Author: News Editor
-

ರಾಯರೆಡ್ಡಿ ಇಸ್ಲಾಮ್ ಹೇಳಿಕೆ: ಆರ್.ಅಶೋಕ್ ತನ್ನ ಸಂಘ ಮುಖ್ಯಸ್ಥ ಭಾಗವತ್, ವಿದೇಶದಲ್ಲಿ ಮುಸ್ಲಿಮ್ ಪರ ಹೇಳಿಕೆ ನೀಡುವುದನ್ನು ನಿಲ್ಲಿಸಲಿ: ಕೆ. ಅಶ್ರಫ್
ಮಂಗಳೂರು: ಬಸವರಾಯ ರೆಡ್ಡಿ ಇತ್ತೀಚೆಗೆ ಒಂದು ಕಾರ್ಯಕ್ರಮದಲ್ಲಿ ಸಾಮಾನ್ಯ ಸಾಮುದಾಯಿಕ ಹೇಳಿಕೆ ನೀಡುತ್ತಾ ಇಸ್ಲಾಮ್ ಶ್ರೇಷ್ಠ ಧರ್ಮ ಎಂಬುದಾಗಿ ಸಾರ್ವಜನಿಕವಾಗಿ ಪ್ರಶಂಸಿರುತ್ತಾರೆ. ಬಸವರಾಯ ರೆಡ್ಡಿ ಯವರದ್ದು ಯಾವುದೇ ರಾಜಕೀಯ ಅಥವಾ ಪ್ರಚೋದನಕಾರಿ ಹೇಳಿಕೆ ಅಲ್ಲ. ಬಸವ ರಾಯ ರೆಡ್ಡಿಯವರು ಯಾವುದೇ ಒಂದು ನಿರ್ಧಿಷ್ಟ ಸಮುದಾಯವನ್ನು ಓಲೈಕೆ ಮಾಡುವ ಹೇಳಿಕೆಯೂ ಅಲ್ಲ, ಈ ಹಿಂದೆ ಹಲವು ಚಿಂತಕರು, ಸಂಶೋಧಕರು, ಬುದ್ಧಿಜೀವಿಗಳು ನೀಡಿದ ಸಾಮಾನ್ಯ ಹೇಳಿಕೆ ಆಗಿರುತ್ತದೆ.ಆದರೆ, ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್ ಅವರಿಗೆ, ಬಸವ ರಾಯ ರೆಡ್ಡಿ…
-

ಸಿಹಿ ತಿಂಡಿ ಘಟಕಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ: 3 ಘಟಕಗಳು ಬಂದ್, ಕಳಪೆ ಆಹಾರ ಜಪ್ತಿ
ರಾಜ್ಯದಲ್ಲಿ ಆಹಾರ ಸುರಕ್ಷತೆ ಹಾಗೂ ನೈರ್ಮಲ್ಯ ಮಾನದಂಡಗಳ ಕಟ್ಟುನಿಟ್ಟಿನ ಪಾಲನೆಗಾಗಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯು ಪ್ರಮುಖ ನಗರಗಳ ಸಿಹಿ ತಿಂಡಿ ತಯಾರಿಕಾ ಘಟಕಗಳ ಮೇಲೆ ಬೃಹತ್ ಜಂಟಿ ಕಾರ್ಯಾಚರಣೆ ನಡೆಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಯು.ಟಿ. ಖಾದರ್ ಅವರ ನಿರ್ದೇಶನದಂತೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ಹಾಗೂ 2011ರ ನಿಯಮಾವಳಿಗಳ ಅನ್ವಯ ಈ ವಿಶೇಷ ತಪಾಸಣೆ ಕೈಗೊಳ್ಳಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಗ್ರೇಟರ್ ಬೆಂಗಳೂರು ಪ್ರಾಧಿಕಾರ…
-

