Author: News Editor
-

ಸ್ನೇಹಿತನ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರ ಹತ್ಯೆ..!
ಬೆಂಗಳೂರು : ಬಾಲ್ಯದಿಂದಲೇ ಸ್ನೇಹಿತರಾಗಿದ್ದ ಇಬ್ಬರ ನಡುವೆ ಮದ್ಯಪಾನದ ಅಮಲಿನಲ್ಲಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ತಮಿಳುನಾಡಿನ ಸಿಂಗಸಾದನಪಳ್ಳಿ ಮೂಲದ ಮೋಹನ್ ಎಂಬ ಯುವಕನನ್ನು ಅವನ ಸ್ನೇಹಿತ ಮನೋಜ್ ಕೊಲೆ ಮಾಡಿರುವ ಘಟನೆ ಆನೇಕಲ್ ತಾಲ್ಲೂಕಿನ ಮಟ್ಟನಹಳ್ಳಿ ಬಳಿ, ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ಸಂಜೆ ನಡೆದಿದೆ. ಮೋಹನ್ ಮತ್ತು ಮನೋಜ್ ಜೊತೆಗೂಡಿ ನಿರ್ಜನ ಪ್ರದೇಶಕ್ಕೆ ಹೋಗಿ ಮದ್ಯಪಾನ ಮಾಡುತ್ತಿದ್ದರು. ಈ ವೇಳೆ ಇಬ್ಬರೂ ಹೆಚ್ಚು ನಶೆಯಲ್ಲಿ ಇದ್ದಾಗ, ಸುಮಾರು ಎರಡು ವರ್ಷಗಳ ಹಿಂದೆ ನಡೆದ…
-

ವಿಟ್ಲ : 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಪೊಲೀಸ್ ಬಲೆಗೆ- ವಿದೇಶದಿಂದ ವಾಪಸಾಗುವ ವೇಳೆ ಬಂಧನ
ವಿಟ್ಲ : ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬಂಟ್ವಾಳ ತಾಲೂಕಿನ ಪೆರುವಾಯಿ ನಿವಾಸಿ ಅಬ್ಬಾಸ್ ಜಿ ಎಂಬಾತನು ವಿಟ್ಲ ಪೊಲೀಸ್ ಠಾಣೆಯ ಅ.ಕ್ರ. ನಂ: 42/2015ರಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿಯಾಗಿದ್ದು, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದನು. ಈತನ ವಿರುದ್ಧ ಹಲವು ಬಾರಿ ವಾರಂಟ್ ಜಾರಿಯಾಗಿತ್ತು.ಆರೋಪಿ ದಿನಾಂಕ ಏಪ್ರಿಲ್ 16ರಂದು ವಿದೇಶದಿಂದ ಮರಳಿದ ವೇಳೆ, ಇಮಿಗ್ರೇಶನ್ ವಿಭಾಗದ ಸಹಕಾರದೊಂದಿಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ…
-

ಕ್ರೈಂ ವಾರ್ತೆಯ ಫಲಶೃತಿ: ನಿರಂತರವರದಿಗಾರಿಕೆಯಿಂದ ಕೆಮ್ಮಣ್ಣು ಪಡು ತೋನ್ಸೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿರ್ಮಾಣವಾಗುತ್ತಿದ್ದ ಬಾರ್ & ರೆಸ್ಟೋರೆಂಟ್ ಮಾಲಿಕನ ವಿರುದ್ಧ ಪ್ರಕರಣ ದಾಖಲು..!!
ಉಡುಪಿ ಜಿಲ್ಲೆಯ ಕೆಮ್ಮಣ್ಣು ಪಡು ತೋನ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಮತ್ತು ನಿಯಮಗಳನ್ನು ಉಲ್ಲಂಘಿಸಿ ನಿರ್ಮಾಣವಾಗುತ್ತಿರುವ ಸರೋವರ ಬಾರ್ & ರೆಸ್ಟೋರೆಂಟ್ ಅಕ್ರಮ ವಾಣಿಜ್ಯ ಕಟ್ಟಡದ ಕಾಮಗಾರಿ ಬಗ್ಗೆ ನಮ್ಮ ಕ್ರೈಂ ವಾರ್ತೆ ಸುದ್ದಿ ವಾಹಿನಿಯಲ್ಲಿ ಕಳೆದ 2 ತಿಂಗಳಿನಿಂದ ನಿರಂತರ ವರದಿ ಮಾಡಿದ್ದು ಅದರ ಫಲಶೃತಿಯಂತೆ ಇಂದು ಕಟ್ಟಡ ಮಾಲೀಕ ಸಂಪತ್ ಕುಮಾರ್ ಶೆಟ್ಟಿ ಮೇಲೆ ಪೋಲಿಸರು ಸೋಮೊಟೋ ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಸ್ಥಳೀಯರು ಜಿಲ್ಲಾಧಿಕಾರಿ, ತಹಶೀಲ್ದಾರ, ಚೀಫ್ ಆಫೀಸರ್, ನಗರಾಭಿವೃದ್ಧಿ ಇಲಾಖೆ…
-

