Author: News Editor
-

ಕಂಕನಾಡಿಯಲ್ಲಿ ವಾಹನ ಕಳ್ಳರ ಹಾವಳಿ: ಸ್ಕೂಟರ್ ಕಳವು ಆರೋಪ
ಮಂಗಳೂರು: ಕಂಕನಾಡಿ ಸುವರ್ಣ ಲೈನ್ 6ನೇ ಅಡ್ಡ ರಸ್ತೆಯ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಲಾಗಿದ್ದ ಸ್ಕೂಟರ್ ಕಳವಾಗಿರುವ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತೋಷ್ ಕುಮಾರ್ ಸ್ಕೂಟರ್ ಪಾರ್ಕ್ ಮಾಡಿದ್ದರು. ಮರಳಿ ಬಂದು ನೋಡಿದಾಗ ಸ್ಕೂಟರ್ ನಿಲ್ಲಿಸಿದ್ದ ಸ್ಥಳದಲ್ಲಿ ಇರಲಿಲ್ಲ. ಕಳವಾದ ಸ್ಕೂಟರನ್ನು ಸುತ್ತಮುತ್ತ ಎಲ್ಲ ಕಡೆ ಹುಡುಕಾಡಿದರೂ ಸ್ಕೂಟರ್ ಪತ್ತೆಯಾಗಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.
-

ಮಂಗಳೂರಿನಲ್ಲಿ ವಕೀಲರಿಗೆ ಬೆದರಿಕೆ ಹಾಗೂ ಹಲ್ಲೆ ಯತ್ನ: ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲು
ಮಂಗಳೂರು: ತನ್ನ ಕಕ್ಷಿದಾರೆಯ ಪತಿಯ ವಿರುದ್ಧ ಕಳೆದ 9 ವರ್ಷಗಳಿಂದ ನಡೆಯುತ್ತಿರುವ ದೌರ್ಜನ್ಯ ಹಾಗೂ ಮಾನಸಿಕ ಹಿಂಸೆ ಪ್ರಕರಣದಲ್ಲಿ ಕಾನೂನು ಸಹಾಯ ಪಡೆಯಲು ನ್ಯಾಯವಾದಿ ಜೀಶನ್ ಅಲಿ ಅವರನ್ನು ಮಹಿಳೆ ಸಂಪರ್ಕಿಸಿದ್ದ ಘಟನೆಗೆ ಸಂಬಂಧಿಸಿದಂತೆ, ಇದೀಗ ನ್ಯಾಯವಾದಿಯ ಮೇಲೆಯೇ ಹಲ್ಲೆ ಯತ್ನ ನಡೆದಿರುವ ಆರೋಪ ಕೇಳಿಬಂದಿದೆ. ದಿನಾಂಕ 11-05-2026ರಂದು ಸಂಜೆ ಸುಮಾರು 7 ಗಂಟೆಯ ವೇಳೆಗೆ, ನ್ಯಾಯವಾದಿ ಜೀಶನ್ ಅಲಿ ಅವರು ತಮ್ಮ ವೃತ್ತಿ ಕಾರ್ಯ ಮುಗಿಸಿ ಅತ್ತಾವರ ಪ್ರದೇಶದ ಮೂಲಕ ಮನೆಗೆ ತೆರಳುತ್ತಿದ್ದ ವೇಳೆ, ಆರೋಪಿ…
-

6 ವರ್ಷಗಳ ಬಳಿಕ ವಾರಂಟ್ ಆರೋಪಿ ಬಂಧನ; ನ್ಯಾಯಾಲಯಕ್ಕೆ ಹಾಜರು
ಮಂಗಳೂರು: 6 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ಸಿಯಾಗಿದ್ದಾರೆ. ನ್ಯಾಯಾಲಯವು ಆರೋಪಿತನ ಮೇಲೆ ದಸ್ತಗಿರಿ ವಾರಂಟ್ ನ್ನು ಹೊರಡಿಸಿತ್ತು. ಬಳಿಕ ಆರೋಪಿಯನ್ನು ಕೇರಳ ರಾಜ್ಯದ ಮಂಜೇಶ್ವರದ ಬಳಿ ಮೇಲಾಧಿಕಾರಿಗಳ ನಿರ್ದೇಶನದಂತೆ, ಪೊಲೀಸ್ ನಿರೀಕ್ಷಕರಾದ ಮೊಹಮ್ಮದ್ ಸಲೀಂ ಅಬ್ಬಾಸ್ ರವರ ಮಾರ್ಗದರ್ಶನದಲ್ಲಿ, ಠಾಣಾ ಸಿ ಹೆಚ್ ಸಿ ಗಳಾದ ನವೀನ ಚಂದ್ರ, ಸಯ್ಯದ್ ಇಂತಿಯಾಜ್, ಸಿಪಿಸಿಗಳಾದ ರಾಕೇಶ್ ಮತ್ತು ವಿನಯ್ ನೇತೃತ್ವದಲ್ಲಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
-