ಮಂಗಳೂರು KRIDL ಅಧಿಕಾರಿಗಳ ವಿರುದ್ದ ಭ್ರಷ್ಟಾಚಾರ ಆರೋಪ: ತನಿಖೆಗೆ ಆಗ್ರಹಿಸಿ ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ
ಮಂಗಳೂರಿನ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ (KRIDL) ವಿಭಾಗದ ಅಧಿಕಾರಿಗಳು ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸುದೀರ್ಘ ಪತ್ರ ಬರೆದು ದೂರು ನೀಡಿದ್ದಾರೆ. KRIDL ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ವಿಜಯ್ ಹಾಗೂ ಕಿರಿಯ ಇಂಜಿನಿಯರ್ ಪ್ರಜ್ವಲ್ ಅವರು ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡಿ, ಅನಗತ್ಯ ಕಿರುಕುಳ ನೀಡುತ್ತಿದ್ದಾರೆ ಎಂದು ಪತ್ರದಲ್ಲಿ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಇಲಾಖೆಯ ಕಾಮಗಾರಿಗಳನ್ನು ನಿರ್ವಹಿಸುತ್ತಿರುವ…
-

ಸ್ಲೀಪರ್ ಬಸ್ ನಲ್ಲಿ 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ
ದೇಶದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು ದೆಹಲಿಯಲ್ಲಿ 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಸ್ಲೀಪರ್ ಬಸ್ ನಲ್ಲಿ ಬಸ್ಸಿನ ಚಾಲಕ ಮತ್ತು ಕಂಡಕ್ಟರ್ ನಿಂದಲೇ ಈ ಒಂದು ಹೀನ ಕೃತ್ಯ ನಡೆದಿದ್ದು, ಆಗಸ್ಟ್ 4 ರಂದು ರಾತ್ರಿ ನಡೆದಿರುವ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ. 11ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಇಬ್ಬರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಉತ್ತರಪ್ರದೇಶದ ಗ್ರೇಟರ್ ನೋಯ್ಡಾದ ಪರಿಚೋಕ್ ನಲ್ಲಿ ಬಾಲಕಿಗೆ ಸ್ಲೀಪರ್ ಬಸ್…
-

ಮಂಗಳೂರು: ಮೊಬೈಲ್ ವಿಚಾರಕ್ಕೆ ಚಾಕುವಿನಿಂದ ಇರಿದು ಅಣ್ಣನ ಕೊಲೆ ಮಾಡಿದ ತಮ್ಮ..!!
ಮಂಗಳೂರು: ಮೊಬೈಲ್ ಫೋನ್ ವಿಚಾರವಾಗಿ ಅಣ್ಣ-ತಮ್ಮನ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ ಅಣ್ಣನನ್ನು ತಮ್ಮನೇ ಚಾಕುವಿನಿಂದ ಇರಿದು ಕೊಂದ ಘಟನೆ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬಿಜೈ ಕೊಟ್ಟಾರ ಕ್ರಾಸ್ ಬಳಿ ಭಾನುವಾರ(ಆ.30) ರಾತ್ರಿ ನಡೆದಿದೆ. ಕೊಲೆಯಾದವರನ್ನು ಅಡಿವೆಪ್ಪ (40) ಎಂದು ಗುರುತಿಸಲಾಗಿದ್ದು, ರಾಜು (36) ಕೊಲೆ ಆರೋಪಿ ತಮ್ಮ. ಮೂಲತಃ ಬೆಳಗಾವಿ ಜಿಲ್ಲೆಯ ಬೈಲಹೊಂಗಲದವರಾದ ಅಣ್ಣ-ತಮ್ಮ ಇಬ್ಬರು ತಾಯಿಯೊಂದಿಗೆ ಕೊಟ್ಟಾರ ಕ್ರಾಸ್ ಬಳಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ತಾಯಿ ಗೂಡಂಗಡಿ ನಡೆಸುತ್ತಿದ್ದು, ಇಬ್ಬರೂ ಕೂಲಿ…
-

