿಕೆಗೆ ನಿಷೇಧ ವಿಧಿಸಲಾಗುತ್ತದೆ. ಈ ಅವಧಿಯಲ್ಲಿ ಪಶ್ಚಿಮಘಟ್ಟದಿಂದ ಹರಿದು ಬರುವ ಸಿಹಿ ನೀರು ಸಮುದ್ರ ಸೇರುವುದರಿಂದ ಮೀನುಗಳ ಸಂತಾನೋತ್ಪತ್ತಿಗೆ ಅನುಕೂಲವಾಗುತ್ತದೆ. ಆದರೆ ಈ ಬಾರಿ ಮಳೆ ಕೊರತೆಯಿಂದ ಸಿಹಿ ನೀರು ಕಡಲಿಗೆ ಸಮರ್ಪಕವಾಗಿ…
-

ಮಂಗಳೂರಿನಲ್ಲಿ ಹೊರ ರಾಜ್ಯದವರ ವಾಸದ ಹಿನ್ನೆಲೆ ಪರಿಶೀಲನೆಗೆ ಆಗ್ರಹ: ಅಪರಾಧ ನಿಯಂತ್ರಣಕ್ಕೆ ಕ್ರಮ ಅಗತ್ಯ
ಮಂಗಳೂರು: ನಗರದ ಬಂದರು, ಅಳಕೆ, ಸ್ಟೇಟ್ ಬ್ಯಾಂಕ್, ಪಾಂಡೇಶ್ವರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಹೊರ ರಾಜ್ಯ ಹಾಗೂ ಹೊರ ಜಿಲ್ಲೆಯವರು ಹೆಚ್ಚಿನ ಸಂಖ್ಯೆಯಲ್ಲಿ ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿದ್ದಾರೆ. ನಗರದಲ್ಲಿ ನಡೆಯುವ ಹಲವು ಪ್ರಕರಣಗಳಲ್ಲಿ ಬಾಡಿಗೆದಾರರ ಹಿನ್ನೆಲೆ ಕುರಿತು ಪರಿಶೀಲನೆ ಅಗತ್ಯ ಎಂಬ ಅಭಿಪ್ರಾಯಗಳು ಕೇಳಿಬರುತ್ತಿವೆ. ಸ್ಟೇಟ್ ಬ್ಯಾಂಕ್ ಭಾಗದಲ್ಲಿ ಅಸ್ಸಾಂ, ಬಿಹಾರ ಸೇರಿದಂತೆ ವಿವಿಧ ಹೊರ ರಾಜ್ಯಗಳ ಕೆಲವರು ರಾತ್ರಿ ವೇಳೆ ಮದ್ಯ ಸೇವಿಸಿ ರಸ್ತೆ ಬದಿ ಗಲಾಟೆ ನಡೆಸುವ ಘಟನೆಗಳು ನಡೆಯುತ್ತಿವೆ ಎಂಬ ಆರೋಪಗಳು ಕೇಳಿಬಂದಿವೆ.…
-

ವಿಟ್ಲದಲ್ಲಿ ಅಕ್ರಮ ಮದ್ಯ ಮಾರಾಟ: 54 ವರ್ಷದ ವ್ಯಕ್ತಿಯ ಬಂಧನ
ವಿಟ್ಲ: ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮಧ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ ಘಟನೆ ವಿಟ್ಲ ಸಮೀಪದ ಮಂಗಿಲಪದವಿನಲ್ಲಿ ನಡೆದಿದೆ. ವಿಟ್ಲ ಕಸಬಾ ನಿವಾಸಿ ಲಕ್ಷ್ಮಣಗೌಡ (54 )ಬಂಧಿತ ಆರೋಪಿ. ವಿಟ್ಲ ಮಂಗಿಲಪದವು ಬಸ್ ತಂಗುದಾಣದ ಬಳಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ವಿಟ್ಲ ಪೊಲೀಸರು ಈ ದಾಳಿ ನಡೆಸಿದ್ದಾರೆ.ದಾಳಿಯ ವೇಳೆ ವಿವಿಧ ಮಾದರಿಯ ಒಟ್ಟು 4.5 ಲೀಟರ್ ಮದ್ಯ ಹಾಗೂ ಮದ್ಯ ಮಾರಾಟದಿಂದ ಸಂಗ್ರಹವಾದ 300 ರೂಪಾಯಿ…
-

ಮಂಗಳೂರು: ಪೊಲೀಸರ ಕೈಯಿಂದ ಕೈಕೋಳದೊಂದಿಗೆ ತಪ್ಪಿಸಿ ಪರಾರಿಯಾದ ಖತರ್ನಾಕ್ ಸರಗಳ್ಳ..!!
ಮಂಗಳೂರು: ಬಂಧಿಸಿ ಠಾಣೆಗೆ ಕರೆತರುತ್ತಿದ್ದ ವೇಳೆ ಐವರು ಪೊಲೀಸರ ಕಣ್ಣಿಗೆ ಮಣ್ಣು ಎರಚಿ, ಕೈಕೋಳ (ಹ್ಯಾಂಡ್‌ಕಫ್) ಸಮೇತ ಖತರ್ನಾಕ್ ಸರಗಳ್ಳನೊಬ್ಬ ಸಿನಿಮೀಯ ರೀತಿಯಲ್ಲಿ ಪರಾರಿಯಾದ ಘಟನೆ ಮಂಗಳೂರಿನ ರೋಜಾರಿಯೋ ಚರ್ಚ್ ರಸ್ತೆಯಲ್ಲಿ ನಡೆದಿದೆ. ಬಾಗಲಕೋಟೆ ಮೂಲದ ಅಲ್ತಾಫ್ ಹುಸೇನ್ ಪರಾರಿಯಾದ ಆರೋಪಿ ಎಂದು ಗುರುತಿಸಲಾಗಿದೆ. ಈತನ ಬಂಧನಕ್ಕಾಗಿ ಪೊಲೀಸರು ತೀವ್ರ ಶೋಧ ಕಾರ್ಯ ಆರಂಭಿಸಿದ್ದಾರೆ. ಮಂಗಳೂರಿನ ಜಪ್ಪಿನಮೊಗರು ಬಳಿ ಇತ್ತೀಚೆಗೆ ನಡೆದ ಸರಗಳ್ಳತನ ಪ್ರಕರಣದ ತನಿಖೆ ನಡೆಸುತ್ತಿದ್ದ ಪಾಂಡೇಶ್ವರ ಠಾಣಾ ಪೊಲೀಸರಿಗೆ ಅಂತರರಾಜ್ಯ ಕಳ್ಳರ ಗ್ಯಾಂಗ್ ಕುರಿತು ಸುಳಿವು…
-

8 ತಿಂಗಳ ಮಗು ಎಲ್ಇಡಿ ಬಲ್ಬ್ ನುಂಗಿ ಆಸ್ಪತ್ರೆಗೆ ದಾಖಲು; ತಕ್ಷಣದ ಚಿಕಿತ್ಸೆಯಿಂದ ಜೀವ ಉಳಿಸಿದ ವೈದ್ಯರು
ಮಡಿಕೇರಿ: ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಎಂಟು ತಿಂಗಳ ಮಗುವೊಂದು ಆಟವಾಡುತ್ತಾ ಎಲ್ಇಡಿ ಬಲ್ಬ್ ನುಂಗಿದ ಘಟನೆ ನಡೆದಿದೆ. ಸಕಾಲಿಕ ಚಿಕಿತ್ಸೆಯಿಂದಾಗಿ ಮಗು ಪ್ರಾಣಾಪಾಯದಿಂದ ಪಾರಾಗಿದೆ. ಎಲ್ಇಡಿ ಬಲ್ಬ್ ನುಂಗಿದ ಬಳಿಕ ಮಗು ವಿಪರೀತವಾಗಿ ಅಳಲಾರಂಭಿಸಿದ್ದು, ಇದರಿಂದ ಗಾಬರಿಗೊಂಡ ಪೋಷಕರು ತಕ್ಷಣವೇ ಮಗುವನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಮಗುವನ್ನು ಪರೀಕ್ಷಿಸಿದ ವೈದ್ಯರು ಮೊದಲು ಎಕ್ಸ್ ರೇ ಮಾಡಿದರು. ಗಂಟಲಿನಲ್ಲಿ ಲೋಹದ ವಸ್ತುವೊಂದು ಇರುವುದು ಪತ್ತೆಯಾಗಿದ್ದು, ಲ್ಯಾರಿಂಗೋಸ್ಕೋಪ್ ಪರೀಕ್ಷೆ ನಡೆಸಿದಾಗ ಅದು ಎಲ್ಇಡಿ ಬಲ್ಬ್ ಎಂದು ದೃಢಪಟ್ಟಿತು. ಇಎನ್‌ಟಿ ತಜ್ಞೆ ಡಾ. ರಾಜಶ್ರೀ…
-

ಕರ್ತವ್ಯಲೋಪದ ಹಿನ್ನಲೆಯಲ್ಲಿ ಪಿಎಸ್‌ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್..!!
ಕರ್ತವ್ಯಲೋಪದ ಹಿನ್ನೆಲೆಯಲ್ಲಿ ಮೂವರು ಪೊಲೀಸ್ ಸಿಬ್ಬಂದಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಆದೇಶ ಹೊರಡಿಸಿದ್ದಾರೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹುಳಿಯಾರು ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ಸಾಗರ್ ಆಸ್ಕಿ, ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ (ಎಎಸ್‌ಐ) ರಂಗಧಾಮಯ್ಯ ಹಾಗೂ ಕಾನ್ಸ್‌ಟೇಬಲ್ ಚಂದ್ರಶೇಖರ್ ಅಮಾನತುಗೊಂಡ ದುರದೃಷ್ಟಕರ ಸಿಬ್ಬಂದಿಯಾಗಿದ್ದಾರೆ. ಕರ್ತವ್ಯದಲ್ಲಿ ಬೇಜವಾಬ್ದಾರಿತನ ಹಾಗೂ ಇಲಾಖೆಯ ಶಿಸ್ತು ಉಲ್ಲಂಘಿಸಿದ ಕಾರಣಕ್ಕಾಗಿ ಇವರ ವಿರುದ್ಧ ಈ ಶಿಸ್ತುಕ್ರಮ ಜರುಗಿಸಲಾಗಿದೆ. ನಿಯಮ ಉಲ್ಲಂಘಿಸಿ ಅಸ್ಸಾಂಗೆ ತೆರಳಿದ್ದ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











