Author: News Editor
-

ಭಾರತದಲ್ಲಿ ಪ್ರತಿ 18 ನಿಮಿಷಕ್ಕೊಮ್ಮೆ ಅತ್ಯಾಚಾರ! ಅಪರಾಧ ಪ್ರಮಾಣ ಇಳಿಕೆಯ ನಡುವೆಯೂ ಬೆಚ್ಚಿಬೀಳಿಸುತ್ತಿದೆ NCRB ವರದಿ
ನವದೆಹಲಿ: ಭಾರತದಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳ ಕರಾಳ ಮುಖವನ್ನು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB 2024) ತನ್ನ ಇತ್ತೀಚಿನ ವರದಿಯಲ್ಲಿ ಬಯಲು ಮಾಡಿದೆ. ದೇಶದಲ್ಲಿ ಒಟ್ಟಾರೆ ಅಪರಾಧ ದರವು ಸ್ವಲ್ಪ ಮಟ್ಟಿಗೆ ಇಳಿಮುಖವಾಗಿದ್ದರೂ, ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣಗಳು ಆತಂಕಕಾರಿ ಮಟ್ಟದಲ್ಲಿ ಮುಂದುವರಿದಿವೆ. ವರದಿಯ ಪ್ರಕಾರ, ಭಾರತದಲ್ಲಿ ಸರಾಸರಿ ಪ್ರತಿ 18 ನಿಮಿಷಕ್ಕೊಮ್ಮೆ ಒಂದು ಅತ್ಯಾಚಾರ ಪ್ರಕರಣ ದಾಖಲಾಗುತ್ತಿದೆ. ಅಂದರೆ ಪ್ರತಿದಿನ ನೂರಾರು ಮಹಿಳೆಯರು ಲೈಂಗಿಕ ದೌರ್ಜನ್ಯಕ್ಕೆ ಬಲಿಯಾಗುತ್ತಿದ್ದಾರೆ.ಅಪರಾಧ ದರ vs ದಾಖಲಾತಿ:…
-

ಅಕ್ರಮ ಮರಳುದಂಧೆ ಪತ್ತೆ: 50-60 ಮೆಟ್ರಿಕ್ ಟನ್ ಮರಳು ವಶ- ಪ್ರಕರಣ ದಾಖಲು
ಅಕ್ರಮವಾಗಿ ನದಿಯಿಂದ ಮರಳು ಕದ್ದು ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಸುಳ್ಯ ಪೊಲೀಸ್ ಠಾಣೆ ಪೊಲೀಸರು ಪತ್ತೆಹಚ್ಚಿದ್ದು, ಸುಮಾರು 50-60 ಮೆಟ್ರಿಕ್ ಟನ್ ತೂಕದ ಮರಳನ್ನು ವಶಪಡಿಸಿಕೊಂಡಿದ್ದಾರೆ. ಮೇ 8ರಂದು ಬೆಳಿಗ್ಗೆ ತೋಡಿಕಾನ ಗ್ರಾಮದ ಶೆಟ್ಟಿಯಡ್ಕ ಪ್ರದೇಶದಲ್ಲಿ ಮನು ಪೆರ್ಮುಡ ಹಾಗೂ ಚೆಂಬು ಗ್ರಾಮದ ಆ್ಯಂಟನಿ ಎಂಬವರು ಕಾನೂನು ಬಾಹಿರವಾಗಿ ನದಿಯಿಂದ ಮರಳು ತೆಗೆಯಿಸಿ ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಮಾಹಿತಿ ಮೇರೆಗೆ ಪೊಲೀಸ್ ಉಪನಿರೀಕ್ಷಕ ಸಂತೋಷ್ ಬಿ.ಪಿ. ನೇತೃತ್ವದಲ್ಲಿ ಸುಳ್ಯ ಠಾಣೆಯ…
-

ಇನ್‌ಸ್ಟಾಗ್ರಾಮ್ ಪರಿಚಯದಿಂದ ದುರಂತ: ಯುವಕ ನೇಣಿಗೆ ಶರಣು, ಮಹಿಳೆ ನಾಪತ್ತೆ
ಬೆಂಗಳೂರು: ನಗರದಲ್ಲಿ ಲಿವಿನ್ ರಿಲೇಷನ್ಶಿಪ್ನಲ್ಲಿದ್ದವರು ಸಾವಿಗೆ ಶರಣಾಗುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾದಂತಿದೆ. ಶ್ರೀಗಂಧನಗರದಲ್ಲಿಯೂ ಇಂತದ್ದೇ ಘಟನೆ ನಡೆದಿದ್ದು, ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಮೃತನನ್ನು ಚಿತ್ರದುರ್ಗ ಮೂಲದ ತಿಪ್ಪೇಸ್ವಾಮಿ (28) ಎಂದು ಗುರುತಿಸಲಾಗಿದೆ. ನಡೆದಿದ್ದೇನು? ತಿಪ್ಪೇಸ್ವಾಮಿ ಹಾಗೂ ದಾವಣಗೆರೆ ಮೂಲದ ಮಹಿಳೆಯೊಬ್ಬರಿಗೆ ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾಗಿತ್ತು. ಈಕೆ ರೀಲ್ಸ್ ಮಾಡುವುದರಲ್ಲಿ ಸಕ್ರಿಯಳಾಗಿದ್ದು, ಇಬ್ಬರೂ ಒಂದೇ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಪತಿ ಮತ್ತು ಇಬ್ಬರು ಮಕ್ಕಳನ್ನು ಬಿಟ್ಟು ಬಂದಿದ್ದ ಈಕೆ, ಕಳೆದ ಎರಡು ತಿಂಗಳಿನಿಂದ ತಿಪ್ಪೇಸ್ವಾಮಿ ಜೊತೆ…
-

ಪತಿಯ ಮನೆಗೆ ಕನ್ನ ಹಾಕಿ ಪ್ರಿಯಕರನ ಜೊತೆ ಪರಾರಿ: ಬೆಳಗಾವಿಯಲ್ಲಿ ಮಹಿಳೆ–ಪ್ರಿಯಕರ ಬಂಧನ
ಬೆಳಗಾವಿ: ಜಿಲ್ಲೆಯಲ್ಲಿ ಸಿನಿಮಾ ಮಾದರಿಯ ಘಟನೆಯೊಂದು ನಡೆದಿದ್ದು, ಮಹಿಳೆಯೊಬ್ಬಳು ಪ್ರಿಯಕರನ ಜೊತೆ ಜೀವನ ನಡೆಸಲು ಪತಿಯ ಮನೆಗೇ ಕನ್ನ ಹಾಕಿದ ಘಟನೆ ಬೆಳಕಿಗೆ ಬಂದಿದೆ. ಪ್ರಕರಣದ ಹಿನ್ನೆಲೆ ಮಹಿಳೆ ಮತ್ತು ಆಕೆಯ ಪ್ರಿಯಕರನನ್ನು ಕಟಕೋಳ ಪೊಲೀಸರು ಬಂಧಿಸಿದ್ದು, ವಿಚಾರಣೆಗೊಳಪಡಿಸಿದ್ದಾರೆ. ನಡೆದಿದ್ದೇನು? ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹೊಸಕೋಟೆ ಗ್ರಾಮದಲ್ಲಿ ಈ ವಿಚಿತ್ರ ಕಳ್ಳತನ ನಡೆದಿದೆ. ಮೂಲತಃ ಮೂಡಲಗಿ ತಾಲೂಕಿನವಳಾದ ಹಸೀನಾ ನದಾಫ್ ಎಂಬಾಕೆಗೆ ಎರಡು ತಿಂಗಳ ಹಿಂದೆಯಷ್ಟೇ ಹೊಸಕೋಟೆ ಗ್ರಾಮದ ಶರೀಫ್ ಎಂಬುವವರ ಜೊತೆ ವಿವಾಹವಾಗಿತ್ತು. ಆದರೆ, ಹಸೀನಾ…
-

ಬಿಟ್‌ಕಾಯಿನ್ ಹಗರಣದಲ್ಲಿ ಹೊಸ ತಿರುವು:ನಲಪಾಡ್ ಲಿಂಕ್ ಆರೋಪದಿಂದ ರಾಜಕೀಯ ಸಂಚಲನ
ಬೆಂಗಳೂರು: ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಬಿಟ್‌ಕಾಯಿನ್ ಹಗರಣದ ತನಿಖೆ ಈಗ ನಿರ್ಣಾಯಕ ಹಂತಕ್ಕೆ ತಲುಪಿದೆ. ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಹಗರಣದ ಕಿಂಗ್‌ಪಿನ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಸೇರಿದಂತೆ ಮೂವರನ್ನು ಬಂಧಿಸಿದ್ದು, ಇದರ ಬೆನ್ನಲ್ಲೇ ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್‌ಗೆ ಸಂಕಷ್ಟ ಎದುರಾಗುತ್ತಾ ಎಂಬ ಪ್ರಶ್ನೆಯೆದ್ದಿದೆ. ಶ್ರೀಕಿ ಬಂಧನ ಮತ್ತು ನಲಪಾಡ್ ಲಿಂಕ್ ಬಂಧಿತ ಶ್ರೀಕಿ ಜೊತೆ ಮೊಹಮ್ಮದ್ ನಲಪಾಡ್ ನಿಕಟ ಸಂಪರ್ಕ ಹೊಂದಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಹಿಂದೆ ರಾಜ್ಯ…
-

ಮನೆಯ ಬೀಗ ಮುರಿದು ₹6 ಲಕ್ಷ ದೋಚಿದ್ದ ಆರೋಪಿ ಬಂಧನ
ಬೈಂದೂರು: ಯಡ್ತರೆ ಗ್ರಾಮದ ಎಸ್‌ಬಿಐ ಬ್ಯಾಂಕ್ ಹಿಂಭಾಗದ ಬಾಡಿಗೆ ಮನೆಯೊಂದರಲ್ಲಿ ನಡೆದಿದ್ದ ಕಳವು ಪ್ರಕರಣವನ್ನು ಭೇದಿಸಿರುವ ಬೈಂದೂರು ಪೊಲೀಸರು, ರಾಜಸ್ಥಾನ ಮೂಲದ ಆರೋಪಿಯನ್ನು ಬಂಧಿಸಿ 6 ಲಕ್ಷ ರೂಪಾಯಿ ನಗದನ್ನು ವಶಪಡಿಸಿಕೊಂಡಿದ್ದಾರೆ. ರಾಜಸ್ಥಾನದ ಜೋಧ್‌ಪುರ ಜಿಲ್ಲೆಯ ಮಹೇಂದ್ರ ಸೈನ್ (23) ಬಂಧಿತ ಆರೋಪಿ. ಈತ ಬೈಂದೂರಿನ ಬಂಕೇಶ್ವರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದನು. ಏಪ್ರಿಲ್ 23 ರಂದು ಮಧ್ಯಾಹ್ನ ಯಡ್ತರೆ ನಿವಾಸಿ ರಾವಲ್ ಸಿಂಗ್ ಎಂಬುವವರು ಮನೆಯಲ್ಲಿ ಇಲ್ಲದ ಸಮಯವನ್ನು ಹೊಂಚು ಹಾಕಿದ್ದ ಆರೋಪಿ, ಮುಂಭಾಗದ ಬಾಗಿಲಿನ ಬೀಗ…
-

ಹೆಂಡತಿ-ಮಕ್ಕಳನ್ನು ಮನೆಗೆ ಕಳುಹಿಸು ಎಂದಿದ್ದಕ್ಕೆ ಪೆಟ್ರೋಲ್ ಸುರಿದು ಜೀವಂತ ದಹನ
ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್‌ನಲ್ಲಿ ಕೌಟುಂಬಿಕ ಕಲಹವೊಂದು ಭೀಕರ ಕೊಲೆಯಲ್ಲಿ ಅಂತ್ಯವಾಗಿದೆ. ಹೆಂಡತಿ ಮತ್ತು ಮಕ್ಕಳನ್ನು ಮನೆಗೆ ಕಳುಹಿಸಿಕೊಡುವಂತೆ ಕೇಳಲು ಹೋದ ವ್ಯಕ್ತಿಯ ಮೇಲೆ ಆತನ ಮಾವ ಮತ್ತು ಭಾವ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ನಡೆದಿದ್ದು, ವ್ಯಕ್ತಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಸಾವಿಗೂ ಮುನ್ನ ತನ್ನ ಮೇಲಾದ ದೌರ್ಜನ್ಯದ ಕುರಿತು ವ್ಯಕ್ತಿ ಹೇಳಿಕೊಂಡಿದ್ದು, ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮನೆಗೆ ಬಾ ಎಂದಿದ್ದಕ್ಕೆ ಒಪ್ಪದ ಹೆಂಡತಿ ಆನೇಕಲ್ ತಾಲೂಕಿನ ಚೂಡೇನಹಳ್ಳಿ ನಿವಾಸಿ ವಿ. ನವೀನ್ (25)…
-

ರಾಸಲೀಲೆ ಆರೋಪದ ನಡುವೆ ಸರ್ಕಾರದ ಯೂ-ಟರ್ನ್: ರಾಮಚಂದ್ರ ರಾವ್‌ಗೆ ತಾತ್ಕಾಲಿಕ ಹುದ್ದೆ
ಬೆಂಗಳೂರು: ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿ ಡಾ. ಕೆ. ರಾಮಚಂದ್ರ ರಾವ್ ಅವರ ವಿರುದ್ಧ ಹೊರಬಿದ್ದಿದ್ದ ವಿವಾದಾತ್ಮಕ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ರಾಸಲೀಲೆ ಆರೋಪದ ಹಿನ್ನೆಲೆ ಹಿಂದೆ ನೀಡಲಾಗಿದ್ದ ಅಮಾನತು ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. ಐಜಿಪಿ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗಲೇ, ಕಚೇರಿಯಲ್ಲಿಯೇ ಪೊಲೀಸ್ ಸಮವಸ್ತ್ರದಲ್ಲಿ ಮಹಿಳೆಯರೊಂದಿಗೆ ಅಸಭ್ಯ ವರ್ತನೆ ನಡೆಸಿದರೆಂಬ ಆರೋಪದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ವಿಡಿಯೋ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಸಾರ್ವಜನಿಕರ ಆಕ್ರೋಶಕ್ಕೂ ಕಾರಣವಾಯಿತು. ಈ ಹಿನ್ನೆಲೆ ರಾಜ್ಯ…
-

ಬಂಟ್ವಾಳದಲ್ಲಿ ಮನೆ ಬೀಗ ಮುರಿದು ದರೋಡೆ: ಚಿನ್ನಾಭರಣ, ನಗದು ಹಾಗೂ ಬೆಳ್ಳಿ ವಿಗ್ರಹ ಕಳ್ಳತನ
ಬಂಟ್ವಾಳ: ಇಲ್ಲಿನ ಪಚ್ಚಿನಡ್ಕ ಸಮೀಪದ ಗೋರೆಮಾರ್ ನಿವಾಸಿ ಪ್ರಕಾಶ್ ಎಂಬುವವರ ಮನೆಯ ಮುಂಭಾಗದ ಬಾಗಿಲಿನ ಚಿಲಕ ಮುರಿದು ಒಳನುಗ್ಗಿದ ಕಳ್ಳರು, ಚಿನ್ನಾಭರಣ, ನಗದು ಹಾಗೂ ಬೆಳ್ಳಿ ವಿಗ್ರಹವನ್ನು ದೋಚಿದ ಘಟನೆ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ವರದಿಯಾಗಿದೆ. ಮನೆಯ ಕಪಾಟಿನ ಲಾಕರ್‌ನಲ್ಲಿದ್ದ ಸುಮಾರು 16 ಗ್ರಾಂ ತೂಕದ ಮೂರು ಜೋಡಿ ಚಿನ್ನದ ಓಲೆಗಳು ಮತ್ತು ಸುಮಾರು 18 ಗ್ರಾಂ ತೂಕದ ಮೂರು ಚಿನ್ನದ ಉಂಗುರಗಳನ್ನು ಕಳ್ಳರು ದೋಚಿದ್ದಾರೆ. ಇವುಗಳ ಒಟ್ಟು ಮೌಲ್ಯ ಸುಮಾರು 4.13 ಲಕ್ಷ…
-

ಅಪಘಾತದ ನಾಟಕವಾಡಿ ಮಹಿಳೆಯ ಕೊಲೆ: ಸುಲಿಗೆಗಾಗಿ ಸಿನಿಮೀಯ ಶೈಲಿಯಲ್ಲಿ ಸಂಚು ಬಯಲು
ಬೆಂಗಳೂರು: ಬೆಂಗಳೂರಿನಲ್ಲಿ ಹಣದ ಆಸೆಗಾಗಿ ಒಂಟಿ ಮಹಿಳೆಯೊಬ್ಬರನ್ನು ಉದ್ದೇಶಪೂರ್ವಕವಾಗಿ ಅಪಘಾತಕ್ಕೀಡು ಮಾಡಿ ಕೊಲೆ ಮಾಡಿರುವ ಸಿನಿಮೀಯ ಘಟನೆ ಬೆಳಕಿಗೆ ಬಂದಿದೆ. ಏಪ್ರಿಲ್ 21ರಂದು ಕುರುಬರಹಳ್ಳಿಯ ಪೈಪ್ ಲೇನ್ ರಸ್ತೆಯಲ್ಲಿ ನಡೆದ ಈ ಘಟನೆಯನ್ನು ಆರಂಭದಲ್ಲಿ ಕೇವಲ ‘ಅಪಘಾತ’ ಎಂದು ಬಿಂಬಿಸಲಾಗಿತ್ತು. ಆದರೆ ಮಹಾಲಕ್ಷ್ಮಿ ಲೇಔಟ್ ಪೊಲೀಸರ ಚುರುಕಿನ ತನಿಖೆಯಿಂದಾಗಿ ಇದು ಸುಲಿಗೆಗಾಗಿ ನಡೆದ ವ್ಯವಸ್ಥಿತ ಕೊಲೆ ಎಂಬುದು ಸಾಬೀತಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ರಾಕೇಶ್, ಮಂಜುನಾಥ್, ಚೇತನ್, ಪ್ರದೀಪ್ ಮತ್ತು ಯೋಹಾನ್ ಎಂಬ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಸಿನಿಮೀಯ ರೀತಿಯ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