ಕರ್ನಾಟಕದಲ್ಲಿ ಹೊಸ ಅಬಕಾರಿ ನೀತಿ ಜಾರಿ: ಬಜೆಟ್ ಮದ್ಯ ದುಬಾರಿ, ಪ್ರೀಮಿಯಂ ಮದ್ಯ ಅಗ್ಗ
ಬೆಂಗಳೂರು: ಕರ್ನಾಟಕ ಸರ್ಕಾರವು ಬಹುದಿನಗಳಿಂದ ಚರ್ಚೆಯಲ್ಲಿದ್ದ ಹೊಸ ಅಬಕಾರಿ ನೀತಿಯನ್ನು ಸೋಮವಾರದಿಂದ (ಮೇ 11) ಅಧಿಕೃತವಾಗಿ ಜಾರಿಗೆ ತಂದಿದೆ. ದಶಕಗಳ ಹಳೆಯದಾದ ಅಬಕಾರಿ ತೆರಿಗೆ ಪದ್ಧತಿಯನ್ನು ಕೈಬಿಟ್ಟು, ಮದ್ಯದಲ್ಲಿರುವ ಆಲ್ಕೋಹಾಲ್ ಪ್ರಮಾಣಕ್ಕೆ ಅನುಗುಣವಾಗಿ ತೆರಿಗೆ ವಿಧಿಸುವ ಮಾದರಿಯನ್ನು ಅಳವಡಿಸಿಕೊಂಡಿದೆ. ಈ ಮೂಲಕ, ಈ ಮಾದರಿಯ ಅಬಕಾರಿ ನೀತಿ ಅಳವಡಿಸಿಕೊಂಡ ಭಾರತದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ. ಆದರೆ, ಈ ಬದಲಾವಣೆಯಿಂದ ಜನಸಾಮಾನ್ಯರು ಬಳಸುವ ಕಡಿಮೆ ಬೆಲೆಯ ಮದ್ಯದ ದರವನ್ನು ಏರಿಕೆ ಮಾಡಲಿದ್ದು, ಪ್ರೀಮಿಯಂ ಅಥವಾ ವಿದೇಶಿ ಬ್ರಾಂಡ್‌ಗಳ ಮದ್ಯದ…
-

2.5 ಕೋಟಿ ಮೌಲ್ಯದ ಚಿನ್ನಾಭರಣ ಎಂದ ಪ್ರಚಾರಕ್ಕೆ ಟ್ವಿಸ್ಟ್; ಚಿನ್ನ ಲೇಪಿತ ತಾಮ್ರ ಪತ್ತೆ
ಕೊಪ್ಪಳ: ಅಂಜನಾದ್ರಿ ಬೆಟ್ಟದ ಆಂಜನೇಯ ಸ್ವಾಮಿಗೆ ಹೈದರಾಬಾದ್ ಮೂಲದ ಉದ್ಯಮಿಯೊಬ್ಬರು ಸಮರ್ಪಿಸಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನದ ಆಭರಣಗಳ ವಿಚಾರ ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ಸುಮಾರು 2.50 ಕೋಟಿ ರೂಪಾಯಿ ಮೌಲ್ಯದ ಬಂಗಾರದ ಆಭರಣಗಳು ಎಂದು ಬಿಂಬಿತವಾಗಿದ್ದ ಈ ದೇಣಿಗೆಯು, ವಾಸ್ತವದಲ್ಲಿ ‘ಚಿನ್ನ ಲೇಪಿತ’ ತಾಮ್ರದ ಆಭರಣಗಳೆಂದು ಜಿಲ್ಲಾಡಳಿತದ ಪರಿಶೀಲನೆಯಲ್ಲಿ ಬಯಲಾಗಿದೆ. ಹೈದರಾಬಾದ್ ಮೂಲದ ಎಎಂಆರ್ ಗ್ರೂಪ್ ಉದ್ಯಮಿ ಮಹೇಶ ರೆಡ್ಡಿ ಅವರು ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರೊಂದಿಗೆ ಇತ್ತೀಚೆಗಷ್ಟೇ ಅಂಜನಾದ್ರಿಗೆ ಆಗಮಿಸಿ…
-

