Author: News Editor

  • ಉಡುಪಿ: ಯುವಕ ಅಪಹರಣ ಪ್ರಕರಣ- KCOCA ಅಡಿಯಲ್ಲಿ ಪ್ರಕರಣ, 7 ಮಂದಿ ಬಂಧನ..!! ಇಬ್ಬರು ಪರಾರಿ
    ,

    ಉಡುಪಿ: ಯುವಕ ಅಪಹರಣ ಪ್ರಕರಣ- KCOCA ಅಡಿಯಲ್ಲಿ ಪ್ರಕರಣ, 7 ಮಂದಿ ಬಂಧನ..!! ಇಬ್ಬರು ಪರಾರಿ

    ಉಡುಪಿ: ಸಾಸ್ತಾನದಲ್ಲಿನ ಕೋಸ್ಟಲ್ ಪ್ಯಾರಡೈಸ್ ಹೊಟೇಲ್ ಎದುರು ನಡೆದ ಯುವಕನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ಕೋಟ ಪೊಲೀಸರು ಮಹತ್ವದ ಕ್ರಮ ಕೈಗೊಂಡಿದ್ದು, ಪ್ರಕರಣವನ್ನು KCOCA ಕಾಯ್ದೆಯಡಿ ದಾಖಲಿಸಿ ಈಗಾಗಲೇ 7 ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನಿಬ್ಬರು ಪ್ರಮುಖ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಸಿದ್ದಾಪುರ ಗ್ರಾಮದ ಮೋಹನ ದಾಸ್ ಶೆಟ್ಟಿ ಅವರ ಪುತ್ರ ತೇಜಸ್ ಅವರನ್ನು ಅಪರಿಚಿತರು ಅಪಹರಿಸಿರುವ ಕುರಿತು ಪ್ರಕರಣ ದಾಖಲಾಗಿದೆ. ತೇಜಸ್‌ನ ಸ್ನೇಹಿತ ಪ್ರಜ್ವಲ್ ನೀಡಿದ ಮಾಹಿತಿಯಂತೆ, ನ.19, 2025ರಂದು ಮಧ್ಯಾಹ್ನ ತೇಜಸ್‌ನನ್ನು ಸಾಸ್ತಾನದಲ್ಲಿರುವ ಕೋಸ್ಟಲ್ ಪ್ಯಾರಡೈಸ್ ಹೊಟೇಲ್…

    Continue Reading

  • ಸೌಜನ್ಯ ಕೊಲೆ ಪ್ರಕರಣ: ಯೂಟ್ಯೂಬರ್ ಸಮೀರ್ ಮೊಹಮ್ಮದ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ
    ,

    ಸೌಜನ್ಯ ಕೊಲೆ ಪ್ರಕರಣ: ಯೂಟ್ಯೂಬರ್ ಸಮೀರ್ ಮೊಹಮ್ಮದ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ

     ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ಅಪ್‌ಲೋಡ್ ಮಾಡಿದ್ದ ಯೂಟ್ಯೂಬರ್ ಸಮೀರ್ ಮೊಹಮ್ಮದ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಪ್ರಕರಣದ ಹಿನ್ನೆಲೆ: ಧರ್ಮಸ್ಥಳದ ನೇತ್ರಾವತಿ ನದಿ ದಡದಲ್ಲಿ ಶವಗಳನ್ನು ಹೂಳಲಾಗುತ್ತಿದೆ ಎಂಬ ಗಂಭೀರ ಆರೋಪಗಳನ್ನು ಒಳಗೊಂಡ ವಿಡಿಯೋವೊಂದನ್ನು ಸಮೀರ್ ಮೊಹಮ್ಮದ್ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹಂಚಿಕೊಂಡಿದ್ದರು. ಈ ವಿಡಿಯೋ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮತ್ತು ದೇವಸ್ಥಾನದ ಘನತೆಗೆ ಧಕ್ಕೆ ತರುವಂತಿದೆ ಎಂದು ಆರೋಪಿಸಿ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿದ್ದರು.…

    Continue Reading

  • ಬಂಟ್ವಾಳ: ಕಾರು ಡಿಕ್ಕಿ ಹೊಡೆದ ರಭಸಕ್ಕೆ 10 ಅಡಿ ಹಾರಿ ಬಿದ್ದ ಮಹಿಳೆ!
    ,

    ಬಂಟ್ವಾಳ: ಕಾರು ಡಿಕ್ಕಿ ಹೊಡೆದ ರಭಸಕ್ಕೆ 10 ಅಡಿ ಹಾರಿ ಬಿದ್ದ ಮಹಿಳೆ!