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್ಪಿಸಿ ವಾರಂಟ್ ಆರೋಪಿಯ ಬಂಧನ
ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್ಪಿಸಿ (LPC) ವಾರಂಟ್ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಹಮ್ಮದ್ ತೌಸೀಫ್ (40), ಸೈಯದ್ ಮುಕ್ಬಾಲ್ ಅವರ ಪುತ್ರ, ಪೈವಳಿಕೆ ಟೆಂಪಲ್ ಹತ್ತಿರ, ಉಪ್ಪಳ ಅಂಚೆ, ಮಂಜೇಶ್ವರ, ಕಾಸರಗೋಡು, ಕೇರಳ ರಾಜ್ಯ ಎಂದು ಗುರುತಿಸಲಾಗಿದೆ. ಆರೋಪಿಯ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಕ್ರಮಾಂಕ 135/2013, ಕಲಂ 392 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಆರೋಪಿಯು ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಮಾನ್ಯ…
-

ಪಿಡಿಒ ಮನೆ ದರೋಡೆ : ಬೀಗ ಮುರಿದು ಚಿನ್ನ, ಬೆಳ್ಳಿ ಸೇರಿ ಒಟ್ಟು 1.4 ಕೋಟಿ ದೋಚಿ ಖದೀಮರು ಪರಾರಿ!
ಮನೆಯ ಬೀಗ ಮುರಿದು 1.42 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ಕಳ್ಳತನ ಮಾಡಿದ್ದಾರೆ. ಪಿಡಿಒ ದಂಪತಿಯ ಮನೆಗೆ ನುಗ್ಗಿ ನಗ, ನಾಣ್ಯವನ್ನು ಕದ್ದು ಕಳ್ಳರು ಪರಾರಿಯಾಗಿದ್ದಾರೆ. ಶಿವಮೊಗ್ಗದ ವಿದ್ಯಾನಗರದ 4-A ಕ್ರಾಸ್ ನಲ್ಲಿ ಈ ಒಂದು ಕಳ್ಳತನ ನಡೆದಿದೆ. ಮನೆಯ ಬೀಗ ಮುರಿದು ಮನೆಯಲ್ಲಿದ್ದ ಚಿನ್ನ, ಬೆಳ್ಳಿ ನಗದು ಹಣ ಕದ್ದು ಕಳ್ಳರು ಪರಾರಿ ಆಗಿದ್ದಾರೆ ಮನೆಯಲ್ಲಿದ್ದ 943 ಗ್ರಾಂ ಚಿನ್ನಾಭರಣ, 500 ಗ್ರಾಮ ಬೆಳ್ಳಿ 1.5 ಲಕ್ಷ ಮೌಲ್ಯದ 15 ವಾಚ್ 86,000 ನಗದು ಹಣ…
-

ಕೆಪಿಎಸ್ಸಿ ನೇಮಕಾತಿ ಹಗರಣ: ‘IAS’ ಅಧಿಕಾರಿ ಗ್ಯಾನೇಂದ್ರ ಕುಮಾರ ಅರೆಸ್ಟ್ ಬೆನ್ನಲ್ಲೇ ಮತ್ತೊಬ್ಬ ಪ್ರಮುಖ ಮಧ್ಯವರ್ತಿ ವಶಕ್ಕೆ
ಕೆಪಿಎಸ್ಸಿ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಐಡಿ (CID) ಅಧಿಕಾರಿಗಳು ತಮ್ಮ ತನಿಖೆಯನ್ನು ತೀವ್ರಗೊಳಿಸಿದ್ದು, ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಅವರ ಬಂಧನದ ಬೆನ್ನಲ್ಲೇ ಇದೀಗ ಪ್ರಕರಣದಲ್ಲಿದ್ದ ಮತ್ತೊಬ್ಬ ಪ್ರಮುಖ ಮಧ್ಯವರ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಐಎಎಸ್ ಅಧಿಕಾರಿಗೆ ಅಕ್ರಮ ಎಸಗಲು ನೇರವಾಗಿ ನೆರವು ನೀಡಿದ್ದ ಆರೋಪದ ಮೇಲೆ ಈ ಮಧ್ಯವರ್ತಿಯನ್ನು ವಶಕ್ಕೆ ಪಡೆಯಲಾಗಿದ್ದು, ಪ್ರಸ್ತುತ ಆತನನ್ನು ಸಿಐಡಿ ತೀವ್ರ ವಿಚಾರಣೆಗೆ ಒಳಪಡಿಸಿದೆ. ಇದಕ್ಕೂ ಮುನ್ನ, ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಅವರನ್ನು ಸಿಐಡಿ ಸುದೀರ್ಘ ವಿಚಾರಣೆಗೆ…
-

ಮಂಗಳೂರು ಪಶ್ಚಿಮ ವಲಯದ ಐಜಿಪಿ ಅಮಿತ್ ಸಿಂಗ್, ಡಿಸಿಪಿ ಮಿಥುನ್ ಎಚ್.ಎನ್ ವರ್ಗಾವಣೆ
ಮಂಗಳೂರು: ರಾಜ್ಯದಲ್ಲಿ ಪ್ರಮುಖ ಐಪಿಎಸ್ ಅಧಿಕಾರಿಗಳ ವರ್ಗಾವಣೆಯಾಗಿದ್ದು ಪಶ್ಚಿಮ ವಲಯ ಐಜಿಪಿಯಾಗಿದ್ದ ಅಮಿತ್ ಸಿಂಗ್ ಕೆಎಸ್ಆರ್ಪಿ ಪಡೆಯ ಐಜಿಪಿಯಾಗಿ ವರ್ಗಾವಣೆ ಆಗಿದ್ದಾರೆ. ಅವರ ಜಾಗಕ್ಕೆ 2010ರ ಬ್ಯಾಚ್ ಐಪಿಎಸ್ ಅಧಿಕಾರಿ ಆರ್.ಚೇತನ್ ಅವರನ್ನು ನೇಮಕ ಮಾಡಲಾಗಿದೆ. ಇದೇ ವೇಳೆ, ಮಂಗಳೂರು ಕಮಿಷನರೇಟ್ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿದ್ದ ಮಿಥುನ್ ಎಚ್.ಎನ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರನ್ನು ಗದಗ ಜಿಲ್ಲೆಯ ಎಸ್ಪಿಯಾಗಿ ನೇಮಕ ಮಾಡಲಾಗಿದೆ. ಅಮಿತ್ ಸಿಂಗ್ ಅವರು 2024ರ ಜನವರಿ 1ರಂದು ಮಂಗಳೂರಿನ ಪಶ್ಚಿಮ ವಲಯ ಐಜಿಪಿಯಾಗಿ…
-

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರಾಗಿ ಸಂತೋಷ್ ಕುಮಾರ್ ಶೆಟ್ಟಿ ನೇಮಕ
ಮಂಗಳೂರು : ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ಕ್ಕೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಸದಾಶಿವ ಉಲ್ಲಾಳ್ ಅವರ ಬದಲಿಗೆ ಮಂಗಳೂರಿನ ಕೊಟ್ಟಾರ ನಿವಾಸಿ ಸಂತೋಷ್ ಕುಮಾರ್ ಶೆಟ್ಟಿ, ಬಿನ್ ಕೆ. ರಾಘವ ಶೆಟ್ಟಿ ಅವರನ್ನು ಮುಡಾ ಅಧ್ಯಕ್ಷರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ. ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯ್ದೆ, 1987ರ ಕಲಂ 3ರ ಉಪ ಕಲಂ 3(ಎ) ಹಾಗೂ 3(4)ರ ಅಡಿಯಲ್ಲಿ ಸರ್ಕಾರಕ್ಕೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ನೇಮಕ ಮಾಡಲಾಗಿದೆ. ಆಗಸ್ಟ್ 29, 2026ರಿಂದಲೇ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











