Author: News Editor
-

ಮಂಗಳೂರು: ಹಲವು ಕ್ರಿಮಿನಲ್ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ!
ಮೊಹಮ್ಮದ್ ಅಶ್ರಫ್ @ ಅಜ್ಜು @ ನಿಜಾಮ್ @ ಅಡ್ಡು @ ಸಮೀರ್, ಮಾವಿನಕಟ್ಟೆ, ಅಜಿಲಮೊಗರು, ಬೆಳ್ತಂಗಡಿ. ಎಂಬಾತ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ “ಬಿ” ರೌಡಿ ಶೀಟರ್ ಆಗಿದ್ದು, ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ದ ಹಲವು ಪ್ರಕರಣಗಳು ದಾಖಲಾಗಿದೆ. ಆರೋಪಿತನು ಪ್ರಕರಣಕ್ಕೆ ಸಂಬಂದಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ನ್ಯಾಯಾಲಯವು ಈತನಿಗೆ ವಾರೆಂಟ್ ಜಾರಿಗೊಳಿಸಿತ್ತು. ಈತನ ವಿರುದ್ದ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಅ.ಕ್ರ.ಸಂ: 136/2018, ಅ.ಕ್ರ.ಸಂ: 119/2024, ಅ.ಕ್ರ.ಸಂ: 130/2024, ಅ.ಕ್ರ.ಸಂ: 119/2024…
-

ಮಂಗಳೂರು: ರಾತ್ರಿ ಬೀಟ್ ಕರ್ತವ್ಯದ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ಪ್ರಕರಣ- ಕೇರಳಕ್ಕೆ ಪರಾರಿಯಾಗಿದ್ದ ಆರೋಪಿಗಳ ಬಂಧನ
ಮಂಗಳೂರು: ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ಬೀಟ್ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳಕ್ಕೆ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮೇ 24ರಂದು ಬೆಳಗಿನ ಜಾವ ಸುಮಾರು 2:10 ಗಂಟೆಗೆ ಕೋಡಿಕಲ್ನ ನಾರಾಯಣಗುರು ಸಮುದಾಯ ಭವನ ರಸ್ತೆಯ ಎದುರು ಬೀಟ್ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಕೆಂಪು ಬಣ್ಣದ ಎಲೆಕ್ಟ್ರಿಕ್ ಸ್ಕೂಟರ್ನಲ್ಲಿ ಬಂದ ಇಬ್ಬರು ಯುವಕರು ಹಲ್ಲೆ ನಡೆಸಿದ್ದರು. ಸ್ಕೂಟರ್ನ ಹಿಂಬದಿ ಸವಾರ ಸಿಮೆಂಟ್ ಶೀಟ್ ತುಂಡಿನಿಂದ ಪೊಲೀಸ್…
-

ಗಂಡನನ್ನು ಕೊಂದು ರಸ್ತೆ ಅಪಘಾತ ಎಂದು ಬಿಂಬಿಸಿದ ಪತ್ನಿಯ ಬಂಧನ
ತೆಲಂಗಾಣ : ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಕೊಂದು, ಅದನ್ನು ರಸ್ತೆ ಅಪಘಾತ ಎಂದು ಬಿಂಬಿಸಿ ಬರೊಬ್ಬರಿ ಗಂಡನ 2 ಕೋಟಿ ರೂಪಾಯಿ ವಿಮೆ ಹಣ ಲಪಟಾಯಿಸಲು ಸಂಚು ರೂಪಿಸಿದ್ದ ಖತರ್ನಾಕ್ ಮಹಿಳೆ ಹಾಗೂ ಆಕೆಯ ಪ್ರಿಯಕರ ಸೇರಿ ಮೂವರನ್ನು ತೆಲಂಗಾಣ ಪೊಲೀಸರು ಬಂಧಿಸಿದ್ದಾರೆ. ಮೇ 22 ರಂದು ಹಾಜಿಪುರ ಮಂಡಲದ ಗುಡಿಪೇಟೆಯ ಸೈನಿ ಕುಮಾರ್ (45) ಎಂಬುವವರು ನಿಗೂಢ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಮೇಲ್ನೋಟಕ್ಕೆ ಇದು ಅಪಘಾತದಂತೆ ಕಂಡರೂ, ಮೃತರ ತಾಯಿ ಲಕ್ಷ್ಮಿ ಅವರು ನೀಡಿದ…
-