    ಬಂಟ್ವಾಳ: ತಾಲೂಕಿನ ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ಎಂಬಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಮಹಿಳೆಯೋರ್ವರಿಗೆ ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡ ಮಹಿಳೆಯನ್ನು ಉಳ್ಳಾಲ ತಾಲೂಕಿನ ಬೋಳಿಯಾರು ಗ್ರಾಮದ ಭಾರತಿ(48) ಎಂದು ಗುರುತಿಸಲಾಗಿದೆ. ಅವರು ತನ್ನ ಮಗಳೊಂದಿಗೆ ಮಾ.30 ರಂದು ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ಎಂಬಲ್ಲಿ ಗುಳಿಗಜ್ಜ ಕಟ್ಟೆಗೆ ಹಣ ಹಾಕುವ ಸಲುವಾಗಿ ಬೆಳಿಗ್ಗೆ ಬಂದಿದ್ದರು. ಮೆಲ್ಕಾರ್-ಮುಡಿಪು ರಾಜ್ಯ ಹೆದ್ದಾರಿ ರಸ್ತೆಯನ್ನು ದಾಟಿ ಹೆದ್ದಾರಿ ರಸ್ತೆಯ ಅಂಚಿಗೆ ತಲುಪಿದಾಗ ಮೆಲ್ಕಾರ್ ಕಡೆಯಿಂದ ಮುಡಿಪು ಬರುತ್ತಿದ್ದ ಕಾರು…

    Continue Reading

  • ಇನ್ಮುಂದೆ ಪೊಲೀಸರು ವಾಟ್ಸಪ್, ಸೋಷಿಯಲ್ ಮೀಡಿಯಾ ಮೂಲಕ ನೋಟಿಸ್, FIR ನೀಡುವಂತಿಲ್ಲ : ಹೈಕೋರ್ಟ್ ಸ್ಪಷ್ಟನೆ
    ,

    ಇನ್ಮುಂದೆ ಪೊಲೀಸರು ವಾಟ್ಸಪ್, ಸೋಷಿಯಲ್ ಮೀಡಿಯಾ ಮೂಲಕ ನೋಟಿಸ್, FIR ನೀಡುವಂತಿಲ್ಲ : ಹೈಕೋರ್ಟ್ ಸ್ಪಷ್ಟನೆ

     ಇನ್ಮುಂದೆ ಪೊಲೀಸರು ನೋಟಿಸ್ ಅಥವಾ ಎಫ್‌ಐಆರ್ ಪ್ರತಿಯನ್ನು ವಾಟ್ಸ್ಆ್ಯಪ್‌ ಅಥವಾ ಇತರೆ ವಿದ್ಯುನ್ಮಾನ ಮಾಧ್ಯಮಗಳ ಮೂಲಕ ನೀಡುವಂತಿಲ್ಲ, ಬದಲಾಗಿ ಭೌತಿಕವಾಗಿಯೇ ನೀಡಬೇಕು ಎಂದು ಹೈಕೋರ್ಟ್‌ ಸ್ಪಷ್ಟಪಡಿಸಿದೆ. ಹೌದು ಏಳು ವರ್ಷಕ್ಕಿಂತ ಕಡಿಮೆ ಅವಧಿಯ ಶಿಕ್ಷೆ ವಿಧಿಸಬಹುದಾದ ಪ್ರಕರಣಗಳಲ್ಲಿ ಆರೋಪಿಯನ್ನು ಬಂಧಿಸುವ ಮುನ್ನ ನೋಟಿಸ್ ನೀಡುವುದು ಕಡ್ಡಾಯವಿದ್ದರೂ ಆರೋಪಿ ಉದ್ದೇಶಪೂರ್ವಕವಾಗಿ ಪೊಲೀಸ್ ನೋಟಿಸ್ ಸ್ವೀಕರಿಸದೆ ತಲೆಮರೆಸಿಕೊಂಡು ತನಿಖೆಗೆ ಅಸಹಕಾರ ತೋರಿದ ಸಂದರ್ಭದಲ್ಲಿ ನೇರವಾಗಿ ಬಂಧಿಸಬಹುದಾಗಿದೆ ಎಂದು ಹೇಳಿದೆ. ಹೂಡಿಕೆದಾರರಿಗೆ ಲಕ್ಷಾಂತರ ಹಣ ವಂಚಿಸಿದ ಪ್ರಕರಣದಲ್ಲಿ ತನಿಖೆಗೆ ಸಹಕರಿಸದೆ 40…