ಮಂಗಳೂರು: ಮಹೇಶ್ ಶೆಟ್ಟಿ ತಿಮರೋಡಿಯಿಂದ ನಿಂದನೆ: ಯಕ್ಷಗಾನ ಕಲಾವಿದರ ಆರೋಪ
ಮಂಗಳೂರು: ಸ್ಥಳೀಯ ವಾಹಿನಿಯೊಂದರಲ್ಲಿ ಪ್ರಸಾರವಾದ ʼಯಕ್ಷ ತೆಲಿಕೆʼ ಕಾರ್ಯಕ್ರಮ ಸರಣಿಯಲ್ಲಿ ಪ್ರಸಾರವಾದ ʼಬುರುಡೆ ಗ್ಯಾಂಗ್ʼ ಎಂಬ ಯಕ್ಷ ಪ್ರಹಸನಕ್ಕೆ ಸಂಬಂಧಿಸಿ ಮಹೇಶ್ ಶೆಟ್ಟಿ ತಿಮರೋಡಿ ಎಂಬವರು ಕರೆ ಮಾಡಿ ಅವಾಚ್ಯವಾಗಿ ನಿಂದಿಸಿದ್ದಾರೆ. ಅವರ ವಿರುದ್ಧ ಪುತ್ತೂರು ಗ್ರಾಮಾಂತರ ಠಾಣೆಗೆ ಮತ್ತು ಮಹಿಳಾ ಠಾಣೆಗೆ ದೂರು ನೀಡಲಾಗಿದೆ ಎಂದು ಯಕ್ಷಗಾನ ಕಲಾವಿದರಾದ ಸುಂದರ ರೈ ಮಂದಾರ, ಪ್ರಜ್ವಲ್ ಕುಮಾರ್ ಮತ್ತು ದಿನೇಶ್ ಕೊಡಪದವು ಹೇಳಿದರು. ಶುಕ್ರವಾರ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸುಂದರ ರೈ ಮಂದಾರ, ಈ ಕಾರ್ಯಕ್ರಮ ಕಳೆದ…
-

ಯೋಗೇಶ್ ಗೌಡ ಹತ್ಯೆ ಪ್ರಕರಣ: ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ
ಬೆಂಗಳೂರು: ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16ಮಂದಿ ಅಪರಾಧಿಗಳಿಗೆ ಜನಪ್ರತಿನಿಧಿಗಳ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ ನ್ಯಾಯಾಲಯದಲ್ಲಿ ನಡೆದಿದ್ದೇನು? ಸುದೀರ್ಘ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು, ಇಂದು ಉಭಯ ಪಕ್ಷಗಳ ಅಂತಿಮ ವಾದ-ಪ್ರತಿವಾದಗಳನ್ನು ಆಲಿಸಿದರು. ತದನಂತರ ಶಿಕ್ಷೆಯ ಪ್ರಮಾಣದ ಆದೇಶವನ್ನು ನಾಳೆಗೆ ಕಾಯ್ದಿರಿಸಿದರು. ಇದೀಗ ಆದೇಶವನ್ನು ಪ್ರಕಟಿಸಿದ್ದಾರೆ. ಸಿಬಿಐ ಪರ ವಾದ: ‘ಕಠಿಣ ಜೀವಾವಧಿ ಶಿಕ್ಷೆ…
-

ಕಾಪು: ಲಾರಿಗೆ ಕಾರು ಢಿಕ್ಕಿ; ಓರ್ವ ಮೃತ್ಯು, ಇಬ್ಬರಿಗೆ ಗಾಯ
ಕಾಪು: ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯ ಪಾಂಗಾಳ ಕಟ್ಟಿಕೆರೆ ಬಳಿ ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಶ್ರೇಯಸ್ ಆಚಾರ್ ಎಂದು ಗುರುತಿಸಲಾಗಿದೆ. ಘಟನೆಯ ವಿವರ: ಏಪ್ರಿಲ್ 17ರ ಮುಂಜಾನೆ ಸುಮಾರು 12:30ರ ಸುಮಾರಿಗೆ ಮಂಗಳೂರಿನಿಂದ ಕೊಪ್ಪಳಕ್ಕೆ ಕೋಕ್ ಲೋಡ್ ಮಾಡಿಕೊಂಡು ಹೋಗುತ್ತಿದ್ದ ಲಾರಿಗೆ ಮಂಗಳೂರಿನಿಂದ ಉಡುಪಿ ಕಡೆಗೆ ಚಲಿಸುತ್ತಿದ್ದ ಕಿಯಾ (Kia) ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. , ಅತೀ ವೇಗವಾಗಿ ಬಂದ ಕಾರು…
-

ಮಂಗಳೂರು ಲಾಠಿ ಚಾರ್ಜ್ ಪ್ರಕರಣದ 101 ಆರೋಪಿಗಳಿಗೆ ಖುಲಾಸೆ
ಮಂಗಳೂರು: 2017 ರ ಏಪ್ರಿಲ್ 4ರಂದು ಮಂಗಳೂರಿನ ಕಮಿಷನರ್ ಕಛೇರಿ ಮುಂಭಾಗದಲ್ಲಿ ನಡೆದ ಲಾಠಿ ಚಾರ್ಜ್ ಸಂಬಂಧಿಸಿದಂತೆ ದಾಖಲಾದ ಪ್ರಕರಣಕ್ಕೆ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದ್ದು, ಒಟ್ಟು 101 ಆರೋಪಿಗಳನ್ನು ಸಂಪೂರ್ಣವಾಗಿ ಬಿಡುಗಡೆಗೊಳಿಸಿದೆ. ಜಿಲ್ಲೆಯಲ್ಲಿ ನಡೆದ ಕೊಲೆಯೊಂದಕ್ಕೆ ಪೊಲೀಸರು ಅಮಾಯಕ ಅಹ್ಮದ್ ಖುರೇಶಿ ಎಂಬಾತನನ್ನು ಅಕ್ರಮವಾಗಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸದೇ ದೌರ್ಜನ್ಯ ನಡೆಸಿ ಹಲ್ಲೆ ಮಾಡಲಾಗಿದೆ ಎಂಬ ಆರೋಪಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಕೆಲ ಸಂಘಟನೆಗಳ ಕಾರ್ಯಕರ್ತರು ಪೊಲೀಸ್ ಕಮಿಷನರ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲು ಮುಂದಾದಾಗ…
-

ಬೆಳ್ತಂಗಡಿ : ಗಾಂಜಾ ಮಾರಾಟ ಯತ್ನ ಪ್ರಕರಣ – ಆರೋಪಿಗೆ 5 ವರ್ಷ ಜೈಲು ಶಿಕ್ಷೆ
ಬೆಳ್ತಂಗಡಿ: ನಿಷೇಧಿತ ಮಾದಕವಸ್ತು ಗಾಂಜಾ ಮಾರಾಟಕ್ಕೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿಗೆ ಜಿಲ್ಲಾ ವಿಶೇಷ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಮಂಗಳೂರು ಶಿಕ್ಷೆ ವಿಧಿಸಿದೆ. 2009ರ ಮಾರ್ಚ್ 8ರಂದು ಬೆಳ್ತಂಗಡಿ ತಾಲೂಕಿನ ಉಜಿರೆ ರಥಬೀದಿಯಲ್ಲಿ ಅಂದಾಜು ರೂ. 50,000 ಮೌಲ್ಯದ 1.500 ಕೆಜಿ ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಪ್ರಕರಣ ಬೆಳಕಿಗೆ ಬಂದಿತ್ತು. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 60/09ರಂತೆ ಎನ್‌ಡಿಪಿಎಸ್ ಕಾಯ್ದೆಯ ಕಲಂ 8(c) ಜೊತೆಗೆ 20(b) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣದ ವಿಚಾರಣೆ ನಡೆಸಿದ…
-

ಮಂಗಳೂರು: ಆದ್ಯಪಾಡಿಯಲ್ಲಿ ಅಕ್ರಮ ಕೆಂಪು ಗಣಿಗಾರಿಕೆ..!! 5 ಲಾರಿ ವಶ ಪಡೆದ ಪೊಲೀಸರು
ಮಂಗಳೂರು: ಆದ್ಯಪಾಡಿ, ವಿಮಾನ ನಿಲ್ದಾಣದ ಪಕ್ಕದಲ್ಲಿ ಅಕ್ರಮವಾಗಿ ಕೆಂಪು ಮಣ್ಣು ತೆಗೆಯುತ್ತಿದ್ದ ಕೊರೆಗೆ ಕಾವೂರು ಪೋಲಿಸರು ದಾಳಿ ನಡೆಸಿ ಐದು ಟಿಪ್ಪರ್ ಲಾರಿಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ವಿಮಾನ ನಿಲ್ದಾಣದ ಅಕ್ಕ ಪಕ್ಕದಲ್ಲಿ ಮಣ್ಣು ತೆಗೆಯದಂತೆ ಸೊಚನೆ ನೀಡಲಾಗಿದೆ. ಇಷ್ಟೆಲ್ಲ ಇದ್ದರೂ ಇವರಿಗೆ ಅಕ್ರಮವಾಗಿ ಕೆಂಪು ಮಣ್ಣು ತೆಗೆಯಲು ಅವಕಾಶ ನೀಡಿದವರು ಯಾರು?? ಅಕ್ರಮವಾಗಿ ಕೆಂಪು ಮಣ್ಣು ಸಾಗಿಸುತ್ತಿದ್ದ 5 ವಿಮಲ್ ಲಾರಿಯನ್ನು ಹಿಡಿದಿದ್ದಾರೆ ಎಂಬ ಮಾಹಿತಿ ಇದೆ ಹೀಗೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅನೇಕ…
-

ಉಡುಪಿ: ವಾಟ್ಸಾಪ್‌ನಲ್ಲಿ ಬಂದ RTO ಚಲನ್ ಫೈಲ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.86 ಲಕ್ಷ ರೂ. ಪಂಗನಾಮ!
ಉಡುಪಿ : ವಾಟ್ಸಾಪ್ ಮೂಲಕ ಬಂದ ಎಪಿಕೆ ಫೈಲ್ ಡೌನ್‌ಲೋಡ್ ಮಾಡಿದ ಪರಿಣಾಮ ಹಲವಾರು ಲಕ್ಷ ರೂಪಾಯಿಗಳನ್ನು ಕಳೆದುಕೊಂಡ ಆನ್‌ಲೈನ್ ವಂಚನೆ ಒಳಗಾಗಿರುವ ಘಟನೆ ಉಡುಪಿಯ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ. ದೂರಿನ ಪ್ರಕಾರ, ಪಡುಬಿದ್ರಿಯ ಹೆಜಮಾಡಿಯ ಅಬ್ದುಲ್ ಹಮೀದ್ ಅವರಿಗೆ ಏಪ್ರಿಲ್ 12 ರಂದು ಅವರ ಪರಿಚಯಸ್ಥ ಕುಮಾರಸ್ವಾಮಿ ಅವರ ಮೊಬೈಲ್ ಸಂಖ್ಯೆಯಿಂದ APK ಫೈಲ್ ಬಂದಿದ್ದು, ಫೈಲ್ ಡೌನ್‌ಲೋಡ್ ಮಾಡಿದ ನಂತರ ಅವರ ಬ್ಯಾಂಕ್ ಖಾತೆ ಹ್ಯಾಕ್ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.ಏಪ್ರಿಲ್ 13 ರಂದು,…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