ಕರ್ನಾಟಕದಲ್ಲಿ ಪೆಟ್ರೋಲ್ ಬಂಕ್‌ಗಳಿಗೆ ಹೊಸ ನಿಯಮಗಳು: ಇಂಧನ ವಿತರಣೆಗೆ ಕಠಿಣ ಮಾರ್ಗಸೂಚಿ ಜಾರಿ
ಬೆಂಗಳೂರು: ದೇಶಾದ್ಯಂತ ಇಂಧನ ಪೂರೈಕೆಯಲ್ಲಿ ಕೊರತೆ ಉಂಟಾಗಬಹುದೆಂಬ ಆತಂಕದ ನಡುವೆ, ಕರ್ನಾಟಕ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟ ಮತ್ತು ವಿತರಣೆಗೆ ಸಂಬಂಧಿಸಿದಂತೆ ಪೆಟ್ರೋಲ್ ಬಂಕ್‌ಗಳಿಗೆ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಹೊರಡಿಸಿದೆ. ಗ್ರಾಹಕರ ಹಿತದೃಷ್ಟಿಯಿಂದ ಹಾಗೂ ಸುರಕ್ಷತೆಯ ಕಾರಣಗಳಿಗಾಗಿ ಈ ಕ್ರಮ ಕೈಗೊಳ್ಳಲಾಗಿದ್ದು,ನಿಯಂತ್ರಿತ ಇಂಧನ ವಿತರಣಾ ಪದ್ಧತಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಇಲಾಖೆ ಎಲ್ಲಾ ಇಂಧನ ಕೇಂದ್ರಗಳಿಗೆ ನಿರ್ದೇಶನ ನೀಡಿದೆ ಇಲಾಖೆಯ ಈ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು,…
-

ಮದುವೆ ನಿಶ್ಚಯದ ಬಳಿಕ ಭೀಕರ ದುರಂತ: ಯುವತಿ ಜೀವನ ಅಂತ್ಯಗೊಳಿಸಿದ ಘಟನೆ
ಕುಂಬಳೆ : ತನ್ನೊಂದಿಗೆ ವಿವಾಹ ನಿಶ್ಚಯವಾಗಿದ್ದ ಯುವಕ ರಸ್ತೆ ಅಪಘಾತದಲ್ಲಿ ಮೃತಪಟ್ಟ ನೋವು ತಾಳಲಾರದೆ ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಕಿದೂರಿನಲ್ಲಿ ಸಂಭವಿಸಿದೆ. ಕಿದೂರು ಕುಂದಂಕೆರಡುಕದ ಬಿ. ಜಯಾನಂದ ಅವರ ಪುತ್ರಿ ಪ್ರಫುಲ್ಲಾ (26) ಮೃತ ದುರ್ದೈವಿ. ತಮಿಳುನಾಡು ಮೂಲದ ಮಣಿ (30) ಎಂಬುವರ ಜೊತೆ ಪ್ರಫುಲ್ಲಾ ಅವರ ವಿವಾಹ ನಿಶ್ಚಯವಾಗಿತ್ತು. ಆದರೆ, ಕೆಲ ದಿನಗಳ ಹಿಂದೆ ಸಂಭವಿಸಿದ ಮೋಟಾರು ಸೈಕಲ್ ಅಪಘಾತದಲ್ಲಿ ಮಣಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಅಂದಿನಿಂದ ತೀವ್ರ ಮಾನಸಿಕ…
-

ಹೈದರಾಬಾದ್ ORR ಭೀಕರ ಅಪಘಾತ: ಯುವ ನಟ ಭರತ್ ಕಾಂತ್ ಮತ್ತು ಸಿನಿಮಾಟೋಗ್ರಾಫರ್ ಸ್ಥಳದಲ್ಲೇ ಸಾವು
ಹೈದರಾಬಾದ್: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಆದಿಬಟ್ಲಾ ಪೊಲೀಸ್ ಠಾಣಾ ವ್ಯಾಪ್ತಿಯ ಔಟರ್ ರಿಂಗ್ ರಸ್ತೆಯಲ್ಲಿ (ORR) ರವಿವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತೆಲುಗು ಚಿತ್ರರಂಗದ ಉದಯೋನ್ಮುಖ ನಟ ಕೆ. ಭರತ್ ಕಾಂತ್ (31) ಮತ್ತು ಸಿನಿಮಾಟೋಗ್ರಾಫರ್ ಜಿ. ಸಾಯಿ ತ್ರಿಲೋಕ್ (31) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೇ 10ರ ರವಿವಾರ ಮುಂಜಾನೆ ಸುಮಾರು 3:20ರ ಸುಮಾರಿಗೆ ಈ ಘಟನೆ ನಡೆದಿದೆ. ಮೃತರಿಬ್ಬರೂ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯವರಾಗಿದ್ದು, ಕೆಲಸದ ನಿಮಿತ್ತ ನೆಲ್ಲೂರಿಗೆ ಹೋಗಿ ಅಲ್ಲಿಂದ ಕಾರಿನಲ್ಲಿ ಹೈದರಾಬಾದ್‌ಗೆ ಮರಳುತ್ತಿದ್ದರು. ಕಾರು…
-