    Continue Reading

  • ಕಾರ್ಕಳ ಸುದೀಪ್ ರೈ ಸಾವು ಪ್ರಕರಣ: ಉನ್ನತ ಮಟ್ಟದ ತನಿಖೆಗೆ ಪೋಷಕರ ಆಗ್ರಹ
    ,

    ಕಾರ್ಕಳ ಸುದೀಪ್ ರೈ ಸಾವು ಪ್ರಕರಣ: ಉನ್ನತ ಮಟ್ಟದ ತನಿಖೆಗೆ ಪೋಷಕರ ಆಗ್ರಹ

    ಮಂಗಳೂರು: ‘ನಮ್ಮ ಮಗನ ಸಾವಿಗೆ ಆತನ ಪತ್ನಿ ನೀಡಿರುವ ಮಾನಸಿಕ ಹಿಂಸೆ, ಕಿರುಕುಳ ಹಾಗೂ ಆಹಾರದಲ್ಲಿ ವಿಷ ನೀಡಿರುವುದು ಕಾರಣವಾಗಿದ್ದು, ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು’ ಎಂದು ಇತ್ತೀಚೆಗೆ ಸಾವಿಗೀಡಾಗಿರುವ ಸುದೀಪ್ ರೈ ಅವರ ಪೋಷಕರು ಆಗ್ರಹಿಸಿದ್ದಾರೆ. ಪ್ರೆಸ್ ಕ್ಲಬ್ ನಲ್ಲಿ ಮಂಗಳವಾರ ಉನ್ನತ ತನಿಖೆಗೆ ಒತ್ತಾಯಿಸಿದ ಮೃತ ಸುದೀಪ್ ರೈ ತಂದೆ ಬಿ. ದಾಮೋದರ ನೆಲ್ಯಾಡಿ, ‘ಮಗನ ಸಾವಿಗೆ ಮಾ. 17ರಂದು ಆತನ ಪತ್ನಿ ನೆಲ್ಯಾಡಿ ಪೇಟೆಯಲ್ಲಿ ನಡೆಸಿದ ಗಲಾಟೆಯೇ ಮುಖ್ಯ ಕಾರಣಾಗಿದೆ. ನಂತರ…

    Continue Reading

  • ನೇಣು ಬಿಗಿದುಕೊಂಡ ಗಂಡನ ಮೃತದೇಹ ನೋಡಿ ಪತ್ನಿ17ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ
    ,

    ನೇಣು ಬಿಗಿದುಕೊಂಡ ಗಂಡನ ಮೃತದೇಹ ನೋಡಿ ಪತ್ನಿ17ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ

    ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಭಾನು ಚಂದ್ರ ರೆಡ್ಡಿ ಹಾಗೂ ಸಾಜಿಯಾ ಆತ್ಮಹತ್ಯೆ ಮಾಡಿಕೊಂಡ ದಂಪತಿ. ಮೊದಲಿಗೆ ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗಂಡನ ಮೃತದೇಹ ಕಂಡು ಪತ್ನಿ ಸಹ ಅಪಾರ್ಟ್‌ಮೆಂಟ್‌ನ 17ನೇ ಫ್ಲೋರ್‌ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಂಡ – ಹೆಂಡತಿ ಇಬ್ಬರೂ ಖಾಸಗಿ ಕಂಪನಿಯಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿದ್ದರು. ಇಬ್ಬರ ನಡುವೆ ಅನೇಕ ಬಾರಿ ಕಲಹಗಳಾಗಿದೆ.…

    Continue Reading

  • ಕಾರ್ಕಳ: ಮದುವೆಯಾದ ಒಂದೇ ತಿಂಗಳಲ್ಲಿ ಮದುಮಗ ಸಂಶಯಾಸ್ಪದ ಸಾವು- ಪತ್ನಿ ಸೌಮ್ಯ ಶೆಟ್ಟಿ ಹೇಳಿದ್ದೇನು..?
    ,

    ಕಾರ್ಕಳ: ಮದುವೆಯಾದ ಒಂದೇ ತಿಂಗಳಲ್ಲಿ ಮದುಮಗ ಸಂಶಯಾಸ್ಪದ ಸಾವು- ಪತ್ನಿ ಸೌಮ್ಯ ಶೆಟ್ಟಿ ಹೇಳಿದ್ದೇನು..?