ಮಂಗಳೂರು: ಕುಡಿದು ಕಾರು ಚಲಾಯಿಸಿ ಪೊಲೀಸ್ ಸಿಬ್ಬಂದಿಗೆ ಕಾರು ಡಿಕ್ಕಿ ಹೊಡೆದ ಯಕ್ಷಗಾನ ಕಲಾವಿದ!!
ಮಂಗಳೂರು : ನಗರದ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ವೇರ್ ಹೌಸ್ ಸಮೀಪ ಕುಡಿದು ಕಾರು ಚಲಾಯಿಸಿದ್ದ ಆರೋಪಿಯೊಬ್ಬನು ಕರ್ತವ್ಯದಲ್ಲಿದ್ದ ಇಬ್ಬರು ಪೊಲೀಸ್ ಸಿಬ್ಬಂದಿಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಮಂಗಳೂರು ನಗರ ಸಂಚಾರ ಪಶ್ಚಿಮ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ವಿಠ್ಠಲ್ ದಾಸ್ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಕುಮಾರ ಅವರು ರಾತ್ರಿ ಕರ್ತವ್ಯದಲ್ಲಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಬಲ್ಲಾಲ್ ಬಾಗ್ ಜಂಕ್ಷನ್ ಬಳಿ ಅಪಘಾತಕ್ಕೊಳಗಾದ ವಾಹನ ಪ್ರಕರಣವನ್ನು ಪರಿಶೀಲಿಸಿ ಠಾಣೆಗೆ ತೆರಳುತ್ತಿದ್ದ ಸಂದರ್ಭದಲ್ಲಿ, KA-19 MP-9623…
-

ಮಾಜಿ ರೌಡಿಶೀಟರ್ಗೆ ಆಶೀರ್ವಾದ?: ಮಹಿಳಾ ಆಯೋಗದ ಅಧ್ಯಕ್ಷೆ ಮತ್ತೆ ವಿವಾದದಲ್ಲಿ
ಉಡುಪಿ : ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಮತ್ತೊಮ್ಮೆ ವಿವಾದದ ಸುಳಿಗೆ ಸಿಲುಕಿದ್ದಾರೆ. ಉಡುಪಿ ಜಿಲ್ಲಾ ಪ್ರವಾಸದ ವೇಳೆ ಅವರು ಮಾಜಿ ರೌಡಿಶೀಟರ್ ಒಬ್ಬರಿಗೆ ಕಾರಿನಲ್ಲೇ ಕುಳಿತು ತಲೆ ಮುಟ್ಟಿ ಆಶೀರ್ವದಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆ. ಇತ್ತೀಚೆಗಷ್ಟೇ ಉಡುಪಿ ಜಿಲ್ಲಾ ಪ್ರವಾಸ ಕೈಗೊಂಡಿದ್ದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಜಿಲ್ಲೆಯ ವಿವಿಧ ಅಧಿಕೃತ ಕಾರ್ಯಕ್ರಮಗಳಲ್ಲಿ…
-

ಬೈಜುಸ್ ಸಂಸ್ಥಾಪಕ ಬೈಜು ರವೀಂದ್ರನ್ಗೆ 6 ತಿಂಗಳ ಜೈಲು ಶಿಕ್ಷೆ
ಸಿಂಗಾಪುರ: ಬೈಜುಸ್ ಕಂಪನಿಯ ಸಂಸ್ಥಾಪಕ ಬೈಜು ರವೀಂದ್ರನ್ ಅವರಿಗೆ ಸಿಂಗಾಪುರ ನ್ಯಾಯಾಲಯವು 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಕತಾರ್ ಇನ್ವೆಸ್ಟ್ಮೆಂಟ್ ಅಥಾರಿಟಿಯ ಅಂಗಸಂಸ್ಥೆಯಾದ ಕತಾರ್ ಹೋಲ್ಡಿಂಗ್ (Qatar Holding LLC) ಒಪ್ಪಂದ ಉಲ್ಲಂಘನೆ ಮತ್ತು ವಂಚನೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಆದೇಶ ಪ್ರಕಟವಾಗಿದೆ. ಆಸ್ತಿ ವಿವರಗಳಿಗೆ ಸಂಬಂಧಿಸಿದಂತೆ ಏಪ್ರಿಲ್ 2024 ರಿಂದ ನ್ಯಾಯಾಲಯ ನೀಡಿದ್ದ ಹಲವು ಆದೇಶಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಇವರಿಗೆ ಶಿಕ್ಷೆ ವಿಧಿಸಲಾಗಿದೆ. ರವೀಂದ್ರನ್ ಅವರು ಯಾವುದೇ ನೆಪ ಹೇಳದೆ ತಕ್ಷಣವೇ ಸಿಂಗಾಪುರದ ಸಂಬಂಧಿತ ಅಧಿಕಾರಿಗಳ…
-

ಎಸ್ಬಿಐ ಮ್ಯಾನೇಜರ್ ಸೋಗಿನಲ್ಲಿ ಸೈಬರ್ ವಂಚನೆ-ಬ್ಯಾಂಕ್ ಲೋನ್ ಇಎಂಐ ಗೊಂದಲ ಬಗೆಹರಿಸುವ ನೆಪದಲ್ಲಿ ಮೋಸ
ಪುತ್ತೂರು: ಬ್ಯಾಂಕ್ ಲೋನ್ ಇಎಂಐ (EMI) ಗೊಂದಲ ಬಗೆಹರಿಸುವ ನೆಪದಲ್ಲಿ ಎಸ್ಬಿಐ ಬ್ಯಾಂಕ್ ಮ್ಯಾನೇಜರ್ ಸೋಗಿನಲ್ಲಿ ಕರೆ ಮಾಡಿದ ಸೈಬರ್ ಕಳ್ಳರು, ಮಹಿಳೆಯೊಬ್ಬರ ಮೊಬೈಲ್ ಆ್ಯಪ್ ಮೂಲಕ ಬರೋಬ್ಬರಿ 2,92,000/- ರೂಪಾಯಿ ಹಣವನ್ನು ಲೂಟಿ ಮಾಡಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ವಂಚನೆಗೊಳಗಾದ 40 ವರ್ಷದ ಮಹಿಳೆಯೊಬ್ಬರು ಈ ಕುರಿತು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಪಿರ್ಯಾದಿದಾರ ಮಹಿಳೆಯು ದಿನಾಂಕ 22-05-2026 ರಂದು ಪುತ್ತೂರಿನ ಕೋರ್ಟ್ ರೋಡ್ನಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಶಾಖೆಯಿಂದ ₹2,94,000/- ಚಿನ್ನದ ಸಾಲ…
-