ಪ್ರಧಾನಿ ಮೋದಿ ಭೇಟಿ ವೇಳೆ ಭದ್ರತಾ ಅಲರ್ಟ್: ರಾಮನಗರದಲ್ಲಿ ಅನುಮಾನಾಸ್ಪದ ಬಾಕ್ಸ್ ಪತ್ತೆ, ತನಿಖೆ ತೀವ್ರ
ರಾಮನಗರ: ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ನಗರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಭಾರೀ ಭದ್ರತಾ ಲೋಪದ ಶಂಕೆ ವ್ಯಕ್ತವಾಗಿತ್ತು. ಮೋದಿ ಅವರು ಸಂಚರಿಸುವ ಮಾರ್ಗದ ಪಕ್ಕದಲ್ಲೇ ಸ್ಫೋಟಕಗಳು ಪತ್ತೆಯಾಗಿದ್ದು, ಇಡೀ ಪೊಲೀಸ್ ಇಲಾಖೆಯನ್ನು ಬೆಚ್ಚಿಬೀಳಿಸಿತ್ತು. ಏನಾಗಿತ್ತು? ನಿನ್ನೆ (ಮೇ 10) ಪ್ರಧಾನಿ ಮೋದಿ ಅವರು ‘ಆರ್ಟ್ ಆಫ್ ಲಿವಿಂಗ್’ ಆಶ್ರಮಕ್ಕೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಗಮಿಸಿದ್ದರು. ಅವರು ಬರುವ ಕೇವಲ ಎರಡು ಗಂಟೆಗಳ ಮೊದಲು, ಅಂದರೆ ಬೆಳಿಗ್ಗೆ 9 ಗಂಟೆ ವೇಳೆಗೆ, ಬೆಂಗಳೂರು ದಕ್ಷಿಣ ತಾಲೂಕಿನ ವಡೇರಹಳ್ಳಿ ಗೇಟ್ ಸಮೀಪ…
-

ಬೆಳ್ತಂಗಡಿಯಲ್ಲಿ ಅಕ್ರಮ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ
ಬೆಳ್ತಂಗಡಿ: ತಾಲೂಕಿನ ಕಸಬಾ ಗ್ರಾಮದ ಕೆಇಬಿ ರಸ್ತೆಯಲ್ಲಿರುವ “ಪವನ್” ಹೆಸರಿನ ಕ್ಯಾಂಟಿನ್‌ನಲ್ಲಿ ಅಕ್ರಮ ವೇಶ್ಯಾವಾಟಿಕೆ ನಡೆಯುತ್ತಿರುವ ಕುರಿತು ದೊರೆತ ಖಚಿತ ಮಾಹಿತಿಯ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ. ಕ್ಯಾಂಟಿನ್ ನಡೆಸುತ್ತಿದ್ದ ಸುಂದರ್ ಶೆಟ್ಟಿ ಹಾಗೂ ಅವರ ಪರಿಚಯದ ಉಸ್ಮಾನ್ ಎಂಬವರು ಅಕ್ರಮ ಲಾಭಗಳಿಸುವ ಉದ್ದೇಶದಿಂದ ಕ್ಯಾಂಟಿನ್ ಒಳಗಿನ ಕೋಣೆಯಲ್ಲಿ ಮಹಿಳೆಯರನ್ನು ಕರೆಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಸಿಕಂದರ್ ಪಾಷಾ, ಪೊಲೀಸ್ ಉಪನಿರೀಕ್ಷಕರು (ತನಿಖೆ), ಬೆಳ್ತಂಗಡಿ ಪೊಲೀಸ್ ಠಾಣೆಗೆ ಮಾಹಿತಿ ಲಭಿಸಿತ್ತು.…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