    ಕಾರ್ಕಳ ತಾಲೂಕಿನಲ್ಲಿ ಸಂಶಯಾಸ್ಪದ ರೀತಿಯಲ್ಲಿ ವಿವಾಹಿತನೊಬ್ಬ ಸಾವಿಗೆ ಶರಣಾಗಿದ್ದು, ಭಾರೀ ಸಂಚಲನ ಸೃಷ್ಟಿಸಿದೆ ಸುದೀಪ್ ಶೆಟ್ಟಿ ಮೃತ ದುರ್ದೈವಿ ಮದುವೆಯಾಗಿ ಕೇವಲ ಒಂದು ತಿಂಗಳು ಕಳೆಯುವಷ್ಟರಲ್ಲೇ ಸುದೀಪ್ ಶೆಟ್ಟಿ, ನಿಧನ ಆಗಿರೋದು ಕುಟುಂಬಸ್ಥರ ನಿದ್ದೆಗೆಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿ ಮೂಲದ ಸುದೀಪ್ ಶೆಟ್ಟಿ ಹಾಗೂ ಕಾರ್ಕಳ ಬಂಗ್ಲೆಗುಡ್ಡೆ ನಿವಾಸಿ, ನಾಟಕ ಕಲಾವಿದೆ ಸೌಮ್ಯ ಶೆಟ್ಟಿ ಫೆಬ್ರವರಿ 17 ರಂದು ಪುತ್ತೂರಿನ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನೋಂದಣಿ ವಿವಾಹವಾಗಿದ್ದರು. ಸುದೀಪ್ ಮನೆಯವರು ಈ ಮದುವೆಗೆ ತೀವ್ರ ಆಕ್ಷೇಪ…

    Continue Reading

  • ಬೆಳ್ತಂಗಡಿ : ಕ್ರಿಕೆಟ್ ಆಡುವ ಸಂದರ್ಭದಲ್ಲಿ ನಡೆದ ವಾಗ್ವಾದ- ಯುವಕನ ಮೇಲೆ ಕತ್ತಿಯಿಂದ ಹಲ್ಲೆ
    ,

    ಬೆಳ್ತಂಗಡಿ : ಕ್ರಿಕೆಟ್ ಆಡುವ ಸಂದರ್ಭದಲ್ಲಿ ನಡೆದ ವಾಗ್ವಾದ- ಯುವಕನ ಮೇಲೆ ಕತ್ತಿಯಿಂದ ಹಲ್ಲೆ

    ಬೆಳ್ತಂಗಡಿ : ಕ್ರಿಕೆಟ್ ಆಡುವ ಸಂದರ್ಭದಲ್ಲಿ ನಡೆದ ವಾಗ್ವಾದವನ್ನು ನೆಪವಾಗಿಸಿ ಯುವಕನ ತಲೆಗೆ ಕತ್ತಿಯಿಂದ ಕಡಿದು ಗಾಯಗೊಳಿಸಿ ಕೊಲೆಗೆ ಯತ್ನಿಸಿದ ಘಟನೆ ಮಾ.29ರಂದು ಸಂಜೆ ಬೆಳ್ತಂಗಡಿ ತಾಲೂಕಿನ ಲಾಯಿಲದಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕಕ್ಕೇನ ನಿವಾಸಿ ಆಸಿಫ್ (36) ಗಾಯಗೊಂಡವರಾಗಿದ್ದು ಇವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯ ನಿವಾಸಿ ವಿದೇಶದಲ್ಲಿ ಉದ್ಯೋಗದಲ್ಲಿರುವ ಲಾಯಿಲ ಗ್ರಾಮದ ಕಕ್ಕೇನ ನಿವಾಸಿ ಆರೀಫ್ (25) ಎಂಬಾತ ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಿದ ಆರೋಪಿಯಾಗಿದ್ದಾನೆ‌. ಆರೋಪಿಯನ್ನು…

