Author: News Editor
-

14 ವರ್ಷದ ಮಗಳನ್ನು ಉಸಿರುಗಟ್ಟಿಸಿ ಕೊಂದು, ತಾಯಿ ಆತ್ಮ*ಹ*ತ್ಯೆಗೆ ಶರಣು
14 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘೋರ ದುರಂತ ಸಂಭವಿಸಿದೆ. ಬೆಂಗಳೂರಿನ ವೈಟ್ ಫೀಲ್ಡ್ ಬಳಿಯ ಇಮ್ಮಡಿ ಹಳ್ಳಿಯ ಮನೆಯಲ್ಲಿ ಮನೆಯಲ್ಲಿ ಈ ಒಂದು ಘಟನೆ ನಡೆದಿದೆ. ಕಾರುಣ್ಯ (14) ವರ್ಷದ ಮಗಳನ್ನು ಉಸಿರುಗಟ್ಟಿಸಿ ತಾಯಿ ಕೊಲೆ ಮಾಡಿದ್ದಾರೆ. ಬಳಿಕ ತಾಯಿ ಸುವರ್ಣ (40) ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ ಸುವರ್ಣ ಅವರ ಅತ್ತೆ ಮಾವ ಮನೆಯಲ್ಲಿ ಇದ್ದರು ಈ ವೇಳೆ ಕೋಣೆಯಲ್ಲಿ ಬೆಳಗ್ಗೆ 11 ಗಂಟೆ ಸುಮಾರಿಗೆ ಈ ಒಂದು ಘಟನೆ ನಡೆದಿದೆ…
-

ಬಂಟ್ವಾಳ: ಕಲ್ಲಿನಿಂದ ಹಲ್ಲೆ – ಯುವಕನಿಗೆ ಗಾಯ, ಆರೋಪಿ ವಶಕ್ಕೆ
ಬಂಟ್ವಾಳ: ಮಾಣಿ ನಿವಾಸಿ ವಿಶ್ವನಾಥ (28) ಅವರ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ ಘಟನೆ ಏಪ್ರಿಲ್ 12 ರಂದು ಸಂಜೆ ನಡೆದಿದೆ. ಮನೆಯಲ್ಲಿದ್ದ ವೇಳೆ ಪರಿಚಯದ ನವೀನ್ ಎಂಬಾತನು ಸುಮಾರು ಒಂದು ವರ್ಷದ ಹಿಂದೆ ನಡೆದ ಗಲಾಟೆ ವಿಷಯವಾಗಿ ತಕರಾರು ತೆಗೆದು, ಕಲ್ಲಿನಿಂದ ಹಲ್ಲೆ ನಡೆಸಿ ಜೀವಬೆದರಿಕೆ ಒಡ್ಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಹಲ್ಲೆಯಿಂದ ಗಾಯಗೊಂಡ ವಿಶ್ವನಾಥರನ್ನು ನೆರೆಹೊರೆಯವರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಕುರಿತು ದೊರೆತ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 92/2026, ಕಲಂ…
-

ಮಂಡ್ಯದಲ್ಲಿ ನಿಲ್ಲುತ್ತಿಲ್ಲ ಎಗ್ಗಿಲ್ಲದೇ ಅಕ್ರಮ ಕಲ್ಲುಗಣಿಗಾರಿಕೆ..!! ಜಿಲ್ಲಾಧಿಕಾರಿ ನಿಷೇಧಾಜ್ಞೆ ಗೂ ಬಗ್ಗದ ಭಕ್ಷಕರು
ಮಂಡ್ಯ: ಜಿಲ್ಲಾಧಿಕಾರಿಯವರು ತಡೆ ನೀಡಿದ ಸ್ಥಳದಲ್ಲಿ ಅನಧಿಕೃತವಾಗಿ ಮತ್ತೆ ಎಗ್ಗಿಲ್ಲದೇ ಕಲ್ಲು ಗಣಿಗಾರಿಕೆ ನಡೆಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಮಂಜೇಶ್ ಗೌಡ ದೂರಿದರು. ಮಾ.11ರಂದು ಶ್ರೀರಂಗಪಟ್ಟಣ ತಾಲ್ಲೂಕು ವ್ಯಾಪ್ತಿಯಲ್ಲಿನ ಅನಧಿಕೃತ ಕಲ್ಲು ಗಣಿಗಾರಿಕೆ ಹಾಗೂ ಸಾಗಾಣಿಕೆ ನಿಯಂತ್ರಿಸಲು ಜಿಲ್ಲಾಧಿಕಾರಿ ನಿಷೇಧಾಜ್ಞೆ ಹೊರಡಿಸಿದ್ದರು. ಅದನ್ನು ಸಾಕಾರಗೊಳಿಸುವಲ್ಲಿ ‘ಟಾಸ್ಕ್ ಫೋರ್ಸ್’ ಸಮಿತಿ ವಿಫಲವಾಗಿದೆ ಎಂದು ಆರೋಪಿಸಿದರು. ಜಿಲ್ಲಾದ್ಯಂತ 103 ಕಲ್ಲು ಕೋರೆಗಳಿದ್ದು, ಶ್ರೀರಂಗಪಟ್ಟಣ ತಾಲ್ಲೂಕಿನಲ್ಲೇ 52 ಕೇಂದ್ರಗಳಿವೆ. ಅವುಗಳಲ್ಲಿ 22ಕ್ಕೆ ಮಾತ್ರ ಪರವಾನಗಿ…
-

ಆರಿಫ್ ಕೊಲೆ ಪ್ರಕರಣ: ಮತ್ತೆ ಮೂವರು ಆರೋಪಿಗಳ ಬಂಧನ
ಮಂಗಳೂರು: ಅರಿಫ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ತನಿಖಾ ತಂಡವು ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದು, ಕೃತ್ಯದ ಸಂಚು ಮತ್ತು ಹಲ್ಲೆಯಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ಪ್ರಮುಖ ಆರೋಪಿ ಅರ್ಶದ್ ಸೇರಿ ಮತ್ತೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧಿತರಾದವರ ಸಂಖ್ಯೆ ಏರಿಕೆಯಾಗಿದ್ದು, ಹತ್ಯೆಯ ಹಿಂದಿನ ವ್ಯವಸ್ಥಿತ ಸಂಚಿನ ಹೂರಣ ಒಂದೊಂದಾಗಿ ಬಯಲಾಗುತ್ತಿದೆ. ಬಂಧಿತರ ಪೈಕಿ ಅರ್ಶದ್ ಈ ಕೊಲೆ ಕೃತ್ಯದಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದ್ದ ಎನ್ನಲಾಗಿದೆ. ಈತ ಹಂತಕರಿಗೆ ಮಾರಕಾಸ್ತ್ರಗಳನ್ನು ಪೂರೈಸಿದ್ದಲ್ಲದೆ, ಪೊಲೀಸರ ಚಲನವಲನದ…
-

ಮೂಡುಬಿದಿರೆ: ಪದೇ ಪದೇ ಅಪಘಾತ: ರಾಷ್ಟ್ರೀಯ ಹೆದ್ದಾರಿಗೆ ಮಣ್ಣು ಸುರಿದು ಪ್ರತಿಭಟಿಸಿದ ಸ್ಥಳೀಯರು
ಮೂಡುಬಿದಿರೆ: ಪದೇ ಪದೇ ಅಪಘಾತ ನಡೆಯುತ್ತಿರುವ ರಿಂಗ್ ರೋಡ್ ಆಲಂಗಾರು -ಕಾರ್ಕಳ ಸಂಪರ್ಕದ ರಾಷ್ಟ್ರೀಯ ಹೆದ್ದಾರಿಗೆ ಸ್ಥಳೀಯರು ಸೋಮವಾರ ಟಿಪ್ಪರ್ ನಲ್ಲಿ ಮಣ್ಣು ಸುರಿದು ಮುಚ್ವಿ ಪ್ರತಿಭಟನೆ ನಡೆಸಿದರು. ಇಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಈ ಪ್ರದೇಶದಲ್ಲಿ ಭದ್ರತಾ ಕ್ರಮಗಳ ಕೊರತೆ ಎದ್ದು ಕಾಣು ತ್ತಿದೆ. ಕಳೆದ ಕೆಲ ದಿನಗಳಲ್ಲಿ ಈ ಪ್ರದೇಶದಲ್ಲಿ ಹಲವು ಅಪಘಾತಗಳು ನಡೆದು ಹಲವು ಜೀವಗಳು ಬಲಿಯಾ ಗಿವೆ. ಸೋಮವಾರವೂ ಕಾರೊಂದು ಅಪಘಾತಕ್ಕೀಡಾಗಿ ಸವಾರರು ಗಾಯಗೊಂಡಿದ್ದರು. ಸಂಬಂಧಪಟ್ಟ ಅಧಿಕಾರಿಗಳು ಸಾವ೯ಜನಿಕರ ಮನವಿಗೆ…
-

ಟಿಸಿಎಸ್ ನಾಸಿಕ್ ಲೈಂಗಿಕ ಕಿರುಕುಳ, ಮತಾಂತರ ಪ್ರಕರಣ -ಟಾಟಾದಿಂದ ಉನ್ನತ ಮಟ್ಟದ ತನಿಖೆಗೆ ಆದೇಶ
ನವದೆಹಲಿ: ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಕಂಪನಿಯ ನಾಸಿಕ್ ಶಾಖೆಯಲ್ಲಿ ಕೇಳಿಬಂದಿರುವ ಲೈಂಗಿಕ ಕಿರುಕುಳ ಮತ್ತು ಬಲವಂತದ ಧಾರ್ಮಿಕ ಮತಾಂತರದ ಆರೋಪಗಳು ಅತ್ಯಂತ ಗಂಭೀರವಾಗಿದ್ದು, ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲಾಗುವುದು ಎಂದು ಟಾಟಾ ಸನ್ಸ್ ಅಧ್ಯಕ್ಷ ಎನ್. ಚಂದ್ರಶೇಖರನ್ ತಿಳಿಸಿದ್ದಾರೆ. ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಿಸಿಎಸ್ ಕಚೇರಿಯ ಎಂಟು ಮಹಿಳಾ ಉದ್ಯೋಗಿಗಳು ತಮ್ಮ ಸಹೋದ್ಯೋಗಿಗಳ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಧಾರ್ಮಿಕ ಮತಾಂತರಕ್ಕೆ ಒತ್ತಡ ಹೇರಿರುವ ಗಂಭೀರ ಆರೋಪಗಳನ್ನು ಮಾಡಿದ್ದರು. ಮದುವೆಯ ಭರವಸೆ ನೀಡಿ ದೈಹಿಕ…
-

30 ಸಾವಿರ ಲಂಚ ಸ್ವೀಕಾರ : ಇಬ್ಬರು ಆರ್‌ಟಿಓ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಆರ್ ಟಿ ಓ ಕಚೇರಿಯಲ್ಲಿ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಆರ್‌ಟಿಓ ಪ್ರೊಬೆಷನರಿ ಇನ್ಸ್ಪೆಕ್ಟರ್ ಗಳಾದ ದಿನೇಶ್ ಕುಮಾರ್ ಹಾಗೂ ಕಿರಣ್ ಮತ್ತು ಖಾಸಗಿ ವ್ಯಕ್ತಿ ರಮೇಶ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. 30,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಗೂಗಲ್ ಪೇ ಮೂಲಕ 2000, 1000 ನಗದು ಲಂಚವನ್ನು ಪಡೆದಿದ್ದರು. ಇಂದು ಖಾಸಗಿ ವ್ಯಕ್ತಿ ರಮೇಶ್ 300 ರೂಪಾಯಿ ಲಂಚ ಪಡೆಯುವಾಗ ಬಲೆಗೆ ಬಿದ್ದಿದ್ದಾರೆ. ನೈಸ್ ರಸ್ತೆಯಲ್ಲಿ ವಾಹನ ತಪಾಸನೆ…
-

ಮಂಗಳೂರು: ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳು ಹಾನಿ ; ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳು ಹಾನಿ
ಮಂಗಳೂರು : ಮಂಗಳೂರು ಫಳ್ನೀರಿನ ಕಾರು ಆಲ್ಟ್ರೇಷನ್ ಸೆಂಟರ್‌ನಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳು ಹಾನಿಗೀಡಾಗಿದೆ. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಈ ದುರಂತ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಬೆಳಿಗ್ಗೆ ಸುಮಾರು 7:30ರ ವೇಳೆಗೆ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ವ್ಯಾಪಕವಾಗಿ ಹರಡಿದ್ದು, ಪರಿಣಾಮವಾಗಿ, ಮಳಿಗೆ ಒಳಗಡೆ ಇರಿಸಲಾಗಿದ್ದ ಮೂರು ಕಾರುಗಳು ಬೆಂಕಿಗೆ ಆಹುತಿಯಾಗಿವೆ. ಅಲ್ಲದೆ, ಮಳಿಗೆಯಲ್ಲಿದ್ದ ಬೆಲೆಬಾಳುವ ಎಲೆಕ್ಟ್ರಾನಿಕ್ ಉಪಕರಣಗಳು ಮತ್ತು ಬಿಡಿಭಾಗಗಳು ಸುಟ್ಟು ಕರಕಲಾಗಿವೆ. ಮಳಿಗೆಯಿಂದ ದಟ್ಟವಾದ ಹೊಗೆ…
-

ಶಿಕ್ಷಕರೊಂದಿಗೆ ಈಜಲು ಹೋಗಿದ್ದ ವಿಟ್ಲ ಮೂಲದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತ್ಯು
ಶಿಕ್ಷಕರೊಂದಿಗೆ ಈಜಲು ತೆರಳಿದ್ದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ದುರ್ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಮೃತ ವಿದ್ಯಾರ್ಥಿಯನ್ನು ಅನಿಕೇತ್ (14) ಎಂದು ಗುರುತಿಸಲಾಗಿದೆ. ಆತ ಜಯಪುರದ ಗುರುಕುಲ ಮಾದರಿಯ ಶ್ರೀ ಸತ್ಯಸಾಯಿ ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ಮೃತ ವಿದ್ಯಾರ್ಥಿ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಮೂಲದವನಾಗಿದ್ದಾನೆ. ಭಾನುವಾರ ಮಧ್ಯಾಹ್ನ ಶಿಕ್ಷಕರೊಂದಿಗೆ ಈಜುಕೊಳಕ್ಕೆ ತೆರಳಿದ್ದ ವೇಳೆ ಈ ಅವಘಡ ಸಂಭವಿಸಿದೆ. ಈಜಾಡುತ್ತಿದ್ದಾಗ ಅನಿಕೇತ್ ನೀರಿನಲ್ಲಿ ಮುಳುಗಿ ತೀವ್ರ ಅಸ್ವಸ್ಥಗೊಂಡಿದ್ದಾನೆ. ತಕ್ಷಣವೇ ಆತನನ್ನು…
-

ಮಂಗಳೂರು-ಕೇರಳದಲ್ಲಿ ಕರಾಳ ದಂಧೆ !! ಯುವಕನಿಗೆ ಬಲವಂತವಾಗಿ ಮಂಗಳಮುಖಿ ವೇಷ ಹಾಕಿಸಿ, ಹಣದ ದಂಧೆ- ಲಿಂಗ ಬದಲಾವಣೆಗೂ ಸ್ಕೆಚ್
ಮೈಸೂರು: ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಇದೀಗ ಈ ಸುದ್ದಿ ಎಲ್ಲ ಕಡೆ ಭಾರೀ ಆತಂಕಕ್ಕೆ ಕಾರಣವಾಗಿದೆ. ಬಸ್ಸಿಗಾಗಿ ಕಾಯುತ್ತಿದ್ದ ಯುವಕನೋರ್ವನನ್ನು ಅಪಹರಿಸಿ, ಆತನಿಗೆ ಬಲವಂತವಾಗಿ ಮಂಗಳಮುಖಿ ವೇಷ ಹಾಕಿಸಿ, ಹಣದ ದಂಧೆ ಹಾಗೂ ಸೆಕ್ಸ್ ವರ್ಕ್ಗೆ ಬಳಸಿಕೊಂಡಿರುವ ಆಘಾತಕಾರಿ ಆರೋಪವೊಂದು ಕೇಳಿ ಬಂದಿದೆ. ನಂಜನಗೂಡಿನ ತ್ಯಾಗರಾಜ ಕಾಲೋನಿಯ ಅನಿಲ್ ಕುಮಾರ್ ಈ ಕರಾಳ ದಂಧೆಯ ಬಲಿಪಶುವಾಗಿದ್ದಾರೆ ಎಂದು ಹೇಳಲಾಗಿದೆ. ಇದೀಗ ಈ ಪ್ರಕರಣ ಲಷ್ಕರ್ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ನಾಲ್ಕು ತಿಂಗಳ ಹಿಂದೆ ಮೈಸೂರು ಗ್ರಾಮಾಂತರ ಬಸ್…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