ಹೆಲ್ಮೆಟ್ ಇಲ್ಲ, ಸೀಟ್ ಬೆಲ್ಟ್ ಇಲ್ಲ… ಉಡುಪಿ ರಾಡಾರ್ ಕ್ಯಾಮೆರಾಗಳಿಗೆ ಸಿಕ್ಕಿಬಿದ್ದ ಸಾವಿರಾರು ವಾಹನ ಸವಾರರು
ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಆರು ಸ್ಥಳಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊಸದಾಗಿ ಅಳವಡಿಸಲಾದ ಸುಧಾರಿತ ವೇಗದ ರಾಡಾರ್ ಕ್ಯಾಮೆರಾಗಳ ಮೂಲಕ ಒಂದು ವಾರದೊಳಗೆ ಒಟ್ಟು 47,709 ಸಂಚಾರ ನಿಯಮ ಉಲ್ಲಂಘನೆಗಳು ಪತ್ತೆಯಾಗಿವೆ. ಈ ಪೈಕಿ 243 ಪ್ರಕರಣಗಳಲ್ಲಿ ಈಗಾಗಲೇ ಚಲನ್ ನೀಡಲಾಗಿದೆ.ಪೊಲೀಸರ ಮಾಹಿತಿಯ ಪ್ರಕಾರ, ಮೇ 21 ರಿಂದ 26 ರವರೆಗೆ, 3,99,319 ವಾಹನಗಳನ್ನು ಸ್ಪೀಡ್ ರಾಡಾರ್ ಕ್ಯಾಮೆರಾ ವ್ಯವಸ್ಥೆಯಿಂದ ಮೇಲ್ವಿಚಾರಣೆ ಮಾಡಲಾಗಿದೆ. ಸೀಟ್ ಬೆಲ್ಟ್ ಧರಿಸದ 12,440 ಪ್ರಕರಣಗಳು, ಹೆಲ್ಮೆಟ್ ಇಲ್ಲದೆ ಸವಾರಿ ಮಾಡಿದ 11,509 ಪ್ರಕರಣಗಳು, ರಾಂಗ್…
-

ಕರಾವಳಿಯನ್ನೇ ಬೆಚ್ಚಿಬೀಳಿಸಿದ ಭೀಕರ ಪೋಕ್ಸೋ ಪ್ರಕರಣ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ – ಇಬ್ಬರು ಕಾಮುಕರ ಬಂಧನ
ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ ಜಾಲದಲ್ಲಿ ಬೀಳಿಸಿ, ಲಾಡ್ಜ್ಗೆ ಕರೆದೊಯ್ದು ಸರಣಿ ಅತ್ಯಾಚಾರ ಎಸಗಿದ್ದಲ್ಲದೆ, ಆಕೆಯ ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿ ವಂಚಿಸಿರುವ ಅತ್ಯಂತ ಗಂಭೀರ ಹಾಗೂ ಪೈಶಾಚಿಕ ಪ್ರಕರಣವೊಂದು ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ತೆಕ್ಕಟ್ಟೆಯ ಜಿತೇಂದ್ರ ಶೆಟ್ಟಿ (ಆರೋಪಿ-1) ಹಾಗೂ ಸುಶಾನ್ ಪೂಜಾರಿ (ಆರೋಪಿ-2) ಎಂಬ ಇಬ್ಬರು ಆರೋಪಿಗಳ ವಿರುದ್ಧ ಪೋಕ್ಸೋ (POCSO) ಮತ್ತು ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಬಂದಿಸಲಾಗಿದೆ. ಘಟನೆ ವಿವರ: ಸ್ನಾಪ್ಚಾಟ್ನಲ್ಲಿ ಶುರುವಾದ…
-

ವ್ಯಕ್ತಿಯ ಮೇಲೆ ಫೈರಿಂಗ್- ಮತ್ತೆ ರೌಡಿಗಳ ಅಟ್ಟಹಾಸ!!
ಧಾರವಾಡ: ವಿವಾದವೊಂದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನ ಮೇಲೆ ಹುಬ್ಬಳ್ಳಿಯ ವ್ಯಕ್ತಿಯೋರ್ವ ಗುಂಡು ಹಾರಿಸಿರುವ ಪ್ರಕರಣ ವಿದ್ಯಾಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗಾಯಾಳು ಮತ್ತು ಗುಂಡು ಹೊಡೆದವ ಬಗ್ಗೆ ಮಾಹಿತಿಯನ್ನ ಪೊಲೀಸರು ನಿಖರವಾಗಿ ಕೆಲವೇ ನಿಮಿಷಗಳಲ್ಲಿ ಹೇಳಲಿದ್ದು, ಗುಂಡು ತಗುಲಿರುವ ವ್ಯಕ್ತಿಯನ್ನ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆಯ ಮಾಹಿತಿ ಸಿಗುತ್ತಿದ್ದ ಹಾಗೇ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಮತ್ತು ಆಸ್ಪತ್ರೆಗೆ ದೌಡಾಯಿಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