    Continue Reading

  • ಕಾರ್ಕಳ: ಪೊಲೀಸರ ಮೇಲೆ ಕಾರು ಹರಿಸಲು ಯತ್ನಿಸಿದ ಐವರು ಕ್ರಿಕೆಟ್ ಬೆಟ್ಟಿಂಗ್ ಬುಕ್ಕಿಗಳ ಬಂಧನ
    , ,

    ಕಾರ್ಕಳ: ಪೊಲೀಸರ ಮೇಲೆ ಕಾರು ಹರಿಸಲು ಯತ್ನಿಸಿದ ಐವರು ಕ್ರಿಕೆಟ್ ಬೆಟ್ಟಿಂಗ್ ಬುಕ್ಕಿಗಳ ಬಂಧನ

    ಕಾರ್ಕಳ : ಕರ್ತವ್ಯನಿರತ ಪೊಲೀಸ್ ಅಧಿಕಾರಿಗಳ ಮೇಲೆ ಕಾರು ಹರಿಸಲು ಯತ್ನಿಸಿ ಕೊಲೆ ಯತ್ನ ನಡೆಸಿದ ಹಾಗೂ ಸಂಘಟಿತ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನಡೂರು ನಿವಾಸಿ ಸುದರ್ಶನ ಶೆಟ್ಟಿ (29), ಕೃತವ್ಯ ಶೆಟ್ಟಿ (27), ಅರುಣ್ ಶೆಟ್ಟಿ (29), ತೇಜಸ್ (28) ಮತ್ತು ಪ್ರಜ್ವಲ್ ಶೆಟ್ಟಿ (29) ಬಂಧಿತರು. ಕಾರ್ಕಳದ ಹಂಚಿಕಟ್ಟೆ ಬಳಿ ತಪಾಸಣೆ ನಡೆಸುತ್ತಿದ್ದ ಪಿಎಸ್‌ಐ ಪ್ರಸನ್ನ ಎಂ.ಎಸ್. ಅವರ ತಂಡ ಕಪ್ಪು ಬಣ್ಣದ ಕಾರನ್ನು ನಿಲ್ಲಿಸಲು ಸೂಚಿಸಿದಾಗ,…

    Continue Reading

  • ಕಾರ್ಕಳ-: ಬಜಾಜ್ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಮಹಿಳೆಯಿಂದ ದೂರು!!
    ,

    ಕಾರ್ಕಳ-: ಬಜಾಜ್ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಮಹಿಳೆಯಿಂದ ದೂರು!!

    ಕಾರ್ಕಳ ತಾಲೂಕಿನ ಅಜೆಕಾರ್ ಠಾಣೆ ವ್ಯಾಪ್ತಿಯ ಪ್ರದೇಶದಲ್ಲಿ ಮಹಿಳೆಯೊಬ್ಬರಿಗೆ ಬಜಾಜ್ ಫೈನಾನ್ಸ್ ಕಂಪನಿಯ ಹೆಸರಿನಲ್ಲಿ ಕರೆ ಮಾಡಿ ಅವಮಾನಕಾರಿ ರೀತಿಯಲ್ಲಿ ಮಾತನಾಡಿದ ಘಟನೆ ವರದಿಯಾಗಿದೆ. ದಿನಾಂಕ 25-03-2026 ರಂದು, ಬಜಾಜ್ ಫೈನಾನ್ಸ್‌ನಿಂದ ಕರೆ ಬಂದಿದೆ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬ ಮಹಿಳೆಗೆ ಸಂಪರ್ಕಿಸಿ, “ನಿಮ್ಮ ಗಂಡನಿಗೆ ಸಾಲ ಕಟ್ಟಲು ಆಗುತ್ತಿಲ್ಲ” ಎಂದು ಪ್ರಶ್ನಿಸಿದ್ದಾನೆ. ಇದಕ್ಕೆ ಮಹಿಳೆ, ತಾನು ಈ ವಿಷಯದ ಬಗ್ಗೆ ಯಾವುದೇ ಮಾಹಿತಿ ಹೊಂದಿಲ್ಲವೆಂದು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಕರೆ ಮಾಡಿದ ವ್ಯಕ್ತಿ, “ಸುಧೀರ್ ನಿನ್ನ ಗಂಡ…

    Continue Reading

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed